Wednesday, August 12

ವಿದೇಶ

2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನ

2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಇಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆಯನ್ನು ಒದಗಿಸಿಕೊಡಲು ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ ನೀಡುವ ಕೆಲಸ ಪ್ರಗತಿಯಲ್ಲಿದೆ.ಈ ಕಾನೂನು 2017ರಲ್ಲಿ ತಿದ್ದುಪಡಿ ಆದ ನಂತರ 2023ರ ಮೇ ವರೆಗೆ 6 ವರ್ಷಗಳಲ್ಲಿ 1.08 ಲಕ್ಷ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಲಾಗಿತ್ತು. ಮೇ 2023 ರಿಂದ 2025ರವರೆಗೆ 1.11 ಲಕ್ಷ ಹಕ್ಕುಪತ್ರಗಳನ್ನು ನೀಡಲಾಗಿದೆ. ಮೇ 2025ರ ನಂತರ 1.10 ಲಕ್ಷ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ, 2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ.ಈ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ದಶಕಗಳ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯ ಕಂದಾಯ ಗ್ರಾಮ ರಚನೆ ಅಭಿಯಾನದ ಮುಖಾಂತರ ...
ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ದೇಶದಲ್ಲೇ ಸುಸಜ್ಜಿತ ರೈಲ್ವೆ ಟರ್ಮಿನಲ್

ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ದೇಶದಲ್ಲೇ ಸುಸಜ್ಜಿತ ರೈಲ್ವೆ ಟರ್ಮಿನಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಭಾರತದ ಅತ್ಯಂತ ಮಹತ್ವಾಕಾಂಕ್ಷೆಯ ಹಾಗೂ ವಿಶ್ವದರ್ಜೆಯ ರೈಲ್ವೆ ಟರ್ಮಿನಲ್ ಬೆಂಗಳೂರಿಗೆ ಬರಲು ಸಜ್ಜಾಗಿದೆ. ಚೀನಾದ ಐಕಾನಿಕ್ ಹ್ಯಾಂಗ್‌ಝೌ ರೈಲು ನಿಲ್ದಾಣದಿಂದ ಸ್ಫೂರ್ತಿ ಪಡೆದು, ನಗರ ಚಲನಶೀಲತೆಯ ಭವಿಷ್ಯಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾದ ಸಂಪೂರ್ಣವಾಗಿ ಎತ್ತರದ (ಎಲಿವೇಟೆಡ್) ರೈಲ್ವೆ ಟರ್ಮಿನಲ್ ಯಲಹಂಕದಲ್ಲಿ ನಿರ್ಮಾಣವಾಗಲಿದೆ ಎಂದು ಸಂಸದ ಡಾ. ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ.ಸುಮಾರು ₹6,000 ಕೋಟಿ ಹೂಡಿಕೆಯಲ್ಲಿ ನಿರ್ಮಾಣವಾಗಲಿರುವ ಈ ಮಹತ್ವದ ಯೋಜನೆಯು 20 ಎಕರೆ ವಿಸ್ತೀರ್ಣದಲ್ಲಿ ರೂಪುಗೊಳ್ಳಲಿದ್ದು, 16 ಅತ್ಯಾಧುನಿಕ ವೇದಿಕೆಗಳು, 10 ಸ್ಥಿರ ಮಾರ್ಗಗಳು ಹಾಗೂ 15 ಪಿಟ್ ಮಾರ್ಗಗಳನ್ನು ಒಳಗೊಂಡಿರಲಿದೆ. ಪ್ರಯಾಣಿಕರ ಸುಗಮ ಸಂಚಾರಕ್ಕೆ ಪ್ರತ್ಯೇಕ ಆಗಮನ ಮತ್ತು ನಿರ್ಗಮನ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ. ಅಲ್ಲದೆ, ಮೆಟ್ರೋ ಸೇವೆಯೊಂದಿಗೆ ತಡೆರಹಿತ ಏಕೀಕರಣವೂ ಈ ಟರ್ಮಿನಲ್‌ನ ಪ್ರಮುಖ ವೈಶಿಷ್ಟ್ಯವಾಗಿರಲಿದೆ.ಈ ಹೆಗ್ಗುರುತು ಯೋಜನೆಯಿಂದ ಉತ್ತರ ಬೆಂಗಳೂರಿನ ಸಂಚಾರ ದಟ್ಟಣೆ ಗಮನಾರ್ಹವಾಗಿ ಕಡಿಮೆಯಾಗಲಿದ್ದು, ಈಗಿರುವ ರೈಲ್ವೆ ಟರ್ಮಿನಲ್‌ಗಳ ಮೇಲಿನ ಒತ್...
ಹಿರಿಯೂರು ಅಪಘಾತ; ಶಾಲಾ ಬಸ್ ಚಾಲಕನೇ ಇಡೀ ಘಟನೆಗೆ ಪ್ರತ್ಯಕ್ಷದರ್ಶಿ ಸಾಕ್ಷಿ

ಹಿರಿಯೂರು ಅಪಘಾತ; ಶಾಲಾ ಬಸ್ ಚಾಲಕನೇ ಇಡೀ ಘಟನೆಗೆ ಪ್ರತ್ಯಕ್ಷದರ್ಶಿ ಸಾಕ್ಷಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇ ಗೌಡ ಮಾಧ್ಯಮಗಳಿಗೆ ಮಾಹಿತಿ ನೀಡಿ, "ಗೋಕರ್ಣಕ್ಕೆ ಹೋಗುತ್ತಿದ್ದ ಸೀಬರ್ಡ್ ಬಸ್. ಇಂಧನ ಟ್ಯಾಂಕರ್ ಟ್ರಕ್ ವಿಭಜಕವನ್ನು ಹಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಎಂಟು ಜನರು ಸಾವನ್ನಪ್ಪಿದ್ದಾರೆ, ಕೆಲವರು ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. #WATCH | Chitradurga, Karnataka | IGP Dr BR Ravikante Gowda says, "The accident happened at 2 am... A container crossed the divider and hit a moving bus... Three people are missing... Hopefully, they are alive... One person is at risk and has been taken to the hospital for… https://t.co/aTrDHKnYD9 pic.twitter.com/IkKiOl2dKv— ANI (@ANI) December 25, 2025 ಕಂಟೇನರ್ ಚಾಲಕ ಕೂಡ ಸಾವನ್ನಪ್ಪಿದ್ದಾರೆ. ಒಟ್ಟು, ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಒಬ್ಬ ವ್ಯಕ್ತಿಯ ದೇಹದ 20% ಸುಟ್ಟುಹೋಗಿರುವುದರಿಂದ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ...
ಹಿರಿಯೂರು ಬಳಿ ಅಪಘಾತ; ತುರ್ತು ಪರಿಹಾರ ಕ್ರಮಕ್ಕೆ ಸಾರಿಗೆ ಸಚಿವರ ಸೂಚನೆ

ಹಿರಿಯೂರು ಬಳಿ ಅಪಘಾತ; ತುರ್ತು ಪರಿಹಾರ ಕ್ರಮಕ್ಕೆ ಸಾರಿಗೆ ಸಚಿವರ ಸೂಚನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಚಿತ್ರದುರ್ಗದ ಹಿರಿಯೂರು ಬಳಿ ಗುರುವಾರ ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಅಪಘಾತ ಬಗ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಬಳಿ ಇಂದು ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸದ್ಯಕ್ಕೆ ಬಂದ ಮಾಹಿತಿ ಪ್ರಕಾರ 11ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದನ್ನು ಕೇಳಿ ಅತ್ಯಂತ ದುಃಖವಾಯಿತು.ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್‌ಗೆ ಡಿಕ್ಕಿ… pic.twitter.com/OmmTmqIuaf— Ramalinga Reddy (@RLR_BTM) December 25, 2025ಅಪಘಾತ ಸ್ಥಳದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು, ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್‌ಗೆ ಡಿಕ್ಕಿ ಹೊಡೆದಿರುವುದೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ....
ಬಳ್ಳಾರಿ ಜೀನ್ಸ್ ಪಾರ್ಕ್: ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ

ಬಳ್ಳಾರಿ ಜೀನ್ಸ್ ಪಾರ್ಕ್: ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಳ್ಳಾರಿ ಜೀನ್ಸ್ ಪಾರ್ಕ್- ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.ನುಡಿದಂತೆ ನಡೆಯುತ್ತಿರುವ ನಮ್ಮ ಸರ್ಕಾರ ಬಳ್ಳಾರಿಯನ್ನು ಜವಳಿ ಉದ್ಯಮದ ಭವಿಷ್ಯದ ಹಬ್ ಆಗಿ ರೂಪಿಸುವತ್ತ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ಬಳ್ಳಾರಿ ಜೀನ್ಸ್ ಪಾರ್ಕ್‌ನಲ್ಲಿ ಕೈಗಾರಿಕಾ ನಿವೇಶನಗಳ ದರವನ್ನು ಎಕರೆಗೆ ₹1.35 ಕೋಟಿಯಿಂದ ₹67.50 ಲಕ್ಷಕ್ಕೆ ಇಳಿಸಲಾಗಿದ್ದು, ಇದರಿಂದ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಹೂಡಿಕೆ ಆಕರ್ಷಣೆ ಸಾಧ್ಯವಾಗಿದೆ ಎಂದವರು ತಿಳಿಸಿದ್ದಾರೆ.ದರ ಇಳಿಕೆಯೊಂದಿಗೆ ಸೌಲಭ್ಯಗಳ ವಿಸ್ತರಣೆ ಮಾಡಲಾಗಿದ್ದು, ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಅವಕಾಶದ ಹೊಸ ಬಾಗಿಲು ತೆರೆದಿದೆ. ಇದರ ಪರಿಣಾಮವಾಗಿ ನೇರ–ಪರೋಕ್ಷ ಉದ್ಯೋಗ ಸೃಷ್ಟಿ, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಮತ್ತು ಪೂರಕ ವಲಯಗಳ ಬೆಳವಣಿಗೆ ಸಾಧ್ಯವಾಗಲಿದೆ ಎಂದಿದ್ದಾರೆ.ಉತ್ತರ ಕರ್ನಾಟಕದ ಆರ್ಥಿಕ ಸಬಲೀಕರಣಕ್ಕೆ ಬಳ್ಳಾರಿ ಜೀನ್ಸ್ ಪಾರ್ಕ್ ಮಹತ್ವದ ಕೊಡುಗೆ ನೀಡಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ....
ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ತೀರ್ಮಾನಿಸಬೇಕು; ಸಿಎಂ

ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ತೀರ್ಮಾನಿಸಬೇಕು; ಸಿಎಂ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಮೈಸೂರಿನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ. ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ ಎಂದರು.ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದ ಸಿಎಂ, ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ ಎಂದರು.ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವೇ ಇಲ್ಲ ಎಂದರು....
ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ; ಸಿಎಂ ಭರವಸೆ.

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ; ಸಿಎಂ ಭರವಸೆ.

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಗೃಹಲಕ್ಷ್ಮಿ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ಮೈಸೂರಿನಲ್ಲಿ ಸುದ್ದಿಗಂಗರೊಂದಿಗೆ ಮಾತನಾಡಿದ ಅವರು, ಫೆಬ್ರವರಿ - ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಸರ್ಕಾರದ ಬಳಿ ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ? ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ? ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ, ಹಣ ಇನ್ನು ಬಿಡುಗಡೆಯಾಗಿಲ್ಲ ಅಷ್ಟೆ ಎಂದರು....
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮೈಸೂರು: ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂಬ ಬಿಜೆಪಿ ಆರೋಪ ಹಾಸ್ಯಾಸ್ಪದ. ಬಿಜೆಪಿ ಮಾತ್ರ ಏಕೆ ಇದನ್ನು ವಿರೋಧಿಸುತ್ತದೆ? ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಭಯಪಡಬೇಕು. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು.ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ? ಶಾಂತಿ ಹಾಗೂ ಭ್ರಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದ್ದೇವೆ. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿಯೇ ಎಂದರು....
ಗೃಹಲಕ್ಷ್ಮೀ ವಿವಾದ; ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? HDK ಪ್ರಶ್ನೆ

ಗೃಹಲಕ್ಷ್ಮೀ ವಿವಾದ; ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? HDK ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ಎಂದು ಜೆಡಿಎಸ್ ನಾಯಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ವಿಧಾನಸಭೆಯಲ್ಲಿನ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? ಎಂದು ಪ್ರಶ್ನಿಸಿದ್ದಾರೆ. ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ ? - ಶ್ರೀ @hd_kumaraswamy , ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು pic.twitter.com/u78yxmZSuJ— Janata Dal Secular (@JanataDal_S) December 22, 2025...
ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್

ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮನರೇಗ ಯೋಜನೆಯಲ್ಲಿ ಬದಲಾವಣೆ ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೈಲಟ್ ಅವರು ತಿಳಿಸಿದರು.ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತ ಸರ್ಕಾರವು ಐತಿಹಾಸಿಕ ಪ್ರಮಾದವನ್ನು ಮಾಡಿದೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೆಸರಿನಲ್ಲಿದ್ದ ಯೋಜನೆಯ ಹೆಸರನ್ನು ಬದಲಿಸಲಾಗಿದೆ. ಇಷ್ಟು ದಿನ ಬೇರೆ ಹೆಸರಿನಲ್ಲಿದ್ದ ಯೋಜನೆಗಳ ಹೆಸರನ್ನು ಮಹಾತ್ಮಾ ಗಾಂಧೀಜಿ ಹೆಸರಿಗೆ ಬದಲಿಸಲಾಗುತ್ತಿತ್ತು. ಭಾರತ ಸರ್ಕಾರವು ದೇಶದ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ. ಮನರೇಗಾ ಯೋಜನೆ ಕಾಂಗ್ರೆಸ್ ಸರ್ಕಾರದ ದೂರದೃಷ್ಟಿ ಯೋಜನೆಯಾಗಿದ್ದು, ಇದು ಆರ್ಥಿಕವಾಗಿ ತೀರಾ ಹಿಂದುಳಿದ ಜನರಿಗೆ ಸಂವಿಧಾನಿಕವಾಗಿ ಉದ್ಯೋಗ ಖಾತರಿ ಹಕ್ಕನ್ನು ನೀಡಲಾಗಿತ್ತು. ಗ್ರಾಮೀಣ ಭಾಗದ ಬಡ ಕುಟುಂಬದ ವ್ಯಕ್ತಿಗೆ ವರ್ಷಕ್ಕೆ 100 ದಿನಗಳ ಉದ್ಯೋಗ ನೀಡುವ ಖಾತರಿ ಯೋಜನೆ ಇದಾಗಿ...