ವಕ್ಫ್ ವಿವಾದ ವಿರುದ್ದ ಬಿಜೆಪಿ ಪ್ರತಿಭಟನೆ; ವಕ್ಫ್ ಮಂಡಳಿ ಕಾಯ್ದೆಯಲ್ಲಿ ಬದಲಾವಣೆ ತರಲು ಆಗ್ರಹ
ಬೆಂಗಳೂರು: ವಕ್ಫ್ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್ ಸರ್ಕಾರ ವಕ್ಫ್ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು ಬಿಜೆಪಿ ಆಗ್ರಹಿಸಿದೆ.ವಕ್ಫ್ ಮಂಡಳಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕೆ.ಆರ್.ಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕ ಆರ್.ಅಶೋಕ್ ,ಜಮೀನು ಕಬಳಿಸುವ ಮೂಲಕ ಅನ್ನದಾತರ ಕಣ್ಣಲ್ಲಿ ನೀರು ಬರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇವೆಲ್ಲಕ್ಕೂ ಸಚಿವ ಜಮೀರ್ ಅಹ್ಮದ್ ಕಾರಣ. ಹಿಂದೆ ಕೇಂದ್ರದ ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನು ಓಲೈಸಲು ವಕ್ಫ್ ಬೋರ್ಡ್‌ಗೆ ಹೆಚ್ಚು ಅಧಿಕಾರ ನೀಡಿತು. ಸಿಎಂ ಸಿದ್ದರಾಮಯ್ಯ ಅವರೇ ಭೂಮಿ ಪಡೆಯಿರಿ ಎಂದು ಹೇಳಿದ್ದು, ಈಗ ಇದು ಬಿಜೆಪಿ ಮಾಡುವ ರಾಜಕೀಯ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಈಗ ಟೋಪಿ ತೆಗೆದಿದ್ದಾರೆ. ಬಳಿಕ ಅವರೇ ರೈತರ ತಲೆ ಮೇಲೆ ಟೋಪಿ ಹಾಕುತ್ತಾರೆ. ಮುಸ್ಲಿಮರಿಗೆ 10 ಸಾವಿರ ಕೋಟಿ ರೂ. ನೀಡುತ್ತೇನೆಂದು ಹೇಳಿ ದಲಿತರ ಹಣ ಲೂಟಿ ಮಾಡಿದ...








