Wednesday, August 12

ವಿದೇಶ

‘ಬಂಗಾಳದ ಚುನಾವಣೆ ನಮಗೆ ರಾಜಕೀಯ, ಅಧಿಕಾರದ ಹೋರಾಟವಲ್ಲ’; ಬಿ.ಎಲ್.ಸಂತೋಷ್

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಬಂಗಾಳದ ಚುನಾವಣೆ ನಮಗೆ ರಾಜಕೀಯ, ಅಧಿಕಾರದ ಹೋರಾಟವಲ್ಲ, ನಾಗರೀಕತೆ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಹೋರಾಟ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆಯ ಕ್ರಮವನ್ನು ಟೀಕಿಸುತ್ತಿರುವ ರಾಜಕೀಯ ಎದುರಾಳಿಗಳನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತವನ್ನು ಉಳಿಸಬೇಕಾದರೆ ನಾವು ಬಂಗಾಳವನ್ನು ಉಳಿಸಬೇಕು. ಎಲ್ಲರ ಆಶೀರ್ವಾದದೊಂದಿಗೆ ಬಂಗಾಳವನ್ನು ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಸಂತೋಷ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಂಗಾಳದ ಚುನಾವಣೆ ನಮಗೆ ರಾಜಕೀಯ, ಅಧಿಕಾರದ ಹೋರಾಟವಲ್ಲ, ನಾಗರೀಕತೆ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಹೋರಾಟ. ಭಾರತವನ್ನು ಉಳಿಸಬೇಕಾದರೆ ನಾವು ಬಂಗಾಳವನ್ನು ಉಳಿಸಬೇಕು. ಎಲ್ಲರ ಆಶೀರ್ವಾದದೊಂದಿಗೆ ಬಂಗಾಳವನ್ನು ಬಿಜೆಪಿ ಗೆದ್ದೇ ಗೆಲ್ಲುತ್ತದೆ. * ಶ್ರೀ ಬಿ. ಎಲ್.‌ ಸಂತೋಷ್‌, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು pic.twitter.com/ulCkovz7yT— BJP Karnataka (@BJP4Karnataka) December 30, 2025...
ಪ್ರಯಾಣಿಕರೇ ಡಕೋಟಾ ಬಿಎಂಟಿಸಿ ಬಸ್‌ ಹತ್ತುವ ಮುನ್ನ ಎಚ್ಚರ ಎಂದ ಪ್ರತಿಪಕ್ಷ ಬಿಜೆಪಿ

ಪ್ರಯಾಣಿಕರೇ ಡಕೋಟಾ ಬಿಎಂಟಿಸಿ ಬಸ್‌ ಹತ್ತುವ ಮುನ್ನ ಎಚ್ಚರ ಎಂದ ಪ್ರತಿಪಕ್ಷ ಬಿಜೆಪಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಡಕೋಟಾ ಬಿಎಂಟಿಸಿ ಬಸ್‌! ಪ್ರಯಾಣಿಕರೇ ಬಸ್‌ ಹತ್ತುವ ಮುನ್ನ ಎಚ್ಚರ ಎಚ್ಚರ ಎಂದು ಪ್ರತಿಪಕ್ಷ ಬಿಜೆಪಿ ಎಚ್ಚರಿಕೆ ನೀಡಿದೆ.ಮಾರ್ಗ ಮಧ್ಯೆ ಕೆಟ್ಟುಹೋಗುವ ಹಾಗೂ ಸಾರಿಗೆ ನಿಗಮದ ಅನೇಕಾನೇಕ ಅವಾಂತರಗಳ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಬಿಎಂಟಿಸಿ ಬಸ್ಸಿನ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮ X ನಲ್ಲಿ ಹಂಚಿಕೊಂಡಿರುವ ಬಿಜೆಪಿ, 'ಭ್ರಷ್ಟ ಕಾಂಗ್ರೆಸ್ ಸರ್ಕಾರ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಸಾರಿಗೆ ಇಲಾಖೆಗೆ ಅನುದಾನ ನೀಡದೆ, ಬಾಕಿ ಉಳಿಸಿಕೊಂಡು ಡಕೋಟಾ ಬಸ್‌ಗಳನ್ನ ರಸ್ತೆಗೆ ಇಳಿಸಿದೆ' ಎಂದು ಟೀಕಿಸಿದೆ.ಒಂದು ಕಡೆ ಬಿಎಂಟಿಸಿ ಬಸ್‌ಗಳು ಸರಿಯಾದ ನಿರ್ವಹಣೆ ಇಲ್ಲದೆ ಅಮಾಯಕರ ಜೀವ ಬಲಿ ಪಡೆದು "ಕಿಲ್ಲರ್‌ ಬಿಎಂಟಿಸಿ" ಎನ್ನುವ ಅಪಖ್ಯಾತಿ ಗಳಿಸಿವೆ. ಇನ್ನೊಂದು ಕಡೆ ಬಸ್‌ಗಳಲ್ಲಿ ಪ್ರಯಾಣಿಸುವುದಕ್ಕೂ ಜನರು ಭಯ ಪಡುವ ಸ್ಥಿತಿ ಎದುರಾಗಿದೆ. ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಸುರಕ್ಷತೆ ಎಂಬುದೇ ಇಲ್ಲವಾಗಿದೆ ಎಂದು ಬಿಜೆಪಿ ಆರೋಪಿಸಿದೆ.'ಇದೇನಾ ನಿಮ್ಮ ಡಕೋಟಾ ಬಸ್‌ ಗ್ಯಾರಂಟಿ? ಎಂದು ಸಾರಿಗ...
ಕೋಗಿಲು ತೆರವು ವಿಷಯ; ಕೇರಳ ಸಿಎಂ ನಡೆಗೆ ಸಿದ್ದರಾಮಯ್ಯ ಆಕ್ಷೇಪ

ಕೋಗಿಲು ತೆರವು ವಿಷಯ; ಕೇರಳ ಸಿಎಂ ನಡೆಗೆ ಸಿದ್ದರಾಮಯ್ಯ ಆಕ್ಷೇಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕಟ್ಟಡ ನೆಲಸಮ ಕಾರ್ಯಾಚರಣೆ ಕುರಿತಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇದನ್ನು ಕೇರಳದ ಚುನಾವಣಾ ರಾಜಕೀಯದ ಭಾಗವೆಂದು ವ್ಯಾಖ್ಯಾನಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಕೇರಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಕಾರಣ, ಅಲ್ಲಿನ ಮುಖ್ಯಮಂತ್ರಿ ಈ ವಿಚಾರವನ್ನು ರಾಜಕೀಯವಾಗಿ ಬಳಸುತ್ತಿದ್ದಾರೆ. ಅದಕ್ಕಾಗಿಯೇ ಅವರು ಕೋಗಿಲು ಪ್ರದೇಶಕ್ಕೆ ಒಬ್ಬ ಶಾಸಕ ಮತ್ತು ರಾಜ್ಯಸಭಾ ಸದಸ್ಯರನ್ನು ಕಳುಹಿಸಿದ್ದಾರೆ” ಎಂದು ಹೇಳಿದರು.ಕೋಗಿಲು ಪ್ರದೇಶದ ನಿವಾಸಿಗಳು ನಿರಾಶ್ರಿತರಾಗಿದ್ದು, ಅವರು ಸರ್ಕಾರಿ ಭೂಮಿಯಲ್ಲಿ ತಾತ್ಕಾಲಿಕ ಗುಡಿಸಲುಗಳಲ್ಲಿ ವಾಸಿಸುತ್ತಿದ್ದರು. ನಿಗಮದ ವತಿಯಿಂದ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. “ಮಾನವೀಯ ದೃಷ್ಟಿಯಿಂದ ನಾವು ಅವರಿಗೆ ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸುತ್ತಿದ್ದೇವೆ” ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. #WATCH | Bengaluru: On Kerala CM Pinarayi ...
KSDL ಮತ್ತು ಕೃಷಿ ಮಾರಾಟ ಇಲಾಖೆ ನೇಮಕಾತಿ ಪರೀಕ್ಷೆ ದಿನಾಂಕ ಬದಲು

KSDL ಮತ್ತು ಕೃಷಿ ಮಾರಾಟ ಇಲಾಖೆ ನೇಮಕಾತಿ ಪರೀಕ್ಷೆ ದಿನಾಂಕ ಬದಲು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: KSDL ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜನವರಿ 10 ಮತ್ತು 12ರ ಬದಲಿಗೆ ಜನವರಿ 18ರಂದು ಪರೀಕ್ಷೆ ನಡೆಸಲು KEA ತೀರ್ಮಾನಿಸಿದೆ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ಪರೀಕ್ಷಾ ದಿನಾಂಕಗಳನ್ನು ಬದಲಾವಣೆ ಮಾಡಲಾಗಿದೆ. ಉಳಿದಂತೆ ಜನವರಿ 19ರ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.ಹೆಚ್ಚಿನ ವಿವರಗಳಿಗೆ KEA ವೆಬ್ ಸೈಟ್ ನಲ್ಲಿ ಲಭ್ಯವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. #KEArecruitment-25: ಕೆ ಎಸ್ ಡಿ ಎಲ್ ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜನವರಿ 10 ಮತ್ತು 12ರ ಬದಲಿಗೆ ಜನವರಿ 18ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ಪರೀಕ್ಷಾ ದಿನಾಂಕಗಳನ್ನು ಬದಲಾವಣೆ ಮಾಡಲಾಗಿದೆ. ಉಳಿದಂತೆ ಜನವರಿ 19ರ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.… pic.twitter.com/Rc7q3H3ABY— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) December 26, 2025...
‘ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ವ್ಯತ್ಯಾಸವಿದೆ’: ಸಿದ್ದರಾಮಯ್ಯ

‘ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ವ್ಯತ್ಯಾಸವಿದೆ’: ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಹಲವರು ಅತಿಕ್ರಮವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದರು, ಅದು ಜನ ವಸತಿಗೆ ಯೋಗ್ಯವಾದ ಸ್ಥಳವಾಗಿರಲಿಲ್ಲ. ಅಲ್ಲಿನ ಕುಟುಂಬಗಳಿಗೆ ಹಲವು ಬಾರಿ ಬೇರೆಡೆಗೆ ಸ್ಥಳಾಂತರ ಆಗುವಂತೆ ನೋಟೀಸ್ ನೀಡಿದ್ದರೂ ಅವರು ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಅವರನ್ನು ಆ ಜಾಗದಿಂದ ತೆರವುಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಉತ್ತರ ಭಾರತದ ಬುಲ್ಡೋಜರ್ ನ್ಯಾಯ ದಕ್ಷಿಣ ಭಾರತಕ್ಕೂ ಬಂದಿದೆ ಎಂಬ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಟೀಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ಅಜಗಜಾಂತರ ವ್ಯತ್ಯಾಸವಿದೆ ಎಂದಿದ್ದಾರೆ.ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಳದಲ್ಲಿದ್ದ ಕುಟುಂಬಗಳಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಮಿಷನರ್ ಅವರ ಜೊತೆ ಮಾತನಾಡಿ, ಅವರೆಲ್ಲರಿಗೂ ತಾತ್ಕಾಲಿಕ ಆಶ್ರಯ, ಊಟ ಇನ್ನಿತರೆ ವ್ಯವಸ್ಥೆ ಮಾಡಿಕೊಡುವಂತೆ ಸೂಚನೆ ನೀಡಿದ್ದೇ...
ಇಡೀ ಕರ್ನಾಟಕವನ್ನೇ ‘ಪೂರ್ವಜರ ಆಸ್ತಿ’ ಎಂದು ಬರೆಸಿಕೊಳ್ಳುವ ಮುನ್ನ ಕಂದಾಯ ಸಚಿವರ ವಿರುದ್ಧ ಕ್ರಮ ಕೈಗೊಳ್ಳಿ; ಬಿಜೆಪಿ ಆಗ್ರಹ

ಇಡೀ ಕರ್ನಾಟಕವನ್ನೇ ‘ಪೂರ್ವಜರ ಆಸ್ತಿ’ ಎಂದು ಬರೆಸಿಕೊಳ್ಳುವ ಮುನ್ನ ಕಂದಾಯ ಸಚಿವರ ವಿರುದ್ಧ ಕ್ರಮ ಕೈಗೊಳ್ಳಿ; ಬಿಜೆಪಿ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ಹಾಗೂ ಕೇರಳ ಸರ್ಕಾರಗಳ ನಡುವೆ ಬುಲ್ಡೋಜರ್ ಬಡಿದಾಟ ನಡೆಯುತ್ತಿದೆ. ತನ್ನ ನಡೆ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಸಮರ್ತಿಸಿಕೊಂಡಿದ್ದು, ಕಾನೂನು ರೀತಿಯ ಕ್ರಮವನ್ನೇ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ.ಬೆಂಗಳೂರು ಹೊರವಲಯದ ಕೋಗಿಲು ಬಳಿ ಸರ್ಕಾರಿ ಜಮೀನಿನಲ್ಲಿ ಮುಸ್ಲಿಂ ಸಮುದಾಯದವರು ಅಕ್ರಮವಾಗಿ ಕಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಒತ್ತುವರಿ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯಾಚರಣೆ ನಡೆಸಿದೆ.ಈ ಬುಲ್ಡೋಜರ್ ಕಾರ್ಯಚರಣೆ ಹಾಗೂ ಸಿದ್ದರಾಮಯ್ಯ ಸರ್ಕಾರದ ಸಮರ್ಥನೆಯನ್ನು ತನ್ನದೇ ಶೈಲಿಯಲ್ಲಿ ಟೀಕಿಸಿರುವ ಪ್ರತಿಪಕ್ಷ ಬಿಜೆಪಿ, ಸಿದ್ದು ಸರ್ಕಾರದ ಕಾನೂನುಬದ್ಧ ಕ್ರಮ ಬಡವರ ಮೇಲಷ್ಟೇ ಯಾಕೆ? ಪ್ರಭಾವಿಗಳ ಮೇಲೆ ಕ್ರಮ ಯಾವಾಗ ಎಂದು ಪ್ರಶ್ನಿಸಿದೆ.ಈ ವಿಚಾರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಕಂದಾಯ ಸಚಿವ ಕೃಷ್ಣ ಬೈರೇಗೌಡರ ವಿರುದ್ಧ ಕೇಳಿಬಂದಿರುವ ಒತ್ತುವರಿ ಆರೋಪವನ್ನು ಪ್ರಸ್ತಾಪಿಸಿದೆ.'ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಂಚನೆಯ ಮುಖ ಬಯಲಾಗಿದೆ. ಕೋಲಾರ ಜಿಲ್ಲೆಯ ನರಸಾಪುರ ಹೋಬಳಿಯ ಗರುಡನಪಾಳ್ಯದಲ...
‘ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚುತ್ತಿಲ್ಲ’; ಜೆಡಿಎಸ್ ಅನುಮಾನಗಳಿಗೆ ದಿನೇಶ್ ಗುಂಡೂರಾವ್ ತೀಕ್ಷ್ಣ ಉತ್ತರ

‘ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚುತ್ತಿಲ್ಲ’; ಜೆಡಿಎಸ್ ಅನುಮಾನಗಳಿಗೆ ದಿನೇಶ್ ಗುಂಡೂರಾವ್ ತೀಕ್ಷ್ಣ ಉತ್ತರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 'ನಾವು ಯಾವುದೇ ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚುತ್ತಿಲ್ಲ' ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ ಎಂಬ ವದಂತಿಗಳ ಬಗ್ಗೆ ಹಾಗೂ ಈ ಕುರಿತ ಮಾಧ್ಯಮ ವರದಿಗಳನ್ನು ಮುಂದಿಟ್ಟು ಪ್ರತಿಪಕ್ಷಗಳು ಟೀಕಿಸುತ್ತಿರುವ ಹಿನ್ನೆಲೆಯಲ್ಲಿ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಸ್ಪಷ್ಟನೆ ನೀಡಿದ್ದಾರೆ.ಜೆಡಿಎಸ್ ನಾಯಕರು ಅಧಿಕಾರಕ್ಕಾಗಿ ಹತಾಶೆಗೊಂಡು ಇಷ್ಟೊಂದು ಕೆಳಮಟ್ಟದ ಸುಳ್ಳು ಸುದ್ದಿಗಳನ್ನು ಹರಡುವುದು ಶೋಭೆ ತರುವಂತದ್ದಲ್ಲ. 'ನಾವು ಯಾವುದೇ ಸರ್ಕಾರಿ ಆಸ್ಪತ್ರೆಯನ್ನು ಮುಚ್ಚುತ್ತಿಲ್ಲ ಎನ್ನುವ ಕನಿಷ್ಠ ಜ್ಞಾನವಿಲ್ಲದೆ ಜನರ ದಾರಿ ತಪ್ಪಿಸುತ್ತಿರುವುದು ನಿಮ್ಮ ರಾಜಕೀಯ ದಿವಾಳಿತನಕ್ಕೆ ಸಾಕ್ಷಿಯಾಗಿದೆ' ಎಂದು ಅವರು ಹೇಳಿದ್ದಾರೆ.'ನಮ್ಮ ಗುರಿ ಬಡವರ ಜೀವ ಉಳಿಸುವುದು, ಸುಳ್ಳು ಹೇಳುವುದಲ್ಲ' ಎಂದು ಸಾಮಾಜಿಕ ಜಾಲತಾಣ X ನಲ್ಲಿ ಬರೆದುಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಎಂದಿಗೂ ಬಡವರ ಪರವಾಗಿದೆ. ನಾವು ಮಾಡುತ್ತಿರುವುದು ವೈದ್ಯರ ಮರುಹೊಂದಾಣಿ...
‘ಸತ್ಯಗಳನ್ನು ತಿಳಿಯದೆ ಹಸ್ತಕ್ಷೇಪ ಮಾಡಬೇಡಿ’: ಪಿಣರಾಯಿಗೆ ಡಿಕೆಶಿ ಎದಿರೇಟು

‘ಸತ್ಯಗಳನ್ನು ತಿಳಿಯದೆ ಹಸ್ತಕ್ಷೇಪ ಮಾಡಬೇಡಿ’: ಪಿಣರಾಯಿಗೆ ಡಿಕೆಶಿ ಎದಿರೇಟು

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಕರ್ನಾಟಕದಲ್ಲಿ ನಡೆದ ಭೂಸ್ವಾಧೀನ ಅಭಿಯಾನದ ಕುರಿತ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಟೀಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎದಿರೇಟು ನೀಡಿದ್ದಾರೆ.ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು,"ಇದು ತುಂಬಾ ದುರದೃಷ್ಟಕರ. ಪಿಣರಾಯಿ ಅವರಂತಹ ಹಿರಿಯ ನಾಯಕರು ಬೆಂಗಳೂರಿನ ಸಮಸ್ಯೆಗಳನ್ನು ತಿಳಿದುಕೊಳ್ಳಬೇಕು. ಕೆಲವರು ಅಲ್ಲಿ ಅತಿಕ್ರಮಣ ಮಾಡಿದ್ದಾರೆ. ಇದು ತ್ಯಾಜ್ಯ ವಿಲೇವಾರಿ ತಾಣ ಎಂದಿದ್ದಾರೆ.'ನಮ್ಮಲ್ಲಿ ಮಾನವೀಯತೆ ಇದೆ. ನಾವು ಅವರಿಗೆ ಹೊಸ ಸ್ಥಳಗಳಿಗೆ ಹೋಗಲು ಅವಕಾಶ ನೀಡಿದ್ದೇವೆ. ಅವರಲ್ಲಿ ಕೆಲವರು ಮಾತ್ರ ಸ್ಥಳೀಯರು. ಪಿಣರಾಯಿ ಅವರಂತಹ ಹಿರಿಯ ನಾಯಕರು ಅಂತಹ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಬಾರದು' ಎಂದು ಡಿಕೆಶಿ ಹೇಳಿದರು.#WATCH | Bengaluru | On Kerala CM Pinarayi Vijayan's statement on recent devlotion drive in Karanataka, Dy CM DK Shivakumar says, "It is very unfortunate. Senior leaders like Pinarayi should know the issues in Bengaluru. Some people have encroached there. It is a waste…...
ಸಿದ್ದು ಕುರ್ಚಿ ಉಳಿಸಿಕೊಳ್ಳಲು ವಸತಿ ಇಲಾಖೆಯ ಹಣ ವರ್ಗಾವಣೆ? ಏನಿದು ಬಿಜೆಪಿ ಆರೋಪ

ಸಿದ್ದು ಕುರ್ಚಿ ಉಳಿಸಿಕೊಳ್ಳಲು ವಸತಿ ಇಲಾಖೆಯ ಹಣ ವರ್ಗಾವಣೆ? ಏನಿದು ಬಿಜೆಪಿ ಆರೋಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಮೌಲ್ಯದ ಆಸ್ತಿಪಾಸ್ತಿ ಪತ್ತೆ ಮಾಡಿದ ಬೆಳವಣಿಗೆಯನ್ನು ಮುಂದಿಟ್ಟು ಪ್ರತಿಪಕ್ಷ ಬಿಜೆಪಿಯು ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ.ಬೆಂಗಳೂರಿನ ಹಲಸೂರಿನಲ್ಲಿರುವ ಸರ್ಫರಾಜ್‌ ನಿವಾಸ ಮತ್ತು ಸಂಬಂಧಿಕರ ಮನೆಗಳೂ ಸೇರಿದಂತೆ 5 ಕಡೆ ಇತ್ತೀಚಿಗೆ ದಾಳಿ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಸುಮಾರು 14.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ.ಬಡವರಿಗೆ ಸೂರು ಕಲ್ಪಿಸಬೇಕಾದ ವಸತಿ ಇಲಾಖೆ ಇಂದು ಭ್ರಷ್ಟಾಚಾರದ ಗೂಡಾಗಿದೆ. ಸಚಿವ @BZZameerAhmedK ಅವರ ಇಲಾಖೆಯಲ್ಲಿ ಲೂಟಿಯಾದ ಕೋಟ್ಯಂತರ ರೂ. ಎಲ್ಲಿಗೆ ಹೋಯಿತು? @siddaramaiah ಅವರು ಆ ಭ್ರಷ್ಟಾಚಾರದ ಹಣವನ್ನು ಕುರ್ಚಿ ಉಳಿಸಿಕೊಳ್ಳಲು ವರ್ಗಾವಣೆ ಮಾಡಿದ್ದು ಯಾರಿಗೆ? #HousingScam #Corruption #CongressFailsKarnataka pic.twitter.com/T8XitgQ981 — BJP Karnataka (@BJP4Karnataka) December 26, 2025ಈ ಬಗ್ಗೆ ಟೀಕಾಸ್...
ಶಿಕ್ಷಣ ರಾಜಕೀಯ ಮುಕ್ತವಾಗಬೇಕು; ಬಸವರಾಜ್ ಬೊಮ್ಮಾಯಿ

ಶಿಕ್ಷಣ ರಾಜಕೀಯ ಮುಕ್ತವಾಗಬೇಕು; ಬಸವರಾಜ್ ಬೊಮ್ಮಾಯಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಡೋಲಾಯಮಾನ ಸ್ಥಿತಿಯಲ್ಲಿದೆ. ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇಪಿ ಜಾರಿಯಾಗಬೆಕು ರಾಜಕೀಯ ಕಾರಣಕ್ಕೆ ಶಿಕ್ಷಣ ವ್ಯವಸ್ಥೆ ಹಾಳು ಮಾಡುವ ಕೆಲಸ ಆಗಬಾರದು. ಶಿಕ್ಷಣ ರಾಜಕೀಯ ಮುಕ್ತವಾಗಬೇಕು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ.ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಸುಶಾಸನ ದಿನಾಚರಣೆ ಅಟಲ್ ಪುರಸ್ಕಾರ 2025 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಅವರು ಆರು ದಶಕಗಳ ಕಾಲ ಪರಿಶುದ್ಧ ರಾಜಕಾರಣ ಮಾಡಿದ್ದರು. ಅವರ ನಡೆ ನುಡಿಯಲ್ಲಿ ವ್ಯತ್ಯಾಸ ಇರಲಿಲ್ಲ. ಅಧಿಕಾರಕ್ಜೆ ಬರುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಸುಮಾರು ನಲವತ್ತೈದು ವರ್ಷ ಹೋರಾಟ ಮಾಡಿಕೊಂಡು ಬಂದಿದ್ದರು. ಅಂತವರ ಕೈಯಲ್ಲಿ ಅಧಿಕಾರ ಬಂದಾಗ ಯಾವರೀತಿ ನಡೆಸುತ್ತಾರೆ ಎಂದು ನಿರೀಕ್ಷೆ ಇತ್ತು. ಜನನಾಯಕನ ಕೈಯಲ್ಲಿ ಅಧಿಕಾರ ಬಂದಾಗ ಹೇಗೆ ನಡೆಸುತ್ತಾರೆ ಎಂದು ವಾಜಪೇಯಿಯವರ...