
ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ : ಡಿ.ಕೆ. ಸುರೇಶ್ ಆಗ್ರಹ
ಬೆಂಗಳೂರು: "ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಹಾಗೂ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಶಾಸಕ ಮುನಿರತ್ನ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸ ಬೇಕು ಹಾಗೂ ವಿಧಾನಸಭಾ ಸ್ಪೀಕರ್ ಅವರು ಶಾಸಕ ಸ್ಥಾನದಿಂದ ವಜಾ ಮಾಡಬೇಕು" ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, "ಮುನಿರತ್ನ ಅವರಂತ ನಾಯಕರು ರಾಜ್ಯದಲ್ಲಿ ಇದ್ದರೆ ಜಾತಿ ಸಂಘರ್ಷಗಳು ಹೆಚ್ಚಾಗುತ್ತವೆ. ಆದ ಕಾರಣಕ್ಕೆ ಇವರ ಮೇಲೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರಲ್ಲಿ ಮನವಿ ಮಾಡುತ್ತೇನೆ. ಬಿಜೆಪಿ ಕೇಂದ್ರ ನಾಯಕರಿಗೆ ಕಿವಿ ಕೇಳಿಸುತ್ತಿದ್ದರೆ, ಕೀಳು ಮಟ್ಟದ ಪದ ಬಳಕೆ ಮಾಡಿರುವ ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಿ" ಎಂದರು."ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರೇ ಸಮುದಾಯದ ತಾಯಂದಿರನ್ನು ಅವಮಾನಿಸಿದ್ದಾರೆ. ಇದಕ್ಕೆ ನೀವೇ ಉತ್ತರಿಸಬೇಕು. ವಿಜಯೇಂದ್ರ, ಛಲವಾದಿ ನಾರಾಯಣ ಸ್ವಾಮಿ ಅವರು ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಇದರ ಬಗ್ಗೆ ಉತ್ತರಿಸಬೇಕು" ಎಂದರು."ಒಂದು ಕಡೆ ರಾಮನ, ಸ...





