
ಕಚೇರಿ ಅವಧಿ ಮುಗಿದ ನಂತರ ಮೇಲ್ಮನವಿ ವಿಚಾರಣೆ; RTI ಕಾರ್ಯಕರ್ತರನ್ನು ಹೀನಾಯವಾಗಿ ನಡೆದುಕೊಂಡ ಅಧೀಕ್ಷಕ ಇಂಜಿನೀಯರ್
ಬೆಂಗಳೂರು: ರಾಜ್ಯ ಸರ್ಕಾರದ ಅಧಿಕಾರಿಗಳು ಸಾರ್ವಜನಿಕರನ್ನು ಯಾವ ರೀತಿ ಹೀನಾಯವಾಗಿ ಕಾಣುತ್ತಾರೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಗರಣಗಳ ವಿರುದ್ಧ ಹೋರಾಟ ನಡೆಸಿ ಭ್ರಷ್ಟಾಚಾರ ಮುಕ್ತ ಅಧಿಕಾರ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳುತ್ತದೆ ಹಾಗೂ ಹಿಂದಿನ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳನ್ನು ಬಯಲು ಮಾಡುವಲ್ಲಿ ಮುಂಚೂಣಿಯಲ್ಲಿದ್ದ ಸಚಿವ ಪ್ರಿಯಾಂಕ್ ಖರ್ಗೆಯವರು ಇದೀಗ ತಮ್ಮ ಇಲಾಖೆಯ ಅಧಿಕಾರಿಯ ಕರ್ತವ್ಯಲೋಪ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದೇ ಕುತೂಹಲದ ವಿಷಯ.ಈ ಸರ್ಕಾರದ ಅವಧಿಯಲ್ಲೂ ಅಧಿಕಾರಿಗಳ ದೌಲತ್ತು, ಕರ್ತವ್ಯಲೋಪಗಳು ಸಾರ್ವಜನಿಕರಿಗೆ ಸವಾಲಾಗಿದೆ ಎಂಬುದಕ್ಕೆ ದಾವಣಗೆರೆಯಲ್ಲಿ ನಡೆದಿರುವ ಈ ಪ್ರಕರಣ ಸಾಕ್ಷಿಯಾಗಿದೆ. ಬೆಂಗಳೂರಿನ ಆಲ್ವಿನ್ ಎಂ ಎಂಬವರು ಸಲ್ಲಿಸಿದ್ದ ಮಾಹಿತಿ ಹಕ್ಕು ಮೇಲ್ಮನವಿಯೊಂದರ ವಿಚಾರಣೆ ವೇಳೆ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವೃತ್ತದ ಅಧೀಕ್ಷಕ ಅಭಿಯಂತರ ಇಂದ್ರಕುಮಾರ್ ಅವರು ಮೇಲ್ಮನವಿ ಪ್ರತಿನಿಧಿ ಜೊತೆ ಹೀನಾಯವಾ...









