Thursday, August 13

ವಿದೇಶ

ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ? ನಿಖಿಲ್ ಪ್ರಶ್ನೆ

ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ? ನಿಖಿಲ್ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಶಿವಮೊಗ್ಗ : ಕಾಂಗ್ರೆಸ್ ಪಕ್ಷದೊಳಗೆ ಕುರ್ಚಿಗಾಗಿ ಗುದ್ದಾಟ ತೀವ್ರಗೊಂಡಿದ್ದು, ಶಾಸಕರ ಖರೀದಿ ನಡೆಯುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಈ ಬೆಳವಣಿಗೆ ಬಗ್ಗೆ ಟೀಕಿಸಿರುವ ಪ್ರದೇಶ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕರ ಖರೀದಿಗೆ ಹಣವಿದೆ ಆದರೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಒಬ್ಬೊಬ್ಬ ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ ಜಲಸಂಪನ್ಮೂಲ ಸಚಿವರೇ ? ಎಂದು ನಿಖಿಲ್ ಅವರು ಪ್ರಶ್ನಿಸಿದ್ದಾರೆ. ಒಬ್ಬೊಬ್ಬ ಶಾಸಕರ ಖರೀದಿಗೆ 50 ಕೋಟಿ ದುಡ್ಡಿದೆ, ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಸಲು ದುಡ್ಡಿಲ್ಲವೇ ಜಲಸಂಪನ್ಮೂಲ ಸಚಿವರೇ ?- ಶ್ರೀ @Nikhil_Kumar_k , ಯುವ ಘಟಕದ ರಾಜ್ಯಾಧ್ಯಕ್ಷರು #ಸಿಂಧನೂರು#ರಾಯಚೂರು#ರೈತವಿರೋಧಿಕಾಂಗ್ರೆಸ್‌ pic.twitter.com/kODWF5e6h6— Janata Dal Secular (@JanataDal_S) November 26, 2025...
ರೈತರನ್ನು ಮರೆತ ಸರ್ಕಾರ: ಮೆಕ್ಕಜೋಳ ಖರೀದಿ ಕೇಂದ್ರ ಆರಂಭಕ್ಕೆ ಹೈಕಮಾಂಡ್ ಅನುಮತಿ ಬೇಕೆ ಎಂದ ಬಿಜೆಪಿ 

ರೈತರನ್ನು ಮರೆತ ಸರ್ಕಾರ: ಮೆಕ್ಕಜೋಳ ಖರೀದಿ ಕೇಂದ್ರ ಆರಂಭಕ್ಕೆ ಹೈಕಮಾಂಡ್ ಅನುಮತಿ ಬೇಕೆ ಎಂದ ಬಿಜೆಪಿ 

ಪ್ರಮುಖ ಸುದ್ದಿ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನದಾತ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ.ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಗಿದೆ. ಕರ್ನಾಟಕದ ಇತಿಹಾಸದಲ್ಲಿ ರೈತರ ನೋವಿಗೆ ಸ್ಪಂದಿಸದ ಈ ರೀತಿಯ ಸಂವೇದನಾರಹಿತ ಸರ್ಕಾರವನ್ನು ನಾನು ಈವರೆಗೆ ಕಂಡಿರಲಿಲ್ಲ. ಕೊಟ್ಟ ಮಾತಿನಂತೆ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿ, ಸೂಕ್ತ ಪರಿಹಾರ ನೀಡಬೇಕಿದ್ದ ಸರ್ಕಾರ ಇಂದು ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿದೆ. ರೈತರ ಬದುಕು ನಾಶವಾದರೂ ಪರವಾಗಿಲ್ಲ, ನಮ್ಮ ಕುರ್ಚಿ ಭದ್ರವಾಗಿರಲಿ ಎನ್ನುವಂತಿದೆ ಇಬ್ಬರೂ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.ಗುರ್ಲಾಪುರದಲ್ಲಿ ಪ್ರತಿಭಟನಾ ನಿರತ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘೋರ ದುರಂತ ಸಂಭವಿಸಿತು. ಆದರೆ, ಈ ಹೃದಯಹೀನ ಸರ್ಕಾರದ ಯಾವ ಮಂತ್ರಿಯೂ ರೈತನ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಸಕ್ಕರೆ ಸಚಿವರು, ಕೃಷಿ ಸಚಿವರು, ಜಿಲ್...
ಬೆಂಗಳೂರು ದರೋಡೆ ಪ್ರಕರಣ; ಪೊಲೀಸ್ ಭರ್ಜರಿ ಬೇಟೆ; ಒಟ್ಟು 9 ಸೆರೆ

ಬೆಂಗಳೂರು ದರೋಡೆ ಪ್ರಕರಣ; ಪೊಲೀಸ್ ಭರ್ಜರಿ ಬೇಟೆ; ಒಟ್ಟು 9 ಸೆರೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಬೆಂಗಳೂರು ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಬೆಂಗಳೂರು ನಗರ ಪೊಲೀಸರು ₹7.11 ಕೋಟಿ ನಗದು ವ್ಯಾನ್ ದರೋಡೆ ಪ್ರಕರಣದಲ್ಲಿ ಇನ್ನೂ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.ಈ ಇತ್ತೀಚಿನ ಬಂಧನಗಳಿಂದ ₹1.45 ಕೋಟಿ ಹಣ ಮರುಪಡೆಯಲಾಗಿದ್ದು, ಒಟ್ಟಾರೆಯಾಗಿ ಮರುಪಡೆದ ಹಣದ ಮೊತ್ತ ₹7.1 ಕೋಟಿಗೆ ತಲುಪಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ಹಂಚಿಕೊಂಡಿದೆ.ಆರೋಪಿಗಳನ್ನು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ಹಲವು ತಂಡಗಳ ಸಮನ್ವಯದಿಂದ ಪತ್ತೆ ಮಾಡಿ ಬಂಧಿಸಲಾಗಿದೆ. ಆರು ಮಂದಿಯನ್ನೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.ಕಾಂಗ್ರೆಸ್ ಪಕ್ಷದ ಬೆಳವಣಿಗೆ ಬಿಜೆಪಿ ನಾಯಕ್ರು ಮಾಡುತ್ತಿರುವ ಟೀಕೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಮೊದಲ ಅವಧಿಯ ಅಧಿಕಾರದಲ್ಲಿ 3 ಮುಖ್ಯಮಂತ್ರಿಗಳನ್ನು ಬದಲಿಸಿ, ಎರಡನೇ ಅಧಿಕಾರಾವಧಿಯಲ್ಲಿ 2 ಮುಖ್ಯಮಂತ್ರಿಗಳನ್ನು ಬದಲಿಸಿದ ಹಾಗೂ ಆಪರೇಷನ್ ಕಮಲವೆಂಬ ಕರ್ನಾಟಕ ರಾಜಕಾರಣದ ಕರಾಳ ಅದ್ಯಾಯವನ್ನು ಆರಂಭಿಸಿದ ಬಿಜೆಪಿ ಪಕ್ಷದವರಿಗೆ ಕಾಂಗ್ರೆಸ್ ಹೆಸರೆತ್ತುವುದಕ್ಕೆ ನೈತಿಕತೆಯೂ ಇಲ್ಲ, ಅರ್ಹತೆಯೂ ಇಲ್ಲ ಎಂದಿದ್ದಾರೆ.“ಹೈಕಮಾಂಡ್ ಕಪ್ಪ“ದ ಬಗ್ಗೆ ಬಹಳ ಆಸಕ್ತಿಯಿಂದ ಮಾತನಾಡುವ ಬಿಜೆಪಿ, ಯಡಿಯೂರಪ್ಪನವರು ಹೈಕಮಾಂಡಿಗೆ ಎಷ್ಟು ಕಪ್ಪ ಕೊಟ್ಟು ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದರು? ಜಗದೀಶ್ ಶೆಟ್ಟರ್, ಸದಾನಂದಗೌಡರು, ಬಸವರಾಜ್ ಬೊಮ್ಮಯಿಯವರು ಎಷ್ಟೆಷ್ಟು ಬಿಡ್ ಕೂಗಿ ಮುಖ್...
ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಚಿವ ಸಂಪುಟ ವಿಸ್ತರಣೆಯನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಅವರು ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು.ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ. pic.twitter.com/FuAsWbd8xP— Siddaramaiah (@siddaramaiah) November 25, 2025ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡ...
ರಾಜ್ಯದ 10 ಕಡೆ ಲೋಕಾಯುಕ್ತ ದಾಳಿ; ಅಧಿಕಾರಿಗಳಿಗೆ ಶಾಕ್

ರಾಜ್ಯದ 10 ಕಡೆ ಲೋಕಾಯುಕ್ತ ದಾಳಿ; ಅಧಿಕಾರಿಗಳಿಗೆ ಶಾಕ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಮಂಗಳವಾರ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ಮಂಡ್ಯ, ಬೀದರ್, ಮೈಸೂರು, ಧಾರವಾಡ, ಹಾವೇರಿ, ಬೆಂಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿನ 10 ಸ್ಥಳಗಳಲ್ಲಿ ಅಧಿಕಾರಿ ತಂಡಗಳು ಶೋಧ ಕಾರ್ಯದಲ್ಲಿ ತೊಡಗಿವೆ.ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಂ. ಗಿರೀಶ್ (ಮಂಡ್ಯ) ಮುಖ್ಯ ಲೆಕ್ಕಾಧಿಕಾರಿ (ಪಟ್ಟಣ ಯೋಜನೆ) ಸಿ. ಪುಟ್ಟಸ್ವಾಮಿ (ಮಂಡ್ಯ) ಮುಖ್ಯ ಎಂಜಿನಿಯರ್ (ಮೇಲ್ ಕೃಷ್ಣ ಯೋಜನೆ) ಪ್ರೇಮ್ ಸಿಂಗ್ (ಬೀದರ್) ಕಂದಾಯ ನಿರೀಕ್ಷಕ ಸಿ. ರಾಮಸ್ವಾಮಿ (ಹೂಟಗಳ್ಳಿ ಪುರಸಭೆ, ಮೈಸೂರು) ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸುಭಾಷ್ ಚಂದ್ರ (ಧಾರವಾಡ) ಹಿರಿಯ ಪಶುವೈದ್ಯಕೀಯ ಪರೀಕ್ಷಕ ಹುಯಿಲ್ಗೋಳ್ ಸತೀಶ್ ಯೋಜನ ನಿರ್ದೇಶಕರ ಕಚೇರಿ, ಹಾವೇರಿ ಶೇಕಪ್ಪ ಆರ್‌ಟಿಒ ಕಚೇರಿ ಅಧೀಕ್ಷಕ ಪಿ. ಕುಮಾರಸ್ವಾಮಿ (ಇಲೆಕ್ಟ್ರಾನಿಕ್ಸ್ ಸಿಟಿ, ಬೆಂಗಳೂರು) ಸಿಮ್ಸ್ ವೈದ್ಯಕೀಯ ಕಾಲೇಜು, ಶಿವಮೊಗ್ಗ ಸಿಎನ್ ಲಕ್ಷ್ಮಿಪತಿಈ 10 ಅಧಿಕಾ...
ಬೀಜ ಪರಂಪರೆ ಕುರಿತು ರಾಷ್ಟ್ರೀಯ ಸಂವಾದ; ಕೃಷಿ ಅಭಿವೃದ್ಧಿ ಬಗ್ಗೆ ಚಿಂತನ ಮಂಥನ

ಬೀಜ ಪರಂಪರೆ ಕುರಿತು ರಾಷ್ಟ್ರೀಯ ಸಂವಾದ; ಕೃಷಿ ಅಭಿವೃದ್ಧಿ ಬಗ್ಗೆ ಚಿಂತನ ಮಂಥನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು; ಕೃಷಿಗೆ ಮುಖ್ಯವಾಗಿ ಬೇಕಿರುವುದು ಉತ್ತಮ ಗುಣಮಟ್ಟದ ಬೀಜದ ತಳಿಗಳು ಹಾಗೂ ತಂತ್ರಜ್ಞಾನ. ಈ ಮೂಲಕ ಕೃಷಿ ಅಭಿವೃದ್ಧಿ ಸಾಧ್ಯ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನ ಕೃಷಿ ಇಲಾಖೆ ಸಂಗಮ ಸಭಾಂಗಣದಲ್ಲಿ ಬೀಜ ಪರಂಪರೆ ಕುರಿತು ರಾಷ್ಟ್ರೀಯ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ದೇಶಿ ಬೀಜ ಸಂರಕ್ಷಣೆಯ ಕುರಿತು ಈ ಚಿಂತನ ಮಂತನ ಸಂವಾದವನ್ನು ಏರ್ಪಡಿಸಿರುವುದು ತುಂಬಾ ಸಮಯೋಜಿತವಾಗಿದೆ ಹಾಗೂ ಶ್ಲಾಘನೀಯವಾಗಿದೆ. ಬೀಜ ಪರಂಪರೆಯ ಕುರಿತು ನಡೆಯುವ ಈ ಸಂವಾದವೂ ರೈತರು, ಸಂಶೋಧಕರು, ಅನ್ವೇಷಕರು ಹಾಗೂ ವಿವಿಧ ಸಂಬಂಧಿತ ಸಂಸ್ಥೆಗಳನ್ನು ಒಂದೇ ಸೂರಿನಡಿ, ಬೀಜ ಪರಂಪರೆ ಮತ್ತು ಆಹಾರ ವ್ಯವಸ್ಥೆಯ ಭವಿಷ್ಯದ ಬಗ್ಗೆ ಒಟ್ಟಾಗಿ ಚಿಂತನೆ ನಡೆಸಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.ಕೃಷಿಜೀವ ವೈವಿಧ್ಯತೆ, ರೈತರ ಜ್ಞಾನ, ಸಂಸ್ಕೃತಿ ಹಾಗೂ ಪರಂಪರೆಗಳ ಆಧಾರದ ಮೇಲೆ ಶತಮಾನಗಳ ಕಾಲದಿಂದ ಸ್ಥಳೀಯ ಆಹಾರ ಮತ್ತು ಪೌಷ್ಟಿಕ ಭದ್ರೆತೆ ರೂಪುಗೊಂಡಿದೆ. ದೇಶಿ ತಳಿಗಳು, ಪೌಷ್ಟಿಕತೆ ಮತ್ತು ಪರಿಸರ ಸುಸ್ಥಿರತೆಯನ್ನು ಕಾಪಾ...
ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ

ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಬಿಜೆಪಿಯನ್ನು ಪಕ್ಷದ ಕರ್ನಾಟಕ ಪ್ರದೇಶ ಘಟಕ ಅಭಿನಂಧಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಷಾ ಅವರನ್ನು ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿನಂಧಿಸಿದರು.ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ, ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, NDA ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಮಾನ್ಯ ಅಮಿತ್ ಶಾ ಜಿ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ.ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು.ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದವರು ತಿಳಿಸಿದ್ದಾರೆ....
200ಕ್ಕೂ ಹೆಚ್ಚು ಸರ್ಕಾರಿ ವಕೀಲರ ವಿರುದ್ಧ ಕ್ರಮಕ್ಕೆ ಸರ್ಕಾರದ ಚಿಂತನೆ

200ಕ್ಕೂ ಹೆಚ್ಚು ಸರ್ಕಾರಿ ವಕೀಲರ ವಿರುದ್ಧ ಕ್ರಮಕ್ಕೆ ಸರ್ಕಾರದ ಚಿಂತನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸಂಬಂಧಿಸಿದ ಭೂಸ್ವಾಧೀನ ಪ್ರಕರಣಗಳಲ್ಲಿ ನಡೆದಿದೆ ಎನ್ನಲಾದ ಗಂಭೀರ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ವಿಧಾನಸೌಧದಲ್ಲಿ ಶನಿವಾರ ಭೂಸ್ವಾಧೀನ ಪ್ರಕರಣಗಳ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಕಳೆದ ಹಲವು ವರ್ಷಗಳಿಂದ ಬೇಜವಾಬ್ದಾರಿಯಾಗಿ ನಡೆಸಲಾದ ಕಾನೂನು ಕ್ರಮಗಳು, ನಿರ್ಲಕ್ಷ್ಯ ಮತ್ತು ಅನಿಶ್ಚಿತತೆಯಿಂದ ಸರ್ಕಾರಕ್ಕೆ ಸುಮಾರು ₹5 ಲಕ್ಷ ಕೋಟಿ ರೂ.ಗಳಷ್ಟು ನಷ್ಟ ಉಂಟಾಗುವ ಆತಂಕವಿದೆ,” ಎಂದು ಎಚ್ಚರಿಸಿದರು.“ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತುಗೊಳಿಸಲಾಗುವುದು. ಪ್ರಕರಣಗಳನ್ನು ತಪ್ಪಾಗಿ ವಹಿಸಿದ ವಕೀಲರನ್ನು ಕೂಡ ತೆಗೆದುಹಾಕಲಾಗುವುದು,” ಎಂದು ಅವರು ಸ್ಪಷ್ಟಪಡಿಸಿದರು.ಈ ಕುರಿತು ಈಗಾಗಲೇ ವಿಶೇಷ ಪರಿಶೀಲನಾ ತಂಡ ಕಾರ್ಯಾರಂಭ ಮಾಡಿಕೊಂಡಿದ್ದು, 10–15 ದಿನಗಳೊಳಗೆ ಪ್ರಾಥಮಿಕ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಅವಶ್ಯಕತೆ ಕಂಡುಬಂದಲ್ಲಿ...
ಸಿಎಂ ಕ್ಷೇತ್ರದಲ್ಲಿ ಮಹಿಳಾ ಸರ್ಕಾರಿ ನೌಕರರ ಆತ್ಮಹತ್ಯೆ; ಯತೀಂದ್ರ ವಿರುದ್ಧ ಬಿಜೆಪಿ ಆರೋಪ

ಸಿಎಂ ಕ್ಷೇತ್ರದಲ್ಲಿ ಮಹಿಳಾ ಸರ್ಕಾರಿ ನೌಕರರ ಆತ್ಮಹತ್ಯೆ; ಯತೀಂದ್ರ ವಿರುದ್ಧ ಬಿಜೆಪಿ ಆರೋಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ವರುಣಾದಲ್ಲಿ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣದಲ್ಲಿ ಸಿಎಂ ಪುತ್ರ ಯತೀಂದ್ರ ಅವರ ಕೈವಾಡವಿರುವ ಬಗ್ಗೆ ಪ್ರತಿಪಕ್ಷ ಬಿಜೆಪಿ ಸಂಶಯ ವ್ಯಕ್ತಪಡಿಸಿದೆ.ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ ಇರುವಾಗ ಉಳಿದಕಡೆ ಏನು ಕಥೆ ಎಂದು ಬಿಜೆಪಿ ಪ್ರಶ್ನಿಸಿದೆ. ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ಸಿಎಂ @siddaramaiah ಸ್ವಕ್ಷೇತ್ರ ವರುಣಾದಲ್ಲೇ ಮಹಿಳಾ ಅಧಿಕಾರಿ ಸರ್ಕಾರಿ ಕಛೇರಿಯೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಈ ಕಿರುಕುಳದ ಹಿಂದೆ ವರ್ಗಾವಣೆ ಕಿಂಗ್ ಪಿನ್ ವರುಣಾ ಉಸ್ತುವಾರಿ ಯತೀಂದ್ರ ಸಿದ್ದರಾಮಯ್ಯನವರ ಕೈವಾಡ ಶಂಕೆ ಮೂಡುತ್ತಿದೆ.ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ… pic.twitter.com/HPsBKWbvFG— BJP Karnataka (@BJP4Karnataka) November 22, 2025ಸಾಮಾಜಿಕ ಮಾಧ್ಯಮ 'X' ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ಸಿಎಂ ಸಿದ್ದರಾಮಯ್ಯರ ಸ್ವಕ್ಷೇತ್ರ ವರುಣಾದಲ್ಲೇ ಮಹಿಳಾ ಅಧಿಕಾರಿ ಸರ್ಕಾರಿ ಕಛೇರಿಯೊಳಗೆ ಆತ್ಮಹತ್ಯೆಗೆ...