Tuesday, August 11

ವಿದೇಶ

182 ಕೋಮು ದ್ವೇಷದ ಕೇಸ್ ವಾಪಸ್ ಪಡೆದಿದ್ದ ಬಿಜೆಪಿ; PFI ಮೇಲಿನ ಕೇಸ್ ವಾಪಸ್ ಪಡೆದಿದ್ದೂ BJP; ರಾಮಲಿಂಗಾ ರೆಡ್ಡಿ

182 ಕೋಮು ದ್ವೇಷದ ಕೇಸ್ ವಾಪಸ್ ಪಡೆದಿದ್ದ ಬಿಜೆಪಿ; PFI ಮೇಲಿನ ಕೇಸ್ ವಾಪಸ್ ಪಡೆದಿದ್ದೂ BJP; ರಾಮಲಿಂಗಾ ರೆಡ್ಡಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಗಲಭೆ  ಹಾಗೂ ರೈತ ರ ಮೇಲಿನ ಪ್ರಕರಣಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ಟೀಕಿಸುವತ್ತಿರುವ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಉತ್ತರ ನೀಡಿದ್ದಾರೆ. 182 ಕೋಮು ದ್ವೇಷದ ಪ್ರಕರಣಗಳನ್ನು ವಾಪಸ್ ಪಡೆದಿದ್ದ ಬಿಜೆಪಿ PFI ಮೇಲಿನ ಕೇಸ್ ವಾಪಸ್ ಪಡೆದಿತ್ತು ರಾಮಲಿಂಗಾ ರೆಡ್ಡಿ  ಹೇಳಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ  ರಾಮಲಿಂಗಾ ರೆಡ್ಡಿ, ಇತ್ತೀಚೆಗೆ ನಡೆದ ಸಚಿವ ಸಂಪುಟಸಭೆಯಲ್ಲಿ 43 ಕೇಸ್ ಗಳನ್ನು ಹಿಂಪಡೆಯಲಾಗಿದೆ. ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದವರ ಮೇಲಿನ ಪ್ರಕರಣಗಳನ್ನು ಡಾ.ಎಂ.ಸಿ.ಸುಧಾಕರ್ ಅವರ ಮನವಿ ಮೇರೆಗೆ ಹಿಂಪಡೆಯಲಾಗಿದೆ. ಸಂವಿಧಾನಕ್ಕೆ ಅಪಮಾನ ಮಾಡಿದವರ ವಿರುದ್ಧ ಹೋರಾಟ ಮಾಡಿದ ಎನ್.ಭಾಸ್ಕರ್, ಕರವೇಯ ನಾರಾಯಣ ಗೌಡ, ಗಣರಾಜ್ಯ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಡದೇ ಇರುವ ಕಾರಣಕ್ಕೆ ನಡೆದ ಪ್ರತಿಭಟನೆ, ಪೇಸಿಎಂ ಅಭಿಯಾನದಲ್ಲಿ ಪೋಸ್ಟರ್ ಅಂಟಿಸಿದವರ ವಿರುದ್ದ ಹೀಗೆ ಒಂದಷ್ಟು ಜನಪರ ಹೋರಾಟಗಳನ್ನು ನಡೆಸುವಾಗ ದಾಖಲಾದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದೆ ಎಂದರು.ಇದರಲ್ಲಿ ಹಳೇ ಹುಬ್...
ರೈತರನ್ನು ಅಪಮಾನಿಸಿದರೇ ಸಚಿವ ಕೃಷ್ಣ ಭೈರೇಗೌಡ? ‘ಇವರು ಐದು ವರ್ಷ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ’ ಎಂದ ಅಶೋಕ್

ರೈತರನ್ನು ಅಪಮಾನಿಸಿದರೇ ಸಚಿವ ಕೃಷ್ಣ ಭೈರೇಗೌಡ? ‘ಇವರು ಐದು ವರ್ಷ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ’ ಎಂದ ಅಶೋಕ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ.ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಬಗ್ಗೆ ಆಡಿದ ಮಾತಿನ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. 'ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟು 'ಕನಿಷ್ಠ ಜ್ಞಾನ' ಎಂದು ರೈತರನ್ನು ಕೃಷ್ಣ ಭೈರೇಗೌಡರು ಹೀಯಾಳಿಸಿದ್ದಾರೆ. ಎಲ್ಲರಿಗೂ ಅವರಂತೆ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವಷ್ಟು ಅನುಕೂಲ ಇರುವುದಿಲ್ಲ. ರಾಜಕಾರಣದಲ್ಲಿ ಕುಟುಂಬದ ಹಿನ್ನೆಲೆ ಇಲ್ಲದಂತಹ ನಮ್ಮಂತಹ ಸಾಮಾನ್ಯರೂ ಇದ್ದೀವಿ. ರೈತರ ಬಗ್ಗೆ ಇಂತಹ ಕೀಳರಿಮೆ ಇರುವ ತಮ್ಮಂತಹವರು ಐದು ವರ್ಷಗಳ ಕಾಲ ರಾಜ್ಯದ ಕೃಷಿ ಸಚಿವರಾಗಿದ್ದೀರಲ್ಲ, ಅದೇ ನಮ್ಮ ರಾಜ್ಯದ ದೌರ್ಭಾಗ್ಯ ಎಂದು ಹೇಳಿದ್ದಾರೆ.ಜಿಎಸ್‌ಟಿ ಸಭೆಯಲ್ಲಿ ತೆರಿಗೆ ಹಂಚಿಕೆ ಬಗ್ಗೆ ಅಧಿಕೃತವಾಗಿ ಚರ್ಚೆ ನಡೆಯುವುದಿಲ್ಲ ಎಂಬ ಅರಿವು ನನಗೂ ಇದೆ. ಆದರೆ ಜಿಎಸ್‌ಟಿ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಅಥವಾ ಇನ್...
‘ಮುಡಾ’ ಅರ್ಕಾವತಿ ಕಂಟಕ; ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಗೆ ದೂರು

‘ಮುಡಾ’ ಅರ್ಕಾವತಿ ಕಂಟಕ; ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಗೆ ದೂರು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಡಾ ಹಗರಣ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ನಿತ್ಯ ಒಂದಿಲ್ಲೊಂದು ಸಂಕಟ ಎದುರಾಗುತ್ತಲೇ ಇದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ.ಅರ್ಕಾವತಿ ಬಡಾವಣೆ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿವೇಶನದಾರರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.ನಿವೇಶನದ ಮಾಲೀಕರಾದ ಎಂ.ಎಸ್.ಶಿವಲಿಂಗಪ್ಪ, ಎಂ.ಚಂದ್ರಶೇಖರನ್, ಕೆ.ರಾಮಚಂದ್ರಯ್ಯ ಮತ್ತು ಡಾ.ವೆಂಕಟಕೃಷ್ಣಪ್ಪ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಡಿಎ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ....
KSRTCಗೆ ‘ಶಕ್ತಿ’ ತುಂಬಿದ ಸರ್ಕಾರ.. ಸಂಸ್ಥಾಪನಾ ದಿನಾಚರಣೆಯಲ್ಲೂ ಹಲವು ಯೋಜನೆಗಳು ಸಾಕಾರ..

KSRTCಗೆ ‘ಶಕ್ತಿ’ ತುಂಬಿದ ಸರ್ಕಾರ.. ಸಂಸ್ಥಾಪನಾ ದಿನಾಚರಣೆಯಲ್ಲೂ ಹಲವು ಯೋಜನೆಗಳು ಸಾಕಾರ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಂಸ್ಥಾಪನಾ ದಿನಾಚರಣೆ ಬುಧವಾರ (ಅಕ್ಟೋಬರ್16) ನಡೆಯಲಿದೆ. ರಾಜ್ಯ ಸರ್ಕಾರದ 'ಶಕ್ತಿ ಯೋಜನೆ'ಯ ಯಶೋಗಾಥೆ ನಂತರ ನಡೆಯುತ್ತಿರುವ ಸಂಸ್ಥಾಪನಾ ದಿನಾಚರಣೆಯು ಹಲವು ಜನಪ್ರಿಯ ಯೋಜನೆಗಳ ಜಾರಿಗೂ ಮುನ್ನುಡಿ ಬರೆಯಲಿದೆ.ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ರ ಆವರಣದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಕೆಎಸ್ಸಾರ್ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ (ವಾಸು) ಉಪಸ್ಥಿತಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಲಿದ್ದಾರೆ. ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್, ಕೆಎಸ್ಸಾರ್ಟಿಸಿ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ್, ನಿಗಮದ ನಿರ್ದೇಶಕರಾದ ಡಾ. ನಂದಿನಿದೇವಿ ಕೆ., ವ್ಯವಸ್ಥಾಪಕ ನಿರ್ದೇಶಕರಾದ ವಿ. ಅನ್ಸುಕುಮಾ‌ರ್ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.ಈ ಸಮಾರಂಭದಲ್ಲಿ ಅನೇಕ ಯೋಜನೆಗಳನ್ನು ಅನಾವಣ ಮಾಡಲಾಗುವುದು ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮಗಳು: ಮೊದಲ ಬಾರಿಗೆ ಪುನಶ್ವೇತನಗೊಂಡ ಐರಾವತ ಕ...
ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?: ಮಂಜುನಾಥ್ ಭಂಡಾರಿ ಪ್ರಶ್ನೆ

ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?: ಮಂಜುನಾಥ್ ಭಂಡಾರಿ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರು ಇತರರಿಗೆ ಆದರ್ಶರಾಗಿದ್ದಾರೆ. ಈಗ ಬಿಜೆಪಿ ಮತ್ತು RSSನವರು ತಮಗೆ ಹಂಚಿಕೆಯಾಗಿದ್ದ ಜಮೀನು ಮತ್ತು ನಿವೇಶನಗಳನ್ನು ಹಿಂದುರುಗಿಸುವ ಮೂಲಕ ಆದರ್ಶರಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದ್ದಾರೆ.ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, 5 ದಶಕಗಳಿಗೂ ಅಧಿಕ ಕಾಲ ಪರಿಶುದ್ಧ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಕೇಳಿಬರುತ್ತಿದ್ದಂತೆ ರಾಹುಲ್ ಖರ್ಗೆ ಅವರು, ನ್ಯಾಯಬದ್ಧವಾಗಿ ಲಭ್ಯವಾಗಿರುವ ಜಮೀನನ್ನು ಹಿಂದಿರುಗಿಸಿ ಮೇಲ್ಪಂಕ್ತಿ ಹಾಕಿದ್ದಾರೆ. ಹೀಗಾಗಿ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡಬಾರದು. ಅಲ್ಲದೆ ಉದ್ದೇಶ ಪೂರ್ವಕವಾಗಿ ವಿವಾದಕ್ಕೆ ಸಿಲುಕಿಸುವ ಪ್ರಯತ್ನವನ್ನು ಮಾಡುತ್ತಿರುವ ಪ್ರತಿಪಕ್ಷಗಳು ಇನ್ನು ಮುಂದಾದರೂ ಇಂ...
ಮಂಗಳೂರು ಶಾರದೋತ್ಸವ ರಥೋತ್ಸವ ಹಿಂದೆಂದಿಗಿಂತ ವಿಶೇಷ.. ಹೀಗಿತ್ತು ಕೈಂಕರ್ಯ..

ಮಂಗಳೂರು ಶಾರದೋತ್ಸವ ರಥೋತ್ಸವ ಹಿಂದೆಂದಿಗಿಂತ ವಿಶೇಷ.. ಹೀಗಿತ್ತು ಕೈಂಕರ್ಯ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಚಿತ್ರ: ಮಂಜು ನೀರೇಶ್ವಾಲ್ಯಮಂಗಳೂರು: ಮಂಗಳೂರು ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14 ರಂದು ಅತ್ಯಂತ ವೈಭವಯುತವಾಗಿ ನಡೆಯಿತು.2 ವರ್ಷದ ಹಿಂದಷ್ಟೇ ನೂರನೇ ವರ್ಷದ ಶಾರದಾ ಮಹೋತ್ಸವವನ್ನು ಶ್ರೀ ಶಾರದಾ ಮಹೋತ್ಸವ ಸಮಿತಿ ಅತ್ಯಂತ ವೈಭವಪೂರ್ಣವಾಗಿ ನಡೆಸಿತ್ತು. ಅದೇ ರೀತಿ ಸಂಭ್ರಮದಿಂದ ಈ ಮಹೋತ್ಸವನ್ನು ಶ್ರಧ್ಧ ಭಕ್ತಿಯಿಂದ ನಡೆಸಿಕೊಂಡು ಬರಲಾಗುತ್ತಿದೆ. ಮಂಗಳೂರು ನಗರ ಹಾಗೂ ಪರವೂರಿನ ಭಕ್ತಾದಿಗಳು ಸಹಾಯ ನೀಡಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸುತ್ತಿದ್ದಾರೆ.ಆ.9ರಂದು ಬೆಳಗ್ಗೆ 7 ಗಂಟೆಗೆ ಪ್ರತಿಷ್ಠಾಪನೆ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ಮಾತೆಯ ವಿಗ್ರಹ ಪ್ರತಿಷ್ಠಾಪಿಸಲಾಯಿತು . ಆ 13ವರೆಗೆ ದೀಪಾಂಲಕಾರ ಸಹಿತ ರಂಗಪೂಜೆ ನಡೆಯಿತು . ಆ13ರಂದು ಶ್ರೀ ಕಾಳಿಕಾ ದೇವಿಯ ವಿಶೇಷ ಅಲಂಕಾರ ಮಾಡಲಾಯಿತು. ಬೆಳಗ್ಗೆ 10 ಘಂಟೆಗೆ ವಿದ್ಯಾರಂಭ ಕಾರ್ಯಕ್ರಮ ನಡೆದು, ಸಾರ್ವಜನಿಕ ಅನ್ನ ಸಂತರ್ಪಣೆಯೂ ನೆರವೇರಿತು. ಸಂಜೆ 6 ಗಂಟೆಗೆ ವಿಶೇಷ ದೀಪಾಲಂಕಾರ ಸೇವೆ ಜರಾಗಿದ್ದು ಸಹಸ್ರಾರು ಭಜಕರು ಪಾಲ್ಗೊಂಡು ಪುನೀತರಾದರು...
ಗಲಭೆ ಕೇಸ್ ವಾಪಸ್: ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು

ಗಲಭೆ ಕೇಸ್ ವಾಪಸ್: ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮತಬ್ಯಾಂಕ್‌ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೀಗೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ‌ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ ಭಾಗವಹಿಸಿದರು. ನಂತರ ಬಿಜೆಪಿ ಶಾಸಕರು, ಮುಖಂಡರೊಂದಿಗೆ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ ದೂರು ಪತ್ರ ಸಲ್ಲಿಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ್ರೋಹಿ ಚಟುವಟಿಕೆ, ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಗಳನ್ನು ಕಾಂಗ್ರೆಸ್‌ ಸರ್ಕಾರ ಮುಚ್ಚಿಹಾಕಿದೆ. ರೈತ ಹೋರಾಟ, ಕನ್ನಡ ಹೋರಾಟಗಳಿಗೆ ಇದನ್ನು ಹೋಲಿಸಬಾರದು. ಕಾಂಗ್ರೆಸ್‌ಗೆ ಮುಸ್ಲಿಮರ ಓಟು ಬೇಕೆಂದು ಹೀಗೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯನವರ ಕುರ್ಚಿ ಅಲುಗಾಡುತ್ತಿದ್ದು, ಮುಸ್ಲಿಮರು ನನ್ನ...
ಯಲಹಂಕ: ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು

ಯಲಹಂಕ: ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಇಬ್ಬರು ಮಕ್ಕಳೊಂದಿಗೆ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ‌ತಾಲೂಕಿನ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ನಡೆದಿದೆ.ಭಾನುವಾರ ರಾತ್ರಿ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಅವಿನಾಶ್ (38), ಪತ್ನಿ ಮಮತಾ (30) ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ. ಅವಿನಾಶ್ ಮೊದಲಿಗೆ ಮಕ್ಕಳು ಮತ್ತು ಪತ್ನಿಗೆ ವಿಷ ಕೊಟ್ಟು ಸಾಯಿಸಿ, ಆ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.ಮೃತರು ಮೂಲತಃ ಕಲಬುರಗಿ ಜಿಲ್ಲೆಯವರಾಗಿದ್ದು, ಕಳೆದ ಐದು ವರ್ಷಗಳಿಂದ ಯಡಿಯೂರಪ್ಪ ನಗರದಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ ಎನ್ನಲಾಗಿದೆ.ಮೃತ ಅವಿನಾಶ ಸಹೋದರ ಉದಯ್ ಎಂಬಾತ ರಾಜಾನುಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಹಗರಣಗಳ ಸರ್ಕಾರ: ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬೇಡ!

ಹಗರಣಗಳ ಸರ್ಕಾರ: ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬೇಡ!

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸರ್ಕಾರದ ಹಗರಣಗಳ ಬಗ್ಗೆ ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬೇಡ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಾಂಗ್ರೆಸ್ ನಾಯಕರು ಚೆನ್ನಾಗಿ ಹಣ ನುಂಗಿದ್ದಾರೆ. ಇದರ ವಿರುದ್ಧ ಬಿಜೆಪಿ ಸಮರ್ಥವಾಗಿ ಪ್ರತಿಭಟನೆ ಮಾಡಿದೆ ಎಂದರು.ಬಿ.ಎಸ್.ಯಡಿಯೂರಪ್ಪನವರ ಪ್ರಕರಣಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.‌ ಆದರೆ ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ಯಾವುದೇ ತಡೆ ಇಲ್ಲ. ಈ ದೇಶದಲ್ಲಿ ನ್ಯಾಯಾಂಗವೇ ಉನ್ನತವಾದುದು. ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬಿಜೆಪಿಗೆ ಬೇಕಿಲ್ಲ ಎಂದವರು ಹೇಳಿದರು.ಸಂವಿಧಾನದ ಪ್ರಕಾರ ಸ್ಥಾಪನೆಯಾದ ನ್ಯಾಯಾಲಯದಲ್ಲಿ ಬಿಜೆಪಿಗೆ ಕ್ಲೀನ್ ಚಿಟ್ ದೊರೆಯುತ್ತದೆ. ಆದರೆ ಕಾಂಗ್ರೆಸ್ ತನ್ನನ್ನು ತಾನೇ ನ್ಯಾಯಾಲಯ ಎಂದುಕೊಂಡಿದ್ದು, ಅಂತಹ ವ್ಯವಸ್ಥೆಯ ಅಗತ್ಯ ಯಾರಿಗೂ ಇಲ್ಲ. ದೇಶವನ್ನು ಸುಮಾರು ಅರವತ್ತು ವರ್ಷಗಳ ಕಾಲ ಕಾಂಗ್ರೆಸ್ ಲೂಟಿ ಮಾಡಿದ್ದು, ಅವರಿಗೆ ಯಾವುದೇ ನೈತಿಕತೆ ಇಲ್ಲ. ಅವರ ಕ್ಲೀನ್ ಚಿಟ್ ಯಾರ...
ಸಿʼ ವರ್ಗದ ದೇವಾಲಯಗಳ ಅರ್ಚಕರ, ನೌಕರರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ, ಮರಣ ಉಪದಾನ.. ರಾಜ್ಯಪಾಲರ ಅಂಕಿತದ ನಂತರ ಪರಿಪೂರ್ಣ ಜಾರಿ

ಸಿʼ ವರ್ಗದ ದೇವಾಲಯಗಳ ಅರ್ಚಕರ, ನೌಕರರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ, ಮರಣ ಉಪದಾನ.. ರಾಜ್ಯಪಾಲರ ಅಂಕಿತದ ನಂತರ ಪರಿಪೂರ್ಣ ಜಾರಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 'ಸಿʼ ವರ್ಗದ ದೇವಾಲಯಗಳ ಅರ್ಚಕರ, ನೌಕರರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ, ಮರಣ ಉಪದಾನ ಹಾಗೂ ಅರ್ಚಕರುಗಳಿಗೆ ತಸ್ತೀಕ್ /ವರ್ಷಾಸನ ಹಣವನ್ನು ನೇರವಾಗಿ ಅರ್ಚಕರುಗಳ ಖಾತೆಗೆ ಜಮಾ ಮಾಡುವ ಕಾರ್ಯಕ್ರಮಕ್ಕೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.ಬೆಂಗಳೂರಿನ ಶ್ರೀ ರಾಮೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ಡಾ|| ಎಂ.ವಿ.ವೆಂಕಟೇಶ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಡಾ|| ಬಿ.ಎಸ್.ಧ್ವಾರಕನಾಥ್,  ಕೆ.ಎಂ.ನಾಗರಾಜು, ಮಲ್ಲಿಕಾ ಪ್ರಶಾಂತ ಪಕ್ಕಳ ಹಾಗೂ ವಿನಾಯಕ್‌ ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯರು ಹಾಗೂ ವಿವಿಧ ಅರ್ಚಕರ ಸಂಘಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಚಿವ ರಾಮಲಿಂಗ ರೆಡ್ಡಿ ಚಾಲನೆ ನೀಡಿದರು..'ಸಿʼ ವರ್ಗದ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ದೇವಾಲಯದ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ಮತ್ತು ಮರಣ ಉಪದಾನ ವಿತರಣೆ ಹಾಗೂ ಅರ್ಚಕರುಗಳಿಗೆ ತಸ್ತೀಕ್ /ವರ್ಷಾಸನ ಹಣವನ್ನು ನೇರವಾಗಿ ಅರ್ಚಕರ ಖಾತೆಗೆ ಜಮಾ ಮಾಡುವ ಯೋಜನೆ ...