Monday, August 10

ವಿದೇಶ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಎಫ್ಐಆರ್

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಎಫ್ಐಆರ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಡ್ಯ: ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದ ಗಲಭೆ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಾಗಿದೆ.ಮಂಡ್ಯ ಜಿಲ್ಲೆ ನಾಗಮಂಗಲ‌ ಕೋಮುಗಲಭೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ, ಫೋಟೋ ಹಂಚಿರುವ ಆರೋಪದಲ್ಲಿ ನಾಗಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀಡಿಯೋ, ಫೊಟೋ ಪೋಸ್ಟ್ ಮಾಡುವ ಮೂಲಕ ದೊಂಬಿ ಗಲಭೆಗೆ ಪ್ರಚೋದನೆ ನೀಡಿತುವ ಆರೋಪಡಿ ಎಫ್​​ಐಆರ್ ದಾಖಲಾಗಿದೆ....
‘ಒನ್ ನೇಷನ್ ಒನ್ ಎಲೆಕ್ಷನ್’; ಕೇಂದ್ರದ ನಿರ್ಧಾರಕ್ಕೆ ಬಿಜೆಪಿ ಸ್ವಾಗತ

‘ಒನ್ ನೇಷನ್ ಒನ್ ಎಲೆಕ್ಷನ್’; ಕೇಂದ್ರದ ನಿರ್ಧಾರಕ್ಕೆ ಬಿಜೆಪಿ ಸ್ವಾಗತ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‍ಡಿಎ ಸರಕಾರ ‘ಒಂದು ದೇಶ, ಒಂದು ಚುನಾವಣೆ’ ಸಂಬಂಧ ಒಂದು ಸಮರ್ಥ ನಿರ್ಧಾರ ಮಾತ್ರವಲ್ಲದೆ, ಐತಿಹಾಸಿಕ ತೀರ್ಮಾನ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕರಾದ ಬಿ.ವೈ.ವಿಜಯೇಂದ್ರ ಮೆಚ್ಚುಗೆ ಸೂಚಿಸಿದ್ದಾರೆ.ಮಾಧ್ಯಮಗಳಿಗೆ ಇಂದು ಹೇಳಿಕೆ ಬಿಡುಗಡೆ ಮಾಡಿದ ಅವರು, ದೇಶದ ಹಿತಾಸಕ್ತಿಯ ಪ್ರಮುಖ ಉದ್ದೇಶ ಇದರ ಹಿಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 1951, 1967 ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆದಿತ್ತು. ಕಾನೂನು ಆಯೋಗವು 1999ರ ತನ್ನ 170ನೇ ವರದಿಯಲ್ಲಿ ಐದು ವರ್ಷಗಳಿಗೆ ಒಮ್ಮೆ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಕುರಿತು ತಿಳಿಸಿತ್ತು ಎಂದು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ ನೀಡಿದ ವರದಿಯಲ್ಲಿರುವ ಅಂಶಗಳ ಕುರಿತು ಅವರು ಗಮನ ಸೆಳೆದಿದ್ದಾರೆ.ಮೊದಲ ಹಂತದಲ್ಲಿ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಮತ್ತು ಈ ಸಾರ್ವತ್ರಿಕ ಚುನಾವಣೆ ನಡೆದ 100 ದಿನಗಳ ಒಳಗೆ ಎರಡನೇ ಹಂತದಲ್ಲಿ ಜಿಲ್ಲಾ ಪಂ...
ರಾಹುಲ್‌ ಗಾಂಧಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ; ಅಶೋಕ್ 

ರಾಹುಲ್‌ ಗಾಂಧಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ; ಅಶೋಕ್ 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ನರೇಂದ್ರ ಮೋದಿಯವರ ಭಯದಿಂದಾಗಿ ಕಾಂಗ್ರೆಸ್‌ ಈ ಕ್ರಮವನ್ನು ವಿರೋಧಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ಇದರಿಂದ ತೆರಿಗೆದಾರರ ಹಣ ಉಳಿತಾಯವಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ, ಲೋಕಸಭೆ ಹೀಗೆ ಒಂದೊಂದು ಚುನಾವಣೆ ಒಮ್ಮೊಮ್ಮೆ ನಡೆದಾಗ ನೀತಿ ಸಂಹಿತೆ ಜಾರಿಯಾಗುತ್ತದೆ. ಇದರಿಂದಾಗಿ ಕಾಮಗಾರಿಗಳು ವಿಳಂಬವಾಗಿ ಸರ್ಕಾರ ಯಾವುದೇ ಯೋಜನೆಯನ್ನು ಸರಿಯಾಗಿ ಜಾರಿ ಮಾಡಲು ಸಾಧ್ಯವಾಗುವುದಿಲ್ಲ. ಹೊಸ ಕ್ರಮದಿಂದ ಈ ಸಮಸ್ಯೆ ನಿವಾರಣೆಯಾಗಲಿದೆ ಎಂದರು.ಕಾಂಗ್ರೆಸ್‌ ಮತ್ತು ಕಮ್ಯುನಿಸ್ಟ್‌ ಪಕ್ಷಗಳು ಇಂತಹ ಕ್ರಮಕ್ಕೆ ವಿರೋಧ ಮಾಡುವುದು ಸಹಜ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆದರೆ, ಸಮಸ್ಯೆಯಾಗುತ್ತದೆ ಎಂದು ಅವರು ಹೆದರಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗ...
ಮೈಸೂರು ದಸರಾ ಅದ್ಧೂರಿ ಆಗಲಿ; ಹಗರಣ ಆಗದಿರಲಿ

ಮೈಸೂರು ದಸರಾ ಅದ್ಧೂರಿ ಆಗಲಿ; ಹಗರಣ ಆಗದಿರಲಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮೈಸೂರು ದಸರಾ ಅದ್ಧೂರಿ ಆಗಲಿ; ಹಗರಣ ಆಗದಿರಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.ನಾಡಹಬ್ಬ ಮೈಸೂರು ದಸರಾ ಉತ್ಸವವನ್ನ ಅದ್ಧೂರಿಯಾಗಿ ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದಿರುವ ಅವರು, ಅದ್ಧೂರಿ ದಸರಾವು ಕಾಂಗ್ರೆಸ್ ಸರ್ಕಾರದದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎನ್ನುವುದೇ ಕನ್ನಡಿಗರ ಆಶಯ ಎಂದು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿದ್ದಾರೆ.ಕಳೆದ ವರ್ಷ ಅಂತರರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂಡಿತ್ ತಾರಾನಾಥ್ ಅವರ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಿ ಕರ್ನಾಟಕದ ಮಾನ ಹಾರಾಜು ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು ಎಂದವರು ಪ್ರತಿಪಾದಿಸಿದ್ದಾರೆ.ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂದರೆ ಅದು ಕರ್ನಾಟಕದ ಭವ್ಯ ಸಾಂಸ್ಕೃತಿಕ ಪರಂಪರೆಯ ಪ್ರತೀಕ. ಇಡೀ ದೇಶವೇ, ಪ್ರಪಂಚ...
ದೀಪಾವಳಿ ವೇಳೆ ನಟ ರಾಕ್ಷಸನ ”ಜೀಬ್ರಾ’ ಅವತಾರ!

ದೀಪಾವಳಿ ವೇಳೆ ನಟ ರಾಕ್ಷಸನ ”ಜೀಬ್ರಾ’ ಅವತಾರ!

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ನಟ ಡಾಲಿ ಧನಂಜಯ್ ಮತ್ತು ತೆಲುಗು ನಟ ಸತ್ಯದೇವ್ ಕಾಂಬಿನೇಶನ್‌ನ 'ಜೀಬ್ರಾ' ಚಿತ್ರ ಸಿನಿಲೋಕದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ.ಇದೊಂದು ಮಲ್ಟಿಸ್ಟಾರರ್ ಸಿನಿಮಾ ಜೊತೆಗೆ ಪ್ಯಾನ್ ಇಂಡಿಯಾ ಸಿನಿಮಾ ಎಂದು ಧನಂಜಯ್ ತಿಳಿಸಿದ್ದಾರೆ.ದೀಪಾವಳಿ ಹಬ್ಬದ ಸಂದರ್ಭದಲ್ಲಿ 'ಜೀಬ್ರಾ' ಬಿಡುಗಡೆಯಾಗಲಿದೆ. ಅಕ್ಟೋಬರ್ 31ರಂದು ಕನ್ನಡ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ 'ಜೀಬ್ರಾ' ತೆರೆ ಕಾಣಲಿದೆಯಂತೆ. ಈ ನಡುವೆ, 'ಜೀಬ್ರಾ' ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಮೋಷನ್ ಪೋಸ್ಟರ್ ಗಮನಸಳೆದಿದೆ....
ನಾಗಮಂಗಲ ಘಟನೆ; ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌? ಬಿಜೆಪಿ ಆಕ್ರೋಶ 

ನಾಗಮಂಗಲ ಘಟನೆ; ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌? ಬಿಜೆಪಿ ಆಕ್ರೋಶ 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನಾಗಮಂಗಲದಲ್ಲಿ ವಿಚಾರಣೆ ನಡೆಸುವ ಮೊದಲೇ ಕಾಂಗ್ರೆಸ್‌ ಸರ್ಕಾರ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌ ನೀಡುತ್ತಿದೆ. ಮೊದಲು ತನಿಖೆ ನಡೆಸಿ, ನಂತರ ತಪ್ಪಿತಸ್ಥರು ಯಾರೆಂದು ತೀರ್ಮಾನಿಸಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಿಧಾನಸೌಧದಲ್ಲಿ ಪಾಕ್‌ ಜಿಂದಾಬಾದ್‌ ಕೂಗಿದಾಗ ಹಾಗೆ ಆಗಿಯೇ ಇಲ್ಲ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದರು. ಬಾಂಬ್‌ ಸ್ಫೋಟವಾದಾಗಲೂ ಅದು ವ್ಯಾಪಾರದ ಜಗಳ ಎಂದು ಹೇಳಿದ್ದರು. ಕುಕ್ಕರ್‌ ಬಾಂಬ್‌ ಸ್ಫೋಟದ ಬಗ್ಗೆಯೂ ಹೀಗೆಯೇ ಹೇಳಿದ್ದರು. ನಾಗಮಂಗಲದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವುದು ಬಗ್ಗೆ ಮೊದಲು ಪರಿಶೀಲಿಸಲಿ. ಆದರೆ ಸಚಿವ ಪ್ರಿಯಾಂಕ್‌ ಖರ್ಗೆಯಂಥವರು ಅದನ್ನು ಸಮರ್ಥಿಸಿಕೊಳ್ಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಭಾರತವನ್ನು ಎರಡು ಭಾಗ ಮಾಡಿದ ಕಾಂಗ್ರೆಸ್‌ ಮತ್ತೆ ತಲೆಯತ್ತಿ ಮಂಡ್ಯದಲ್ಲಿ ಕೋಮುಗಲಭೆಗೆ ಕಾರಣವಾಗಿದೆ. ವಿದೇಶಕ್ಕೆ ಹೋದ ರಾಹುಲ್‌ ಗಾಂಧಿ, ಭಾರತದ ವಿರುದ್ಧ ಮಾತಾಡುವುದರ ಜೊತೆಗೆ ಮೀಸಲಾತಿ ತೆಗೆದುಹಾ...
ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು; ಫ್ರಾನ್ಸ್‌ನ ಲಿಯೋನ್‌ನಲ್ಲಿ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರು ಶ್ರೇಷ್ಠತಾ ಪದಕಗಳನ್ನು ಪಡೆದ್ದಿದ್ದರೆ. ಫ್ರಾನ್ಸ್‌ನ ಲಿಯೋನ್‌ನಲ್ಲಿ ಇದೇ ಸೆಪ್ಟೆಂಬರ್ 10 ರಿಂದ 15 ರವರೆಗೆ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ 9 ಸ್ಪರ್ಧಿಗಳು ಭಾಗವಹಿಸಿದ್ದು, ಈ ಪೈಕಿ ಪ್ರೇಮ್, ಹರ್ಷವರ್ಧನ್, ಭಾನುಪ್ರಸಾದ್, ದರ್ಶನ್ ಗೌಡ 3 ಕೌಶಲ್ಯ ಸ್ಪರ್ಧೆಯಲ್ಲಿ ಶ್ರೇಷ್ಠತಾ ಪದಕ ಪಡೆದಿದ್ದಾರೆ.ಇದಕ್ಕೂ ಮುನ್ನ ಕಳೆದ ಮೇ ತಿಂಗಳಿನಲ್ಲಿ ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಕರ್ನಾಟಕದಿಂದ 62 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಯುವ ಕೌಶಲ್ಯ ಸ್ಪರ್ಧೆಯಲ್ಲಿ 13 ಚಿನ್ನದ ಪದಕ, 12 ಬೆಳ್ಳಿ ಪದಕ, 4 ಕಂಚಿನ ಪದಕ ಹಾಗೂ 19 ಶ್ರೇಷ್ಠತಾ ಪದಕ ಗೆಲ್ಲುವುದರೊಂದಿಗೆ ರಾಜ್ಯದ ಹಿರಿಮೆಯನ್ನು ಹೆಚ್ಚಿಸಿದ್ದಾರೆ.ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ 2ನೇ ಸ್ಥಾನ ಪಡೆದಿದೆ. ಅಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕರ್ನಾಟಕದ ಪ್ರೇಮ್ (ಆಡಿಟಿವ್ ಮ್ಯಾನುಫ್ಯಾಕ್ಚರಿಂಗ್), ಹರ್ಷವರ್ಧನ್ (ಕುಕ್ಕಿಂಗ್), ಭಾನುಪ್ರಸಾದ್, ದರ್ಶನ್ ಗೌಡ (ಮೆಕಾಟ್ರಾನಿಕ್ಸ್) ಫ್ರ...
‘ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?’: ಸಿಎಂ ವಿರುದ್ದ ಹೆಚ್ಡಿಕೆ ಟ್ವೀಟಾಸ್ತ್ರ

‘ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?’: ಸಿಎಂ ವಿರುದ್ದ ಹೆಚ್ಡಿಕೆ ಟ್ವೀಟಾಸ್ತ್ರ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ವಿರುದ್ದ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಕುಮಾರಸ್ವಾಮಿ, ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಸವಾಲು ಹಾಕಿದ್ದಾರೆ.ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ ಎಂದವರು ಟೀಕಿಸಿದ್ದಾರೆ...
ಶ್ರೀ ಚಿತ್ರಾಪುರ ಮಠದ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿಯ ಸೀಮೋಲ್ಲಂಘನ ಮತ್ತು ದಿಗ್ವಿಜಯ ಮಹೋತ್ಸವ

ಶ್ರೀ ಚಿತ್ರಾಪುರ ಮಠದ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿಯ ಸೀಮೋಲ್ಲಂಘನ ಮತ್ತು ದಿಗ್ವಿಜಯ ಮಹೋತ್ಸವ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ಚಿತ್ರಾಪುರ ಸಾರಸ್ವತ ಸಮಾಜದ ಗುರುಗಳಾಗಿರುವ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿ, ಮಠಾಧಿಪತಿ, ಶ್ರೀ ಚಿತ್ರಾಪುರ ಮಠ, ಶಿರಾಲಿ, ಉ.ಕ.ಜಿಲ್ಲೆ ಇವರ ಸೀಮೋಲ್ಲಂಘನ ಹಾಗೂ ದಿಗ್ವಿಜಯ18.09.2024ರಂದು ನಡೆಯಲಿದೆ.ಈ ಬಾರಿ ಸ್ವಾಮೀಜಿಯವರ ಚಾತುರ್ಮಾಸ ವೃತವು ಎರಡು ತಿಂಗಳ ಕಾಲ ಮಂಗಳೂರಿನ ಶರವು ದೇವಸ್ಥಾನ ರಸ್ತೆಯಲ್ಲಿರುವ ಶ್ರೀ ವಾಮನಾಶ್ರಮ ಮಠ (ಚಿತ್ರಾಪುರ ಮಠ) ದಲ್ಲಿ ಜರಗುತ್ತಿದ್ದು, ಈ ಚಾತುರ್ಮಾಸ ವೃತವು ಸೆಪ್ಟೆಂಬರ್ ತಿಂಗಳ 18ರಂದು ಮುಕ್ತಾಯಗೊಳ್ಳಲಿದೆ.ಆ ಪ್ರಯುಕ್ತ ಸೆಪ್ಟೆಂಬರ್ 18ರಂದು (ಬುಧವಾರ) ಸಂಜೆ 4.00 ಗಂಟೆಗೆ ಸೀಮೋಲ್ಲಂಘನ ಕಾರ್ಯಕ್ರಮವು ನಗರದ ಸುಲ್ತಾನ್ ಬತ್ತೇರಿ ಬಳಿಯಿರುವ ನದಿ ತಟದಲ್ಲಿ ನಡೆಯಲಿದೆ. ರಾತ್ರಿ ಗಂಟೆ 7.00ರಿಂದ ಮಂಗಳೂರು ನಗರದ ಗಣಪತಿ ಪ್ರೌಢ ಶಾಲೆಯ ಆವರಣದಿಂದ ದಿಗ್ವಿಜಯೋತ್ಸವವು (ಶೋಭಾಯಾತ್ರೆ) ಪ್ರಾರಂಭವಾಗಿ ಜಿ.ಎಚ್.ಎಸ್. ಅಡ್ಡ ರಸ್ತೆ, ಭವಂತಿಸ್ಟ್ರೀಟ್, ವೆಂಕಟರಮಣ ದೇವಸ್ಥಾನ ರಸ್ತೆ, ಮಹಮ್ಮಾಯ ದೇವಸ್ಥಾನ ರಸ್ತೆ, ಕೆನರಾ ಹೈಸ್ಕೂಲ್ ಹಿಂಬದಿಯ ರಸ್ತೆ, ನವಭಾರತ ವೃತ್ತ, ಡೊಂಗರಕೇರಿ, ನ್ಯೂಚಿತ್ರಾ ಜಂಕ್ಷನ್, ಬಿ.ಇ.ಎಂ ಹೈಸ್ಕೂಲ್ ರಸ್ತ...
ಗುತ್ತಿಗೆದಾರರಿಗೆ ಬೆದರಿಕೆ ಆರೋಪ; ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ

ಗುತ್ತಿಗೆದಾರರಿಗೆ ಬೆದರಿಕೆ ಆರೋಪ; ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಗುತ್ತಿಗೆದಾರರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ಜಾತಿ ನಿಂದನೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋರ್ಟ್ 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.ಕೋಲಾರದಲ್ಲಿ ಮುನಿರತ್ನ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಕಳೆದ ರಾತ್ರಿ ಬೆಂಗಳೂರಿಗೆ ಕರೆತಂದು 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ.ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪ ನಂಗಲಿ ಗ್ರಾಮದ ಬಳಿ ಬಂಧಿಸಿದ್ದರು. ರಾತ್ರಿ ಬೆಂಗಳೂರು ತಲುಪುತ್ತಿದ್ದಂತೆಯೇ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು.ಪ್ರಕರಣದ ಬಗ್ಗೆ ವಿಚಾರಣೆ ಅಗತ್ಯವಿರುವುದರಿಂದ ಒಂದು ವಾರ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಧೀಶರನ್ನು ಕೋರಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಆದೇಶಿಸಿದರು....