Sunday, August 9

ವಿದೇಶ

ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಹೈಕಮಾಂಡ್ ತೀರ್ಮಾನಿಸಿದಾಗ ಡಿಕೆ ಶಿವಕುಮಾರ್ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ವಿಧಾನಸಭೆಯಲ್ಲಿ ತೀವ್ರಗೊಂಡಿದ್ದ ವೇಳೆ, ಹೈಕಮಾಂಡ್ ತೀರ್ಮಾನಿಸಿದಾಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಚರ್ಚೆಯ ವೇಳೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರನ್ನು ಉದ್ದೇಶಿಸಿ, “ನಿಮಗೆ ಸಿಎಂ ಆಗುವ ಆಸೆ ಇಲ್ಲವಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಇದಕ್ಕೆ ಅಶೋಕ್ ನಕ್ಕು ಪ್ರತಿಕ್ರಿಯಿಸಿದ ಘಟನೆ ಸಭೆಯಲ್ಲಿ ಹಾಸ್ಯ ವಾತಾವರಣ ಮೂಡಿಸಿತು. ಇದನ್ನು ಮುಂದುವರೆಸಿದ ಸಿಎಂ, “ಅಶೋಕ್ ಆದರೂ ಸಿಎಂ ಆಗಲಿ, ಬೆಲ್ಲದ ಆದರೂ ಸಿಎಂ ಆಗಲಿ, ಅಶ್ವತ್ ನಾರಾಯಣ ಸಿಎಂ ಆದರೂ ಸಂತೋಷವೇ. ಆದರೆ ಬಿ.ವೈ. ವಿಜಯೇಂದ್ರ ನಿಮಗೆ ಅವಕಾಶ ಕೊಡಲ್ಲ” ಎಂದು ಬಿಜೆಪಿ ನಾಯಕರ ಕಾಲು ಎಳೆದರು. ಈ ವೇಳೆ ಶಾಸಕ ಸುನಿಲ್ ಕುಮಾರ್ “ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ನೀವು ನೇರವಾಗಿ ಹೇಳಲಿಲ್ಲ” ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಹೈಕಮಾಂಡ್ ಯಾವಾಗ ತೀರ್ಮಾನ ಮಾಡುತ್ತದೆಯೋ ಆಗ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ” ಎಂದು ಪುನರುಚ್ಚರಿಸಿದರು. ರಾಜ್ಯದಲ್ಲಿ 224 ಶಾಸ...
ಬಾಗಲಕೋಟೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ; ಯಡಿಯೂರಪ್ಪ

ಬಾಗಲಕೋಟೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ; ಯಡಿಯೂರಪ್ಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ದಾವಣಗೆರೆ: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭಾರೀ ಅಂತರದಿಂದ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತದಿಂದ ಜನರು ಬೇಸತ್ತಿದ್ದು, ಬದಲಾವಣೆಯ ನಿರೀಕ್ಷೆಯಲ್ಲಿ ಇದ್ದಾರೆ ಎಂದು ಹೇಳಿದರು. “ಕಾಂಗ್ರೆಸ್‌ಗೆ ಅತಿರೇಕದ ಬಹುಮತವಿದೆ. ಜನರು ಈಗ ಸೂಕ್ತ ಪಾಠ ಕಲಿಸಲು ಸಿದ್ಧರಾಗಿದ್ದಾರೆ. ಎರಡೂ ಕ್ಷೇತ್ರಗಳ ಮತದಾರರು ಬಿಜೆಪಿಗೆ ಮತ ನೀಡಿ ಗೆಲುವು ಖಚಿತಪಡಿಸಬೇಕು” ಎಂದು ಮನವಿ ಮಾಡಿದರು.ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, “ಉಪಚುನಾವಣೆಯಲ್ಲಿ ಸೋಲು ಖಚಿತವಾಗಿರುವ ಕಾರಣದಿಂದ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ಆರೋಪಿಸಿದರು.ರಾಜ್ಯದಲ್ಲಿ ರಾಜಕೀಯ ವಾತಾವರಣ ಬಿಜೆಪಿಗೆ ಅನುಕೂಲಕರವಾಗಿದೆ ಎಂದು ಹೇಳಿದ ಅವರು, “ನಮ್ಮ ಅಭ್ಯರ್ಥಿಗಳು ಎರಡೂ ಕ್ಷೇತ್ರಗಳಲ್ಲಿ ಭಾರೀ ಅಂತರದಿಂದ ಗೆಲ್ಲುತ್ತಾರೆ” ಎಂದು ವಿಶ್ವಾ...
ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ

ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. .ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡುಬಿದರೆ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಹಾಗೂ ಸಂತ್ರಸ್ತೆಯ ಭೇಟಿ ಮಾಡಿದ್ದಾರೆ. ಪ್ರಕರಣಕ್ಕೆ‌ ಸಂಬಂಧಿಸಿದಂತೆ ಅನೇಕ ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಡಿಜಿಪಿ ಅವರಿಗೆ ಸೂಚಿಸಿದ್ದೇನೆ ಎಂದರು.ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ಮೇಲೆ ಆರೋಪ ಬಂದ ಬಳಿಕ ಅಮಾನತು ಮಾಡುವ ಮೂಲಕ ತಕ್ಷಣದ ಕ್ರಮ‌ಕೈಗೊಳ್ಳಲಾಗಿದೆ. ವರದಿ ನೀಡುವಂತೆ ಸೂಚಿಸಲಾಗಿದ್ದು, ಕೊಡುತ್ತಾರೆ. ಇನ್ನೂ ಅನೇಕ ವಿಚಾರಗಳನ್ನು ಕೇಳಿದ ಮೇಲೆ ಹೆಚ್ಚಿನ ತನಿಖೆ ಮಾಡಬೇಕೆಂದು ಸಿಐಡಿ ತನಿಖೆಗೆ ವಹಿಸಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರುತ್ತದೆ. ಇನ್ನು ಎಷ್ಟು ಜನ ಸಂತ್ರಸ್ತರಿದ್ದಾರೆ ಎಂಬುದು ತನಿಖೆ ವೇ...
ದಾವಣಗೆರೆ: ಸಿಎಂ–ಡಿಸಿಎಂ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ

ದಾವಣಗೆರೆ: ಸಿಎಂ–ಡಿಸಿಎಂ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ದಾವಣಗೆರೆ: ಏಪ್ರಿಲ್ 9ರಂದು ನಡೆಯಲಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ ಹಿನ್ನೆಲೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರು ಇಂದು ನಾಮಪತ್ರ ಸಲ್ಲಿಸಿದರು.ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದು ಬೆಂಬಲ ಸೂಚಿಸಿದರು. ಇದೇ ಸಂದರ್ಭದಲ್ಲಿ ಅಭ್ಯರ್ಥಿಯ ತಂದೆ ಮಲ್ಲಿಕಾರ್ಜುನ ಹಾಗೂ ತಾಯಿ ಪ್ರಭಾ ಮಲ್ಲಿಕಾರ್ಜುನ ಕೂಡ ಭಾಗವಹಿಸಿದ್ದರು.ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿದ್ದರೂ, ಅಂತಿಮವಾಗಿ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಲಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ಸಮರ್ಥ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದೇವೆ. ನಾನೂ ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಿದ್ದೇನೆ. ಬ್ಲಾಕ್ ಸಮಿತಿ ಅಧ್ಯಕ್ಷ ಅಯುಬ್ ಸಹ ಉಪಸ್ಥಿತರಿದ್ದರು” ಎಂದು ಹೇಳಿದರು.“ನಮ್ಮ ಪಕ...
ಉಪಚುನಾವಣೆ: ಸಮರ್ಥ್, ಉಮೇಶ್ ಮೇಟಿಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್

ಉಪಚುನಾವಣೆ: ಸಮರ್ಥ್, ಉಮೇಶ್ ಮೇಟಿಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ಉಪಚುನಾವಣೆಯ ಟಿಕೆಟ್ ಹಂಚಿಕೆ ಕುರಿತಿದ್ದ ಕಗ್ಗಂಟಿಗೆ ಕಾಂಗ್ರೆಸ್ ಕೊನೆಗೂ ತೆರೆ ಎಳೆದಿದೆ. ಏಪ್ರಿಲ್ 9ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಅಭ್ಯರ್ಥಿ ಪಟ್ಟಿಯನ್ನು ಇಂದು ಭಾನುವಾರ ಬಿಡುಗಡೆ ಮಾಡಿದೆ.ದಾವಣಗೆರೆ ದಕ್ಷಿಣದಿಂದ ಸಮರ್ಥ್ ಮಲ್ಲಿಕಾರ್ಜುನ್ ಹಾಗೂ ಬಾಗಲಕೋಟೆಯಿಂದ ಉಮೇಶ್ ಮೇಟಿ ಇವರಿಗೆ ಟಿಕೆಟ್ ನೀಡಲಾಗಿದೆ ಎಂದು ಪಕ್ಷದ ಮೂಲಗಳು ದೃಡಪಡಿಸಿವೆ.ಉಪಚುನಾವಣೆಯ ಸನ್ನಾಹದಲ್ಲಿ ಕಾಂಗ್ರೆಸ್ ಈ ಬಾರಿ ಜಾಗರೂಕ ನಡೆ ತೆಗೆದುಕೊಂಡಿದ್ದು, ಎರಡೂ ಕ್ಷೇತ್ರಗಳಲ್ಲಿ ಗಟ್ಟಿಯಾದ ಸ್ಪರ್ಧೆಗೆ ತಯಾರಾಗಿದೆ ಎಂಬುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ....
ಸಚಿವ ಸ್ಥಾನ ಪ್ರಿಯಾಂಕ್ ಖರ್ಗೆ ಅವರಿಗೆ ಮಾತ್ರ ಏಕೆ? ನಮಗೂ ಅವಕಾಶ ಬೇಕು”

ಸಚಿವ ಸ್ಥಾನ ಪ್ರಿಯಾಂಕ್ ಖರ್ಗೆ ಅವರಿಗೆ ಮಾತ್ರ ಏಕೆ? ನಮಗೂ ಅವಕಾಶ ಬೇಕು”

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ರಾಮನಗರ: ರಾಜ್ಯ ಸಚಿವ ಸಂಪುಟ ಪುನಾರಚನೆ ಚರ್ಚೆ ನಡುವೆಯೇ ಕಾಂಗ್ರೆಸ್ ಒಳಗೆ ಸಚಿವ ಸ್ಥಾನಕ್ಕಾಗಿ ಒತ್ತಾಯಗಳು ಜೋರಾಗಿವೆ. “ಸಚಿವ ಸ್ಥಾನ ಪ್ರಿಯಾಂಕ್ ಖರ್ಗೆ ಅವರಿಗೆ ಮಾತ್ರ ಏಕೆ? ನಮಗೂ ಅವಕಾಶ ಬೇಕು” ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಸ್ಪಷ್ಟವಾಗಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಬಾರಿಗೆ ಹಾಗೂ ಎರಡನೇ ಬಾರಿ ಗೆದ್ದ ಶಾಸಕರಿಗೂ ಈ ಬಾರಿ ಮಂತ್ರಿಗಿರಿ ನೀಡಬೇಕು ಎಂದು ಒತ್ತಾಯಿಸಿದರು. “ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪ್ರಿಯಾಂಕ್ ಖರ್ಗೆ ಮೊದಲ ಬಾರಿ ಶಾಸಕರಾಗಿದ್ದಾಗಲೇ ಸಚಿವರಾಗಿದ್ದರು. ಹಾಗಾಗಿ ಈಗಲೂ ಹೊಸದಾಗಿ ಆಯ್ಕೆಯಾದವರಿಗೂ ಅವಕಾಶ ಸಿಗಬೇಕು” ಎಂದು ಹೇಳಿದರು.ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಔತಣಕೂಟದಲ್ಲಿ ಸುಮಾರು 55 ಮಂದಿ ಶಾಸಕರು ಸೇರಿ ಈ ವಿಚಾರವನ್ನು ಚರ್ಚಿಸಿದ್ದೇವೆ. ನಮ್ಮ ಬೇಡಿಕೆಯನ್ನು ಮುಖ್ಯಮಂತ್ರಿ ಬಳಿ ಮಂಡಿಸಿದ್ದೇವೆ. ಮುಖ್ಯಮಂತ್ರಿಗಳು ಸ್ಪಂದಿಸುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು.ಮೂರು-ನಾಲ್ಕು ಬಾರಿ ಗೆದ್ದ ಹಿರಿಯ ಶಾಸಕರು ಈಗಾಗಲೇ ಸಚಿವ ಸ್ಥಾನಕ್ಕಾಗಿ ಸಭೆ ನಡೆಸಿ ಮನವಿ ಮಾಡಿರುವ ಹಿನ್ನೆಲೆ...
ಮಾ.24ರಿಂದ ಕರಾವಳಿ ಭಾಗಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ

ಮಾ.24ರಿಂದ ಕರಾವಳಿ ಭಾಗಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದ್ದರೂ, ಇನ್ನೊಂದೆಡೆ ಮಳೆ ಚುರುಕುಗೊಂಡಿದ್ದು ಹವಾಮಾನದಲ್ಲಿ ಏರುಪೇರು ಕಂಡುಬರುತ್ತಿದೆ. ಮುಂದಿನ ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು, ಹಾಸನ, ಚಿಕ್ಕಮಗಳೂರು, ಕೊಡಗು, ಧಾರವಾಡ, ಗದಗ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಶನಿವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನೂ, ಮಾರ್ಚ್ 24ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಒಟ್ಟಾರೆ, ಬಿಸಿಲಿನ ನಡುವೆ ಮಳೆ ಚಟುವಟಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚಿಸಿದೆ....
ರಾಜ್ಯಕ್ಕೆ ಹೆಚ್ಚುವರಿ ಅನಿಲ ಪೂರೈಸಿ; ಕೇಂದ್ರ ಸಚಿವರಿಗೆ  ಸಿದ್ದರಾಮಯ್ಯ ಪತ್ರ

ರಾಜ್ಯಕ್ಕೆ ಹೆಚ್ಚುವರಿ ಅನಿಲ ಪೂರೈಸಿ; ಕೇಂದ್ರ ಸಚಿವರಿಗೆ ಸಿದ್ದರಾಮಯ್ಯ ಪತ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ/ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಂಟಾಗಿರುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ತಲೆದೋರಿದ್ದು, ಪರಿಸ್ಥಿತಿ ಗಂಭೀರ ಹಂತ ತಲುಪಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.ರಾಜ್ಯಾದ್ಯಂತ ವಾಣಿಜ್ಯ ಅನಿಲ ಪೂರೈಕೆಯಲ್ಲಿನ ವ್ಯತ್ಯಯದಿಂದ ಹೋಟೆಲ್‌ಗಳು, ಸಣ್ಣ ಉದ್ಯಮಗಳು ಸೇರಿದಂತೆ ಅನೇಕ ವಲಯಗಳ ಬದುಕು ತತ್ತರಿಸಿದೆ ಎಂದು ಸಿಎಂ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕವೂ ಮಾಹಿತಿ ಹಂಚಿಕೊಂಡು, ತಕ್ಷಣದ ಕ್ರಮದ ಅಗತ್ಯತೆಯನ್ನು ಅವರು ಒತ್ತಿಹೇಳಿದ್ದಾರೆ.ಪ್ರಸ್ತುತ ರಾಜ್ಯದಲ್ಲಿ ದಿನಕ್ಕೆ ಸುಮಾರು 50 ಸಾವಿರ ಸಿಲಿಂಡರ್‌ಗಳ ಬೇಡಿಕೆ ಇದ್ದರೂ, ಕೇವಲ 1,000 ಸಿಲಿಂಡರ್‌ಗಳಷ್ಟೇ ಪೂರೈಕೆ ಆಗುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಇದರ ಪರಿಣಾಮವಾಗಿ ಅನೇಕ ಹೋಟೆಲ್‌ಗಳು ಮುಚ್ಚುವ ಹಂತ ತಲುಪಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.“ಎಲ್‌ಪಿಜಿ ...
ಆದಾಯ ತೆರಿಗೆ 2026: 50% HRA ವಿನಾಯಿತಿ, 150ಕ್ಕೂ ಹೆಚ್ಚು ಫಾರ್ಮ್‌ಗಳು ಪರಿಚಯ

ಆದಾಯ ತೆರಿಗೆ 2026: 50% HRA ವಿನಾಯಿತಿ, 150ಕ್ಕೂ ಹೆಚ್ಚು ಫಾರ್ಮ್‌ಗಳು ಪರಿಚಯ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿ ಶುಕ್ರವಾರ ಆದಾಯ ತೆರಿಗೆ ನಿಯಮಗಳು, 2026 ಅನ್ನು ಅಧಿಸೂಚನೆ ಹೊರಡಿಸಿದ್ದು, ಇದು ಆದಾಯ ತೆರಿಗೆ ಕಾಯ್ದೆ, 2025 ಗೆ ಕಾರ್ಯಾಚರಣಾ ಚೌಕಟ್ಟನ್ನು ಒದಗಿಸಿದೆ. ಈ ಹೊಸ ನಿಯಮಗಳು ಏಪ್ರಿಲ್ 1, 2026 ರಿಂದ ಜಾರಿಗೆ ಬರಲಿವೆ.ಹೊಸ ತೆರಿಗೆ ವ್ಯವಸ್ಥೆಯ ಉದ್ದೇಶ ಹೊಸ ತೆರಿಗೆ ದರಗಳನ್ನು ಪರಿಚಯಿಸುವುದಲ್ಲ, ಬದಲಾಗಿ ತೆರಿಗೆ ಕಾಯ್ದೆಯನ್ನು ಸರಳಗೊಳಿಸುವುದು, ಅನಗತ್ಯ ನಿಯಮಗಳನ್ನು ತೆಗೆದುಹಾಕುವುದು ಮತ್ತು ಅನುಸರಣೆಯನ್ನು ಸ್ಪಷ್ಟಗೊಳಿಸುವುದಾಗಿದೆ. HRA ಕುರಿತು ಪ್ರಮುಖ ಬದಲಾವಣೆ ಮನೆ ಬಾಡಿಗೆ ಭತ್ಯೆ (HRA) ಪಡೆಯುವ ಸಂಬಳದ ಉದ್ಯೋಗಿಗಳಿಗೆ ಹೊಸ ನಿಯಮಗಳು ಕೆಲವು ಮಹತ್ವದ ಬದಲಾವಣೆಗಳನ್ನು ತಂದಿವೆ:ಮುಂಬೈ, ದೆಹಲಿ, ಕೋಲ್ಕತ್ತಾ, ಚೆನ್ನೈ, ಹೈದರಾಬಾದ್, ಪುಣೆ, ಅಹಮದಾಬಾದ್ ಮತ್ತು ಬೆಂಗಳೂರು ನಗರಗಳಲ್ಲಿ ಸಂಬಳದ 50% ವರೆಗೆ HRA ವಿನಾಯಿತಿ ಲಭ್ಯ ಇತರೆ ನಗರಗಳಲ್ಲಿ 40% ಮಿತಿ ಮುಂದುವರಿಕೆ ಭೂಮಾಲೀಕ-ಬಾಡಿಗೆದಾರ ಸಂಬಂಧ ಘೋಷಣೆ ಕಡ್ಡಾಯ – ಪಾರದರ್ಶಕತೆ ಹೆಚ್ಚಿಸಲು ಹೊಸ ನಿಯಮ ಸರಳೀಕರಣದ ದಿಕ್ಕಿನಲ್ಲಿ ದೊಡ್ಡ ಹೆಜ್ಜೆಹೊಸ ಕಾಯ್...
‘ಕ್ಯಾನ್ಸರ್ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ’: ಐಐಐಟಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಡಾ. ಪದ್ಮಿನಿ ಪ್ರಸಾದ್ ಕರೆ

‘ಕ್ಯಾನ್ಸರ್ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ’: ಐಐಐಟಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಡಾ. ಪದ್ಮಿನಿ ಪ್ರಸಾದ್ ಕರೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸ್ತ್ರೀ ಆರೋಗ್ಯ ಕುರಿತು ಜಾಗೃತಿ ಕಾರ್ಯಕ್ರಮಗಳು ರಾಜ್ಯದಾದ್ಯಂತ ಜೋರಾಗಿ ನಡೆಯುತ್ತಿವೆ. ಈ ಹಿನ್ನೆಲೆ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಪದ್ಮಿನಿ ಪ್ರಸಾದ್ (Dr. Padmini Prasad) ಅವರ ಆರೋಗ್ಯ ಜಾಗೃತಿ ಅಭಿಯಾನ ವಿಶೇಷ ಗಮನಸೆಳೆದಿದೆ.ವರ್ಷಗಳಿನಿಂದ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಡಾ. ಪದ್ಮಿನಿ ಪ್ರಸಾದ್, ಈ ಬಾರಿ ಗರ್ಭಕಂಠ ಕ್ಯಾನ್ಸರ್ (Cervical Cancer) ಕುರಿತ ಕಾರ್ಯಕ್ರಮಗಳ ಸರಣಿಯನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಐಐಐಟಿ ಬೆಂಗಳೂರು (IIIT Bangalore), ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ಮೂರನೇ ಹಂತದ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ದೇಹದ ಬೆಳವಣಿಗೆ, ದೈಹಿಕ-ಮಾನಸಿಕ ಆರೋಗ್ಯ, ಲೈಂಗಿಕ ಬೆಳವಣಿಗೆ, ಲೈಂಗಿಕ ಕಿರುಕುಳ ಮತ್ತು ರಕ್ಷಣೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.“ಪ್ರಸ್ತುತ ಜೀವನಶೈಲಿ ಹಲವು ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಯುವಕರು ಮುನ್ನೆಚ್ಚರ...