Tuesday, September 22

ವಿದೇಶ

ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..!  ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ

ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..!  ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿ ಚಾಲನಾ ಪರವಾನಿಗಿ (DL ) ಇಲ್ಲದೆ ಲಾರಿ ಚಾಲಕರು ಅಪಘಾತಗಳನ್ನು ಎಸಗುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಗಮನಸೆಳೆದಿದೆ.07-08-2024 ರಂದು ಬೆಂಗಳೂರಿನ ಡಾಬಸ್ ಪೇಟೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಮತ್ತು ಗರ್ಭದೊಳಗೆ ಇದ್ದ ಮಗು ಮೃತ ಪಟ್ಟಿದ್ದು, ಟಿಪ್ಪರ್ ಲಾರಿಯ ಚಾಲಕ ಪರಾರಿಯಾಗಿರುತ್ತಾನೆ. ಒಂದು ವಾರದ ಹಿಂದೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರ್‌ಗಳು ಮೃತ ಪಟ್ಟಿದ್ದು, ಬಿಬಿಎಂಪಿ ಕಸದ ಲಾರಿ ಚಾಲಕ ಪರಾರಿಯಾಗಿರುತ್ತಾನೆ. ಇತ್ತೀಚಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಲ್ಲಿ ಬಹುತೇಕ ಲಾರಿ ಚಾಲಕರ ಚಾಲನಾ ಪರವಾನಿಗಿ ಇರುವುದಿಲ್ಲ ಎಂದು ರಮೇಶ್ ಬಾಬು ಅವರು ತಮ್ಮ ಪತ್ರದಲ್ಲಿ ಸರ್ಕಾರದ ಗಮನಸೆಳೆದಿದ್ದಾರೆ.ಬೆಂಗಳೂರಿನಲ್ಲಿ ಕಸ ಸಾಗಾಣೆ ಮಾಡುವ ಲಾರ...
ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಕನಕಪುರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗಾಗಿ ಮೀಸಲು: ಡಿಕೆಶಿ

ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಕನಕಪುರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗಾಗಿ ಮೀಸಲು: ಡಿಕೆಶಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಕನಕಪುರಕ್ಕೆ ಭೇಟಿ ನೀಡಲಿದ್ದಾರೆ.ಆ ದಿನಗಳಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಜನರ ಸಮಸ್ಯೆ, ಅಹವಾಲುಗಳನ್ನು ಆಲಿಸಲಿದ್ದಾರೆ. ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.ಬೆಂಗಳೂರು ದಕ್ಷಿಣ ಜಿಲ್ಲೆಯ ನಾನಾ ವಿಧಾನಸಭಾ ಕ್ಷೇತ್ರಗಳ ಜನರು ತಮ್ಮನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ತೊಂದರೆ ತೆಗೆದುಕೊಳ್ಳುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸಿ, ಅಹವಾಲು ಸ್ವೀಕರಿಸಲಿದ್ದೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ....
ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್‌ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ

ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್‌ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾಡ್೯ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ.. ಉದ್ಯೋಗ ಆಕಾಂಕ್ಷೆಗಳಿಗೆ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ಆಯೋಜನೆ.. ಅರ್ಜಿ ಸಲ್ಲಿಸಲು ಆಗಸ್ಟ್ 11 ಕೊನೆಯ ದಿನ.. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ, ವಿಮಾನ ಟಿಕೆಟ್, ವಸತಿ ಆಹಾರ ಇತ್ಯಾದಿ ವ್ಯವಸ್ಥೆ.. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 27,000 ರೂ. ವೇತನ. ಬೆಂಗಳೂರು: ಕರ್ನಾಟಕ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ಹೊಸದಾಗಿ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾಡ್೯ನಲ್ಲಿ ವೃತ್ತಿ ತರಬೇತಿ ಮತ್ತು ನೇಮಕಾತಿಗಾಗಿ ಕಾರ್ಯಕ್ರಮ ಏರ್ಪಡಿಸಿದೆ.ಈಗಾಗಲೇ ಸ್ಲೋವಾಕಿಯಾ, ಯೂ ಎ ಈ, ಹಂಗೇರಿ, ಸೇರಿದಂತೆ ಮತ್ತಿತರ ಕಡೆ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ಯಶಸ್ಸೀಯಾಗಿರುವ ಕರ್ನಾಟಕ ಕೌಶಲ್ಯಭಿವೃದ್ದಿ ನಿಗಮವು ಇದೀಗ ಐಐಟಿ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ನಿಗಮದ ವತಿಯಿಂದಲೇ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ ಕಾರ್ಯಕ್ರಮದ ಮೂಲಕ ಮತ್ತೊಂದು ಹೊಸ ದೃಡ ಹೆಜ್ಜೆ ಇಟ್ಟಿದೆ.ಆಯ್ಕೆಯಾದ ಅಭ್ಯರ್ಥಿಗಳಿಗ...
ಮೂಡ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಲೂಟಿ ಕಳಂಕವಲ್ಲವೇ? ಸಿ.ಟಿ.ರವಿ ಪ್ರಶ್ನೆ

ಮೂಡ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಲೂಟಿ ಕಳಂಕವಲ್ಲವೇ? ಸಿ.ಟಿ.ರವಿ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ತಮ್ಮ 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಳಂಕ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೊಂಡಿದ್ದಾರೆ. ಹಾಗಿದ್ದರೆ ಮೂಡ ಹಗರಣ ಕಳಂಕ ಅಲ್ಲವೇ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.ಮೈಸೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಲೂಟಿ ನಿಮ್ಮ ಸರಕಾರಕ್ಕೆ ಕಪ್ಪು ಚುಕ್ಕಿ ಅಲ್ಲವೇ? ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾಯಿದೆ ಉಲ್ಲಂಘಿಸಿ, ನಿಯಮ ಉಲ್ಲಂಘನೆ ಮಾಡಿ ಒಂದೇ ಕಂಪೆನಿಗೆ 600 ಕೋಟಿಯ ಟೆಂಡರ್ ಕೊಟ್ಟಿರುವುದು ಕಪ್ಪುಚುಕ್ಕಿ ಅಲ್ಲವೇ? ಎಂಬ ಪ್ರಶ್ನೆಯನ್ನು ಮುಂದಿಟ್ಟರು.ಪೊಲೀಸ್, ಕಂದಾಯ ಇಲಾಖೆ ಸೇರಿ ಎಲ್ಲ ಇಲಾಖೆಗಳಲ್ಲಿ ಪ್ರತಿ ಹುದ್ದೆಗೆ ರೇಟ್ ಕಾರ್ಡ್ ನಿಗದಿ ಮಾಡಿರುವುದು, ಸಬ್ ರಿಜಿಸ್ಟಾçರ್‌ಗಳ ಹುದ್ದೆಯ ನೇಮಕಾತಿಗೆ ಬಹಿರಂಗ ಹರಾಜು, ಅಬಕಾರಿ ಇಲಾಖೆಯಲ್ಲಿ ಉನ್ನತ ಹುದ್ದೆಗೆ ದರ ನಿಗದಿ ಮಾಡಿದ್ದಾರೆ. ಸಾರಿಗೆ ಇಲಾಖೆಯಲ್ಲಿ ಆರ್‌ಟಿಒಗಳ ಬಹಿರಂಗ ಹರಾಜು ನಡೆಯುತ್ತಿದೆ. ಇದು ತಮ್ಮ ಆಡಳಿತದ ಕಳಂಕವಲ್ಲವೇ ಎಂದು ಕೇಳಿದರು. ಬೆಂಗಳೂರಿನಲ್ಲ...
ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ದಾದಿಯರ ನೇಮಕ

ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ದಾದಿಯರ ನೇಮಕ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್‌-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್‌ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನೇಮಕ ಮಾಡಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ರವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ವಿಕಾಸ ಸೌಧದಲ್ಲಿ ಬುಧವಾರ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಸ್ಪರ್ಧಾತಕ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ಭರ್ತಿ ಮಾಡಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.ಸಹಾಯಕ ಪ್ರಾಧ್ಯಾಪಕರು ಹಾಗೂ ನರ್ಸ್‌ಗಳ ನೇಮಕಾತಿ ಸಂದರ್ಭದಲ್ಲಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪದ ನಡುವೆ ವೈದ್ಯಕೀಯ ಕಾಲೇಜು ಸಂಸ್ಥೆಗಳ ಮುಖ್ಯಸ್ಥರು ನೇಮಕಾತಿ ನಡೆಸುತ್ತಿದ್ದ ಪ್ರಸ್ತುತ ನೇಮಕಾತಿ ಪ್ರಕ್ರಿಯೆಯಿಂದ ತೃಪ್ತರಾಗದ ಸಚಿವರು, ಮುಂಬರುವ ಗ್ರೂಪ್‌-ಎ ಮತ್ತು ದಾದಿಯರ ನೇಮಕಾತಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂ...
27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದರೇ ಸಿಎಂ ಸಿದ್ದರಾಮಯ್ಯ?

27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದರೇ ಸಿಎಂ ಸಿದ್ದರಾಮಯ್ಯ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಅದಕ್ಕೆ 27 ಹಕ್ಕುದಾರರಿದ್ದರೂ ಕೇವಲ ಒಬ್ಬರ ಬಳಿ ಸಹಿ ಹಾಕಿಸಿಕೊಳ್ಳಲಾಗಿದೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ನಡೆಸಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಜಮೀನಿನ ಮೂಲ ಹಕ್ಕುದಾರರು, ಇತಿಹಾಸದ ಕುರಿತು ವಿವರಿಸಿದರು. ಸಿಎಂ ಸಿದ್ದರಾಮಯ್ಯ ಖರೀದಿಸಿದ ಜಾಗ ನಿಂಗ ಎಂಬುವರಿಗೆ ಸೇರಿದ ಜಮೀನಾಗಿದ್ದು, 1936 ರಲ್ಲಿ ನಿಂಗ ಜಮೀನು ಖರೀದಿಸಿದ್ದರು. ಅವರು 28 ವರ್ಷಗಳ ಹಿಂದೆ ನಿಧನರಾಗಿದ್ದು, ಅವರ ಪತ್ನಿ ನಿಂಗಮ್ಮ 1990 ರಲ್ಲಿ ಮೃತರಾಗಿದ್ದರು. ಇದು ನಿಂಗ ಮತ್ತು ನಿಂಗಮ್ಮ ಅವರ ಸ್ವಯಾರ್ಜಿತ ಆಸ್ತಿಯಾಗಿದ್ದು, ಅವರ ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಾಗಿದೆ. ನಿಂಗ ಅವರಿಗೆ ಮೂರು ಮಕ್ಕಳಿದ್ದು, ಅವರ ಕುಟುಂಬದವರು 27 ಜನರಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ದೇವರಾಜು ಎಂಬ ಒಬ್ಬ ವ್ಯಕ್ತಿಯಿಂದ ಮಾತ್ರ ಸಹಿ ಹಾಕಿಸಿಕೊಂಡಿದ್ದಾರೆ ಎಂದು ವಿವರಿಸಿದರು.1968 ರಲ್...
ಬೌರಿಂಗ್ ಹಾಸ್ಪಿಟಲ್ ನೆಲಸಮಗೊಳಿಸಿ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ತಯಾರಿ

ಬೌರಿಂಗ್ ಹಾಸ್ಪಿಟಲ್ ನೆಲಸಮಗೊಳಿಸಿ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ತಯಾರಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಸದುದ್ದೇಶದಿಂದ ಶಿವಾಜಿ ನಗರದಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಾ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ.ಈ ಹಿಂದೆ ಇದ್ದ ಬೌರಿಂಗ್ ಆಸ್ಪತ್ರೆಯನ್ನು ನೆಲಸಮಗೊಳಿಸಿ ನೂತನ ಹತ್ತು ಅಂತಸ್ತಿನ 500 ಹಾಸಿಗೆಗಳ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸೋಮವಾರ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಭೇಟಿ ನೀಡಿದ ವೇಳೆ ವರಿದಿಗಾರರಿಗೆ ಹೇಳಿದರು.ಇದೆ ವೇಳೆ ಅಲ್ಲಿನ ಡೆಂಘೀ ವಾರ್ಡ್ ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಅಸ್ಪತ್ರೆಯಲ್ಲಿ ವೈದ್ಯರು ಸೂಕ್ತವಾದ ಚಿಕಿತ್ಸೆ ನೀಡುತ್ತಿದ್ದಾರೆಯೇ? ಬೆಳಗಿನ ಉಪಹಾರ, ಮಧ್ಯಾಹ್ನಾದ ಬೋಜನ ಸಮಯಕ್ಕೆ ಸರಿಯಾಗಿ ನೀಡುತ್ತಿದ್ದಾರೆಯೇ ಎಂದು ರೋಗಿಗಳಿಂದ ಮಾಹಿತಿ ಪಡೆದುಕೊಂಡರು.ಅಟಲ್...
ಬಿಜೆಪಿ-ಜೆಡಿಎಸ್‌ನಿಂದ ಬಡಜನರ ವಿರುದ್ದ ಪಾದಯಾತ್ರೆ?

ಬಿಜೆಪಿ-ಜೆಡಿಎಸ್‌ನಿಂದ ಬಡಜನರ ವಿರುದ್ದ ಪಾದಯಾತ್ರೆ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
 ಮಂಡ್ಯ: ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಮಂಡ್ಯದಲ್ಲಿ ಮಂಗಳವಾರ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿ, ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು. “ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಧಮ್ ಇಲ್ಲ. ಹೀಗಾಗಿ ಮಾಧ್ಯಮಗಳಲ್ಲಿ ಕೇವಲ ನನ್ನ ಮತ್ತು ಕುಮಾರಸ್ವಾಮಿ ಅವರ ವಿಚಾರವನ್ನೇ ಮಾಧ್ಯಮಗಳು ತೆಗೆದುಕೊಳ್ಳುತ್ತಿವೆ” ಪಾದಯಾತ್ರೆ ಬಗ್ಗೆ ಲೇವಡಿ ಮಾಡಿದರು.“ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದ್ದಾರೆ. ಈ ರಾಜ್ಯದ ಜನ ಕಾಂಗ್ರೆಸ್ ಗೆ ಶೇ. 43 ರಷ್ಟು ಮತ ನೀಡಿ 136 ಸ್ಥಾನ ನೀಡಿದ್ದಾರೆ. ಮಂಡ್ಯದಲ್ಲಿ 7 ಸ್ಥಾನ ಕೊಟ್ಟಿದ್ದಾರೆ. ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ಇದನ್ನು ನಿಲ್ಲಿಸಲು ಸರ್ಕಾರ ಬೀಳಿಸುವ ಹುನ್ನಾರ ಮ...
ಹಿಂದು ಸೇವಾ ಪ್ರತಿಷ್ಠಾನ: ‘ಮನೆ ಮನಗಳ ಭೂಷಣ’ ಕೃತಿ ಬಿಡುಗಡೆ

ಹಿಂದು ಸೇವಾ ಪ್ರತಿಷ್ಠಾನ: ‘ಮನೆ ಮನಗಳ ಭೂಷಣ’ ಕೃತಿ ಬಿಡುಗಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವನವಾಸಿ ಕಲ್ಯಾಣ ಕರ್ನಾಟಕ ಮತ್ತು ಹಿಂದು ಸೇವಾ ಪ್ರತಿಷ್ಠಾನ ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕ ಸ್ವರ್ಗೀಯ ಶ್ರೀ ಕೆ. ಎಸ್.ನಾಗಭೂಷಣ ಅವರ ಸ್ಮರಣಾರ್ಥ 'ಮನೆ ಮನಗಳ ಭೂಷಣ' ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಆಗಸ್ಟ್ 6, 2024 ಸಂಜೆ ಶಂಕರಪುರದ ರಂಗರಾವ್ ರಸ್ತೆಯ ಉತ್ತುಂಗದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕ ಸು. ರಾಮಣ್ಣ, ಹಿರಿಯ ಕಾರ್ಯಕರ್ತ ವೈ.ಕೆ.ರಾಘವೇಂದ್ರ ರಾವ್, ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಭೇಂಡೆ, ಸಹಸರಕಾರ್ಯವಾಹ ಮುಕುಂದ ಸಿ.ಆರ್. ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು....
ವಯನಾಡು ಸಂತ್ರಸ್ತರಿಗಾಗಿ ಮಿಡಿದ ಕರುನಾಡು ಹೃದಯಗಳು.. BTM, ಜಯನಗರ ಕ್ಷೇತ್ರಗಳಿಂದ 9 ಟ್ರಕ್‌ಗಳಲ್ಲಿ ಅಹಾರ, ಅಗತ್ಯವಸ್ತು ರವಾನೆ..

ವಯನಾಡು ಸಂತ್ರಸ್ತರಿಗಾಗಿ ಮಿಡಿದ ಕರುನಾಡು ಹೃದಯಗಳು.. BTM, ಜಯನಗರ ಕ್ಷೇತ್ರಗಳಿಂದ 9 ಟ್ರಕ್‌ಗಳಲ್ಲಿ ಅಹಾರ, ಅಗತ್ಯವಸ್ತು ರವಾನೆ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೇರಳದ ವಯನಾಡಿನಲ್ಲಿ, ಹಾಗೂ ಕರಾವಳಿಯ ಶಿರೂರಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದ‌ ಬಡಪಾಯಿಗಳ ಬಗ್ಗೆ ಬೆಂಗಳೂರಿನ ಬಿಟಿಎಂ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರಗಳ ಜನರು ಅನುಕಂಪ ತೋರಿದ್ದಾರೆ. ಬಿಟಿಎಂ ಮತ್ತು ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ವಯನಾಡು ಮತ್ತು ಶಿರೂರು ಸಂಭವಿಸಿದ ಭೂಕುಸಿತದ ದುರಂತಕ್ಕೆ ಸ್ಪಂದಿಸಲು ಪರಿಹಾರ ಸಾಮಾಗ್ರಿಗಳನ್ನು ರವಾನಿಸಿದ್ದಾರೆ.ಬೆಂಗಳೂರಿನಲ್ಲಿ ಇಂದು (ಮಂಗಳವಾರ) ಸಾರಿಗೆ ಮತ್ತು ಮುಜರಾಯಿ‌ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತಿಯಲ್ಲಿ, ಆಹಾರ, ಸಾಮಾಗ್ರಿಗಳನ್ನು ಹೊತ್ತ ಸುವಾರು 9 ಟ್ರಕ್ ಗಳಿಗೆ ಉಪಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಚಾಲನೆ ನೀಡಿದರು. ಸದರಿ ಟ್ರಕ್ ಗಳೊಂದಿಗೆ ಜಯನಗರದ ಮಾಜಿಬಶಾಸಕಿ ಸೌಮ್ಯ ರೆಡ್ಡಿ, ಬಿಬಿಎಂಪಿ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಮಾಜಿ ಕಾರ್ಪೊರೇಟರ್ ನಾಗರಾಜು, ಮಂಜುನಾಥ್‌ ಅವರನ್ನೊಳಗೊಂಡ ನಾಯಕರ ತಂಡ ಈ ಸಾಮಾಗ್ರಿಗಳ ಜೊತೆ ತೆರಳಿದೆ.ಕರ್ನಾಟಕದ ಶಿರೂರು ಮತ್ತು ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ, ಪ್ರವಾಹದ ದುರಂತಕ್ಕೆ ನೂರಾರು ಜನರು ತಮ್ಮ ಪ್ರಾಣಗಳನ್ನು ಕಳೆದುಕೊಂಡಿದ್ದು, ಅಪಾರ ಆಸ್ತಿಪಾಸ್ತ...