ಮೈಸೂರು: ತಮಿಳುನಾಡಿನ ತಿರುಚಿಯಲ್ಲಿ ಮಂಗಳವಾರ ರಾಷ್ಟ್ರೀಯ ರೈತ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಭಾಗವಹಿಸಲು ಕರ್ನಾಟಕದಿಂದ ನೂರಾರು ರೈತರು ರೈಲು ಮೂಲಕ ತೆರಳಿದ್ದಾರೆ.ತಮಿಳುನಾಡಿನ ತಿರುಚಿಯಲ್ಲಿ ನಡೆಯುವ ರಾಷ್ಟ್ರೀಯ ರೈತ ಸಮಾವೇಶಕ್ಕೆ ಕರ್ನಾಟಕದಿಂದ ನೂರಾರು ಸಂಖ್ಯೆಯ ರೈತರು ರೈತ ನಾಯಕ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಭಾಗಿಯಾಗುತ್ತಿಧದು, ಈ ಅನ್ನದಾತರು ಮೈಸೂರಿನಿಂದ ರೈಲು ಮೂಲಕ ತೆರಳಿದ್ದಾರೆ.ದೇಶಾದ್ಯಂತ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿ. ರೈತರ ಸಂಪೂರ್ಣ ಸಾಲಮನ್ನಾ. ಡಾ ಸ್ವಾಮಿನಾಥನ್ ವರದಿ ಜಾರಿ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಪ್ರಬಲಗೊಳಿಸಲು. ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸಲಾಗುವುದು ರಾಷ್ಟ್ರದ ಎಲ್ಲಾ ರಾಜ್ಯಗಳ ರೈತ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೆತರ) ಸಂಘಟನೆಯ ದಕ್ಷಿಣ ಭಾರತ ಸಂಚಾಲಕರೂ ಆದ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೆತರ ಸಂಘ...
ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ದಿನವಾದ ಸೋಮವಾರ ರಾಜಧಾನಿ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿರ್ಬಂಧಿಸಲಾಗಿದೆ.ಆಗಸ್ಟ್ 25 ಸೋಮವಾರದಂದು ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.ಕಸಾಯಿಖಾನೆಯಲ್ಲಿ ಪ್ರಾಣಿವಧೆ ಮಾಡದಂತೆ ಹಾಗೂ ಅಂಗಡಿ- ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡದಂತೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ....
ಬೆಂಗಳೂರು: ಸ್ವಲ್ಪ ದಿನ ವಿರಮಿಸಿರುವ ಮಳೆರಾಯ ಮತ್ತೆ ಆಗಮಿಸಲಿದ್ದಾನೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಶಿವಮೋಗ್ಗ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿವೆ. ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಬೆಂಗಳೂರು: ಸಿದ್ದರಾಮಯ್ಯ ಅವರು ಮೂಡಾ ಹಗರಣದ ಆರೋಪದ ಸುಳಿಯಲ್ಲಿ ಸಿಲುಕಿರುವ ಹಿನ್ನೆಲೆಯಲ್ಲಿ ಸಿಎಂ ಬದಲಾವಣೆ ಸನ್ನಿಹಿತ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿದೆ. ಈ ಕುರಿತ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್ ಪಕ್ಷದಲ್ಲೀಗ ಸಿಎಂ ಸ್ಥಾನಕ್ಕಾಗಿ ನಾಯಕರ ಮ್ಯೂಸಿಕ್ ಚೇರ್‌ನಂತೆ ಸ್ಪರ್ಧೆ ನಡೆಯುತ್ತಿದೆ ಎಂದು ಟೀಕಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಂದಿಗೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿಲ್ಲ. ಅಂತಹ ಅವಶ್ಯಕತೆ ನಮಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಹೀಗೆ ಎಲ್ಲರೂ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಈ ವಿಷಯ ಬಹಳ ಚರ್ಚೆಯಾಗುತ್ತಿದೆ ಎಂದರು.ಲೋಕಸಭೆ ಚುನಾವಣೆಯಲ್ಲಿ ಸೋತ ಕೂಡಲೇ, ಜನರಿಗೆ ನಿಯತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ನಿಂದಿಸುತ್ತಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಿದ್ದು, ಅಧಿಕಾರಿಗಳು ...
ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ರೂಪಿಸಿದೆ. ಇಂತಹ ವಿಧೇಯಕಗಳ ಸಾಧಕ-ಬಾಧಕಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಹತ್ತಾರು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದರು ಎಂದರು.ರಾಜಭವನ ಎಂದರೆ ಬಿಜೆಪಿ ಕಚೇರಿ ಎನ್ನುವುದು ಹಳಸಿದ ಮಾತು. ವಿಧೇಯಕವನ್ನು ಮರಳಿ ಕಳುಹಿಸಿದರೆ ಅದಕ್ಕೆ ಸರ್ಕಾರ ಸ್ಪಷ್ಟೀಕರಣ ಕೊಟ್ಟು ಗೊಂದಲ ನಿವಾರಿಸಬೇಕು. ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುವುದು ಸರ್ಕಾರದ ಕರ್ತವ್ಯ. ಈ ಕರ್ತವ್ಯ ಮಾಡದೇ ಇದ್ದಲ್ಲಿ ಅದು ಸರ್ಕಾರದ ನಿರ್ಲಕ್ಷ್ಯವೇ ಹೊರತು ರಾಜ್ಯಪಾಲರ ತಪ್ಪಲ್ಲ. ಸರ್ಕಾರ ತಪ್ಪು ಮಾಡಿ ಅದನ್ನು ರಾಜ್ಯಪಾ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ 11 ಮಸೂದೆಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಈ ಮೂಲಕ ಸರ್ಕಾರ ಮತ್ತು ರಾಜಭವನ ನಡುವಿನ ಸಂಘರ್ಷ ತೀವ್ತಗೊಂಡಂತೆ ಭಾಸವಾಗುತ್ತಿದೆ. ಇದೇ ವೇಳೆ ರಾಜ್ಯಪಾಲರ ಕ್ರಮಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಸಹಿತ 15 ಶಾಸಕರು ಜಂಟಿ ಹೇಳಿಕೆ ಬಿಡುಗಡೆ ಮಾಡಿ, ರಾಜ್ಯಪಾಲರ ನಡೆ ರಾಜಕೀಯ ಪ್ರೇರಿತ ಎಂದು ಸಿಟ್ಟು ಹೊರಹಾಕಿದ್ದು, ತಮ್ಮ ನಿಲುವನ್ನು ಮರು ಪರಿಶೀಲಿಸದಿದ್ದರೆ ಕಾನೂನು ಹೋರಾಟದ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.ಕಾಂಗ್ರೆಸ್ ಶಾಸಕರಾದ ಮಂಜುನಾಥ ಭಂಡಾರಿ, ಎಸ್.ರವಿ, ಅನಿಲ್ ಕುಮಾರ್, ರಾಜೇಂದ್ರ ರಾಜಣ್ಣ, ದಿನೇಶ್ ಗೂಳಿಗೌಡ, ಸುನಿಲ್ ಗೌಡ ಪಾಟೀಲ್, ಚಂದ್ರಶೇಖರ ಪಾಟೀಲ, ಚೆನ್ನರಾಜು, ಮಧು ಮಾದೇಗೌಡ, ಡಾ.ತಿಮ್ಮಯ್ಯ, ರಾಮೋಜಿ ಗೌಡ ,DT ಶ್ರೀನಿವಾಸ, ಶರಣಗೌಡ ಪಾಟೀಲ್, ಭೀಮರಾವ್ ಪಾಟಿಲ. ತಿಪ್ಪಣ್ಣಾ ಕಮಕನೂರು ಅವರು ಜಂಟಿ ಮಾಧ್ಯಮ ಹೇಳಿಕೆ ನೀಡಿ,ದ್ದಾರೆ.ಆಗಸ್ಟ್ ತಿಂಗಳಲ್ಲಿ ರಾ...
ಬೆಂಗಳೂರು: ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ ವೈದ್ಯರ ಸುರಕ್ಷತೆಗಾಗಿ ಸ್ವಯಂಪ್ರೇರಿತವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲು ಚಿಂತನೆನಡೆಸಿದೆ.ಶುಕ್ರವಾರ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ವೈದ್ಯಕೀಯ ಶಿಕ್ಷಣ ನಿರ್ದೇಶಕರರಾದ ಡಾ. ಸುಜಾತ ರಾಥೋಡ್ ಅವರಿಗೆ ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳು/ಪಾಲುದಾರರನ್ನು ಸಂಪರ್ಕಿಸಿ ಸಮಗ್ರವಾದ ಮಾರ್ಗಸೂಚಿಯನ್ನು ರಚಿಸುವಂತೆ ಸೂಚಿಸಿದರು.ಡಾ. ರಾಥೋಡ್ ಅವರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಎಲ್ಲಾ ನಿರ್ದೇಶಕರುಗಳು, ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ವೈದ್ಯರ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚಿಸಲು ನಿರ್ದೇಶನ ನೀಡಿದರು. ಇದರೊಂದಿಗೆ ಖಾಸಗಿ ಆಸ್ಪತ್ರೆಗಳು, ಮಹಿಳಾ ವೈದ್ಯರು ಇನ್ನಿತರೆ ಪಾಲುದಾರರೊಂದಿಗೆ ಸಮಾಲೋಚಿಸಿ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ವೈ...
ಬೆಂಗಳೂರು: ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರು ಆತಂಕಕ್ಕೆ ಒಳಗಾಗಬಾರದೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟಿಲ್ ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ.ಶುಕ್ರವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ಕಳೆದ ಆ.14ರಂದು ವಿಶ್ವ ಆರೋಗ್ಯ ಸಂಸ್ಥೆ ಮಂಕಿಫಾಕ್ಸ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಘೋಷಿಸಿದೆ. ಆಫ್ರಿಕಾದಲ್ಲಿ ಹರಡಿರುವ ಸೋಂಕು ಕಾಣಿಸಿಕೊಂಡಿರುವ ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.ಈ ಸೋಂಕು ಇಲ್ಲಿಯವರೆಗೆ ಭಾರತದಲ್ಲಿ ಕಂಡು ಬಂದಿಲ್ಲ. ಈ ಹಿನ್ನೆಲೆ ಯಾವುದೇ ಆತಂಕ ಬೇಡ. ಎನ್‌ಸಿಡಿಸಿ ಜಂಟಿ ನಿರ್ವಹಣೆ ಸಂಸ್ಥೆ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡ...
ಬೆಂಗಳೂರು: ಮುಡಾ ನಿವೇಶನ ಅಕ್ರಮ ಆರೋಪ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ 11 ಮಸೂದೆಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಈ ಮೂಲಕ ಸರ್ಕಾರ ಮತ್ತು ರಾಜಭವನ ನಡುವಿನ ಸಂಘರ್ಷ ತೀವ್ತಗೊಂಡಂತೆ ಭಾಸವಾಗುತ್ತಿದೆ.ಆಗಸ್ಟ್ ತಿಂಗಳಲ್ಲಿ ರಾಜ್ಯಪಾಲರು 6 ಪ್ರಮುಖ ಮಸೂದೆಗಳನ್ನು ಹಿಂತಿರುಗಿಸಿದ್ದಾರೆ. ಒಟ್ಟು 11 ವಿಧೇಯಕಗಳನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ ಎನ್ನಲಾಗಿದೆ.ಕರ್ನಾಟಕ ಸಾರ್ವಜನಿಕ ಭ್ರಷ್ಟಾಚಾರ ತಡೆ ವಿಧೇಯಕ, ಕರ್ನಾಟಕ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ, ಕರ್ನಾಟಕ ಟೌನ್ ಆಂಡ್ ಕಂಟ್ರೀ ಪ್ಲಾನಿಂಗ್ ವಿಧೇಯಕ, ಕರ್ನಾಟಕ ಶಾಸಕಾಂಗ ಸದಸ್ಯರ ಅನರ್ಹತೆ ತಡೆ ವಿಧೇಯಕ, ಕರ್ನಾಟಕ ಪುರಸಭಗಳು ಮತ್ತು ಇತರೇ ಕೆಲವು ಕಾನೂನು ವಿಧೇಯಕ, ಕರ್ನಾಟಕ ಚಲನಚಿತ್ರ ಮತ್ತು ಸಾಂಸ್ಕೃತಿಕ ಕಲಾವಿದರ ಕಲ್ಯಾಣ ವಿಧೇಯಕ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಗದಗ ಬೆಟಗೇರಿ ವ್ಯಾಪಾರ ...