Friday, August 14

ವಿದೇಶ

ನಾವೆಲ್ಲಿಗೆ ಹೋಗಲಿ? ಸಾರ್ವಜನಿಕ ಸ್ಥಳಗಳಲ್ಲಿ ಸಂಘಗಳ ಕಾರ್ಯಕ್ರಮ ನಿರ್ಬಂಧಕ್ಕೆ ಕರವೇ ಆಕ್ರೋಶ; ಸಿದ್ದು ಸರ್ಕಾರಕ್ಕೆ ಪ್ರವೀಣ್ ಕುಮಾರ್ ಶೆಟ್ಟಿ ಎಚ್ಚರಿಕೆ

ನಾವೆಲ್ಲಿಗೆ ಹೋಗಲಿ? ಸಾರ್ವಜನಿಕ ಸ್ಥಳಗಳಲ್ಲಿ ಸಂಘಗಳ ಕಾರ್ಯಕ್ರಮ ನಿರ್ಬಂಧಕ್ಕೆ ಕರವೇ ಆಕ್ರೋಶ; ಸಿದ್ದು ಸರ್ಕಾರಕ್ಕೆ ಪ್ರವೀಣ್ ಕುಮಾರ್ ಶೆಟ್ಟಿ ಎಚ್ಚರಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮೇಲೆ ನಿರ್ಬಂಧ ಹೇರಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಪರೋಕ್ಷವಾಗಿ ಕನ್ನಡಿಗರ ಮೇಲೆ ಸವಾರಿ ಮಾಡಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ ಹೊರ ಹಾಕಿದೆ.ರಾಜ್ಯ ಸರ್ಕಾರದ ನಡೆ ಬಗ್ಗೆ ಅಸಮಾಧಾನ ಹೊರ ಹಾಕಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಸಂಸ್ಥೆಗಳ ಕಾರ್ಯಕ್ರಮಗಳನ್ನು ನಿರ್ಬಂಧಿಸುವ ಕ್ರಮ ಸರಿಯಲ್ಲ ಎಂದರು.ರಾಜ್ಯ ಸರ್ಕಾರದ ಕ್ರಮವು ಕೇವಲ RSS ನ್ನು ಕೇಂದ್ರೀಕೃತವಾಗಿಲ್ಲ, ಈ ಆದೇಶದಿಂದ RSS ಮೇಲೆ ಕಿಂಚಿತ್ತೂ ಪರಿಣಾಮ ಬೀರುವುದಿಲ್ಲ, ಬದಲಾಗಿ ಕನ್ನಡ ಸಂಘಟನೆಗಳ ಮೇಲೆ ಹಾಗೂ ಕನ್ನಡ ಕಾರ್ಯಕರ್ತರ ಮೇಲೆ ಪರಿಣಾಮ ಬೀರುತ್ತದೆ ಎಂದು ಪ್ರವೀಣ್ ಕುಮಾರ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.ಕನ್ನಡ ನಾಡು ನುಡಿಗೆ ಧಕ್ಕೆಯಾದಲ್ಲಿ ನಾಡಿಗಾಗಿ ಹೋರಾಟ ನಡೆಸುವಲ್ಲಿ ಕನ್ನಡ ಪರ ಸಂಘಟನೆಗಳು ಮುಂಚೂಣಿಯಲ್ಲಿರುತ್ತವೆ. ಹೀಗಿರುವಾಗ ಸರ್ಕಾರವು ಕನ್ನಡ ಪರ ಸಂಘಟನೆಗಳ ಹಾಗೂ ಕನ್ನಡ ನಾಡು-ನುಡಿ ಹಿತಕ್ಕೆ ದುಡಿಯುವವರ ಬಗ್ಗೆ ಯೋಚನೆ ಮಾಡಬೇಕಿತ್ತು ಎಂದು ಪ್ರವೀಣ್ ...
ಕರುನಾಡಲ್ಲಿ ‘ಕನ್ನಡ ಧ್ವಜ ಹರಿಸಲು’ ನಿರ್ಬಂಧ? ಏನಿದು ಸಿದ್ದು ಸರ್ಕಾರದ ಕನ್ನಡ ವಿರೋಧಿ ನಡೆ?

ಕರುನಾಡಲ್ಲಿ ‘ಕನ್ನಡ ಧ್ವಜ ಹರಿಸಲು’ ನಿರ್ಬಂಧ? ಏನಿದು ಸಿದ್ದು ಸರ್ಕಾರದ ಕನ್ನಡ ವಿರೋಧಿ ನಡೆ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: RSS ವಿರುದ್ದದ ಸಿದ್ದರಾಮಯ್ಯ ಸರ್ಕಾರದ ಪ್ರಹಾರಕ್ಕೆ ಕನ್ನಡ ಕಾರ್ಯಕರ್ತರು ತತ್ತರಗೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಸಂಸ್ಥೆಗಳ ಚಟುವಟಿಕೆ ಮೇಲೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿರುವ ಕ್ರಮ ಇದೀಗ ರಾಜ್ಯ ಸರ್ಕಾರಕ್ಕೆ ತಿರುಗುಬಾಣ ಎಂಬಂತಾಗಿದೆ. RSS ಮೇಲಿನ ದ್ವೇಷದ ನಡೆಯಿಂದಾಗಿ ಕನ್ನಡ ಸಂಘಟನೆಗಳೂ ಅಸ್ತಿತ್ವ ಕಳೆದುಕೊಳ್ಳುವಂತಾಗಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.RSSಗೆ ತನ್ನ ಶಾಖೆಯನ್ನು ನಡೆಸಲು ಸಾರ್ವಜನಿಕ ಸ್ಥಳವೇ ಆಗಬೇಕೆಂದಿಲ್ಲ. ಬಹುತೇಕ ಊರುಗಳಲ್ಲಿ ಯಾರದಾದರೂ ಮನೆಗಳಲ್ಲಿ ಶಾಖೆ ಹಾಗೂ ಬೈಠಕ್'ಗಳನ್ನು ನಡೆಸಲಾಗುತ್ತದೆ. ಬಹಿರಂಗ ಸಮಾವೇಶ ಮತ್ತು ಪಾಠ ಸಂಚಲನಗಳು ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುತ್ತವೆಯಾದರೂ ಅವು ವರುಷಕ್ಕೊಮ್ಮೆ ಮಾತ್ರ. ಹಾಗಾಗಿ ನಿರ್ಬಂಧದಿಂದ RSSಗೆ ಸಮಸ್ಯೆಯಾಗದು, ಆದರೆ ಇದರ ಪರಿಣಾಮ ಬೀರುವುದು ಕನ್ನಡಿಗರ ಮೇಲೆ. ಕರುನಾಡಿನ ಗಲ್ಲಿಗಲ್ಲಿಗಳಲ್ಲಿ ಕನ್ನಡ ಧ್ವಜ ಹಾರಿಸುವ ಕನ್ನಡಿಗರಿಗೆ ಸಿದ್ದರಾಮಯ್ಯ ಸರ್ಕಾರದ ಈ ದ್ವೇಷದ ನಿಯಮದಿಂದಾಗಿ ಅನ್ಯಾಯವಾಗುತ್ತದೆ. ತಮಿಳುನಾಡು ಸಹಿತ ಹಲವು ರಾಜ್ಯಗಲ್ಲಿ RS...
ಕರ್ನಾಟಕವನ್ನು ಚುನಾವಣೆಗೆ ಎಟಿಎಂ ಮಾಡಿಕೊಂಡ ಕಾಂಗ್ರೆಸ್ ಹೈಕಮಾಡ್

ಕರ್ನಾಟಕವನ್ನು ಚುನಾವಣೆಗೆ ಎಟಿಎಂ ಮಾಡಿಕೊಂಡ ಕಾಂಗ್ರೆಸ್ ಹೈಕಮಾಡ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಳಗಾವಿ: ಬಿಹಾರ ವಿಧಾನಸಭಾ ಚುನಾವಣೆಗೆ ಹಣ ಸಂಗ್ರಹಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚಿಗೆ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿದ್ದರು ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಬಿಹಾರ ಚುನಾವಣೆಗೆ ಹಣವನ್ನು ಸಂಗ್ರಹಿಸುವ ಉದ್ದೇಶವನ್ನು ಸಿದ್ದರಾಮಯ್ಯ ಈಡೇರಿಸಬೇಕಿದೆ. ಈ ಊದೇಶಕ್ಕಾಗಿ ಅವರು ಮಂತ್ರಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದ ಪ್ರತಿಯೊಬ್ಬರಲ್ಲೂ ಚುನಾವಣೆಗೆ ಹಣ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಬಾಂಬ್ ಸಿಡಿಸಿದರು.ಕರ್ನಾಟಕವನ್ನು ಚುನಾವಣೆಗೆ ಎಟಿಎಂ ಆಗಿ ಕಾಂಗ್ರೆಸ್ ಹೈಕಮಾಡ್ ಮಾಡಿಕೊಂಡಿದೆ ಎಂದು ಅವರು ದೂರಿದರು.ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಆಂತರಿಕ ಕಚ್ಚಾಟ ಹೆಚ್ಚಿದ್ದು, ಸಿಎಂ ಸ್ಥಾನದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಶೆಟ್ಟರ್ ವಿಶ್ಲೇಷಿಸಿದರು....
ವೈದ್ಯ ಪತ್ನಿಯನ್ನು ಅರಿವಳಿಕೆ ನೀಡಿ ಕೊಲೆ; ಸರ್ಜನ್ ಬಂಧನ

ವೈದ್ಯ ಪತ್ನಿಯನ್ನು ಅರಿವಳಿಕೆ ನೀಡಿ ಕೊಲೆ; ಸರ್ಜನ್ ಬಂಧನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರಿನಲ್ಲಿ ಪತ್ನಿಯನ್ನು ಅತಿಯಾದ ಅರಿವಳಿಕೆ ನೀಡಿ ಕೊಂದ ಆರೋಪದ ಮೇಲೆ ಶಸ್ತ್ರಚಿಕಿತ್ಸಕನನ್ನು ಬಂಧಿಸಲಾಗಿದೆ ಎಂದು ಪೊಲೀಸರುತಿಳಿಸಿದ್ದಾರೆ.ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ. ಮೃತಳನ್ನು 29 ವರ್ಷದ ಚರ್ಮರೋಗ ತಜ್ಞೆ ಕೃತಿಕಾ ಎಂ. ರೆಡ್ಡಿ ಎಂದು ಗುರುತಿಸಲಾಗಿದೆ. ಆಕೆಯ ಪತಿ, ಪ್ರಾಕ್ಟೀಸಿಂಗ್ ಸರ್ಜನ್ ಮಹೇಂದ್ರ ರೆಡ್ಡಿ ಜಿ.ಎಸ್.ಎಂಬಾತನೇ ಕೊಲೆ ಮಾಡಿರುವುದು ಗೊತ್ತಾದ ನಂತರ ವೈದ್ಯನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಘಟನೆ ಮೇ 26, 2024 ರಂದು ಸಂಭವಿಸಿದೆ. ಈ ಸಂಬಂಧ ಆರಂಭದಲ್ಲಿ ಸಂತ್ರಸ್ತೆಯ ಸಹೋದರಿ ನಿಕಿತಾ ಎಂ. ರೆಡ್ಡಿ ದೂರು ದಾಖಲಿಸಿದ್ದರು. ಪೊಲೀಸರು ಇದನ್ನು ಅಸ್ವಾಭಾವಿಕ ಸಾವು ಪ್ರಕರಣ ಎಂದು ದಾಖಲಿಸಿದ್ದಾರೆ. ಮೃತಳ ತಂದೆ ಮುನಿ ರೆಡ್ಡಿ ಕೆ. ಅವರು ಮಂಗಳವಾರ ಹೊಸದಾಗಿ ದೂರು ನೀಡಿದ ನಂತರ, ಪೊಲೀಸರು ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 103 ರ ಅಡಿಯಲ್ಲಿ ಮರು ಎಫ್‌ಐಆರ್ ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಅವರನ್ನು ಉಡುಪಿಯಲ್ಲಿ ಮಂಗಳವಾರ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ...
ಕರ್ನಾಟಕ ನೂತನ ಮಾಹಿತಿ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ ನೇಮಕ

ಕರ್ನಾಟಕ ನೂತನ ಮಾಹಿತಿ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ ನೇಮಕ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದಲ್ಲಿ ಖಾಲಿ ಇರುವ ಮೂರು ಆಯುಕ್ತರ ಹುದ್ದೆಗಳಿಗೆ ರಾಜ್ಯ ಸರ್ಕಾರ ನೇಮಕ ಮಾಡಿದೆ. ನಿವೃತ್ತ ಐಎಎಸ್ ಅಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ, ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ. ಮಹೇಶ್ ವಾಳ್ವೇಕರ್ ಆಯೋಗದ ಬೆಂಗಳೂರು ಪೀಠಗಳಿಗೆ ಕಮೀಷನರ್ ಆಗಿ ಸರ್ಕಾರ ನೇಮಕ ಮಾಡಿದೆ. ಕಲಬುರಗಿ ಪೀಠಕ್ಕೆ ಬಿ.ವೆಂಕಟ್ ಸಿಂಗ್ ಅವರನ್ನು ಆಯುಕ್ತರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ ರವರು ಭಾರತೀಯ ಆಡಳಿತ ಸೇವೆ ಅಧಿಕಾರಿಯಾಗಿ, ವಿವಿಧ ಆಡಳಿತ, ವ್ಯವಸ್ಥಾಪಕ ಮತ್ತು ತಾಂತ್ರಿಕ ಕ್ಷೇತ್ರಗಳಲ್ಲಿ ಸಾಕಷ್ಟು ಅನುಭವ ಹೊಂದಿರುವ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ, ರಸ್ತೆ ಸುರಕ್ಷತೆ, ಸಾರ್ವಜನಿಕ ಕಲ್ಯಾಣ ಮತ್ತು ಸಂಪನ್ಮೂಲ ನಿರ್ವಹಣೆಯಲ್ಲಿ ಮಾಡಿರುವ ಸಾಧನೆ ಹೆಗ್ಗುರುತಾಗಿದೆ. ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ ಪದವಿ ನಂತರ, ಮಾನವ ಸಂಪನ್ಮೂಲ ನಿರ್ವಹಣೆಯಲ್ಲಿ ಸ್ನಾತಕೋತ್ತರ ವ್ಯವಹಾರ ಆಡಳಿತದಲ್ಲಿ MBA ಶಿಕ್ಷಣ ಪಡೆದಿದ್ದಾರೆ. “ರಸ್ತೆ ...
ಶೂನ್ಯ ಅಭಿವೃದ್ಧಿ ಶೂರರು ಅನಗತ್ಯ ಟ್ವೀಟ್ ಮಾಡುತ್ತಾರೆ; ‘No More Buses’ ಎಂದ ತೇಜಸ್ವಿ ಸೂರ್ಯಗೆ ರಾಮಲಿಂಗಾ ರೆಡ್ಡಿ ತರಾಟೆ

ಶೂನ್ಯ ಅಭಿವೃದ್ಧಿ ಶೂರರು ಅನಗತ್ಯ ಟ್ವೀಟ್ ಮಾಡುತ್ತಾರೆ; ‘No More Buses’ ಎಂದ ತೇಜಸ್ವಿ ಸೂರ್ಯಗೆ ರಾಮಲಿಂಗಾ ರೆಡ್ಡಿ ತರಾಟೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ಸಾರಿಗೆ ವ್ಯವಸ್ಥೆ ಬಗ್ಗೆ ಟೀಕಿಸಿರುವ, ಅದರಲ್ಲೂ ಬೆಂಗಳೂರಿನ ಸಾರಿಗೆ ವ್ಯವಸ್ಥೆ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಉದ್ಯಮಿ ಮೋಹನದಾಸ್ ಪೈ ಅವರನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತರಾಟೆಗೆ ತೆಗೆದುಕೊಂಡಿದ್ದಾರೆ.ಕರ್ನಾಟಕದ ಸಾರಿಗೆ ನಿಗಮಗಳ ಸುಧಾರಣೆ ಬಗ್ಗೆ ಅಂಕಿಅಂಶಗಳನ್ನು ಮುಂದಿಟ್ಟಿರುವ ರಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಗುಜರಾತ್, ರಾಜಸ್ಥಾನ, ಒಡಿಶಾಗಳಲ್ಲಿ ಪ್ರತಿ ಸಾವಿರ ಜನರಿಗೆ ಲಭ್ಯವಿರುವ ಬಸ್ಸುಗಳ ಸಂಖ್ಯೆ ಕಡಿಮೆಯಿದೆ. ಕರ್ನಾಟಕ ಆ ಎಲ್ಲಾ ರಾಜ್ಯಗಳಿಗಿಂತ ಪ್ರಗತಿ ಸಾಧಿಸಿದೆ ಎಂದು ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಉದ್ಯಮಿ ಮೋಹನದಾಸ್ ಪೈ ಅವರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಎದಿರೇಟು ನೀಡಿದರು. ಬೆಂಗಳೂರು ನಗರದ ಜೀವನಾಡಿಯಾಗಿರುವ ಬಿಎಂಟಿಸಿಯು ಪ್ರತಿದಿನ 48 ಲಕ್ಷ ಜನರಿಗೆ ಸಾರಿಗೆ ಸೇವೆಯನ್ನು ಒದಗಿಸುತ್ತಿದೆ. ಬೆಂಗಳೂರು ನಗರದಲ್ಲಿ ಬಿಎಂಟಿಸಿ ಜೊತೆಗೆ ಮೆಟ್ರ...
ಬೆಂಗಳೂರಿನಲ್ಲಿ ಸಣ್ಣ ವಿಸ್ತೀರ್ಣದ ಮನೆಗಳಿಗೆ ಇನ್ನು OC ಅಗತ್ಯವಿಲ್ಲ

ಬೆಂಗಳೂರಿನಲ್ಲಿ ಸಣ್ಣ ವಿಸ್ತೀರ್ಣದ ಮನೆಗಳಿಗೆ ಇನ್ನು OC ಅಗತ್ಯವಿಲ್ಲ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಬಡವರು ಹಾಗೂ ಮಧ್ಯಮ ವರ್ಗದವರು ನಿರ್ಮಿಸಿರುವ ಸಣ್ಣ ವಿಸ್ತೀರ್ಣದ ಮನೆಗಳಿಗೆ ಈಗ ಸ್ವಾಧೀನಾನುಭವ (Occupancy Certificate–OC) ಅಗತ್ಯವಿಲ್ಲ ಎಂಬ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.ಇದುವರೆಗೆ ಓಸಿ ಇಲ್ಲದ ಕಟ್ಟಡಗಳಿಗೆ ಬೆಸ್ಕಾಂ ವಿದ್ಯುತ್ ಸಂಪರ್ಕ ಹಾಗೂ ಜಲಮಂಡಳಿ ನೀರಿನ ಸಂಪರ್ಕ ನೀಡುತ್ತಿರಲಿಲ್ಲ. ಆದರೆ ಇದೀಗ 30x40 ಅಡಿ ವಿಸ್ತೀರ್ಣದ ನಿವೇಶನಗಳ ಮನೆಗಳಿಗೆ ಓಸಿ ವಿನಾಯಿತಿ ನೀಡುವಂತೆ ಸರ್ಕಾರ ತೀರ್ಮಾನಿಸಿದೆ.ಸಚಿವ ಸಂಪುಟದ ಅನುಮೋದನೆಯಂತೆ ನಗರಾಭಿವೃದ್ಧಿ ಇಲಾಖೆ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದ್ದು, ಸಾವಿರಾರು ಸಣ್ಣ ಮನೆಮಾಲೀಕರಿಗೆ ಇದರಿಂದ ದೊಡ್ಡದಾದ ತಾತ್ಕಾಲಿಕ ನಿಟ್ಟಿನಲ್ಲಿಯೇ ನಿಟ್ಟಿನ ಸುಧಾರಣೆಯಾಗಿದೆ ಎಂದು ನಗರಾಭಿವೃದ್ಧಿ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ....
‘ಎರಡು ಐತಿಹಾಸಿಕ ವಿಶ್ವ ದಾಖಲೆಗಳೊಂದಿಗೆ KSRTC ಜಾಗತಿಕ ವೇದಿಕೆಗೆ ಪ್ರವೇಶಿಸಿದೆ’;ಸಿಎಂ

‘ಎರಡು ಐತಿಹಾಸಿಕ ವಿಶ್ವ ದಾಖಲೆಗಳೊಂದಿಗೆ KSRTC ಜಾಗತಿಕ ವೇದಿಕೆಗೆ ಪ್ರವೇಶಿಸಿದೆ’;ಸಿಎಂ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಿಂದ ಪ್ರಮಾಣೀಕರಿಸಲ್ಪಟ್ಟ ಎರಡು ಐತಿಹಾಸಿಕ ವಿಶ್ವ ದಾಖಲೆಗಳೊಂದಿಗೆ ಕರ್ನಾಟಕ ಜಾಗತಿಕ ವೇದಿಕೆಗೆ ಪ್ರವೇಶಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.ಶಕ್ತಿ ಯೋಜನೆಯ ಯಶಸ್ಸಿನ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ, ಶಕ್ತಿ ಯೋಜನೆ ಮಹಿಳೆಯರು ಪಡೆದ ಅತಿ ಹೆಚ್ಚು ಉಚಿತ ಬಸ್ ಪ್ರಯಾಣಗಳು - 564.10 ಕೋಟಿ ಪ್ರಯಾಣಗಳು, ದೈನಂದಿನ ಚಲನಶೀಲತೆಯನ್ನು ಸಬಲೀಕರಣಗೊಳಿಸುತ್ತವೆ ಎಂದಿದ್ದಾರೆ.ಕೆಎಸ್‌ಆರ್‌ಟಿಸಿ ವಿಶ್ವದ ಅತಿ ಹೆಚ್ಚು ಪ್ರಶಸ್ತಿ ವಿಜೇತ ರಸ್ತೆ ಸಾರಿಗೆ ನಿಗಮ - 1997 ರಿಂದ 464 ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಗೌರವಗಳನ್ನು ಪಡೆದುಕೊಂಡಿದೆ. ನಮ್ಮ ಆಡಳಿತದ ದೃಷ್ಟಿಕೋನವು ಸಾಮಾಜಿಕ ನ್ಯಾಯ, ಮಹಿಳಾ ಸಬಲೀಕರಣ ಮತ್ತು ವಿಶ್ವ ದರ್ಜೆಯ ಸಾರ್ವಜನಿಕ ಸೇವೆಯಲ್ಲಿ ಬೇರೂರಿದೆ. ಈ ಮನ್ನಣೆಗಳು ಸಮಗ್ರ ಮತ್ತು ಸಹಾನುಭೂತಿಯ ನೀತಿ ನಿರೂಪಣೆಯು ಏನನ್ನು ಸಾಧಿಸಬಹುದು ಎಂಬುದರ ಪ್ರತಿಬಿಂಬವಾಗಿದೆ ಎಂದವರು ಹೇಳಿಕೊಂಡಿದ್ದಾರೆ. Karnataka enters the global stage with two his...
ಸಾಂಸ್ಕೃತಿಕ ರಾಜಧಾನಿಯಲ್ಲಿ ಅ.17 ರಂದು ಬೃಹತ್ ಉದ್ಯೋಗ ಮೇಳ

ಸಾಂಸ್ಕೃತಿಕ ರಾಜಧಾನಿಯಲ್ಲಿ ಅ.17 ರಂದು ಬೃಹತ್ ಉದ್ಯೋಗ ಮೇಳ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯ ಮಹಾರಾಜ ಕಾಲೇಜು‌ ಮೈದಾನದಲ್ಲಿ ಅಕ್ಟೋಬರ್ 17 ರಂದು ನಡೆಯಲಿರುವ ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈಗಾಗಲೇ 24000 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 221 ಕಂಪನಿಗಳು ಭಾಗವಹಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್‌ ಪಾಟೀಲ್ ಅವರು ತಿಳಿಸಿದರು.ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಸಚಿವರು ಮಾಹಿತಿ ನೀಡಿದರು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಹಾಗೂ ನೇರವಾಗಿ ಕಾರ್ಯಕ್ರಮದ ದಿನದಂದು ಆಗಮಿಸಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ರಾಜ್ಯಾದ್ಯಾಂತ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು https://udyogamela.ksdckarnataka.comಗೆ ಹೆಸರು ನೋಂದಾಯಿಸಿಕೊಳ್ಳಬಹುದು‌. ಹೆಚ್ಚಿನ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗ ಮೇಳವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರುಉದ್ಯೋಗ ಮೇಳದಲ್ಲಿ 221 ಕಂಪನಿಗಳು ಭಾಗವಹಿಸಲು ಹೆಸರು ನೋಂದಾಯಿಸಿಕೊಂಡಿದ್ದ...
ಸಿಜೆಐ ಮೇಲೆ ದಾಳಿ ನಡೆಸಿದವರಷ್ಟೇ ಅಲ್ಲ, ಬೆಂಬಲಿಸಿ ಪೋಸ್ಟ್ ಹಾಕಿದವರಿಗೂ ಸಂಚಕಾರ? ಸಿಎಂ ಮೇಲೆ ವಕೀಲರ ಒತ್ತಡ

ಸಿಜೆಐ ಮೇಲೆ ದಾಳಿ ನಡೆಸಿದವರಷ್ಟೇ ಅಲ್ಲ, ಬೆಂಬಲಿಸಿ ಪೋಸ್ಟ್ ಹಾಕಿದವರಿಗೂ ಸಂಚಕಾರ? ಸಿಎಂ ಮೇಲೆ ವಕೀಲರ ಒತ್ತಡ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದು ಅಪಮಾನಿಸಿದ ಕೃತ್ಯದ ವಿರುದ್ಧ ಕೃತ್ಯದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಅಷ್ಟೇ ಅಲ್ಲ ದೇಶದ ಹಲವೆಡೆ ಪ್ರಕರಣಗಳು ದಾಖಲಾಗಿವೆ. ಆದರೆ. ಇನ್ನೊಂದೆಡೆ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ನಡೆಸಿದ ಕೃತ್ಯವನ್ನು ಸಮರ್ಥಿಸುತ್ತಿರುವ ಸನ್ನಿವೇಶವೂ ಕಂಡುಬರುತ್ತಿದೆ. ಈ ಬೆಳವಣಿಗೆ ಬಗ್ಗೆ ಕಾನೂನು ತಜ್ಞರು ಹಾಗೂ ವಕೀಲರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ರಾಕೇಶ್ ಕಿಶೋರ್ ನಡೆಸಿರುವ ಸಂವಿಧಾನ ವಿರೋಧಿ ಕೃತ್ಯವನ್ನು ಕೆಲವರು ಸಮರ್ಥಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿರುವ ಪ್ರಕರಣಕ್ಕೆ ಕರ್ನಾಟಕವೂ ಸಾಕ್ಷಿಯಾಗಿವೆ. ಈ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಸರ್ಕಾರಿ ಅಭಿಯೋಜಕರೂ ಆದ ಮಂಗಳೂರಿನ ಹಿರಿಯ ವಕೀಲ ಮನೋರಾಜ್ ರಾಜೀವ್, ಅಂತಹಾ ಕೃತ್ಯವನ್ನು ಬೆಂಬಲಿಸಿ ಪ್ರಚಾರ ಮಾಡುವವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಪ್ರತಿಪಾದಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ಅಧ್ಯಕ್ಷರೂ ...