Monday, August 10

ವಿದೇಶ

ಹೈಕಮಾಂಡ್ ಹೇಳಿದರೆ ಅಧಿಕಾರ ಬಿಡುತ್ತೇನೆ: ಸಿಎಂ ಸಿದ್ದರಾಮಯ್ಯ

ಹೈಕಮಾಂಡ್ ಹೇಳಿದರೆ ಅಧಿಕಾರ ಬಿಡುತ್ತೇನೆ: ಸಿಎಂ ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಹೇಳಿಕೆಯಿಂದ ಕರ್ನಾಟಕ ಕಾಂಗ್ರೆಸ್ (Karnataka Congress)ನಲ್ಲಿ ಅಧಿಕಾರ ಹಂಚಿಕೆ ಕುರಿತ ಚರ್ಚೆ ಮತ್ತೆ ತೀವ್ರಗೊಂಡಿದೆ. ‘ಹೈಕಮಾಂಡ್ ಹೇಳಿದರೆ ಅಧಿಕಾರ ಬಿಟ್ಟುಕೊಡುತ್ತೇನೆ’ ಎಂಬ ಅವರ ಮಾತು ರಾಜಕೀಯ ವಲಯದಲ್ಲಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ.ಸಿದ್ದರಾಮಯ್ಯ ಅವರು ಮಾರ್ಚ್ 7ರಂದು ದಾಖಲೆಯ 17ನೇ ರಾಜ್ಯ ಬಜೆಟ್ ಮಂಡಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಬಜೆಟ್ ಮಂಡನೆಯ ಮರುದಿನ ತವರು ಜಿಲ್ಲೆ ಮೈಸೂರು (Mysuru)ಗೆ ಭೇಟಿ ನೀಡಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.ಈ ವೇಳೆ ‘ಮುಂದಿನ ಇನ್ನೆರಡು ಬಜೆಟ್‌ಗಳನ್ನೂ ನೀವೇ ಮಂಡಿಸಲಿದ್ದೀರಾ?’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದು ಹೈಕಮಾಂಡ್‌ನ ನಿರ್ಧಾರಕ್ಕೆ ಅವಲಂಬಿತವಾಗಿರುತ್ತದೆ ಎಂದು ಹೇಳಿದರು.“ಹೈಕಮಾಂಡ್ (High Command) ಏನು ತೀರ್ಮಾನ ಮಾಡಿದರೂ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ಹೈಕಮಾಂಡ್ ಬಿಟ್ಟುಬಿಡು ಎಂದರೆ ಬಿಡುತ್ತೇನೆ” ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಈ ಹೇಳಿಕೆಯೊಂದಿಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಅಧ...
ಎಲ್‌ಪಿಜಿ ದರ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

ಎಲ್‌ಪಿಜಿ ದರ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಗೃಹ ಬಳಕೆಯ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ದರವನ್ನು ₹60 ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.ಇತ್ತೀಚೆಗೆ ದೇಶದ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರಗಳನ್ನು ಮತ್ತೊಮ್ಮೆ ಪರಿಷ್ಕರಿಸಿದ್ದು, ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ ₹60 ಹಾಗೂ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು ₹115 ಹೆಚ್ಚಳ ಮಾಡಲಾಗಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಮತ್ತೊಂದು ಭಾರೀ ಹೊರೆ ಬಿದ್ದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಈಗಾಗಲೇ ದುಬಾರಿ ಬೆಲೆಯಿಂದ ಸಂಕಷ್ಟದಲ್ಲಿರುವ ಸಾಮಾನ್ಯ ಜನತೆಗೆ ಈ ನಿರ್ಧಾರ ದೊಡ್ಡ ಹೊಡೆತವಾಗಿದೆ. ಚುನಾವಣೆಯ ಮುನ್ನ ಅಡುಗೆ ಅನಿಲ, ಪೆಟ್ರೋಲ್ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಿ, ನಂತರ ಮತ್ತೆ ಬೆಲೆ ಏರಿಕೆ ಮಾಡುವುದು ಪ್ರಧಾನಿ ನರೇಂದ್ರ ಮೋದಿ ಅವರ ತಂತ್ರಗಾರಿಕೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತೇವೆ ಮತ್ತು ದೇಶವನ್ನು ಆರ್...
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ

ದೇಶ, ಪ್ರಮುಖ ಸುದ್ದಿ, ವಿದೇಶ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಉಂಟಾದ ಯುದ್ಧ ಸನ್ನಿವೇಶದ ನಡುವೆ ಭಾರತದಲ್ಲಿ ಗೃಹ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹60 ಹೆಚ್ಚಿಸಲಾಗಿದೆ.ಈ ಹೆಚ್ಚಳದೊಂದಿಗೆ ದೆಹಲಿಯಲ್ಲಿ (Delhi) ಒಂದು ಸಿಲಿಂಡರ್ ಬೆಲೆ ₹853ರಿಂದ ₹913ಕ್ಕೆ ಏರಿಕೆಯಾಗಿದೆ.ಇದರ ಜೊತೆಗೆ 19 ಕಿಲೋಗ್ರಾಂ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನೂ ₹115 ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ₹1,883 ಆಗಿದ್ದು, ಮುಂಬೈ (Mumbai)ನಲ್ಲಿ ₹1,835ಕ್ಕೆ ತಲುಪಿದೆ.ಇದೇ ವೇಳೆ ಇರಾನ್ (Iran)–ಇಸ್ರೇಲ್ (Israel) ನಡುವಿನ ಸಂಘರ್ಷವು ಜಾಗತಿಕ ಇಂಧನ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಇದರ ಪರಿಣಾಮವಾಗಿ ದೇಶೀಯ ಮಾರುಕಟ್ಟೆಯಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.ಆದರೆ ಭಾರತದಲ್ಲಿ ಇಂಧನ ಕೊರತೆ ಉಂಟಾಗುವುದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀ...
‘ಇರಾನ್-ಇಸ್ರೇಲ್ ಸಂಘರ್ಷ ತಂದ ಸಂಕಷ್ಟ; ಅನಿವಾಸಿ ಭಾರತೀಯರ ರಕ್ಷಣೆಗೆ ತಕ್ಷಣ ಮಧ್ಯ ಪ್ರವೇಶಿಸಲು ಕೇಂದ್ರಕ್ಕೆ ಪದ್ಮರಾಜ್ ಆಗ್ರಹ

‘ಇರಾನ್-ಇಸ್ರೇಲ್ ಸಂಘರ್ಷ ತಂದ ಸಂಕಷ್ಟ; ಅನಿವಾಸಿ ಭಾರತೀಯರ ರಕ್ಷಣೆಗೆ ತಕ್ಷಣ ಮಧ್ಯ ಪ್ರವೇಶಿಸಲು ಕೇಂದ್ರಕ್ಕೆ ಪದ್ಮರಾಜ್ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: 'ಮಧ್ಯಪ್ರಾಚ್ಯ ಸಂಘರ್ಷ' ಹಿನ್ನೆಲೆಯಲ್ಲಿ ಅನಿವಾಸಿ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ಆಗ್ರಹಿಸಿದ್ದಾರೆ.ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ದಿನೇದಿನೇ ಉಲ್ಬಣಿಸುತ್ತಿರುವ ಯುದ್ಧದ ಪರಿಸ್ಥಿತಿಯು ಅಲ್ಲಿ ನೆಲೆಸಿರುವ ಲಕ್ಷಾಂತರ ತುಳುನಾಡಿನವರು ಸೇರಿದಂತೆ ಭಾರತೀಯರ ನೆಮ್ಮದಿಯನ್ನು ಕಸಿದುಕೊಂಡಿದೆ. ಇಸ್ರೇಲ್, ಇರಾನ್, ದುಬೈ, ಕತಾರ್, ಬಹರೇನ್ ಸೇರಿದಂತೆ ಯುದ್ಧ ಪೀಡಿತ ಪ್ರದೇಶಗಳಲ್ಲಿನ ಅನಿಶ್ಚಿತತೆ ಅತ್ಯಂತ ಕಳವಳಕಾರಿಯಾಗಿದ್ದು, ಕೇಂದ್ರ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪದ್ಮರಾಜ್ ಪೂಜಾರಿ ಪ್ರತಿಪಾದಿಸಿದ್ದಾರೆ.ಪ್ರತಿದಿನದ ಸ್ಫೋಟದ ಸದ್ದುಗಳು ಮತ್ತು ಅಸುರಕ್ಷಿತ ಭಾವನೆ ಅಲ್ಲಿನ ಕುಟುಂಬಗಳು, ವಿಶೇಷವಾಗಿ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ತೀವ್ರವಾದ ಕೆಟ್ಟ ಪರಿಣಾಮ ಬೀರುತ್ತಿದೆ. ಯುದ್ಧದ ಸನ್ನಿವೇಶ ಮಕ್ಕಳ ಸಹಜ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತಿದ್ದು, ಅಲ್ಲಿನ ಭಾರತೀಯರು ಪ್ರತಿಕ್ಷಣವನ್ನೂ ಆತಂಕದಲ್ಲೇ ಕಳೆಯುವಂತಾಗಿದೆ ಎಂದವರ...
ಅವಕಾಶ”ಗಳ ವೇದಿಕೆ ಕಲ್ಪಿಸಲು ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ; ಡಾ. ಶರಣಪ್ರಕಾಶ ಆರ್. ಪಾಟೀಲ್

ಅವಕಾಶ”ಗಳ ವೇದಿಕೆ ಕಲ್ಪಿಸಲು ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ; ಡಾ. ಶರಣಪ್ರಕಾಶ ಆರ್. ಪಾಟೀಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿ ಐಟಿಐಗಳ, ಜಿಟಿಟಿಸಿ ಮೂಲಕ ಯುವ ಸಮದಾಯಕ್ಕೆ ಹೆಚ್ಚಿನ ಕೌಶಲ್ಯ ತರಬೇತಿ ಒದಗಿಸಲು ಕೆ-ಕ್ವೆಸ್ಟ್‌ ಯೋಜನೆಗೆ ಘೋಷಿರುವುದು ಗಮನಾರ್ಹ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 17ನೇ ಬಜೆಟ್‌ ಮಂಡಿದ ನಂತರ ಪ್ರತಿಕ್ರಿಯೆ ನೀಡಿರುವ ಡಾ. ಪಾಟೀಲ್‌, ಯುವ ಸಮುದಾಯಕ್ಕೆ ಆದ್ಯತೆ ನೀಡಲಾಗಿದೆ. ಇದು ಸ್ವಾಗತಾರ್ಹ ಕ್ರಮ ಎಂದರು. ಎಡಿಬಿ ಸಹಭಾಗಿತ್ವದಲ್ಲಿ ಒಟ್ಟು 1,386 ಕೋಟಿ ರೂ.ಗಳ ವೆಚ್ಚದಲ್ಲಿ ಐದು ವರ್ಷಗಳ ಅವಧಿಯ "K-QUEST" (KARNATAKA – Quality Upgradation for Employment and Skills Transformation) ಯೋಜನೆಯನ್ನು ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರಿಂದ ಗುಣಮಟ್ಟದ ಹಾಗೂ ಕೌಶಲ್ಯಭರಿತ ತರಬೇತಿ, ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು. ನಮ್ಮ ನಾಡಿನ ಶಕ್ತಿ ಅಡಗಿರುವುದು ಯುವ ಶಕ್ತಿಯಲ್ಲಿ. ಯುವ ...
‘ಅತೀ ಹೆಚ್ಚು ಸಾಲ ಮಾಡಿರುವ ಬಜೆಟ್ ಇದಾಗಿದೆ’ : ಬಸವರಾಜ್ ಬೊಮ್ಮಾಯಿ ಟೀಕೆ

‘ಅತೀ ಹೆಚ್ಚು ಸಾಲ ಮಾಡಿರುವ ಬಜೆಟ್ ಇದಾಗಿದೆ’ : ಬಸವರಾಜ್ ಬೊಮ್ಮಾಯಿ ಟೀಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ ಕಳಪೆ ಬಜೆಟ್. ಅಭಿವೃದ್ಧಿ ಶೂನ್ಯ, ಪ್ರಗತಿ ರಹಿತವಾಗಿರುವುದರ ಜೊತೆಗೆ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್ ಇದಾಗಿದೆ ಎಂದು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.ಸುಮಾರು ₹1.32 ಲಕ್ಷ ಕೋಟಿ ಸಾಲ ಮಾಡಿ, ಮತ್ತೊಂದೆಡೆ ಸುಮಾರು ₹25 ಸಾವಿರ ಕೋಟಿ ಹೊಸ ತೆರಿಗೆ ವಿಧಿಸಿ, ₹32 ಸಾವಿರ ಕೋಟಿ ಕೊರತೆಯ ಬಜೆಟ್ ಮಂಡನೆ ಮಾಡಿದ್ದಾರೆ. ದಿಕ್ಕು-ದೆಸೆ ಇಲ್ಲದ ಈ ಬಜೆಟ್ ರಾಜ್ಯವನ್ನು ಸಾಲದ ಶೂಲಕ್ಕೆ ತೆಗೆದುಕೊಂಡು ಹೋಗುವಂತಾಗಿದೆ. ಇದರ ಪರಿಣಾಮ ರಾಜ್ಯದ ಹಣಕಾಸಿನ ಮೇಲೆ ದೂರಗಾಮಿ ಪರಿಣಾಮ ಬೀರುವ ಸಾಧ್ಯತೆ ಇದೆ. ಇದು ರಾಜ್ಯವನ್ನು ಕನಿಷ್ಠ 10 ರಿಂದ 15 ವರ್ಷ ಹಿಂದೆ ತಳ್ಳುವಂತಾಗಬಹುದು. 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳಿಂದ ಇಂತಹ ಬಜೆಟ್ ಬರುತ್ತದೆ ಎಂದು ನಿರೀಕ್ಷಿಸಿರಲಿಲ್ಲ, ಆದ್ದರಿಂದ ನಿರಾಸೆಯಾಗಿದೆ ಎಂದವರು ಹೇಳಿದ್ದಾರೆ.ನೀರಾವರಿಗೆ ಕೇವಲ ₹22 ಸಾವಿರ ಕೋಟಿ ಮಾತ್ರ ಮೀಸಲಿಡಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಕನಿಷ್ಠ ₹25 ಸಾವಿರ ಕೋಟಿ ಮೀಸಲಿಡಬೇಕಾಗಿತ್ತು. ಆದರೆ, ಅದರ ಕುರಿತು ಸಮರ್ಪಕ ಅನುದಾನವನ್ನು ...

‘ರಾಜ್ಯದ ಬೊಕ್ಕಸದ ಬಹುಪಾಲು ವೋಟ್ ಬ್ಯಾಂಕ್ ರಾಜಕಾರಣಕ್ಕೆ ಮೀಸಲು’; ಸರ್ಕಾರದ ವಿರುದ್ಧ ಬಿಜೆಪಿ ಟೀಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ ರಾಜ್ಯ ಬಜೆಟ್‌ ಅಲ್ಪಸಂಖ್ಯಾತರನ್ನು ಓಲೈಸುವಂತಾಗಿದೆ ಎಂದು ಪ್ರತಿಪಕ್ಷ ಬಿಜೆಪಿ (BJP) ತೀವ್ರ ಟೀಕಿಸಿದೆ. ಮುಸ್ಲಿಂ ಸಮುದಾಯದವರನ್ನು ‘ಬ್ರದರ್ಸ್’ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾ ಬಂದಿರುವುದನ್ನೇ ಉಲ್ಲೇಖಿಸಿ, ಈ ಬಾರಿ ಮಂಡಿಸಲಾದ ಬಜೆಟ್ ಅನ್ನು ‘ಬ್ರದರ್ಸ್ ಬಜೆಟ್’ ಎಂದು ಬಿಜೆಪಿ ವ್ಯಂಗ್ಯವಾಡಿದೆ.ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕಾಗಿ ಅನೇಕ ಯೋಜನೆಗಳನ್ನು ಘೋಷಿಸಿರುವುದನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಪಟ್ಟಿ ಮಾಡಿ, ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಪಸಂಖ್ಯಾತರ ಶಾಲೆಗಳನ್ನು ಕೆಪಿಎಸ್ (KPS) ಮಾದರಿಯಲ್ಲಿ ಉನ್ನತೀಕರಣಗೊಳಿಸಲು ₹1000 ಕೋಟಿ ಮೀಸಲು, ಅಲ್ಪಸಂಖ್ಯಾತ ವಸತಿ ಶಾಲೆಗಳ ಆರಂಭ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿ ಸೇರಿದಂತೆ ಹಲವು ಯೋಜನೆಗಳನ್ನು ಸರ್ಕಾರ ಪ್ರಕಟಿಸಿದೆ.ಇದರ ಜೊತೆಗೆ ಅಲ್ಪಸಂಖ್ಯಾತ ಕಾಲೋನಿಗಳ ಮೂಲಸೌಕರ್ಯ ಅಭಿವೃದ್ಧಿಗೆ ನೂರಾರು ಕೋಟಿ ರೂಪಾಯಿ ಮೀಸಲು, ನಿರ್ಗತಿಕರಿಗೆ ಎ...
ಆಲಮಟ್ಟಿ ಅಣೆಕಟ್ಟಿನ ಎತ್ತರ ವಿಚಾರ; ಕೇಂದ್ರದ ಮಧ್ಯಸ್ಥಿಕೆಗೆ ಕರ್ನಾಟಕ ಮನವಿ

ಆಲಮಟ್ಟಿ ಅಣೆಕಟ್ಟಿನ ಎತ್ತರ ವಿಚಾರ; ಕೇಂದ್ರದ ಮಧ್ಯಸ್ಥಿಕೆಗೆ ಕರ್ನಾಟಕ ಮನವಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್‌ಗೆ ಹೆಚ್ಚಿಸುವ ಯೋಜನೆಗೆ ಆಂಧ್ರಪ್ರದೇಶ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ (D.K. Shivakumar) ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.ಆಂಧ್ರಪ್ರದೇಶ ಸರ್ಕಾರವು ಗೆಜೆಟ್ ಅಧಿಸೂಚನೆ ಹೊರಡಿಸದಂತೆ ಹಾಗೂ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಕೇಂದ್ರಕ್ಕೆ ಪತ್ರ ಬರೆದಿದೆ ಎಂದು ಅವರು ತಿಳಿಸಿದರು. “ನ್ಯಾಯಮಂಡಳಿಯ ಆದೇಶದಂತೆ ಕೇಂದ್ರವು ಮಧ್ಯಪ್ರವೇಶಿಸಿ ಯೋಜನೆ ಮುಂದುವರಿಯಲು ಅವಕಾಶ ನೀಡಬೇಕು” ಎಂದು ಮನವಿ ಮಾಡಿದರು.ಸೆಪ್ಟೆಂಬರ್ 16, 2025ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಯೋಜನೆಗಾಗಿ 1.33 ಲಕ್ಷ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಮೂರು ಹಂತಗಳಲ್ಲಿ 70,000 ಕೋಟಿ ರೂಪಾಯಿ ಬಿಡುಗಡೆ ಮಾಡುವ ಯೋಜನೆಯೂ ಇದೆ ಎಂದು ಅವರು ವಿವರಿಸಿದರು. 2010ರಲ್ಲಿ ನ್ಯಾಯಮಂಡಳಿಯು ನೀರಿನ ಬಳಕೆಯನ್ನು 177 ಟಿಎಂಸಿಯಿಂದ 330 ಟಿಎಂಸಿಗೆ ಹೆಚ್ಚಿಸಲು ಅನುಮತಿ ನೀಡಿತ್...
ಫೋನ್ ಕದ್ದಾಲಿಕೆಯಂತಹ ಕುತಂತ್ರ ಬುದ್ದಿಯಿಂದಲೇ ಪ್ರಧಾನಿ ಹುದ್ದೆ ಕಳೆದುಕೊಂಡಿದ್ದ ಗೌಡರು

ಫೋನ್ ಕದ್ದಾಲಿಕೆಯಂತಹ ಕುತಂತ್ರ ಬುದ್ದಿಯಿಂದಲೇ ಪ್ರಧಾನಿ ಹುದ್ದೆ ಕಳೆದುಕೊಂಡಿದ್ದ ಗೌಡರು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 'ತಮ್ಮ ಕುತಂತ್ರ ಬುದ್ದಿಯಿಂದಲೇ ದೇವೇಗೌಡರು ಪ್ರಧಾನಿ ಹುದ್ದೆ ಕಳೆದುಕೊಂಡಿದ್ದು' ಎಂದು ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಫೋನ್ ಕದ್ದಾಲಿಕೆಯಂತಹ ಗೂಢಚರ್ಯೆಯ ಪಾಠವನ್ನು ಅವರ ಪೂಜ್ಯ ತಂದೆಯವರೇ ಹೇಳಿಕೊಟ್ಟಿರಬಹುದು ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.ಬೇಹುಗಾರಿಕೆ ಕುರಿತ ಹೆಚ್ಡಿಕೆ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ತನ್ನನ್ನು ಪ್ರಧಾನಿ ಮಾಡಿದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಸೀತಾರಾಂ ಕೇಸರಿಯವರ ವಿರುದ್ಧವೇ ಗೂಢಚರ್ಯೆ ಮಾಡಿದ್ದ ಕಾರಣಕ್ಕೆ ಕಾಂಗ್ರೆಸ್ ಪಕ್ಷ ತನ್ನ ಬೆಂಬಲವನ್ನು ಹಿಂದೆಗೆದುಕೊಂಡಿರುವುದು ಇತಿಹಾಸದ ಪುಟಗಳಲ್ಲಿದೆ. ಈ ಅಪನಂಬಿಕೆ ಮತ್ತು ಸಣ್ಣತನಗಳಿಂದಾಗಿ ಕನ್ನಡಿಗರೊಬ್ಬರು ಇನ್ನಷ್ಟು ಕಾಲ ಪ್ರಧಾನಿಯಾಗುವ ಅವಕಾಶ ತಪ್ಪಿಹೋಯಿತು ಎನ್ನುವುದು ವಿಷಾದನೀಯ ವಾಸ್ತವ ಎಂದಿದ್ದಾರೆ....
RTE ಶುಲ್ಕ ಮರುಪಾವತಿ: ಆನ್‌ಲೈನ್ ಬೇಡಿಕೆ ಸಲ್ಲಿಕೆಗೆ ಮಾರ್ಚ್ 31ರವರೆಗೆ ಅವಕಾಶ

RTE ಶುಲ್ಕ ಮರುಪಾವತಿ: ಆನ್‌ಲೈನ್ ಬೇಡಿಕೆ ಸಲ್ಲಿಕೆಗೆ ಮಾರ್ಚ್ 31ರವರೆಗೆ ಅವಕಾಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಆರ್‌ಟಿಇ (RTE) ಅಡಿಯಲ್ಲಿ ದಾಖಲಾದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. 2025-26ನೇ ಸಾಲಿನ ಮೊದಲ ಹಾಗೂ ಎರಡನೇ ಕಂತಿನ ಬಾಕಿ ಶುಲ್ಕಕ್ಕಾಗಿ ಆನ್‌ಲೈನ್ ಮೂಲಕ ಬೇಡಿಕೆ ಸಲ್ಲಿಸಲು ಮಾರ್ಚ್ 31, 2026ರವರೆಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ.ಈ ಮೊದಲು ಫೆಬ್ರವರಿ 28, 2026ಕ್ಕೆ ಅಂತ್ಯಗೊಂಡಿದ್ದ ಅರ್ಜಿ ಸಲ್ಲಿಕೆ ಗಡುವನ್ನು ಇದೀಗ ಒಂದು ತಿಂಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. 2025-26ನೇ ಸಾಲಿನಲ್ಲಿ ಆರ್‌ಟಿಇ ಸೀಟುಗಳ ಅಡಿಯಲ್ಲಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡಿರುವ ಎಲ್ಲಾ ಖಾಸಗಿ ಅನುದಾನರಹಿತ ಶಾಲೆಗಳಿಗೆ ಈ ವಿಸ್ತರಣೆ ಅನ್ವಯಿಸುತ್ತದೆ.ಇದೇ ವೇಳೆ, ಇದು ಅಂತಿಮ ಅವಕಾಶವಾಗಿದ್ದು, ಇದರ ಬಳಿಕ ಯಾವುದೇ ಕಾರಣಕ್ಕೂ ಗಡುವು ವಿಸ್ತರಣೆ ಮಾಡುವುದಿಲ್ಲ ಎಂದು ಇಲಾಖೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಈಗಾಗಲೇ ಮೊದಲ ಕಂತಿನ ಬೇಡಿಕೆ ಸಲ್ಲಿಸದ ಶಾಲೆಗಳು ಹಾಗೂ ಎರಡನೇ ಕಂತಿನ ಮರುಪಾವತಿ ನಿರೀಕ್ಷೆಯಲ್ಲಿರುವ ಶಾಲೆಗಳು ತಂತ್ರಾಂಶದ ಮೂಲಕ ತಕ್ಷಣ ಪ್ರಕ್ರಿಯೆ ಪೂರ್ಣಗೊಳಿಸಬ...