Tuesday, August 11

ವಿದೇಶ

ಒಳ ಮೀಸಲಾತಿ ಜಾರಿಗೆ ಮೀನಮೇಷ; ಸರ್ಕಾರದ ವಿರುದ್ದ ಬಿಜೆಪಿ ಆಕ್ರೋಶ

ಒಳ ಮೀಸಲಾತಿ ಜಾರಿಗೆ ಮೀನಮೇಷ; ಸರ್ಕಾರದ ವಿರುದ್ದ ಬಿಜೆಪಿ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಒಳ ಮೀಸಲಾತಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಹಮತವಿದೆ. ಹಿಂದೆ ಬಿಜೆಪಿ ಸರ್ಕಾರ ಕೂಡ ಈ ಕುರಿತು ಪ್ರಯತ್ನ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, ಒಳ ಮೀಸಲಾತಿ ಬಗ್ಗೆ ದೊಡ್ಡದಾಗಿ ಮಾತಾಡುತ್ತಾರೆ. ಜಾತಿ ಗಣತಿಯ ಬಗ್ಗೆ ಶಂಖ ಊದುತ್ತಿರುತ್ತಾರೆ‌. ಒಳ ಮೀಸಲಾತಿಯ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿರುವುದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಹಿಂದಿನ ನಮ್ಮ ಬಿಜೆಪಿ ಸರ್ಕಾರ ಒಳ ಮೀಸಲಾತಿಯನ್ನು ಜಾರಿಗೆ ತಂದಿತ್ತು. ಪ್ರಧಾನಿ ನರೇಂದ್ರ ಮೋದಿ ತೆಲಂಗಾಣಕ್ಕೆ ಬಂದಾಗ ಒಳ ಮೀಸಲಾತಿಗೆ ಅನುಮೋದನೆ ನೀಡಿದ್ದರು. ಆದರೂ ಕಾಂಗ್ರೆಸ್ ಮಾತ್ರ ಇನ್ನೂ ಮೀನಮೇಷ ಎಣಿಸುತ್ತಿದೆ ಎಂದು ದೂರಿದರು.ರಾಜ್ಯದಲ್ಲಿ ಈಗ ಎಸ್ಐಟಿಯೇ ಕಂಡುಬರುತ್ತಿದೆ. ಒಳ ಮೀಸಲಾತಿ ಮತ್ತು ಜಾತಿ ಗಣತಿ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರ ಎಸ್ಐಟಿ ರಚಿಸಿದರೆ ಅಚ್ಚರಿ ಇಲ್ಲ. ಇಲ್ಲಿ ಒ...
ಮಂಗಳೂರಿನಲ್ಲಿ ಪೊಲೀಸ್ ಬೇಟೆ; ಬಾಂಗ್ಲಾ ಪ್ರಜೆಗಳ ಬಂಧನ

ಮಂಗಳೂರಿನಲ್ಲಿ ಪೊಲೀಸ್ ಬೇಟೆ; ಬಾಂಗ್ಲಾ ಪ್ರಜೆಗಳ ಬಂಧನ

ರಾಜ್ಯ, ವಿದೇಶ
ಮಂಗಳೂರು: ನಕಲಿ ಪಾಸ್‌ಪೋರ್ಟ್‌ ಹೊಂದಿದ್ದ ಬಾಂಗ್ಲಾದೇಶ ಪ್ರಜೆಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ದುಬಾೖಗೆ ಪ್ರಯಾಣಿಸಲು ಯತ್ನಿಸಿದ ಸಂದರ್ಭದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತ ನೀಡಿದ ಸುಳಿವನ್ನಾಧರಿಸಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜೆಯನ್ನು ವಶಕ್ಕೆ ಪಡೆಯಲಾಗಿದ್ದು, ಆತ ನೀಡಿದ ಸುಳಿವನ್ನಾಧರಿಸಿ ಉಡುಪಿಯಲ್ಲಿ ಹಲವು ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ....
ಮತ್ತೊಂದು ‘ಭೂ ಚಕ್ರ’ದ ಸುಳಿಯಲ್ಲಿ ಕಾಂಗ್ರೆಸ್ ಸರ್ಕಾರ; KIADB ಹಗರಣ ಬಗ್ಗೆ ಲೋಕಾಯುಕ್ತಕ್ಕೆ ಸಿಟಿಜನ್ ರೈಟ್ಸ್ ಫೌಂಡೇಷನ್ ದೂರು

ಮತ್ತೊಂದು ‘ಭೂ ಚಕ್ರ’ದ ಸುಳಿಯಲ್ಲಿ ಕಾಂಗ್ರೆಸ್ ಸರ್ಕಾರ; KIADB ಹಗರಣ ಬಗ್ಗೆ ಲೋಕಾಯುಕ್ತಕ್ಕೆ ಸಿಟಿಜನ್ ರೈಟ್ಸ್ ಫೌಂಡೇಷನ್ ದೂರು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಾಲ್ಮಿಕಿ ನಿಗಮ ಕರ್ಮಕಾಂಡ, ಮುಡಾ ಸೈಟ್ ಅಕ್ರಮ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದೀಗ ಕೆಐಎಡಿಬಿ ಭೂ ಅವ್ಯವಹಾರದ ಉರುಳು ಕೂಡಾ ಸುತ್ತಿಕೊಂಡಿದೆ. ಸರ್ಕಾರಿ ಜಮೀನನ್ನೇ ಬೇರೆಯವರ ಹೆಸರಲ್ಲಿ ಪರಿಗಣಿಸಿ ಪರಿಹಾರ ವಿತರಿಸಿರುವ ಭಾರೀ ಅಕ್ರಮ ಆರೋಪ ಕುರಿತಂತೆ ಲೋಕಾಯುಕ್ತರಿಗೆ ದೂರು ಸಲ್ಲಿಕೆಯಾಗಿದೆ. "ಸಿಟಿಜನ್ ರೈಟ್ಸ್ ಫೌಂಡೇಷನ್" ಪರವಾಗಿ ಅಧ್ಯಕ್ಷ ಕೆ.ಎ.ಪಾಲ್ ನೀಡಿರುವ ಈ ದೂರು, ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ್ ಸಹಿತ ಹಲವರಿಗೆ ಉರುಳಾಗುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ.ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯ ಚಪ್ಪರದಹಳ್ಳಿ ಗ್ರಾಮದಲ್ಲೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಯಿಂದ ಭೂಸ್ವಾಧೀನ ಆದೇಶವಾಗಿದೆ. ಈ ಭೂಸ್ವಾಧೀನ ಪ್ರಕ್ರಿಯೆಯ ದಾಖಲೆಗಳನ್ನು ಗಮನಿಸಿದಾಗ ಅರ್ಹರಲ್ಲದವರ ಹೆಸರಿಗೆ ಹಣ ಸಂದಾಯ ನಡೆದಿದೆ ಎಂದು ದೂರುದಾರರು ಆರೋಪಿಸಿದ್ದಾರೆ.ದೇವನಹಳ್ಳಿ ತಾಲೂಕಿನ ಸುತ್ತಮುತ್ತ ನೂರಾರು ಎಕರೆ ಜಮೀನನ್ನು ಕೆಐಎಡಿಬಿ ವತಿಯಿಂದ ಸ್ವಾಧೀನಪಡಿಸಲು ತಯಾರಿ ನಡೆದಾಗಲೇ,...
ದೇವನಹಳ್ಳಿ ಕೆಐಎಡಿಬಿ ಭೂಹಗರಣ ಆರೋಪ; ಸಮಗ್ರ ತನಿಖೆಗೆ ಬಿಜೆಪಿ ಶಾಸಕ ಸಿ.ಟಿ.ರವಿ ಆಗ್ರಹ

ದೇವನಹಳ್ಳಿ ಕೆಐಎಡಿಬಿ ಭೂಹಗರಣ ಆರೋಪ; ಸಮಗ್ರ ತನಿಖೆಗೆ ಬಿಜೆಪಿ ಶಾಸಕ ಸಿ.ಟಿ.ರವಿ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಚಿತ್ರದುರ್ಗ: ದೇವನಹಳ್ಳಿ ಕೆಐಎಡಿಬಿ ಕರ್ಮಕಾಂಡ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಬಿಜೆಪಿ ಆಗ್ರಹಿಸಿದೆ.ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ರಾಜ್ಯ ಸರ್ಕಾರದ ಭೂ ಕರ್ಮಕಾಂಡಗಳ ಬಗ್ಗೆ ಆಕ್ರೋಶ ಹೊರಹಾಕಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ KIADB ಭೂ ಸ್ವಾದೀನ ಪ್ರಕ್ರಿಯೆಯಲ್ಲಿ ಹಗರಣ ನಡೆದಿದ್ದು, ಈ ಬಗ್ಗೆ ಸಿಟಿಜನ್ ರೈಟ್ಸ್ ಫೌಂಡೇಷನ್' ಅಧ್ಯಕ್ಷ ಕೆ.ಎ.ಪಾಲ್ ಎಂಬವರು ಲೋಕಾಯುಕ್ತರಿಗೆ ದೂರು ನೀಡಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದರು.1984 ರಲ್ಲಿ ಇದೇ ಭೂಮಿಯನ್ನು ಉಳುಮೆ ಮಾಡಲು ಸರ್ಕಾರ ಅವಕಾಶ ಕೊಟ್ಟಿಲ್ಲ. ಆದರೆ ಕೆಐಎಡಿಬಿ ಭೂಸ್ವಾದೀನ ಪ್ರಕ್ರಿಯೆ ವೇಳೆ ಜಮೀನಿಗೆ ಮಾಲೀಕರನ್ನು ಹುಟ್ಟುಹಾಕಲಾಗಿದೆ. ಬೇನಾಮಿ ರೀತಿ ಜಮೀನು ಪರಿಹಾರದ ರೂಪದಲ್ಲಿ ಹಣ ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಸಿ.ಟಿ.ರವಿ ಆಗ್ರಹಿಸಿದರು.ಸಿದ್ದರಾಮಯ್ಯ ಸರ್ಕಾರವು ಈ ಭೂಮಿಯನ್ನು ಕೊಟ್ಟಿದ್ದೇ ಆಗಿದ್ದರೇ, ಅದೂ ಕೂಡಾ ಭಾರೀ ಅಕ್ರಮ ಆಗುತ್ತದೆ. ಹಾಗಾಗಿ KIADBಯಿಂದಲೂ ...
“ಪವಿತ್ರ ತೀರ್ಥೋದ್ಭವ” ಹಿನ್ನೆಲೆ; ತಲಕಾವೇರಿ ಜಾತ್ರೆಗೆ ಸರ್ಕಾರದಿಂದ 75 ಲಕ್ಷ ರೂ ಬಿಡುಗಡೆ

“ಪವಿತ್ರ ತೀರ್ಥೋದ್ಭವ” ಹಿನ್ನೆಲೆ; ತಲಕಾವೇರಿ ಜಾತ್ರೆಗೆ ಸರ್ಕಾರದಿಂದ 75 ಲಕ್ಷ ರೂ ಬಿಡುಗಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ", ತಲಕಾವೇರಿ ಜಾತ್ರೆಗೆ ರೂ.75 ಲಕ್ಷ ರೂಪಾಯಿ ಹಣವನ್ನು ಧಾರ್ಮಿಕ ದತ್ತಿ ಇಲಾಖೆ ಬಿಡುಗಡೆ ಮಾಡಿದೆ. ಮುಜರಾಯಿ ಸಚಿವ  ರಾಮಲಿಂಗಾ ರೆಡ್ಡಿ ಅವರ ಆದೇಶದಂತೆ ಈ ಹಣ ಬಿಡುಗಡೆ ಮಾಡಲಾಗಿದೆ.ಕೊಡಗು ಜಿಲ್ಲೆ, ‌ಮಡಿಕೇರಿ ತಾಲ್ಲೂಕು, ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಸ್ಥಾನದಲ್ಲಿ ಪ್ರತಿ ವರ್ಷದ ರೂಢಿ ಸಂಪ್ರದಾಯದಂತೆ ಈ ವರ್ಷ:17.10.2024 ರಂದು "ಶ್ರೀ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ" ಜಾತ್ರೆಯು ನಡೆಯಲಿದೆ. ಕಳೆದ ವರ್ಷದಿಂದ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅನುದಾನ ನೀಡಲಾಗುತ್ತಿದೆ. ಸದರಿ ಜಾತ್ರಾ ಮಹೋತ್ಸವಕ್ಕೆ ಈ ಹಿಂದೆ ಎಂದೂ ಕೂಡ ಮುಜರಾಯಿ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿರುವುದಿಲ್ಲ.ಕೊಡಗು ಜಿಲ್ಲೆಯ ಶಾಸಕರಾದ ಡಾ. ಮಂಥರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರು ತಲಕಾವೇರಿ ಜಾತ್ರೆಗೆ ಹಣ ಬಿಡುಗಡೆ ಮಾಡಿ ವ್ಯವಸ್ಥಿತ ಜಾತ್ರೆ ನಡೆಸಲು ಹಾಗೂ ಆಗಮಿಸುವ ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಕಲ್ಪಿಸಲು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಲ್ಲಿ ಮನವಿ ಮಾಡಿದ್ದರು. ಅದರಂತೆ ಜಾತ್ರಾ ಮಹೋತ...
KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!

KSRTC ನಿಗಮಗಳಿಗೆ ಈ ಬಾರಿಯದ್ದು ವಿಶೇಷ ನವರಾತ್ರಿ.. ಆಯುಧ ಪೂಜೆಯ ಕೊಡುಗೆ 250 ರೂಪಾಯಿಗಳಿಗೆ ಹೆಚ್ಚಳ..!

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸಾರಿಗೆ ನಿಗಮಗಳಿಗೆ ಈ ಬಾರಿಯ ನವರಾತ್ರಿಯು ಹಿಂದೆಂದಿಗಿಂತ ವಿಶೇಷ..! ಕುತೂಹಲಕಾರಿ ನಿರ್ಧಾರದಲ್ಲಿ ಕೆಎಸ್ಸಾರ್ಟಿಸಿ ಬಸ್ಸುಗಳಿಗೆ ಆಯುಧಪೂಜೆಗೆ ನೀಡಲಾಗಿತ್ತಿದ್ದ ಹಣವನ್ನು 100 ರೂಪಾಯಿಯಿಂದ 250 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.ಒಂದು ಘಟಕದಲ್ಲಿ ಸರಿ ಸುಮಾರು 100 ರಿಂದ 500 ಬಸ್ಸುಗಳಿರುತ್ತವೆ. ಒಂದು ಬಸ್ಸಿಗೆ ರೂ. 100 ಎಂದು ಒಂದು ಘಟಕಕ್ಕೆ / ಕಾರ್ಯಾಗಾರಕ್ಕೆ ನೀಡಲಾಗುತ್ತದೆ.ಆಯುಧಪೂಜೆಗೆ 2008 ರವರೆಗೂ ರೂ.10 ಪ್ರತಿ‌ ಬಸ್ಸಿಗೆ , 2009 ರಲ್ಲಿ ಪ್ರತಿ ಬಸ್ಸಿಗೆ ರೂ 30 ಕ್ಕೆ ಏರಿಕೆ ಮಾಡಲಾಗಿತ್ತು. .2016 ರಲ್ಲಿ ಪ್ರತಿ ಬಸ್ಸಿಗೆ ರೂ.50 ಕ್ಕೆ ಏರಿಕೆ, 2017 ರಲ್ಲಿ ಪ್ರತಿ‌ ಬಸ್ಸಿಗೆ ರೂ.100 ಕ್ಕೆ ಏರಿಕೆ ‌ಮಾಡಲಾಗಿತ್ತುರೂ.100 ಪ್ರತಿ‌ ಬಸ್ಸಿಗೆ ನೀಡುವ ಮೊತ್ತವು 2023 ರವರೆಗೂ ರೂ.100 ಆಗಿತ್ತು. 2024 ಅಂದರೆ ಪ್ರಸಕ್ತ ವರ್ಷದಲ್ಲಿ ಆಯುಧಪೂಜೆಗೆ ಪ್ರತಿ‌ ಬಸ್ಸಿಗೆ ಈಗ ನೀಡಲಾಗುತ್ತಿರುವ ರೂ.100 ಅನ್ನು ರೂ.250 ಕ್ಕೆ ಹೆಚ್ಚಿಸಲು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚ...
ಕರ್ನಾಟಕದ ಕೌಶಲ್ಯ ಅಭಿವೃದ್ಧಿ ಮಾದರಿ ಅಳವಡಿಸಿಕೊಳ್ಳಲು ಹಿಮಾಚಲ ಪ್ರದೇಶ ಚಿಂತನೆ

ಕರ್ನಾಟಕದ ಕೌಶಲ್ಯ ಅಭಿವೃದ್ಧಿ ಮಾದರಿ ಅಳವಡಿಸಿಕೊಳ್ಳಲು ಹಿಮಾಚಲ ಪ್ರದೇಶ ಚಿಂತನೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕದ ಹಲವು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಇತರೆ ಉಪ್ರಕಮಗಳ ಅನುಷ್ಠಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಹಿಮಾಚಲ ಪ್ರದೇಶ ಸರ್ಕಾರ ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಲು ಚಿಂತನೆ ನಡೆಸಿದೆ.ಬುಧವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೊಂದಿಗೆ ಹಿಮಾಚಲ ಪ್ರದೇಶದ ಪಟ್ಟಣ ಯೋಜನೆ, ವಸತಿ ಮತ್ತು ತಾಂತ್ರಿಕ ಶಿಕ್ಷಣ ಸಚಿವ ರಾಜೇಶ್ ಕುಮಾರ್ ಧರ್ಮಾನಿ ಸಮಾಲೋಚನೆ ನಡೆಸಿದರು.ಉದ್ಯೋಗ ಕೌಶಲ್ಯಗಳನ್ನು ಹೆಚ್ಚಿಸುವಲ್ಲಿ ಕರ್ನಾಟಕದ ಪ್ರಯತ್ನ ಶ್ಲಾಘನೀಯ ಎಂದು ಹಿಮಾಚಲ ಪ್ರದೇಶ ಸಚಿವರು ತಿಳಿಸಿದರು. ತಮ್ಮ ತವರು ರಾಜ್ಯದಲ್ಲಿ ಇದೇ ರೀತಿಯ ಕಾರ್ಯತಂತ್ರಗಳನ್ನು ಜಾರಿಗೆ ತರಲು ತೀವ್ರ ಆಸಕ್ತಿ ಇದೆ ಎಂದು ರಾಜೇಶ್‌ ಕುಮಾರ್‌ ಧರ್ಮಾನಿ ಇಂಗಿತ ವ್ಯಕ್ತಪಡಿಸಿದರು.ಕರ್ನಾಟಕದಲ್ಲಿ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕೌಶಲ್ಯ ಅಭಿವೃದ್ಧಿ ಉಪಕ್ರಮಗಳನ್ನು ಅಧ್ಯಯನ ಮಾಡಲು ಆಗಮಿಸಿರುವ ಧರ್ಮಾನಿ, ಅಂತಾರಾಷ್ಟ್ರೀಯ ವಲಸೆ ಕೇಂದ್ರ (IMC-K) ದಿಂದ ಭಾರಿ ಪ್ರಭಾವಿತರಾದರು. ಯುಎಇ, ವ...
ಬೆಂಗಳೂರು ವಿವಿ: ಎಂ.ಎನ್. ಚಂದ್ರಕೀರ್ತಿ ಅವರಿಗೆ ಪಿಎಚ್‌.ಡಿ ಪ್ರದಾನ

ಬೆಂಗಳೂರು ವಿವಿ: ಎಂ.ಎನ್. ಚಂದ್ರಕೀರ್ತಿ ಅವರಿಗೆ ಪಿಎಚ್‌.ಡಿ ಪ್ರದಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಎಂ.ಎನ್. ಚಂದ್ರಕೀರ್ತಿ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ನೀಡಿದೆ.ಕೋಲಾರ ನಗರದ ಸುಬ್ಬಮ್ಮ ಮತ್ತು ಎಂ.ಎಲ್. ನರಸಿಂಹನ್ ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ರವರ ಪುತ್ರ ಬೆಂಗಳೂರು ವಿಶ್ವವಿದ್ಯಾಲಯದ "ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್"ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಎಂ.ಎನ್. ಚಂದ್ರಕೀರ್ತಿ ಅವರು ಯುವಿಸಿಇ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಪಿ.ಎಸ್. ನಾಗರಾಜ ರವರ ಮಾರ್ಗದರ್ಶನದಲ್ಲಿ ಮಂಡಿಸಿದ "ಎಕ್ಸ್ ಪೆರಿಮೆಂಟಲ್ ಇನ್ವೆಸ್ಟಿಗೇಷನ್ ಆನ್ ಹೈ ವಾಲ್ಯೂಮ್ ಫ್ಲೈ ಆಶ್ ಕಾಂಕ್ರೀಟ್ ಕಂಟೈನಿಂಗ್ ಕ್ಯಾಲ್ಸಿಯಂ ಕಾರ್ಬೋನೇಟ್ ಮೈಕ್ರೋ ಪಾರ್ಟಿಕಲ್ಸ್" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ....
ವಿಜಯೇಂದ್ರ ವಿರುದ್ದವೇ ಇಡಿ ಕೇಸ್ ಇದೆ; ಭ್ರಷ್ಟಾಚಾರ ಪ್ರಕರಣಗಳಿವೆ, ರಾಜೀನಾಮೆ ಕೊಡ್ತಾರ ಎಂದ ಕೈ ನಾಯಕರು

ವಿಜಯೇಂದ್ರ ವಿರುದ್ದವೇ ಇಡಿ ಕೇಸ್ ಇದೆ; ಭ್ರಷ್ಟಾಚಾರ ಪ್ರಕರಣಗಳಿವೆ, ರಾಜೀನಾಮೆ ಕೊಡ್ತಾರ ಎಂದ ಕೈ ನಾಯಕರು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ದ ಕಾಂಗ್ರೆಸ್ ನಾಯಕರು, ಭ್ರಷ್ಟಾಚಾರ ಆರೋಪ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡಿದೆ.ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕಿಯೋನಿಕ್ಸ್‌ ಅಧ್ಯಕ್ಷ ಶರತ್‌ ಬಚ್ಚೇಗೌಡ, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಚುನಾವಣಾ ಆಯೋಗಕ್ಕೆ ವಿಜಯೇಂದ್ರ ಅವರು ಸಲ್ಲಿಸಿರುವ ಅಫಿಡವಿಟ್ ಅಲ್ಲಿ ಅವರ ಮೇಲಿರುವ ಪ್ರಕರಣಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. 16.09. 2022 ರಂದು ಲೋಕಾಯುಕ್ತದಿಂದ ಇವರ ಮೇಲೆ ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಸೆಕ್ಷನ್ 7 A, 9, 10, 13 ಹಾಗೂ 383, 384, 415, 418, 420 ಕಾಯ್ದೆಗಳಡಿ ದೂರು ದಾಖಲಿಸಲಾಗಿದೆ. ಅಕ್ರಮ ಹಣ ವರ್ಗವಣೆ ಪ್ರಕರಣದಲ್ಲಿ ಇವರಿಗೆ ಸಮನ್ಸ್ ಜಾರಿಯಾಗಿದೆ ಎಂದು ನೆನಪಿಸಿದರು.ಸಿಎಂ ಸಿದ್ದರಾಮಯ್ಯರ ರಾಜಿನಾಮೆ ಕೇಳುವ ಬಿಜೆಪಿಗರೇ ಮೊದಲು ವಿಜಯೇಂದ್ರ ಅವರಿಂದ ರಾಜಿನಾಮೆ ಕೊಡಿಸಿ....
ಸಿದ್ದರಾಮಯ್ಯ ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿ ಮುನ್ನೆಲೆಗೆ: ಆರ್‌.ಅಶೋಕ

ಸಿದ್ದರಾಮಯ್ಯ ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿ ಮುನ್ನೆಲೆಗೆ: ಆರ್‌.ಅಶೋಕ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮುಡಾ ಹಗರಣವನ್ನು ಮರೆ ಮಾಚಲು ಜಾತಿ ಗಣತಿ ವರದಿ ಬಿಡುಗಡೆಯ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರು ಬಿಜೆಪಿಯ ಮೇಲೆ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರದಿಯಲ್ಲಿ ಏನಿರಬೇಕೆಂದು ಹೇಳಿ ಬರೆಸಿದ್ದಾರೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಯಾರೂ ಮನೆಗೆ ಬಂದೇ ಇಲ್ಲ ಎಂದು ಲಿಂಗಾಯತ, ಒಕ್ಕಲಿಗ ಮೊದಲಾದ ಸಮುದಾಯದವರು ಹೇಳಿದ್ದಾರೆ. ಕೆಲವೇ ಜಾತಿಗಳ ವೈಭವೀಕರಣ, ಇನ್ನೂ ಕೆಲವು ಜಾತಿಗಳ ಮೇಲೆ ದ್ವೇಷ ಹಾಗೂ ಅವೈಜ್ಞಾನಿಕತೆ ಇದರಲ್ಲಿ ಕಂಡುಬಂದಿದೆ ಎಂದರು.ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ಈ ವರದಿ ಬಗ್ಗೆ ಬಾಯಿ ಬಿಡಲಿಲ್ಲ. ಒಂದು ಕಡೆ ಮುಡಾ, ಮತ್ತೊಂದು ಕಡೆ ಜಾರಿ ನಿರ್ದೇಶನಾಲಯದ ತನಿಖೆ,‌ ಮತ್ತೊಂದು ಕಡೆ ಲೋಕಾಯುಕ್ತ‌ ತನಿಖೆ ನಡೆಯುತ್ತಿದೆ. ಇವೆಲ್ಲವನ್ನೂ ಮುಚ್ಚಿಹಾಕಲು ಈಗ ವರದಿಯನ್ನು ಹೊರತೆಗೆಯಲಾಗಿದೆ ಎಂದರು.ಜನಸಂಖ್ಯಾ ಗಣತಿ ಜೊ...