Thursday, August 13

ವಿದೇಶ

ಕಬ್ಬು ಮತ್ತು ಸಕ್ಕರೆ ವಿಷಯದಲ್ಲಿ ಕೇಂದ್ರ ಸರ್ಕಾರವೇ FRP ನಿಗದಿಪಡಿಸುತ್ತದೆ; ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: “ಕಬ್ಬು ಮತ್ತು ಸಕ್ಕರೆ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರ ಅತ್ಯಂತ ಸೀಮಿತವಾಗಿದೆ. ಈ ಸಂಬಂಧಿತ ದರ ನಿಗದಿ ಹಾಗೂ ನಿಯಂತ್ರಣ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ವಶದಲ್ಲಿದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯವು 2025ರ ಮೇ 6ರಂದು ಎಫ್.ಆರ್.ಪಿ (Fair and Remunerative Price) — ನ್ಯಾಯಯುತ ಮತ್ತು ಲಾಭದಾಯಕ ಬೆಲೆಯನ್ನು ನಿಗದಿಪಡಿಸಿರುವುದಾಗಿ ತಿಳಿಸಿದರು.“ಕೇಂದ್ರ ಸರ್ಕಾರವೇ ದರ ನಿಗದಿಪಡಿಸುತ್ತದೆ. ರಾಜ್ಯ ಸರ್ಕಾರದ ಕೆಲಸ ರೈತರಿಗೆ ನಿಗದಿತ ತೂಕ, ಬೆಲೆ ಹಾಗೂ ಸಮಯಕ್ಕೆ ಪಾವತಿ ಖಚಿತಪಡಿಸುವುದಾಗಿದೆ. ಇದು ಕಬ್ಬು ನಿಯಂತ್ರಣ ಕಾಯ್ದೆಯಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ,” ಎಂದರು.ಮುಖ್ಯಮಂತ್ರಿ ಅವರು ಮುಂದುವರಿದು, ಸಕ್ಕರೆ ಮೇಲಿನ ನಿಯಂತ್ರಣವೂ ‘ಅಗತ್ಯ ವಸ್ತುಗಳ ಕಾಯ್ದೆ’ ಪ್ರಕಾರ ಕೇಂದ್ರ ಸರ್ಕಾರದ ವಶದಲ್ಲಿದೆ ಎಂದು ಹೇಳಿದರು. “ಯುಪಿಎ ಸರ್ಕಾರದ ಅವಧಿಯಿಂದ 2017–18 ರವರೆಗೆ ರಿಕವರಿ ಶೇ.9.5 ರಷ್ಟಿತ...
ಹರಿಯಾಣದಲ್ಲಿ ಮತಗಳ್ಳತನ; ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

ಹರಿಯಾಣದಲ್ಲಿ ಮತಗಳ್ಳತನ; ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು : ಹರಿಯಾಣ ರಾಜ್ಯದಲ್ಲಿ ನಡೆದ 25 ಲಕ್ಷಕ್ಕೂ ಹೆಚ್ಚು ಮತಗಳ್ಳತನದ ಘಟನೆ ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಮೇಲೆ ನಡೆದ ಅತ್ಯಂತ ದೊಡ್ಡ ದಾಳಿ ಎಂದು ರಾಜ್ಯ ಯುವ ಕಾಂಗ್ರೆಸ್ ಖಂಡಿಸಿದೆ.ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ನಿರ್ಲಕ್ಷ್ಯ ಮತ್ತು ಜನರ ಮತಹಕ್ಕಿನ ಅಪಹರಣದ ವಿರುದ್ಧವಾಗಿ, ರಾಜ್ಯ ಯುವ ಕಾಂಗ್ರೆಸ್ ಸಮಿತಿ ಇಂದು ಸಂಜೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಮಂಜುನಾಥ ಗೌಡರು ಅವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಯಿತು.ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ನಡೆಯನ್ನು ಖಂಡಿಸಿದ ನಾಯಕರು ಪ್ರತಿಕೃತಿ ದಹನ ಮಾಡಿ ಆಕ್ರೋಶ ಹೊರಹಾಕಿದರು.ಈ ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿಯು ಎಲ್ಲಾ ಜಿಲ್ಲಾ ಮತ್ತು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರು, ಕಮಿಟಿ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಿದ್ದರು....
ಖ್ಯಾತ ನಟ ಹರೀಶ್ ರಾಯ್ ಇನ್ನಿಲ್ಲ

ಖ್ಯಾತ ನಟ ಹರೀಶ್ ರಾಯ್ ಇನ್ನಿಲ್ಲ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಖ್ಯಾತ ನಟ ಹರೀಶ್ ರಾಯ್ ವಿಧಿವಶರಾಗಿದ್ದಾರೆ.ಅನೇಕ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದ ಹರೀಶ್ ರಾಯ್ ಹಲವು ದಶಕಗಳಿಂದ ಸಿನಿಮಾ ಲೋಕದಲ್ಲಿ ಸೇವೆ ಸಲ್ಲಿಸುತ್ತಿದ್ದರು.55 ವರ್ಷ ವಯಸ್ಸಿನ ಅವರು ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿ ಆಗದೇ ಗುರುವಾರ ಕೊನೆಯುಸಿರೆಳೆದಿದ್ದಾರೆ.ಪತ್ನಿ ಆರತಿ ಹಾಗೂ ಮಗ ರೋಷನ್ ಸಹಿತ ಅನೇಕ ಬಂಧುಗಳನ್ನು ಅವರು ಆಗಲಿದ್ದಾರೆ. ಹರೀಶ್ ರಾಯ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ....
ಮೇಕೆದಾಟು ಯೋಜನೆ; ಕಾಲಹಾರಣ ಮಾಡಬಾರದು, ವಕೀಲರಿಗೆ ಡಿಕೆಶಿ ಸಲಹೆ

ಮೇಕೆದಾಟು ಯೋಜನೆ; ಕಾಲಹಾರಣ ಮಾಡಬಾರದು, ವಕೀಲರಿಗೆ ಡಿಕೆಶಿ ಸಲಹೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ; ಮೇಕೆದಾಟು ಸೇರಿದಂತೆ ಸುಪ್ರೀಂಕೋರ್ಟ್ ಅಲ್ಲಿ ಬಾಕಿಯಿರುವ ಕರ್ನಾಟಕದ ಜಲ ವಿವಾದಗಳ ಕುರಿತು ಕರ್ನಾಟಕದ ಪರ ವಾದಿಸುತ್ತಿರುವ ಹಿರಿಯ ವಕೀಲರಾದ ಮೋಹನ್ ವಿ ಕಾತರಾಕಿ, ನಿಶಾಂತ್ ಪಾಟೀಲ್, ರಾಜ್ಯದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ನನ್ನ ತಾಂತ್ರಿಕ ಸಲಹೆಗಾರರಾದ ಜೈಪ್ರಕಾಶ್ ಜೊತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯ ಕರ್ನಾಟಕ ಭವನದಲ್ಲಿ ಚರ್ಚೆ ನಡೆಸಿದರು.ಕೃಷ್ಣಾ ಮೇಲ್ದಂಡೆ ಯೋಜನೆ ಸಂಬಂಧ ಈಗಾಗಲೇ ರೈತರಿಗೆ ಭೂ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ. ಹೊಸ ಕಾಯ್ದೆ ಪ್ರಕಾರ ಇದಕ್ಕೆ ಪ್ರತ್ಯೇಕ ಪ್ರಾಧಿಕಾರ ರಚಿಸಬೇಕಿದೆ. ಬೇರೆ ರಾಜ್ಯಗಳಲ್ಲಿ ಈ ಪ್ರಾಧಿಕಾರ ರಚನೆ ಆಗಿವೆ. ಬಿಹಾರದಲ್ಲಿ ಪ್ರಾಧಿಕಾರದ ಮೂಲಕ ಸಾವಿರಾರು ಪ್ರಕರಣ ಬಗೆಹರಿಸಲಾಗಿದೆ. ಕಾನೂನು ಉಪಯೋಗಿಸಿಕೊಳ್ಳಬೇಕು. ಮಹದಾಯಿ ಯೋಜನೆ ಸಂಬಂಧ ಕೆಲವು ದಾಖಲೆ ಸಿದ್ಧಪಡಿಸಲು ಅವರು ಸೂಚಿಸಿದರು.ಮೇಕೆದಾಟು ಯೋಜನೆ ಸಂಬಂಧ ಕೇಂದ್ರ ಸಚಿವರ ಪತ್ರ ನಮ್ಮ ಬಳಿ ಇದೆ. ಈ ಯೋಜನೆ ಅಂದಾಜು ವೆಚ್ಚ 9 ಸಾವಿರ ಕೋಟಿ ಇತ್ತು. ಈಗ 13-14 ಸಾವಿರ ಕೋಟಿಗೆ ಏರಿಕೆಯಾಗಿದೆ...
KMF ಗೂ ಗ್ಯಾರೆಂಟಿ ಹೊಡೆತ? ನಂದಿನಿ ತುಪ್ಪ ದುಬಾರಿ

KMF ಗೂ ಗ್ಯಾರೆಂಟಿ ಹೊಡೆತ? ನಂದಿನಿ ತುಪ್ಪ ದುಬಾರಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನಂದಿನಿ ತುಪ್ಪ ದುಬಾರಿಯಾಗಲಿದೆ. ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಲು ಸರ್ಕಾರ ಸಹಮತ ವ್ಯಕ್ತಪಡಿಸಿದೆ. ಕೆಎಂಎಫ್ ನಿರ್ಧಾರ ಬಗ್ಗೆ ಸಾರ್ವಜನಿಕವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಪ್ರತಿಪಕ್ಷ ಜೆಡಿಎಸ್ ಕೂಡಾ ಆಕ್ರೋಶ ಹೊರಹಾಕಿದೆ. "ಸಾಲ ಮಾಡಿಯಾದರೂ ತುಪ್ಪ ತಿನ್ನು" ಗಾದೆ ಮಾತು. ಗ್ರಾಹಕರ ಹೊಟ್ಟೆ ಮೇಲೆ ಹೊಡೆದು @INCKarnatakaಸರ್ಕಾರ ತುಪ್ಪ ತಿನ್ನುತ್ತಿದೆ. ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆಮಾಡಿದ್ದರೂ, ಕಾಂಗ್ರೆಸ್‌ ಸರ್ಕಾರ ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಿ ಹಗಲು ದರೋಡೆ ಮಾಡುತ್ತಿದೆ.ಗ್ಯಾರಂಟಿಗಾಗಿ ಬೊಕ್ಕಸ ಖಾಲಿಮಾಡಿರುವ… pic.twitter.com/2Di1Koit0X— Janata Dal Secular (@JanataDal_S) November 5, 2025'ಸಾಲ ಮಾಡಿಯಾದರೂ ತುಪ್ಪ ತಿನ್ನು' ಗಾದೆ ಮಾತು. ಗ್ರಾಹಕರ ಹೊಟ್ಟೆ ಮೇಲೆ ಹೊಡೆದು ಕಾಂಗ್ರೆಸ್ ಸರ್ಕಾರ ತುಪ್ಪ ತಿನ್ನುತ್ತಿದೆ' ಎಂದು ಜೆಡಿಎಸ್ ಪ್ರತಿಕ್ರಿಯಿಸಿದೆ. ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆಮಾಡಿದ್ದರೂ, ಕಾಂಗ್ರೆಸ್‌ ಸರ್ಕಾರ ನಂದಿನಿ ತ...
ನ.8, 9ರಂದು ಬೆಂಗಳೂರಿನಲ್ಲಿ RSS ಸರಸಂಘಚಾಲಕ್ ಮೋಹನ್ ಭಾಗವತ್ ವಿಶೇಷ ಉಪನ್ಯಾಸಮಾಲೆ

ನ.8, 9ರಂದು ಬೆಂಗಳೂರಿನಲ್ಲಿ RSS ಸರಸಂಘಚಾಲಕ್ ಮೋಹನ್ ಭಾಗವತ್ ವಿಶೇಷ ಉಪನ್ಯಾಸಮಾಲೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವು ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ ನೂರು ವರ್ಷವನ್ನು ಪೂರ್ಣಗೊಳಿಸಿ ರಾಷ್ಟ್ರದ ಸರ್ವಾಂಗೀಣ ಉನ್ನತಿಯ ಧ್ಯೇಯದೊಂದಿಗೆ ಮುನ್ನಡೆದಿದೆ. ಶತಾಬ್ದಿ ವರ್ಷದಲ್ಲಿ ವಿಜಯದಶಮಿ ಉತ್ಸವಗಳು, ಯುವ ಸಮಾವೇಶ, ಮನೆಮನೆ ಸಂಪರ್ಕ, ಹಿಂದು ಸಮ್ಮೇಳನ, ಸಾಮಾಜಿಕ ಸದ್ಭಾವನಾ ಸಮಾವೇಶ, ಪ್ರಮುಖ ನಾಗರಿಕರ ವಿಚಾರಗೋಷ್ಠಿ ಮುಂತಾದ ವಿವಿಧ ಚಟುವಟಿಕೆಗಳನ್ನು ದೇಶಾದ್ಯಂತ ಆಯೋಜಿಸಲಾಗಿದೆ. ಸಮಾಜದ ಗಣ್ಯಮಾನ್ಯರು, ನೀತಿ ನಿರೂಪಕರು ಹಾಗೂ ಸಮಾಜಸೇವಕರೊಂದಿಗಿನ ಸಂವಾದವನ್ನು ಸಂಘವು ನೂರನೇ ವರ್ಷದಲ್ಲೂ ಮುಂದುವರಿಸಿದ್ದು, ಬೆಂಗಳೂರಿನಲ್ಲಿ ಇದೇ ನವೆಂಬರ್ 8 ಹಾಗೂ 9 ರಂದು ಸರಸಂಘಚಾಲಕರಾದ ಡಾ|| ಮೋಹನ್ ಭಾಗವತ್ ಅವರು ವಿಶೇಷ ಉಪನ್ಯಾಸಮಾಲೆಯಲ್ಲಿ ಮಾತನಾಡಲಿದ್ದಾರೆ.ಶತಾಬ್ದಿ ವರ್ಷದಲ್ಲಿ ದೇಶದ 4 ಕಡೆಗಳಲ್ಲಿ (ನವದೆಹಲಿ, ಬೆಂಗಳೂರು, ಮುಂಬಯಿ ಮತ್ತು ಕೊಲ್ಕತ್ತಾ) ಡಾ|| ಮೋಹನ್ ಭಾಗವತ್ ಅವರು ಈ ಉಪನ್ಯಾಸಮಾಲೆಗಳನ್ನು ನಡೆಸಿಕೊಡಲಿದ್ದಾರೆ. ನವದೆಹಲಿಯಲ್ಲಿ ಕಳೆದ ಆಗಸ್ಟ್ 26, 27, 28 ರಂದು ನವದೆಹಲಿಯಲ್ಲಿ ಮೊದಲ ಕಾರ್ಯಕ್ರಮ ಸುಸಂಪನ್ನಗೊಂಡಿದೆ.ಈ ಉಪನ್ಯಾ...
ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖ ಮತ್ತೊಮ್ಮೆ ಬಹಿರಂಗ: ರಾಹುಲ್ ಗಾಂಧಿ

ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖ ಮತ್ತೊಮ್ಮೆ ಬಹಿರಂಗ: ರಾಹುಲ್ ಗಾಂಧಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ.ಹಿಂದೆ ಕರ್ನಾಟಕದ ಮಹದೇವಪುರ, ನಂತರ ಅಳಂದ ವಿಧಾನಸಭಾ ಮತಗಳ್ಳತನವನ್ನು ಬಯಲು ಮಾಡಿದ್ದರು. ಇದೀಗ ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು ಮಾಡಿದ್ದಾರೆ ಎಂಬುದನ್ನು ದಾಖಲೆ ಸಹಿತ ಜನರ ಮುಂದಿಟ್ಟಿದ್ದಾರೆ. ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆಯ ಮೂಲಕ ಪ್ರಜಾತಂತ್ರದ ರಕ್ಷಣೆಯ ಮಾಡಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರ್ಕಾರದ ಜೊತೆಗೂಡಿ ಹೇಗೆ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ ಎಂಬುದಕ್ಕೆ ಈ ದಾಖಲೆಗಳು ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಮಹಾರಾಷ್ಟ್ರ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯರ ಹೆಸರುಗಳನ್ನಷ್ಟೇ ಬಳಸಿ ನಕಲಿ ಮತದಾರರನ್ನು ಸೃಷ್ಟಿಸುತ್ತಿದ್ದ ಬಿಜೆಪಿ ಮತ್ತು ಚುನಾವಣಾ ಆಯೋಗ, ಹರಿಯಾಣದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಬ್ರೆಜಿಲ್‌ನ ರೂಪದರ್ಶಿಯ ಗುರುತನ್ನು ಕೂಡ ತನ್ನ ಮತಗಳ್ಳತನಕ್ಕೆ ಬಳಕೆ ಮಾಡಿಕೊಂಡಿರುವುದು ಅ...
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ₹5 ಲಕ್ಷ ಪರಿಹಾರ

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ₹5 ಲಕ್ಷ ಪರಿಹಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ (55) ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ, ರಾಜ್ಯ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.ಸೋಮವಾರ ಬೆಳಗ್ಗೆ ನಗರದ ಕಾವೇರಿ ಉದ್ಯಾನವನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಂಜೇಗೌಡ ಅವರನ್ನು ತಕ್ಷಣ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟರು.ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು....
ಫೆ.28ರಿಂದ ಮಾರ್ಚ್ 17ರವರೆಗೆ ಪಿಯುಸಿ ಪರೀಕ್ಷೆ–1 , ಏ.25ರಿಂದ ಮೇ 9ರವರೆಗೆ ಪರೀಕ್ಷೆ–2

ಫೆ.28ರಿಂದ ಮಾರ್ಚ್ 17ರವರೆಗೆ ಪಿಯುಸಿ ಪರೀಕ್ಷೆ–1 , ಏ.25ರಿಂದ ಮೇ 9ರವರೆಗೆ ಪರೀಕ್ಷೆ–2

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 2025–26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–1 ಮತ್ತು ಪರೀಕ್ಷೆ–2ರ ಅಂತಿಮ ವೇಳಾಪಟ್ಟಿಯನ್ನು ಪ್ರೀ-ಯೂನಿವರ್ಸಿಟಿ ಶಿಕ್ಷಣ ಇಲಾಖೆ ಬುಧವಾರ ಪ್ರಕಟಿಸಿದೆ.ಅದರಂತೆ ಪರೀಕ್ಷೆ–1 ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ, ಹಾಗೂ ಪರೀಕ್ಷೆ–2 ಏಪ್ರಿಲ್ 25ರಿಂದ ಮೇ 9ರವರೆಗೆ ನಡೆಯಲಿದೆ. ಪರೀಕ್ಷೆ–1 ವೇಳಾಪಟ್ಟಿಫೆ. 28: ಕನ್ನಡ, ಅರೇಬಿಕ್ ಮಾ. 2: ಭೂಗೋಳಶಾಸ್ತ್ರ, ಅಂಕಿಅಂಶಗಳು, ಮನೋವಿಜ್ಞಾನ ಮಾ. 3: ಇಂಗ್ಲಿಷ್ ಮಾ. 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮಾ. 5: ಇತಿಹಾಸ, ಗೃಹ ವಿಜ್ಞಾನ ಮಾ. 6: ಭೌತಶಾಸ್ತ್ರ ಮಾ. 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂವಿಜ್ಞಾನ ಮಾ. 9: ರಸಾಯನಶಾಸ್ತ್ರ, ಶಿಕ್ಷಣ, ಮೂಲ ಗಣಿತ ಮಾ.10: ಅರ್ಥಶಾಸ್ತ್ರ ಮಾ.11: ತರ್ಕಶಾಸ್ತ್ರ, ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ ಮಾ.12: ಹಿಂದಿ ಮಾ.13: ರಾಜ್ಯಶಾಸ್ತ್ರ ಮಾ.14: ಲೆಕ್ಕಪತ್ರ ನಿರ್ವಹಣೆ ಮಾ.16: ಸಮಾಜಶಾಸ್ತ್ರ, ಗಣಿತ ಮಾ.17: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ...