
‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: 2022-23ನೇ ಸಾಲಿನ “ನಮ್ಮ ಹೊಲ ನಮ್ಮ ದಾರಿ” ಯೋಜನೆಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಮತ್ತು ರಾಜ್ಯ ಸರ್ಕಾರದ ಲೆಕ್ಕ ಶೀರ್ಷಿಕೆ 3054ರಡಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.ಈ ಹಿಂದೆ ನರೇಗಾ ಯೋಜನೆಯಡಿ ಗ್ರಾಮೀಣ ಸರ್ವಋತು ಸಂಪರ್ಕ ರಸ್ತೆ ಕಾಮಗಾರಿಗಳಿಗೆ ಶೇ.10ರ ಮಿತಿಯಲ್ಲಿ ಮಾತ್ರ ಅವಕಾಶ ಇತ್ತು. ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸಲು ವ್ಯಾಪಕ ಕ್ರಮ ಕೈಗೊಳ್ಳುವ ಅಗತ್ಯತೆ ಹಿನ್ನೆಲೆಯಲ್ಲಿ 2022-23ರ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದರು.ಆ ಘೋಷಣೆಯ ಅನ್ವಯ, ರೈತರ ಹೊಲ/ಗದ್ದೆ/ತೋಟ/ಜಮೀನುಗಳಿಗೆ ಸಂಪರ್ಕ ರಸ್ತೆ ಕಾಮಗಾರಿಗಳನ್ನು ನರೇಗಾ ಯೋಜನೆಯ ಒಟ್ಟು ಕಾರ್ಮಿಕ ವೆಚ್ಚದ ಶೇ.25ರ ಮಿತಿಯಲ್ಲಿ ಕೈಗೊಳ್ಳಲು ತೀರ್ಮಾನಿಸಲಾಗಿದೆ.ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರಕ್ಕೆ 30 ಕಿಮೀ ನಂತೆ ಒಟ್ಟು 5,670 ಕಿಮೀ ರಸ್ತೆ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಪ್ರತಿ ಕಿಮೀಗೆ ₹12.50 ಲಕ್ಷವೆಂಬ ಅಂದಾಜು ವೆಚ್ಚದಂತೆ ಒಟ್ಟು ₹708.75 ಕೋಟಿ ವೆಚ್ಚ...









