Tuesday, August 11

ವಿದೇಶ

ರಾಗಿ ಹುಲ್ಲು ತುಂಬಿದ್ದ ವಾಹನಕ್ಕೆ ವಿದ್ಯುತ್ ಲೈನ್ ಸ್ಪರ್ಶ; ಕ್ಯಾಂಟರ್ ಅಗ್ನಿಗಾಹುತಿ

ರಾಗಿ ಹುಲ್ಲು ತುಂಬಿದ್ದ ವಾಹನಕ್ಕೆ ವಿದ್ಯುತ್ ಲೈನ್ ಸ್ಪರ್ಶ; ಕ್ಯಾಂಟರ್ ಅಗ್ನಿಗಾಹುತಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ದೊಡ್ಡಬಳ್ಳಾಪುರ: ರಾಗಿ ಹುಲ್ಲು ತುಂಬಿದ್ದ ಕ್ಯಾಂಟರ್ ಗೆ ವಿದ್ಯುತ್ ಲೈನ್ ಸ್ಪರ್ಶವಾಗಿದ್ದು, ವಿದ್ಯುತ್ ಲೈನ್ ತಗುಲಿದ ಹಿನ್ನೆಲೆ ರಾಗಿ ಹುಲ್ಲಿಗೆ ಬೆಂಕಿ ಆವರಿಸಿ ಹೊತ್ತಿ ಉರಿದಿದ ಘಟನೆ ದೊಡ್ಡಬಳ್ಳಾಪುರ ತಾಲೂಕು ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ.ಭಕ್ತರಹಳ್ಳಿಯಿಂದ ವಿಜಯಪುರಕ್ಕೆ ಲಾರಿಯಲ್ಲಿ ಹುಲ್ಲು ಸಾಗಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡಿದೆ. ಲಾರಿಯಲ್ಲಿದ್ದ 250 ಹೊರೆ ಹುಲ್ಲು ಭಸ್ಮವಾಗಿದೆ. ಪಕ್ಕದಲ್ಲೇ ಇದ್ದ ರೈತರ ಹುಲ್ಲಿನ ಬಣವೆಗೂ ಬೆಂಕಿ ಆವರಿಸಿದೆ. ಗ್ರಾಮಸ್ಥರಿಂದ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು.ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸುವಲ್ಲಿ ತಡವಾದ ಹಿನ್ನೆಲೆ ಗ್ರಾಮಸ್ಥರಿಂದಲೇ ಬೆಂಕಿ ನಂದಿಸುವ ಯತ್ನ ನಡೆದಿದೆ. ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ದೊಡ್ಡಬೆಳವಂಗಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ರಾಜ್ಯದಲ್ಲಿ HMP ಗುಮ್ಮ..! ಕ್ಷಿಪ್ರ ಕ್ರಮ ಸಂಬಂಧ ಅಧಿಕಾರಿಗಳ ತುರ್ತು ಸಭೆ..

ರಾಜ್ಯದಲ್ಲಿ HMP ಗುಮ್ಮ..! ಕ್ಷಿಪ್ರ ಕ್ರಮ ಸಂಬಂಧ ಅಧಿಕಾರಿಗಳ ತುರ್ತು ಸಭೆ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕದಲ್ಲಿ ಎಚ್‌ಎಂಪಿ ಸೋಂಕಿನ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕ್ಷಿಪ್ರ ಕ್ರಮಕ್ಕೆ ಮುಂದಾಗಿದೆ. ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಸಂಬಂಧ ಸೋಮವಾರ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ನಡೆಯಿತು.ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರ ಸೂಚನೆ ಮೇರೆಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಮೊಹಮ್ಮದ್‌ ಮೊಹಸೀನ್‌, ನಿರ್ದೇಶಕರಾದ ಡಾ. ಬಿ.ಎಲ್‌. ಸುಜಾತಾ ರಾಥೋಡ್‌ ಅವರ ನೇತೃತ್ವದಲ್ಲಿ ಎಲ್ಲಾ ಜಿಲ್ಲಾ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಯಿತು.ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ, ಚಿಕಿತ್ಸೆ ತಯಾರಿ ಹಾಗೂ ಇತರೆ ಪರಿಣಾಮಕಾರಿ ಕ್ರಮಗಳ ಬಗ್ಗೆ ವೀಡಿಯೋ ಕಾನ್ಸರೆನ್ಸ್‌ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ....
HMPV ಸೋಂಕು: ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ಪತ್ತೆ

HMPV ಸೋಂಕು: ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ಪತ್ತೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಚೀನಾದಲ್ಲಿ ಭೀತಿಯ ಅಲೆ ಎಬ್ಬಿಸಿರುವ HMPV ಸೋಂಕು ಭಾರತಕ್ಕೂ ಕಾಲಿಟ್ಟಿದೆ. ಮೊದಲ ಪ್ರಕರಣ ಕರ್ನಾಟಕದಲ್ಲೇ ಪತ್ತೆಯಾಗಿದೆ.ಬೆಂಗಳೂರಿನಲ್ಲಿ 8 ತಿಂಗಳ ಹಾಗೂ 3 ತಿಂಗಳ ಮಗುವಿನಲ್ಲಿ HMPV ಸೋಂಕು ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ ಜ್ವರದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 8 ತಿಂಗಳ ಮಗುವಿಲ್ಲಿ ಈ ಸೋಂಕು ದೃಢಪಟ್ಟಿದೆ.ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲೂ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ....
KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ 'ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ - KSRTC ಆರೋಗ್ಯ ಕಾರ್ಯಕ್ರಮ' ಸೋಮಾವರ ಅನುಷ್ಠಾನಗೊಳ್ಳಲಿದೆ. ಸೋಮವಾರ (06.01.2025) ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ಸಿಗಲಿದೆ.ಶೀಘ್ರವೇ ಕನ್ನಡದಲ್ಲೂ ಬರಲಿದೆ ದೇಶದ ಪ್ರತಿಷ್ಠಿತ ಮಾಧ್ಯಮಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ವರ್ಗಕ್ಕೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ 'KSRTC ಆರೋಗ್ಯ' ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಈ ಸಮಾರಂಭ ನಡೆಯಲಿದೆ.ಈ ಸಮಾರಂಭದಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಆಸ್ಪತ್ರೆಗಳ ಮುಖ್ಯಸ್ಥ...
ವಿಪಕ್ಷ ನಾಯಕ ಅಶೋಕ್ ಅವರಿಗೆ ‘ವಿಶೇಷ ಸ್ಥಾನಮಾನದ ನಾಮಫಲಕ’ ಒದಗಿಸಿ; ಕಾಂಗ್ರೆಸ್ ವ್ಯಂಗ್ಯ

ವಿಪಕ್ಷ ನಾಯಕ ಅಶೋಕ್ ಅವರಿಗೆ ‘ವಿಶೇಷ ಸ್ಥಾನಮಾನದ ನಾಮಫಲಕ’ ಒದಗಿಸಿ; ಕಾಂಗ್ರೆಸ್ ವ್ಯಂಗ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ತಮ್ಮ ಬಗ್ಗೆ ಕಾಂಗ್ರೆಸ್ ಪಕ್ಷ ಆಕ್ಷೇಪಾರ್ಹ ವೀಡಿಯೊ ವೈರಲ್ ಮಾಡಿದೆ ಎಂದು ಪೊಲೀಸರಿಗೆ ದೂರು ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್, ತಮ್ಮ ಸ್ಥಾನಮಾನಕ್ಕೆ ಕಾಂಗ್ರೆಸ್ ಚ್ಯುತಿ ತರುವ ಪ್ರಯತ್ನ ಮಾಡಿದೆ ಎಂದು ಆರೋಪಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ, ವಿಪಕ್ಷ ನಾಯಕ ಅಶೋಕ್ ಅವರಿಗೆ 'ವಿಶೇಷ ಸ್ಥಾನಮಾನದ ನಾಮಫಲಕ' ಒದಗಿಸಬೇಕಿದೆ ಎಂದು ವ್ಯಂಗ್ಯವಾಡಿದೆ. ಈ ಸಂಬಂಧ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಸ್ಪೀಕರ್'ಗೆ ಬರೆದಿರುವ ಪತ್ರ ಗಮನಸೆಳೆದಿದೆ.ಕರ್ನಾಟಕದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅಲಿಯಾಸ್ ಸಾಮ್ರಾಟ್ ಅಶೋಕ್ ರವರಿಗೆ ವಿಶೇಷ ಸ್ಥಾನಮಾನ ಮತ್ತು ನಾಮಫಲಕ ಒದಗಿಸಬೇಕೆಂದು ಈ ಪತ್ರದಲ್ಲಿ ರಮೇಶ್ ಬಾಬು ಉಲ್ಲೇಖಿಸಿದ್ದಾರೆ. ಕರ್ನಾಟಕದ ವಿಧಾನಸಭೆಗೆ ತನ್ನದೇ ಆದ ವಿಶೇಷವಾದ ಗೌರವವಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಅನೇಕ ಹಿರಿಯರು ಇಲ್ಲಿ ಸೇವೆ ಸಲ್ಲಿಸಿದ್ದಾರೆ. ತಮ್ಮ ವಿರೋಧ ಪಕ್ಷದ ನಾಯಕರ ಸ್ಥಾನದ ಕಾರ್ಯದ ಕಾರಣಕ್ಕಾಗಿ ಗೌರವವನ್ನೂ ಪಡೆದಿರುತ್ತಾರೆ. ಹಿರಿಯ ನಾಯಕರಾದ ಏಸ್ . ಶಿವಪ್ಪನವರು ಮೊದಲ...
ಬಿಡದಿ ಬಳಿ ಬಾಯ್ಲರ್ ಸ್ಫೋಟ; ಐವರು ಕಾರ್ಮಿಕರಿಗೆ ಗಾಯ

ಬಿಡದಿ ಬಳಿ ಬಾಯ್ಲರ್ ಸ್ಫೋಟ; ಐವರು ಕಾರ್ಮಿಕರಿಗೆ ಗಾಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ಬಿಡದಿ ಬಳಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಐವರು ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.ಬಿಡದಿಯ ಭೈರಮಂಗಲ ಕ್ರಾಸ್​ಬಳಿಯ ವಿಧ್ಯುತ್​​ ಉತ್ಪಾದನಾ ಘಟಕದಲ್ಲಿ ಬಾಯ್ಲರ್​ಸ್ಪೋಟಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಉತ್ತರ ಭಾರತದ ಐವರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಅಮಲೇಶ್, ಸಂತೂನ್, ಉಮೇಶ್, ತರುಣ್, ಲಖನ್ ಎಂದು ಗುರುತಿಸಲಾಗಿದೆ.ಅವಘಡದ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ಸಿದ್ದರಾಮಯ್ಯ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಶಾಕ್; ಅನಿರ್ದಿಷ್ಟಾವಧಿ ಹೋರಾಟ ಘೋಷಣೆ

ಸಿದ್ದರಾಮಯ್ಯ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಶಾಕ್; ಅನಿರ್ದಿಷ್ಟಾವಧಿ ಹೋರಾಟ ಘೋಷಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಇದೀಗ ಸಿದ್ದರಾಮಯ್ಯ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 'ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ' ರಾಜ್ಯ ಮಟ್ಟದಲ್ಲಿ ಅನಿರ್ದಿಷ್ಟಾವಧಿ ಹೋರಾಟ ಘೋಷಿಸಿದೆ.ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ. 15,000 ಗೌರವಧನ ನೀಡಬೇಕು ಎಂಬ ಬಹುದಿನಗಳ ಬೇಡಿಕೆಯೂ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದ್ದಾರೆ.ಆಶಾ ಕಾರ್ಯಕರ್ತೆಯರು ಹಗಲಿರುಳು ಗ್ರಾಮಾಂತರದ ಮತ್ತು ನಗರದ ಬಡಜನರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಆರೋಗ್ಯ ಇಲಾಖೆಯಲ್ಲಿ ಶ್ರಮಿಸುತ್ತಿರುವುದು ನಿಮಗೆ ತಿಳಿದಿದೆ. ರಾಜ್ಯದಲ್ಲಿ ಸುಮಾರು 42,000 ಆಶಾ ಕಾರ್ಯಕರ್ತೆಯರು ಮಹತ್ತರವಾದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಹಾಗೆಯೇ ಕೋವಿಡ್-19 ಸಂದರ್ಭದಲ್ಲಿ ಈ ಫ್ರಂಟ್ ಲೈನ್ ವಾರಿಯರ್ಸ್ ಆಗಿ ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸಿರುವುದನ್ನು ವಿಶ್ವ ಆರೋಗ್...
ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಲಾಗಿತ್ತು: ರಾಮಲಿಂಗಾ ರೆಡ್ಟಿ ಅವರಿಂದ ಪಟ್ಟಿ ಬಿಡುಗಡೆ

ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಲಾಗಿತ್ತು: ರಾಮಲಿಂಗಾ ರೆಡ್ಟಿ ಅವರಿಂದ ಪಟ್ಟಿ ಬಿಡುಗಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ‌ ನಿಗಮಗಳ ಬಸ್ ಟಿಕೆಟ್ ದರ ಹೆಚ್ಚಳದ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ತಮ್ಮದೇ ರೀತಿಯಲ್ಲಿ ಎದಿರೇಟು ನೀಡಿದ್ದಾರೆ.ಶೀಘ್ರವೇ ಕನ್ನಡದಲ್ಲೂ ಬರಲಿದೆ ದೇಶದ ಪ್ರತಿಷ್ಠಿತ ಮಾಧ್ಯಮಬಿಜೆಪಿ ಸರ್ಕಾರದ ಅವಧಿಯಲ್ಲಿ ಅದರಲ್ಲೂ ಆರ್.ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ಬಸ್‌ಗಳಲ್ಲಿನ ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ರಾಮಲಿಂಗ ರೆಡ್ಡಿ ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಆಗಿನ ಬಿಜೆಪಿ ಸರ್ಕಾರವು 7 ಬಾರಿ ಟಿಕೆಟ್ ದರ ಪರಿಷ್ಕರಿತ್ತು. ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಿತ್ತು ಎಂದು ರೇಟ್ ಕಾರ್ಡ್ ಬಿಡುಗಡೆ ಮಾಡಿದ್ದಾರೆ.ನಮ್ಮನ್ನು ಟೀಕಿಸುವ ಬಿಜೆಪಿಗೆ ಯಾವ ನೈತಿಕತೆಯೂ ಇಲ್ಲ, ನಾಚಿಕೆಯೂ ಇಲ್ಲ! ಎಂದು ಸಚಿವ ರಾಮಲಿಂಗ ರೆಡ್ಡಿ ಟೀಕಿಸಿದ್ದಾರೆ....
ಸಿಎಂ ಬದಲಾವಣೆಗಾಗಿ ಒಕ್ಕಲಿಗ ಶಾಸಕರ ಸಭೆ ನಡೆದಿದೆ ಎಂಬುದು ಸುಳ್ಳು; ಸಿದ್ದರಾಮಯ್ಯ ಪ್ರತಿಕ್ರಿಯೆ

ಸಿಎಂ ಬದಲಾವಣೆಗಾಗಿ ಒಕ್ಕಲಿಗ ಶಾಸಕರ ಸಭೆ ನಡೆದಿದೆ ಎಂಬುದು ಸುಳ್ಳು; ಸಿದ್ದರಾಮಯ್ಯ ಪ್ರತಿಕ್ರಿಯೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿಎಂ ಬದಲಾವಣೆ ಸಾಧ್ಯತೆಗಳ ಕುರಿತಂತೆ ರಾಜ್ಯ ರಾಕೀಯದಲ್ಲಿ ಬಲವಾದ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕರ ಡಿನ್ನರ್ ಮೀಟಿಂಗ್ ನಡೆದಿದ್ದು, ಈ ಬೆಳವಣಿಗೆ ತೀವ್ರ ಕುತೂಹಲ ಕೆರಳುವಂತೆ ಮಾಡಿದೆ.ಆದರೆ, ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು. ಊಟಕ್ಕೆ ಎಲ್ಲರೂ ಒಂದು ಕಡೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ತಪ್ಪಾಗಿ ಭಾವಿಸಿದ್ದಾರೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು. ಊಟಕ್ಕೆ ಎಲ್ಲರೂ ಒಂದು ಕಡೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ತಪ್ಪಾಗಿ ಭಾವಿಸಿದ್ದಾರೆ. pic.twitter.com/pnZLbZDNTT — Siddaramaiah (@siddaramaiah) January 3, 2025...