
ಅಬಕಾರಿ ಲಂಚಾವತಾರ; ಲೂಟಿ ಮಾಡಿಲ್ಲವೆಂದು ಕಾಂಗ್ರೆಸ್ ನಾಯಕರು ಯಾವ ನಾಲಿಗೆಯಿಂದ ಹೇಳುತ್ತಿದ್ದಾರೆ?
ರಾಮನಗರ: ಅಬಕಾರಿ ಇಲಾಖೆಯ ಹಗರಣದ ಬಗ್ಗೆ ದೂರು ಸಲ್ಲಿಕೆಯಾಗಿ ಜನರು ಈ ಬಗ್ಗೆ ಮಾತನಾಡುತ್ತಿದ್ದಾರೆ. ಆದರೂ ಲೂಟಿ ಮಾಡಿಲ್ಲವೆಂದು ಕಾಂಗ್ರೆಸ್ ನಾಯಕರು ಯಾವ ನಾಲಿಗೆಯಿಂದ ಹೇಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ ಮಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಇಲಾಖೆಯ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಅದು ಸುಳ್ಳು ಆರೋಪವೆಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಇದರ ವಿರುದ್ಧ ದೂರು ದಾಖಲಾಗುವುದರ ಜೊತೆಗೆ, ಮದ್ಯ ಮಾರಾಟಗಾರರ ಸಂಘದವರು ಕೂಡ ಇದನ್ನು ಹೇಳಿದ್ದಾರೆ. ಮಾಧ್ಯಮಗಳಲ್ಲಿ ಕೂಡ ಇದು ವರದಿಯಾಗಿದೆ. ಜನರು ಕೂಡ ಈ ಬಗ್ಗೆ ಮಾತನಾಡುತ್ತಿದ್ದಾರೆ. ಇಷ್ಟಾದರೂ ನಾವು ಲೂಟಿ ಮಾಡಿಲ್ಲವೆಂದು ಕಾಂಗ್ರೆಸ್ ನಾಯಕರು ಯಾವ ನಾಲಿಗೆಯಿಂದ ಹೇಳುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.ಪ್ರಧಾನಿ ನರೇಂದ್ರ ಮೋದಿಯವರು ಹೇಳಿದಂತೆ ಮಹಾರಾಷ್ಟ್ರಕ್ಕೆ 700 ಕೋಟಿ ರೂ. ಹೋಗಿದೆ. 200 ಕೋಟಿ ರೂ.ರಾಜ್ಯದ ಉಪಚುನಾವಣೆಗೆ ಬಳಸಲಾಗುತ್ತಿದೆ. ಇದು ಸುಳ್ಳು ಎನ್ನುವುದಾದರೆ ದೂರು ನೀಡಿದವರ ವಿರುದ್ಧ ಕಾಂಗ್ರೆಸ್ ಸರ್ಕಾರ ದೂರು ದಾಖಲಿಸಲಿ. ಕಾಂಗ್ರೆಸ್ ಬ...







