
ಗ್ರಾಮಗಳ ಬೆಳವಣಿಗೆಗೆ ಸರ್ಕಾರದಿಂದ ಮತ್ತೊಂದು ಮಹತ್ವದ ತೀರ್ಮಾನ
ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳನ್ನು ನಿರ್ಮಿಸಲು ನಿಯಮಗಳ ಸುತ್ತೋಲೆಯನ್ನು ಸರ್ಕಾರ ಹೊರಡಿಸಿದೆ.ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ರ ಪ್ರಕರಣ 199(ಬಿ) ರಲ್ಲಿ ಕಟ್ಟಡ ನಿರ್ಮಾಣ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿ.ಐ.ಡಿಯನ್ನು ನೀಡಲು, ಗ್ರಾಮ ಪಂಚಾಯತಿ ಅಥವಾ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಲಾದ ಪ್ರಾಧಿಕಾರಗಳು, ಅಧಿಕಾರ ವ್ಯಾಪ್ತಿಯ ಯೋಜನಾ ಪ್ರಾಧಿಕಾರದ ಮೂಲಕ ಬಡಾವಣೆ ನಕ್ಷೆಗಾಗಿ ಪೂರ್ವಾನುಮೋದನೆಯನ್ನು ಪಡೆದುಕೊಳ್ಳಲು ಅಭಿವೃದ್ಧಿದಾರರು ನಮೂನೆ-1ರಲ್ಲಿ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಪಂಚಾಯತಿಗೆ ಸಲ್ಲಿಸಬೇಕು.ವಿನ್ಯಾಸ ನಕ್ಷೆಯ ಪ್ರಕಾರ ಬಡಾವಣೆಯ ಮಾಲೀಕರು ಸಂಬಂಧಿಸಿದ ಗ್ರಾಮ ಪಂಚಾಯತಿಗೆ ವಿನ್ಯಾಸ ನಕ್ಷೆಯ ಪ್ರಕಾರ ರಸ್ತೆಗಳ ಅಗಲೀಕರಣಕ್ಕೆ ಮೀಸಲಿರಿಸಿದ ರಸ್ತೆಗಳು ಸೇರಿದಂತೆ ರಸ್ತೆಗಳು, ಪಾರ್ಕ್ಗಳು, ವಾಹನ ನಿಲ್ದಾಣಗಳು, ನಾಗರೀಕ ಸೌಲಭ್ಯದ ಪ್ರದೇಶಗಳ...








