Thursday, August 13

ವಿದೇಶ

ಸ್ಪೀಕರ್ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಡಿದ ಬಿಜೆಪಿ ನಾಯಕರ  ವಿರುದ್ಧ ಹಕ್ಕುಚ್ಯುತಿ ದೂರು; ಕಾಂಗ್ರೆಸ್ MLC ಐವನ್ ಡಿಸೋಜಾ

ಸ್ಪೀಕರ್ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಡಿದ ಬಿಜೆಪಿ ನಾಯಕರ ವಿರುದ್ಧ ಹಕ್ಕುಚ್ಯುತಿ ದೂರು; ಕಾಂಗ್ರೆಸ್ MLC ಐವನ್ ಡಿಸೋಜಾ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ದ ಬಿಜೆಪಿ ನಾಯಕರು ಮಾಡಿರುವ ಭ್ರಷ್ಟಾಚಾರದ ಆರೋಪ ಸತ್ಯಕ್ಕೆ ದೂರವಾದುದು. ರಾಜಕೀಯ ದುರುದ್ದೇಶದಿಂದ ಈ ಆರೋಪಗಳನ್ನು ಮಾಡಲಾಗಿದ್ದು, ಇದರಿಂದ ಸದನ ಹಕ್ಕುಚ್ಯುತಿ ಉಂಟಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಪ್ರತಿಕ್ರಿಯಿಸಿದ್ದಾರೆ.ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಐವನ್ ಡಿಸೋಜಾ, ಯು.ಟಿ.ಖಾದರ್ ಅವರು ಶಾಸನ ಸಭೆಯ ಅತ್ಯನ್ನತ ಹುದ್ದೆಯಾಗಿರುವ ವಿಧಾನಸಭಾಧ್ಯಕ್ಷರಾಗಿದ್ದಾರೆ. ಆ ಸ್ಥಾನದಲ್ಲಿರುವವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಸಂದರ್ಭದಲ್ಲಿ ಶಾಸನಾತ್ಮಕ ಪ್ರಕ್ರಿಯೆಗಳನ್ನು ಅನುಸಬೇಕಾಗುತ್ತದೆ. ಅದನ್ನು ಹೊರತಾಗಿ ವಿಧಾನಸಭೆಯ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಹಾಲಿ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಹಾಲಿ ಸ್ಪೀಕರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿದರು. ಇದು ಸದನವನ್ನು ನಿಂದಿಸಿದ ಹಾಗೂ ಹಕ್ಕುಚ್ಯುತಿಯ ನಡೆಯಾಗಿರುವುದರಿಂದ ಅವರ ವಿರುದ್ದ ಹಕ್ಕುಚ್ಯುತಿ ದೂರನ್ನು ನೀಡಲಾಗುವುದು ಎಂದು ಐವನ್ ಡಿಸೋಜಾ ತಿಳಿಸಿದರು.ಯು.ಟಿ.ಖಾದರ್ ರವರು ವಿಧಾನಸಭಾ ಸಚಿವಾಲಯದ ಮು...
ರಾಮಲಿಂಗ ರೆಡ್ಡಿ ಮುಂದಿನ ಸಿಎಂ? ಈ ಬಗ್ಗೆ ಅವರೇ ಹೇಳಿದ ಕಥೆ ಹೀಗಿದೆ

ರಾಮಲಿಂಗ ರೆಡ್ಡಿ ಮುಂದಿನ ಸಿಎಂ? ಈ ಬಗ್ಗೆ ಅವರೇ ಹೇಳಿದ ಕಥೆ ಹೀಗಿದೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪ್ರ'ಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ' ಎಂದು ಸಾರಿಗೆ ರಾಮಲಿಂಗ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ 'RamalingaReddyForCM' ಎಂದು ಪೋಸ್ಟ್'ಗಳು ಹರಿದಾಡುತ್ತಿವೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟನೆ ನೀಡಿರುವ ರಾಮಲಿಂಗಾ ರೆಡ್ಡಿ, 'ರಾಜ್ಯದಲ್ಲಿ ಸರ್ಕಾರ ಸದೃಢವಾಗಿದ್ದು, ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ' ಎಂದು ತಿಳಿಸಿದ್ದಾರೆ.'ನನ್ನ ಮೇಲೆ ಮತ್ತು ಪಕ್ಷದ ಮೇಲೆ ಗೌರವವಿದ್ದರೆ, ದಯವಿಟ್ಟು ಈ ರೀತಿಯ ಆಧಾರರಹಿತ ಪ್ರಚಾರವನ್ನು ತಕ್ಷಣವೇ ನಿಲ್ಲಿಸಬೇಕು' ಎಂದವರು ಮನವಿ ಮಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಲು ಎಲ್ಲಾ ರೀತಿಯಿಂದಲೂ ತಾವು ಅರ್ಹರಿದ್ದೀರಿ, ನಿಮ್ಮ ಸ್ಥಾನಮಾನದ ವಿಚಾರವಾಗಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ತಪ್ಪೇನಿಲ್ಲ.— Umesh Gowda (@Umeshgowda6975) November 2, 2025'ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಮ್ಮ ಸರ್ಕಾರ ಉತ್ತಮವಾಗಿ ಜನಪರ ಕಾರ್ಯಗಳನ್ನು ಮಾಡುತ...
ಬೆಂಗಳೂರು ರಿಚ್ಮಂಡ್ ವೃತ್ತದಲ್ಲಿ ಅಪಘಾತ: ದ್ವಿಚಕ್ರ ವಾಹನಗಳಿಗೆ ಆಂಬ್ಯುಲೆನ್ಸ್ ಡಿಕ್ಕಿ, ದಂಪತಿ ಸಾವು

ಬೆಂಗಳೂರು ರಿಚ್ಮಂಡ್ ವೃತ್ತದಲ್ಲಿ ಅಪಘಾತ: ದ್ವಿಚಕ್ರ ವಾಹನಗಳಿಗೆ ಆಂಬ್ಯುಲೆನ್ಸ್ ಡಿಕ್ಕಿ, ದಂಪತಿ ಸಾವು

ಪ್ರಮುಖ ಸುದ್ದಿ, ವಿದೇಶ, ವೀಡಿಯೊ
ಬೆಂಗಳೂರು: ರಾಜಧಾನಿಯ ರಿಚ್ಮಂಡ್ ವೃತ್ತ ಬಳಿ ಶನಿವಾರ ರಾತ್ರಿ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಹಲವಾರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. A speeding ambulance rammed into 3 bikes near Richmond Circle in Bengaluru last night, two people killed, others injured. The ambulance dragged a bike for nearly 50m before hitting a traffic police booth. Driver absconding; case filed. pic.twitter.com/n35AKSrmWH— Deepak Bopanna (@dpkBopanna) November 2, 2025ರಾತ್ರಿ 11 ಗಂಟೆ ಸುಮಾರಿಗೆ ಸಿಗ್ನಲ್‌ನಲ್ಲಿ ಹಲವಾರು ಮೋಟಾರ್‌ಸೈಕಲ್‌ಗಳು ನಿಂತಿದ್ದಾಗ, ವೇಗವಾಗಿ ಬಂದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಒಂದು ದ್ವಿಚಕ್ರ ವಾಹನವನ್ನು ಹಲವಾರು ಮೀಟರ್‌ಗಳಷ್ಟು ಎಳೆದೊಯ್ದ ಬಳಿಕ ಆಂಬ್ಯುಲೆನ್ಸ್ ಪೊಲೀಸ್ ಚೌಕಿಗೆ ಅಪ್ಪಳಿಸಿದೆ.ಅಪಘಾತದ ನಂತರ ಸ್ಥಳೀಯರು ಆಂಬ್ಯುಲೆನ್ಸನ್ನು ಮೇಲಕ್ಕೆತ್ತಲು ಹರಸಾಹಸ ಪಟ್ಟರು. ಈ...
ಬೆಂಗಳೂರು–ಎರ್ನಾಕುಲಂ ನಡುವೆ ಶೀಘ್ರ ವಂದೇ ಭಾರತ್ ಎಕ್ಸ್‌ಪ್ರೆಸ್‌ ಸಂಚಾರ; ವೇಳಾಪಟ್ಟಿ ಹೀಗಿದೆ

ಬೆಂಗಳೂರು–ಎರ್ನಾಕುಲಂ ನಡುವೆ ಶೀಘ್ರ ವಂದೇ ಭಾರತ್ ಎಕ್ಸ್‌ಪ್ರೆಸ್‌ ಸಂಚಾರ; ವೇಳಾಪಟ್ಟಿ ಹೀಗಿದೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
Aಬೆಂಗಳೂರು: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸೇವೆಗೆ ತಯಾರಿ ನಡೆದಿದೆ. ರೈಲ್ವೆ ಸಚಿವಾಲಯವು ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.ರೈಲ್ವೆ ಸಚಿವಾಲಯದ ಅಧಿಸೂಚನೆ ಪ್ರಕಾರ, ರೈಲು ಸಂಖ್ಯೆ 26651 ಕೆಎಸ್‌ಆರ್ ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರತಿ ದಿನ ಬೆಳಗ್ಗೆ 5:10ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು, ಕೃಷ್ಣರಾಜಪುರಂ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್ ಮತ್ತು ತ್ರಿಶೂರ್ ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ನಂತರ ಮಧ್ಯಾಹ್ನ 1:50ಕ್ಕೆ ಎರ್ನಾಕುಲಂ ಜಂಕ್ಷನ್ ತಲುಪಲಿದೆ. ಮರಳಿ, ರೈಲು ಸಂಖ್ಯೆ 26652 ಎರ್ನಾಕುಲಂನಿಂದ ಮಧ್ಯಾಹ್ನ 2:20ಕ್ಕೆ ಹೊರಟು, ರಾತ್ರಿ 11:00ಕ್ಕೆ ಬೆಂಗಳೂರಿಗೆ ತಲುಪಲಿದೆ. .ಈ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ದಕ್ಷಿಣ ಭಾರತದ ರಾಜ್ಯಗಳ ಪ್ರಮುಖ ನಗರಗಳ ನಡುವಿನ ಸಂಚಾರ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ....
‘ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ’; ಸಿದ್ದರಾಮಯ್ಯ

‘ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ’; ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ನೆನಪಿಸಿದರು.ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಹೇಳಿದರು. .ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ.ಗೋವಿಂದು ಅವರ ಬೇಡಿಕೆಗೆ ವಿಚಾರವಾಗಿ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸಲಾಗುವುದು. ಇಲ...
ಸೋನಿಯಾ, ರಾಹುಲ್ ಒತ್ತಡಕ್ಕೆ ಮಣಿದು RSS ನಿಷೇಧಕ್ಕೆ ಖರ್ಗೆ ಆಗ್ರಹ; AICC ಅಧ್ಯಕ್ಷ ಖರ್ಗೆಗೆ ಶೋಭಾ ತರಾಟೆ

ಸೋನಿಯಾ, ರಾಹುಲ್ ಒತ್ತಡಕ್ಕೆ ಮಣಿದು RSS ನಿಷೇಧಕ್ಕೆ ಖರ್ಗೆ ಆಗ್ರಹ; AICC ಅಧ್ಯಕ್ಷ ಖರ್ಗೆಗೆ ಶೋಭಾ ತರಾಟೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಿಷೇಧಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ, “ಈ ಹೇಳಿಕೆ ಖರ್ಗೆ ಅವರದೇ ಅಲ್ಲ, ಅದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಒತ್ತಡದ ಫಲ” ಎಂದು ಟೀಕಿಸಿದ್ದಾರೆ.ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಖರ್ಗೆ ಅವರನ್ನು ಗೌರವಿಸುತ್ತೇನೆ. ಅವರು ರಾಷ್ಟ್ರ ಮಟ್ಟದ ಹಿರಿಯ ರಾಜಕಾರಣಿ. ಆದರೆ ಅವರ ಪಕ್ಷದಲ್ಲಿ ಒಂದು ಕುಟುಂಬದ ಪ್ರಭಾವದಿಂದ ಅವರು ಸ್ವತಂತ್ರವಾಗಿ ಯೋಚಿಸಲು ಸಾಧ್ಯವಾಗುತ್ತಿಲ್ಲ. ತಮ್ಮ 50 ವರ್ಷಗಳ ರಾಜಕೀಯ ಜೀವನದಲ್ಲಿ ಅವರು ಆರ್‌ಎಸ್‌ಎಸ್ ವಿರುದ್ಧ ಒಂದೇ ಸಲವೂ ಮಾತನಾಡಿಲ್ಲ” ಎಂದು ಹೇಳಿದರು.“ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಯವರಿಂದಲೂ ಆರ್‌ಎಸ್‌ಎಸ್ ನಿಷೇಧಿಸಲು ಸಾಧ್ಯವಾಗಲಿಲ್ಲ. ಹಾಗಿದ್ದಾಗ ನಿಮ್ಮಿಂದ ಅದು ಸಾಧ್ಯವೇ? ಏನು ಪ್ರಶ್ನಿಸಿದ ಶೋಭಾ, ಈ ರೀತಿಯ ಮಾತುಗಳು ಕೇವಲ ರಾಹುಲ್ ಮತ್ತು ಸೋನಿಯಾ ಗಾಂಧಿಯವರ ಸಂತೃಪ್ತಿಗಾಗಿ ಹೊರಬರುತ್ತಿವೆ ಎ...
ರಾಮನಗರ ಬಳಿ ರೆವ್ ಪಾರ್ಟಿ; 115 ಮಂದಿ ಪೋಲೀಸ್ ವಶಕ್ಕೆ

ರಾಮನಗರ ಬಳಿ ರೆವ್ ಪಾರ್ಟಿ; 115 ಮಂದಿ ಪೋಲೀಸ್ ವಶಕ್ಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ರಾಮನಗರ: ವಾರಾಂತ್ಯದಲ್ಲಿ ಆಯೋಜಿತವಾಗಿದ್ದ ರೆವ್ ಪಾರ್ಟಿ ಮೇಲೆ ಪೊಲೀಸರು ಕ್ಷಿಪ್ರ ದಾಳಿ ಮಾಡಿ ಹಲವರನ್ನು ಬಂಧಿಸಿದ್ದಾರೆ.ರಾಮನಗರ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ದಕ್ಷಿಣ ಎಸ್‌ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ ದಿಢೀರ್ ದಾಳಿ ನಡೆಸಿದಾರು.ದೇವಿಗೆರೆ ಕ್ರಾಸ್ ಸಮೀಪದಲ್ಲಿರುವ ರೆಸಾರ್ಟ್‌ನಲ್ಲಿ ರಾತ್ರಿ ರೇವ್ ಪಾರ್ಟಿ ನಡೆಯುತ್ತಿತ್ತು ಎನ್ನಲಾಗಿದೆ. ಪೊಲೀಸರು 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಅವರಲ್ಲಿ 35 ಯುವತಿಯರು ಸೇರಿದ್ದಾರೆ. ಎನ್ನಲಾಗಿದೆ....
ರಾಜ್ಯದ ಮತ್ತಷ್ಟು ವಿಶ್ವವಿದ್ಯಾಲಯಗಳಿಗೆ ಮರುನಾಮಕರಣ? ಸಿಎಸ್ ಗೆ ಸಿಎಂ ಪತ್ರ

ರಾಜ್ಯದ ಮತ್ತಷ್ಟು ವಿಶ್ವವಿದ್ಯಾಲಯಗಳಿಗೆ ಮರುನಾಮಕರಣ? ಸಿಎಸ್ ಗೆ ಸಿಎಂ ಪತ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಿಗೆ ವಿಶ್ವಗುರು ಬಸವಣ್ಣ, ಕನಕದಾಸ, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಡಿ.ದೇವರಾಜ ಅರಸು ಹೆಸರುಗಳನ್ನು ನಾಮಕರಣ ಮಾಡುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಆದಿಕವಿ ಮಹರ್ಷಿ ವಾಲ್ಮೀಕಿ, ಅಕ್ಕಮಹಾದೇವಿ, ರಾಣಿ ಚನ್ನಮ್ಮ, ಕೃಷ್ಣದೇವರಾಯ, ಕುವೆಂಪು, ವಿಶ್ವೇಶ್ವರಯ್ಯ, ಗಂಗೂಬಾಯಿ ಹಾನಗಲ್, ರಾಜೀವ್ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರುಗಳ ಗಳ ಹೆಸರುಗಳನ್ನು ಈಗಾಗಲೇ ನಾಮಕರಣ ಮಾಡಲಾಗಿದೆ. ಸಾಮಾಜಿಕ ನ್ಯಾಯದ ಹರಿಕಾರರೆಂದು ಹೆಸರಾಗಿರುವ ವಿಶ್ವಗುರು-ಸಾಂಸ್ಕೃತಿಕ ನಾಯಕ ಬಸವಣ್ಣನವರು, ಶೂದ್ರ ಸಿದ್ಧಾಂತದ ಹರಿಕಾರರಾದ ಕನಕದಾಸರು, ಹಿಂದುಳಿದ ಸಮುದಾಯಗಳಿಗೆ ಚೈತನ್ಯ ನೀಡಿದ ರಾಜ್ಯದ ಅಭಿವೃದ್ಧಿಗೆ ಚಲನಶೀಲತೆ ತಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದೇವರಾಜ ಅರಸು ಅವರ ಹೆಸರುಗಳನ್ನು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡುವ ಅಗತ್ಯವಿದೆ ಎಂದವರು ಪ್ರತಿಪಾದಿಸಿದ್ದಾರೆ.ಈ ಕುರಿತು ಪರಿಶೀಲಿಸಿ, ಸೂಕ್ತ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪು...
ಬೆಂಗಳೂರು: ‘ಕಸ ಸುರಿಯುವ ಹಬ್ಬ’ದ ವಿರುದ್ಧ ಸಾರ್ವಜನಿಕರ ಆಕ್ರೋಶ

ಬೆಂಗಳೂರು: ‘ಕಸ ಸುರಿಯುವ ಹಬ್ಬ’ದ ವಿರುದ್ಧ ಸಾರ್ವಜನಿಕರ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಒಂದಿಲ್ಲೊಂದು ವಿಚಾರಗಳಿಂದ ವಿವಾದದ ಕೇಂದ್ರಬಿಂದುವಾಗುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ಬೆಂಗಳೂರಿನ ಕಸ ಅವಾಂತರದಿಂದಾಗಿ ನಾಗರಿಕರ ಗುರಿಯಾಗಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಎಚ್ಚರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ಕೈಗೊಂಡಿರುವ "ಕಸ ಸುರಿಯುವ ಹಬ್ಬ" ನಾಗರಿಕರ ಸಹನೆಯನ್ನು ಕೆಡಿಸುವಂತಿದೆ. ಈ ಕುರಿತಂತೆ ಸಾರ್ವಜನಿಕ ವಲಯದದಲ್ಲಿ ಆಕ್ರೋಶ ಸ್ಫೋಟಗೊಂಡಿದೆ. Good work at BSWMLBasavanagudi Constituency Bengaluru West city corporation (Zone:-2) 155 Hanumantha Nagar As per BSWML CEO sir direction "ಕಸ ಸುರಿಯುವ ಹಬ್ಬ conducted in the presence of ward Marshalls JHIs pks supervisor pks auto supervisor & local residents are involved pic.twitter.com/hP3TAvAs7i— Save BASAVANAGUDI Heritage (@SaveBasavangudi) October 30, 2025ರಾಜಧಾನಿ ಬೆಂಗಳೂರಿನಲ್ಲಿ ಕೆಲವರು ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ಸ್ವಚ್ಛತೆಗೆ ಸವಾಲಾಗಿದ್ದಾರೆ. ಈ ಪರಿಸ...
‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರ 2026ರ ಮಾರ್ಚ್ 19ರಂದು ವಿಶ್ವಾದ್ಯಂತ ಬಿಡುಗಡೆ

‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರ 2026ರ ಮಾರ್ಚ್ 19ರಂದು ವಿಶ್ವಾದ್ಯಂತ ಬಿಡುಗಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಆಕ್ಷನ್ ಡ್ರಾಮಾ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರವು 2026ರ ಮಾರ್ಚ್ 19ರಂದು ವಿಶ್ವಾದ್ಯಂತ ಬಿಡುಗಡೆ ಆಗಲಿದೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.ಚಿತ್ರದ ಬಿಡುಗಡೆ ಮುಂದೂಡಲ್ಪಟ್ಟಿದೆ ಎಂಬ ವದಂತಿಗಳಿಗೆ ತೆರೆ ಬೀಳಿಸಿದ್ದು, ಪ್ರಸಿದ್ಧ ಚಲನಚಿತ್ರ ವಿಶ್ಲೇಷಕ ತರಣ್ ಆದರ್ಶ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ನಿರ್ಮಾಪಕರೊಂದಿಗೆ ಮಾತನಾಡಿದ ನಂತರ “ಚಿತ್ರವು ನಿಗದಿತ ವೇಳಾಪಟ್ಟಿಯಂತೆ ಸಾಗುತ್ತಿದೆ” ಎಂದು ದೃಢಪಡಿಸಿದ್ದಾರೆ.ತರಣ್ ಆದರ್ಶ್ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದು, “ವದಂತಿಗಳನ್ನು ನಿಲ್ಲಿಸಿ! ಯಶ್ ಅವರ ಮುಂದಿನ ಚಿತ್ರ ‘ಟಾಕ್ಸಿಕ್’ ವಿಳಂಬವಾಗಿಲ್ಲ ಅಥವಾ ಮುಂದೂಡಲ್ಪಟ್ಟಿಲ್ಲ. ಬಿಡುಗಡೆ ದಿನಾಂಕ — ಮಾರ್ಚ್ 19, 2026 — ಸ್ಥಿರವಾಗಿದೆ. ಯುಗಾದಿ, ಗುಡಿ ಪಾಡ್ವಾ ಮತ್ತು ಈದ್ ಹಬ್ಬದ ವಾರಾಂತ್ಯಕ್ಕೆ ಇದು ಪರಿಪೂರ್ಣ ಸಮಯ. ಮುಂಬೈನಲ್ಲಿ ಯಶ್ ‘ರಾಮಾಯಣ’ ಚಿತ್ರೀಕರಣ ಮಾಡುತ್ತಿದ್ದ ಸಮಯದಲ್ಲೇ ಪೋಸ್ಟ್-ಪ್ರೊಡಕ್ಷನ್ ಪ್ರಾರಂಭವಾಗಿದೆ” ಎಂದಿ...