Tuesday, August 11

ವಿದೇಶ

ಸಿ.ಟಿ.ರವಿಗೆ ಬೆದರಿಕೆ ಪತ್ರ; ಬೆದರಿಸುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದ ಬಿಜೆಪಿ ಸಾರಥಿ

ಸಿ.ಟಿ.ರವಿಗೆ ಬೆದರಿಕೆ ಪತ್ರ; ಬೆದರಿಸುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದ ಬಿಜೆಪಿ ಸಾರಥಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪ್ರತಿಪಕ್ಷ ಶಾಸಕರಿಗೆ ಬೆದರಿಕೆಗಳು ಎದುರರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, ಬಿಜೆಪಿ ಶಾಸಕರಿಗೆ ಆತಂಕವಾಗಿ ಕಾಡುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.ಸಿ.ಟಿ.ರವಿ ಅವರಿಗೆ ರವಾನೆಯಾಗಿರುವ ಬೆದರಿಕೆ ಪತ್ರದ ಪ್ರತಿಯನ್ನು ಸಾಮಾಜಿಕ ಜಾಲತಾಣ 'X;ನಲ್ಲಿ ಟ್ಯಾಗ್ ಮಾಡಿ ಪೋಸ್ಟ್ ಹಾಕಿರುವ ಬಿ.ವೈ.ವಿಜಯೇಂದ್ರ, ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ ಎಂದಿದ್ದಾರೆ.ಸಿ.ಟಿ.ರವಿ ಅವರನ್ನು ಗುರ...
ಹಾರರ್ ‘ರಾಕ್ಷಸ’ದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಅವತಾರ; ಏಕಕಾಲದಲ್ಲಿ ಕನ್ನಡ, ತೆಲುಗಿನಲ್ಲಿ ಅನಾವರಣ

ಹಾರರ್ ‘ರಾಕ್ಷಸ’ದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಅವತಾರ; ಏಕಕಾಲದಲ್ಲಿ ಕನ್ನಡ, ತೆಲುಗಿನಲ್ಲಿ ಅನಾವರಣ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನಟ ಪ್ರಜ್ವಲ್ ದೇವರಾಜ್ ಅಭಿನಯದ 'ರಾಕ್ಷಸ' ಚಿತ್ರವು ಶಿವರಾತ್ರಿಯ ಸಂದರ್ಭದಲ್ಲಿ ಕನ್ನಡದ ಜೊತೆಗೆ ತೆಲುಗು ಆವೃತ್ತಿಯೂ ಬಿಡುಗಡೆಯಾಗಲಿದೆ.https://www.youtube.com/watch?v=L5A3GrRMypAಫೆಬ್ರುವರಿ 26 ರಂದು ಕನ್ನಡದ ಜೊತೆಗೆ ತೆಲುಗು ಆವೃತ್ತಿಯನ್ನೂ ಬಿಡುಗಡೆ ಮಾಡಲಾಗುತ್ತದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ವಿತರಕ ಎಂವಿಆರ್ ಕೃಷ್ಣ ಅವರು ಆಂಧ್ರ ಪ್ರದೇಶದಲ್ಲಿ ಈ ಸಿನಿಮಾ ವಿತರಣೆಗೆ ಮುಂದಾಗಿದ್ದಾರೆ.ಹಾರರ್ ಚಿತ್ರ 'ರಾಕ್ಷಸ'ದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ನವೀನ್ ಗೌಡ, ದೀಪು, ಮತ್ತು ಮಾನಸ ನಿರ್ಮಿಸಿರುವ ಈ ಚಿತ್ರದಲ್ಲಿ ಶ್ರೀಧರ್, ಅರುಣ್ ರಾಥೋಡ, ಗೌತಮ್, ಸೋಮಶೇಖರ್ ಸಹಿತ ಹಲವರ ಅಭಿನಯ ಗಮನಸೆಳೆದಿದೆ....
ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಬಿಜೆಪಿ ಎಚ್ಚರಿಕೆ

ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಬಿಜೆಪಿ ಎಚ್ಚರಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದರೂ ಅತ್ತ ಗಮನ ಹರಿಸದ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಇನ್ನು 24 ಗಂಟೆಯೊಳಗೆ ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು, ಖರೀದಿ ಆರಂಭಿಸದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಎಚ್ಚರಿಕೆ ನೀಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿನ್ನರ್ ಸಭೆಗಳು, ಔತಣಕೂಟಗಳು, ರಾಜಕೀಯ ಮೇಲಾಟಗಳಲ್ಲೇ ನಿರತರಾಗಿದ್ದಾರೆ. ಈ ಕೆಲಸಗಳು ಮುಗಿದಿದ್ದರೆ ಸ್ವಲ್ಪ ರೈತರ ಸಮಸ್ಯೆಗಳತ್ತ ಗಮನ ಹರಿಸುವ ದೊಡ್ಡ ಮನಸ್ಸು ಮಾಡಬೇಕು. ಬಿಡುವು ಇಲ್ಲದಿದ್ದರೆ ಕನಿಷ್ಠ ಪಕ್ಷ ಕೃಷಿ ಸಚಿವ ಎನ್.ಚಲುವರ...
ಕಾರು ಬಗ್ಗೆ ಹೆಚ್ಡಿಕೆ ತಕರಾರು? ಕಾಂಗ್ರೆಸ್ ನಾಯಕ ರಮೇಶ್ ಬಾಬು ಟೀಕೆ

ಕಾರು ಬಗ್ಗೆ ಹೆಚ್ಡಿಕೆ ತಕರಾರು? ಕಾಂಗ್ರೆಸ್ ನಾಯಕ ರಮೇಶ್ ಬಾಬು ಟೀಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರಾದ ಬೃಹತ್ ಕೈಗಾರಿಕಾ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿರವರು ಕರ್ನಾಟಕ ರಾಜ್ಯ ಸರ್ಕಾರ ತಮಗೆ ಶಿಷ್ಟಾಚಾರಕ್ಕೆ ಅನುಗುಣವಾಗಿ ನಿಗದಿತ ಸಮಯದಲ್ಲಿ ಹೊಸ ಕಾರನ್ನು ನೀಡಲಿಲ್ಲ ಎಂದು ಆರೋಪಿಸಿರುತ್ತಾರೆ. ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ಪಡೆದು ಆರು ತಿಂಗಳು ಕಳೆದರೂ ಇಲ್ಲಿಯವರೆಗೆ ರಾಜ್ಯದ ಅಭಿವೃದ್ಧಿಗೆ ಇವರು ನೀಡಿರುವ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ವಿಷಯಗಳನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ.ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಅಪೇಕ್ಷೆಯಂತೆ ಹೊಸ ಟೊಯೋಟಾ ಇನ್ನೋವಾ ಹೈಕ್ರಾಸ್ ವಾಹನ ಹಂಚಿಕೆ ಆಗಿದೆ. ಮಂಡ್ಯ ಜಿಲ್ಲಾಧಿಕಾರಿಗಳು ಹೊಸ ಕಾರನ್ನು ಪಡೆಯಲು ಕೇಂದ್ರ ಸಚಿವರನ್ನು ಕೋರಿದ್ದು, ಧನುರ್ಮಾಸದ ಕಾರಣ ನೀಡಿ ಸಂಕ್ರಾಂತಿ ನಂತರ ಹೊಸ ಕಾರು ಪಡೆಯುವುದಾಗಿ ತಿಳಿಸಿರುತ್ತಾರೆ. ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 04-11-2024 ರಲ...
‘ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್.. ಏಪ್ರಿಲ್‌ನಿಂದ ವೇತನ ಹೆಚ್ಚಳ.. ಸಿಎಂ ಭರವಸೆ ನಂತರ ಧರಣಿ ಅಂತ್ಯ

‘ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್.. ಏಪ್ರಿಲ್‌ನಿಂದ ವೇತನ ಹೆಚ್ಚಳ.. ಸಿಎಂ ಭರವಸೆ ನಂತರ ಧರಣಿ ಅಂತ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು; ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್'ನಲ್ಲಿ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ಅನಿರ್ಧಿಷ್ಟಾವಧಿ ಧರಣಿ ಅಂತ್ಯಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರ ಭರವಸೆ ಹಿನ್ನೆಲೆಯಲ್ಲಿ ಹೋರಾಟವನ್ನು ಅಂತ್ಯಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (AIUTUC) ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದ್ದಾರೆ.ಮುಖ್ಯಮಂತ್ರಿಗಳ ಮಧ್ಯಪ್ರವೇಶದಲ್ಲಿ 10,000 ‌ಮಾಸಿಕ ಗೌರವ ಧನ ನಿಗದಿ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆ ಭರವಸೆಯು ಆಶಾಗಳ ಅನಿರ್ದಿಷ್ಟಾವಧಿ ಹೋರಾಟಕ್ಕೆ ದೊರೆತ ಅಭೂತಪೂರ್ವ ಯಶಸ್ಸು ಎಂದವರು ಹೇಳಿದ್ದಾರೆ. ಮಾಸಿಕ ರೂ.10,000 ನಿಶ್ಚಿತ ಗೌರವಧನದ ಜೊತೆಗೆ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಪ್ರೋತ್ಸಾಹಧನ ದೊರೆಯುವ ಖಾತ್ರಿ, ನಿವೃತ್ತಿ ಪರಿಹಾರ ನೀಡುವ ಕುರಿತು ಮುಂದಿನ ದಿನಗಳಲ್ಲಿ ಪರಿಶೀಲನೆ, ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಾದ ಸಂದರ್ಭದಲ್ಲಿ ಮೂರು ತಿಂಗಳ ವೇತನ ಸಹಿತ ರಜೆ ಕುರಿತು ಪರಿಶೀಲನೆ ಸಹಿ...
ಕಾಂಗ್ರೆಸ್‌ನಲ್ಲಿ ಬಿರುಸಿನ ವಿದ್ಯಮಾನ; ಸೋಮವಾರ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ

ಕಾಂಗ್ರೆಸ್‌ನಲ್ಲಿ ಬಿರುಸಿನ ವಿದ್ಯಮಾನ; ಸೋಮವಾರ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪ್ರದೇಶ ಕಾಂಗ್ರೆಸ್ ಪಕ್ಷದಲ್ಲಿನ ಡಿನ್ನರ್ ಪಾರ್ಟಿ ಸಂಚಲನದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.ಸೋಮವಾರ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ (ಸಿಎಲ್‌ಪಿ) ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದು ಪಕ್ಷದ ಎಲ್ಲಾ ಶಾಸಕರು, ಸಂಸದರಿಗೆ ಸೂಚನೆ ರವಾನಿಸಿದ್ದಾರೆ. ಜನವರಿ13ರಂದು ಸಂಜೆ 6ಕ್ಕೆ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್‌ ಈ ಸೂಚನೆ ರವಾನಿಸಿದ್ದಾರೆ.ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ವಿಧಾನ ಪರಿಷತ್ತಿನ ಸಭಾನಾಯಕ ಎನ್‌.ಎಸ್‌. ಬೋಸರಾಜು ಜಾಗೂ ಪಕ್ಷದ ಎಲ್ಲ ಕಾರ್ಯಾಧ್ಯಕ್ಷರು ಈ ಸಿಎಲ್‌ಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪಕ್ಷದ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಲೋಕಸಭೆ- ರಾಜ್ಯಸಭೆಯ ಸದಸ್ಯರು ಹಾಗೂ ಬಾಹ್ಯ ಬೆಂಬಲಿತರು ಈ ಸಭೆಯಲ್ಲಿ ಭಾಗವಹಿಸುವಂತೆ ಅವರು ಆಹ್ವಾನ ನೀಡಿದ್ದಾರೆ.....
ಜ. 21ರಂದು ಬೆಳಗಾವಿ ಸುವರ್ಣಸೌಧದ ಗಾಂಧಿ ಪ್ರತಿಮೆ ಅನಾವರಣ; ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ

ಜ. 21ರಂದು ಬೆಳಗಾವಿ ಸುವರ್ಣಸೌಧದ ಗಾಂಧಿ ಪ್ರತಿಮೆ ಅನಾವರಣ; ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜ .21 ರಂದು ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವರಾದ ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ನೆಲಮಂಗಲ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎಸ್.ರವಿ ಉಪಸ್ಥಿತಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಡಿ.ಕೆ. ಶಿವಕುಮಾರ್, ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ ಆರಂಭಿಸಿದ್ದು, ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿಸಂಬರ್ 26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಅಂದು ಸಂಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನರಾದ ಹಿನ್ನೆಲೆಯಲ್ಲಿ ಮರುದಿನದ ಕಾರ್ಯಕ್ರಮಗಳನ್ನು ...
ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳುವ ನಕ್ಸಲರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲನೆ; ಸಿಎಂ

ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳುವ ನಕ್ಸಲರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲನೆ; ಸಿಎಂ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥ್ಕಕ್ಕೆ ಅಗತ್ಯವಾದ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಅನ್ಯಾಯ-ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು. ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ. ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರು ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿಯೇ ನಮ್ಮ ಸರ್ಕಾರ ಪ್ರಾರಂಭಿಸಿತ್ತು. ಕಳೆದ ಅವಧಿಯಲ್ಲಿ ಹನ್ನೆರಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಆರು ಮಂದಿ ನಕ್ಸಲರು ಬಂದಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಶರಣಾಗ...
ದೇವಸ್ಥಾನಗಳಲ್ಲಿ ವಿಐಪಿ ‘ದರ್ಶನ’ದ ಕಲ್ಪನೆ ತ್ಯಜಿಸಬೇಕು; ಉಪರಾಷ್ಟ್ರಪತಿ

ದೇವಸ್ಥಾನಗಳಲ್ಲಿ ವಿಐಪಿ ‘ದರ್ಶನ’ದ ಕಲ್ಪನೆ ತ್ಯಜಿಸಬೇಕು; ಉಪರಾಷ್ಟ್ರಪತಿ

ಆಧ್ಯಾತ್ಮ, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವಿಶೇಷ, ವೀಡಿಯೊ
ಮಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗಿದೆ. ಈ ಸಂಬಂಧ ನಿರ್ಮಿಸಲಾಗಿರುವ ನೂತನ ಸಂಕೀರ್ಣವನ್ನು ಉಪರಾಷ್ಟ್ರಪತಿ ಜಗದೀಪ್ ಧನ್‌ಕ‌ರ್ ಅವರು ಮಂಗಳವಾರ ಉದ್ಘಾಟಿಸಿದರು.ಸರತಿ ಸಾಲಿನ ವ್ಯವಸ್ಥೆ ಸಂಕೀರ್ಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಉಪರಾಷ್ಟ್ರಪತಿ ಜಗದೀಪ್ ಧನಕರ್, ನಮ್ಮ ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದ ಮೂಲಸೌಕರ್ಯ ಬೆಳವಣಿಗೆಯಾಗಿರುವುದು ಸಮಾಧಾನಕರ ಬೆಳವಣಿಗೆ ಎಂದ್ರು. ಧಾರ್ಮಿಕ ಕೇಂದ್ರಗಳು ನಮ್ಮ ನಾಗರಿಕ ಮೌಲ್ಯಗಳ ಕೇಂದ್ರಗಳಾಗಿವೆ. ಯಾವುದೇ ವ್ಯಕ್ತಿ ಇಲ್ಲದ ಕಾರಣ ಸಮಾನತೆಯ ಸಂಕೇತವಾದ ಧಾರ್ಮಿಕ ಸಂಸ್ಥೆಗಳು ಸರ್ವಶಕ್ತ ದೇವರ ಮುಂದೆ ಶ್ರೇಷ್ಠವಾಗಿವೆ ಎಂದರು.VIDEO | Vice President Jagdeep Dhankhar speaking at the inauguration ceremony of a queue system complex at Shri Kshethra Dharmasthala says, "A soothing change in recent years in our country has been infrastructural growth that is germane to ou...
ಬಿಬಿಎಂಪಿ ಅಕ್ರಮ; ED ಕಾರ್ಯಾಚರಣೆ ಬಿರುಸು

ಬಿಬಿಎಂಪಿ ಅಕ್ರಮ; ED ಕಾರ್ಯಾಚರಣೆ ಬಿರುಸು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರ ಕಚೇರಿ ಮೇಲೆ ಮಂಗಳವಾರ ದಾಳಿ ನಡೆಸಿ ಪರಿಶೀಲಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಮಂಗಳವಾರ ಬೆಳಗ್ಗೆ ED ಅಧಿಕಾರಿಗಳ ತಂಡ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಕಚೇರಿಯಲ್ಲಿ ಶೋಧ ನಡೆಸಿದೆ.ಏನಿದು ಆರೋಪ?ಬೋರ್‌ವೆಲ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಇಡಿ ಈ ಕಾರ್ಯಾಚರಣೆ ಕೈಗೊಂಡಿದೆ. ಬಿಬಿಎಂಪಿ ಕೊರೆಸಿದ್ದ ಬೋರ್‌ವೆಲ್‌ ಕೊರೆಸುವ ಯೋಜನೆಯ 960 ಕೋಟಿ ರೂಪಾಯಿ ಪೈಕಿ 400 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.2016ರಲ್ಲಿ ನಡೆದಿದೆ ಎನ್ನಲಾದ ಈ ಹಗರಣ ಆರೋಪ ಬಗ್ಗೆ ತನಿಖೆ ನಡೆಸುತ್ತಿರುವ ED ಅಧಿಕಾರಿಗಳು ಬಿಬಿಎಂಪಿಗೆ ಸಂಬಂಧಿಸಿದ ಸುಮಾರು ಆರು ಕಚೇರಿಗಳನ್ನು ಶೋಧಿಸಿದ್ದಾರೆ....