Tuesday, August 11

ವಿದೇಶ

ದೀಪಾವಳಿ ವೇಳೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ; ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬಹುದು..

ದೀಪಾವಳಿ ವೇಳೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ; ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬಹುದು..

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ಇದೆ.ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಪರಿಸರ ಸ್ನೇಹಿ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು ಎಂದು ತಾಕೀತು ಮಾಡಿದ್ದಾರೆ.ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಪಟಾಕಿ ದುರಂತಗಳಿಗೆ ಅವಕಾಶ ನೀಡಬಾರದು. ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು. ರಾತ್ರಿ 8 ರಿಂದ 10 ರವರೆಗೆ ಪಟಾಕಿ ಸಿಡಿಸಲು ಅವಕಾಶ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.‌...
ದೊಡ್ಡಬಳ್ಳಾಪುರ: ಕೂಗೇನಹಳ್ಳಿ ಗೇಟ್ ಬಳಿ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ

ದೊಡ್ಡಬಳ್ಳಾಪುರ: ಕೂಗೇನಹಳ್ಳಿ ಗೇಟ್ ಬಳಿ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ದೊಡ್ಡಬಳ್ಳಾಪುರ: ಟ್ರ್ಯಾಕ್ಟರ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕೆಯ ಕೆನ್ನಾಲಿಗೆಗೆ ಲಾರಿಯ ಮುಂಭಾಗ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.ದೊಡ್ಡಬಳ್ಳಾಪುರ ತಾಲೂಕು ಕೂಗೇನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ದೊಡ್ಡಬಳ್ಳಾಪುರದಿಂದ ದಾಬಸ್ ಪೇಟೆಗೆ ಹೋಗುತ್ತಿರುವಾಗ ಬೆಂಕಿ ಕಾಣಿಸಿಕೊಂಡಿದೆ.ಪಿಕಾಪ್ ಇಲ್ಲದಿರುವುದರಿಂದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ನಂತರ ಗ್ಯಾರೇಜ್ ಬಳಿ ಟೆಸ್ಟ್ ಡ್ರೈವ್ ಗೆ ಹೋಗಿ ವಾಪಸ್ ಆಗುವ ವೇಳೆ ಘಟನೆ ನಡೆದಿದೆ.‌ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಅದೃಷ್ಟವಶಾತ್ ಲಾರಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ....
ಕೃತಕ ನೆರೆಯ ಆತಂಕ ಇವರಿಗಿಲ್ಲ, ಉದ್ಯಾನ ನಗರಿಯ ಈ ಪ್ರದೇಶದಲ್ಲಿ ಅಧ್ವಾನವೇ ಇಲ್ಲ! ರಾಮಲಿಂಗಾ ರೆಡ್ಡಿ ದೂರದೃಷ್ಠಿ ಯೋಜನೆಗೆ ಜನರ ಸಮ್ಮಾನ

ಕೃತಕ ನೆರೆಯ ಆತಂಕ ಇವರಿಗಿಲ್ಲ, ಉದ್ಯಾನ ನಗರಿಯ ಈ ಪ್ರದೇಶದಲ್ಲಿ ಅಧ್ವಾನವೇ ಇಲ್ಲ! ರಾಮಲಿಂಗಾ ರೆಡ್ಡಿ ದೂರದೃಷ್ಠಿ ಯೋಜನೆಗೆ ಜನರ ಸಮ್ಮಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾದರೆ ಸಾಕು ಯದ್ಯಾನ ನಗರಿ ಅಧ್ವಾನಕ್ಕೆ ಸಾಕ್ಷಿಯಾಗುತ್ತದೆ. ಆದರೆ ಸಲಿಕಾನ್ ಸಿಟಿಯ ಬಿಟಿಎಂ ಲೇಔಟ್ ಈಗ ಅಂತಹಾ ಅವಾಂತಗಳಿಂದ ದೂರ ಇದೆ. ಈ ಕ್ಷೇತ್ರವನ್ನು ಪ್ರತಿನಿಧಿಸುವ ಸಚಿವ ರಾಮಲಿಂಗ ರೆಡ್ಡಿ ಅವರ ಇಚ್ಛಾಶಕ್ತಿಯ ಪರಿಣಾಮವಾಗಿ ಬಡಾವಣೆಯ ಪರಿಸ್ಥಿತಿ ಗಣನೀಯವಾಗಿ ಸುಧಾರಣೆಯಾಗಿದೆ.ಮಳೆ ಬಂದಾಗ ಆಗುವ ಆನಾಹುತಗಳನ್ನು ನೋಡಿದ ಒಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ನಾಡಿನ ಗಮನಸೆಳೆದಿದೆ. ಕೋರಮಂಗಲ ಸಮೀಪದ ಪ್ರದೇಶವೊಂದು ಹಿಂದೆ ಹೇಗಿತ್ತು? ಈಗ ಹೇಗಿದೆ ಎಂಬ ಚಿತ್ರಣವು ಜನನಾಯಕ ಮನಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಉದಾಹರಣೆಯಾಗಿ ನಿಂತಂತಿದೆ.ಕೋರಮಂಗಲ, ST BED, ಈಜಿಪುರ, ರಾಜೇಂದ್ರ ನಗರ, National Games Village ಮತ್ತು ವೆಂಕಟೇಶ್ವರ ಬಡಾವಣೆ ಮಡಿವಾಳ, ಪ್ರದೇಶಗಳಲ್ಲಿ ಮಳೆ ಬಂತೆಂದರೆ ಅಕ್ಷರಶಃ ನರಕ ಸದೃಶ ದೃಶ್ಯ ಕಾಣಸಿಗುತ್ತಿತ್ತು. ಕಳೆದ 20 ವರ್ಷಗಳ ಸಮಸ್ಯೆಗೆ ಪರಿಹಾರ ಕಂಡುಕೊಂಡ ರೀತಿ  ಮಾದರಿಯಾಗಿದೆ.ಒಬ್ಬ ಜನಪ್ರತಿನಿಧಿ ಯಾವ ರೀತಿ ತನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡಬಹುದು ಎಂಬುದಕ್ಕೆ...
ಶಿಗ್ಗಾಂವಿ ಉಪಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಚುನಾವಣೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಶಿಗ್ಗಾಂವಿ ಉಪಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಚುನಾವಣೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಶಿಗ್ಗಾಂವಿ ಉಪಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ. ಸೈಯದ್ ಅಜ್ಜಂ ಪೀರ್ ಖಾದ್ರಿ ಅವರು ನಾಮಪತ್ರ ಹಿಂಪಡೆಯಲಿದ್ದು, ಎಲ್ಲರೂ ಒಟ್ಟಾಗಿ ಪಕ್ಷದ ಪರವಾಗಿ ಚುನಾವಣೆ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಶಿಗ್ಗಾಂವಿಯಲ್ಲಿ ಖಾದ್ರಿ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಗ್ಗೆ ಪ್ರತಿಕ್ರಿಯಿಸಿ,, “ನಾನು ಖಾದ್ರಿ ಅವರು ಹಾಗೂ ಅವರ ಕಾರ್ಯಕರ್ತರ ಜತೆ ಮಾತನಾಡಿದ್ದೇನೆ. ಈ ವಿಚಾರವಾಗಿ ಸಚಿವರಾದ ಜಮೀರ್ ಅಹ್ಮದ್, ರಹೀಂ ಖಾನ್, ರೆಹಮಾನ್ ಖಾನ್ ಸೇರಿದಂತೆ ಆ ಜಿಲ್ಲೆಯ ನಾಯಕರ ಜತೆ ಚರ್ಚೆ ಮಾಡಿದ್ದು, ನಾಮಪತ್ರ ಹಿಂಪಡೆದು ಒಟ್ಟಾಗಿ ಕೆಲಸ ಮಾಡಲಾಗುವುದು” ಎಂದು ತಿಳಿಸಿದರು....
ಹರಕೆ ಕುರಿಯಾದರೇ ಸಿ.ಪಿ.ಯೋಗೇಶ್ವರ್‌? ಚನ್ನಪಟ್ಟಣದ ಕಾಂಗ್ರೆಸ್‌ ಕಾರ್ಯಕರ್ತರು ರೆಬೆಲ್‌?

ಹರಕೆ ಕುರಿಯಾದರೇ ಸಿ.ಪಿ.ಯೋಗೇಶ್ವರ್‌? ಚನ್ನಪಟ್ಟಣದ ಕಾಂಗ್ರೆಸ್‌ ಕಾರ್ಯಕರ್ತರು ರೆಬೆಲ್‌?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿ.ಪಿ.ಯೋಗೇಶ್ವರ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿರುವುದರಿಂದ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ರೆಬೆಲ್‌ ಆಗಿದ್ದಾರೆ. ಈ ಉಪಚುನಾವಣೆಯಲ್ಲಿ ಯೋಗೇಶ್ವರ್‌ ಹರಕೆ ಕುರಿಯಾಗಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಲೇವಡಿ ಮಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ, ಜೆಡಿಎಸ್‌ ಒಟ್ಟಾಗಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಜೆಡಿಎಸ್‌ ಪಕ್ಷ ಕಾರ್ಯಕರ್ತರ ಸಭೆ ನಡೆಸಿ, ಒಮ್ಮತದಿಂದ ಅಭ್ಯರ್ಥಿಯನ್ನು ಆರಿಸಲಾಗಿದೆ. ಆದರೆ ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರ ಅಭಿಪ್ರಾಯ ಕೇಳದೆ ಸಿ.ಪಿ.ಯೋಗೇಶ್ವರ್‌ ಅವರನ್ನು ಆರಿಸಲಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರು ರೆಬೆಲ್‌ ಆಗಿದ್ದು, ಅದನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದರ ಪರಿಣಾಮ ಕಾಂಗ್ರೆಸ್‌ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ ಎಂದರು.ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, ಎಸ್‌ಸಿ, ಎಸ್‌ಟಿ ಸಮುದಾಯದ ಹಣ ದುರ್ಬಳಕೆಯಿಂದಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದ...
ಬ್ರ್ಯಾಂಡ್‌ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು..!

ಬ್ರ್ಯಾಂಡ್‌ ಬೆಂಗಳೂರು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು..!

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸರ್ಕಾರ ನಮಗೆ ಬ್ರ್ಯಾಂಡ್‌ ಬೆಂಗಳೂರು ನೀಡುವುದು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಬಂದ ನಂತರ ಬ್ರ್ಯಾಂಡ್‌ ಬೆಂಗಳೂರು ಎಂಬ ಹೆಸರು ಹುಟ್ಟುಹಾಕಿದ್ದಾರೆ. ಆದರೆ ನಗರದಲ್ಲಿ ದಿನಕ್ಕೊಂದು ಅವಘಡ ಸಂಭವಿಸುತ್ತಿದೆ. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತವಾಗಿದ್ದು, ಎಂಟು ಅಮಾಯಕರು ಮೃತರಾಗಿದ್ದಾರೆ. ಇಲ್ಲಿನ 20 ಅಡಿ ರಸ್ತೆಗೆ ಹೆಚ್ಚೆಂದರೆ 3 ಮಹಡಿ ನಿರ್ಮಿಸಬಹುದು. ಆದರೆ 7 ಮಹಡಿ ನಿರ್ಮಿಸಲು ಹೊರಟಿದ್ದರಿಂದ ಅವಘಡ ನಡೆದಿದೆ. ಬಿಬಿಎಂಪಿ ಅಧಿಕಾರಿಗಳು ಇದನ್ನು ಸರಿಯಾಗಿ ನಿರ್ವಹಣೆ ಮಾಡಿದ್ದರೆ ಎಲ್ಲವೂ ಸರಿ ಇರುತ್ತಿತ್ತು ಎಂದರು.ಕಾಂಗ್ರೆಸ್‌ ಸರ್ಕಾರ ಇಂತಹ ಯಾವುದೇ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೆಲ ತಿಂಗಳ ಹಿಂದೆ ವಿದ...
ಚನ್ನಪಟ್ಟಣ ಉಪಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ಉಪಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬಿಜೆಪಿ-ಜೆಡಿಎಸ್ ನಾಯಕರು ಘೋಷಿಸಿದ್ದಾರೆ.ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.ಯಡಿಯೂರಪ್ಪ ನಿವಾಸದಲ್ಲಿ ಗುರುವಾರ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ನಾಯಕರು ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಘೋಷಣೆ ಮಾಡಿದರು....
ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆ; ಬಿಜೆಪಿಯ ಕಿಶೋರ್ ಕುಮಾರ್ ಜುಭೇರಿ

ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆ; ಬಿಜೆಪಿಯ ಕಿಶೋರ್ ಕುಮಾರ್ ಜುಭೇರಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಜಯಗಳಿಸಿದ್ದಾರೆ.ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಅಕ್ಟೋಬರ್ 21 ರಂದು ಮತದಾನ ನಡೆದಿತ್ತು. 5,906 ಮತದಾರರು ಮತ ಚಲಾಯಿಸಿದ್ದರು. ಗುರುವಾರ ಬೆಳಿಗ್ಗೆ ಮತ ಎಣಿಕೆ ನಡೆದಿದೆ.ಬಿಜೆಪಿಯಿಂದ ಕಿಶೋರ್ ಕುಮಾರ್, ಕಾಂಗ್ರೆಸ್​​ನಿಂದ ರಾಜು ಪೂಜಾರಿ, ಎಸ್‌ಡಿಪಿಐನಿಂದ ಅನ್ವರ್ ಸಾದತ್ ಮತ್ತು ಸ್ವತಂತ್ರ ಅಭ್ಯರ್ಥಿ ದಿನಕರ ಉಳ್ಳಾಲ್ ನಡುವೆ ಸ್ಪರ್ದೆ ಏರ್ಪಟ್ಟಿತ್ತು. ಕಿಶೋರ್ ಕುಮಾರ್ ಅವರು 1600ಕ್ಕೂ ಅಧಿಕ ಮತಗಳಿಂದ ಅವರು ಜಯ ಸಾಧಿಸುವ ಮೂಲಕ ಪರಿಷತ್ ಸದಸ್ಯತ್ವವನ್ನು ಬಿಜೆಪಿ ಉಳಿಸಿಕೊಂಡಿದೆ....
ಬಾಬುಸಾಪಾಳ್ಯ ಕಟ್ಟಡ ಕುಸಿತ ದುರಂತ: ಮಾಲೀಕ, ಗುತ್ತಿಗೆದಾರನ ಬಂಧನ

ಬಾಬುಸಾಪಾಳ್ಯ ಕಟ್ಟಡ ಕುಸಿತ ದುರಂತ: ಮಾಲೀಕ, ಗುತ್ತಿಗೆದಾರನ ಬಂಧನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.ಮಂಗಳವಾರ ನಡೆದ ದುರಂತದಲ್ಲಿ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದು ಅವರ ರಕ್ಷಣೆಗೆ ಸುದೀರ್ಘ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆ ವೇಳೆ ಮತ್ತೆ 8 ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ನಡುವೆ, ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಟ್ಟಡದ ಮಾಲೀಕ ಮತ್ತು ಕಂಟ್ರಾಕ್ಟರ್‌ನನ್ನು ಬಂಧಿಸಿದ್ದಾರೆ....
ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡರೇ ಸಿ.ಪಿ.ಯೋಗೇಶ್ವರ್‌? 

ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡರೇ ಸಿ.ಪಿ.ಯೋಗೇಶ್ವರ್‌? 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರುವ ಮೂಲಕ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರಿಗೆ ಲೀಡ್‌ ದೊರೆಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ನಾಯಕರು ಕಾರ್ಯಕರ್ತರನ್ನು ಒಪ್ಪಿಸಿ ಸಿ.ಪಿ.ಯೋಗೇಶ್ವರ್‌ ಅವರಿಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ನೀಡಲು ತಯಾರಾಗಿದ್ದರು. ನಾನು ಸೇರಿದಂತೆ ಎಲ್ಲ ಬಿಜೆಪಿ ನಾಯಕರು ಅವರಿಗೆ ಬೆಂಬಲ ನೀಡಿದ್ದೆವು. ಅವರಿಗೆ ಟಿಕೆಟ್‌ ಸಿಗಲು ಎಲ್ಲ ಪ್ರಯತ್ನ ಮಾಡಿದ್ದೆವು. ಅವರು ಪಕ್ಷ ತೊರೆಯುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ ಎಂದರು.ಈಗ ಬಿಜೆಪಿ-ಜೆಡಿಎಸ್‌ ಮೈತ್ರಿ ಇದೆ. ಕೋಲಾರದಲ್ಲಿ ಈ ಹಿಂದೆ ಬಿಜೆಪಿ ಗೆದ್ದಿತ್ತು. ಈ ಲೋಕಸಭಾ ಚುನಾವಣೆಯಲ್ಲಿ ಅಲ್ಲಿ ಜೆಡಿಎಸ್‌ಗೆ ಅವಕಾಶ ನೀಡಲಾಗಿದೆ. ಮಂಡ್ಯದಲ್ಲಿ ಈ ಹಿಂದೆ ಸುಮಲತಾ ಸ್ಪರ್ಧಿಸಿದ್ದರು. ಬಳಿಕ ಎಚ್‌.ಡಿ.ಕುಮಾರಸ್ವಾಮಿ ಅಲ್ಲಿ ಗೆದ್ದರು. ಇಲ್ಲಿ ಬಿಜೆಪಿ, ಜೆಡಿಎಸ್‌ ಎಂಬುದಕ್ಕಿಂತ ಎನ್‌ಡಿಎ ಗೆಲ್ಲಬೇಕು ಎಂಬ ಉದ್ದೇಶ ಇತ್ತು ಎಂದರು.ಆದರೆ ಇವೆಲ...