Friday, August 14

ವಿದೇಶ

ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ಅಂಕುಶ ಹಾಕಿ; ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ

ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ಅಂಕುಶ ಹಾಕಿ; ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವನ್ನು ನಿಷೇಧಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ಈ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಸಂಚಲನ ಸೃಷ್ಟಿಸಿದೆ.ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಪ್ರಿಯಾಂಕ್ ಖರ್ಗೆ ಈ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ. ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ.ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್… pic.twitter...
ಅಧಿಕಾರ ಶಾಶ್ವತವಲ್ಲ; ಡಿಕೆಶಿ ವರ್ತನೆಗೆ ವಿಜಯೇಂದ್ರ ಆಕ್ರೋಶ

ಅಧಿಕಾರ ಶಾಶ್ವತವಲ್ಲ; ಡಿಕೆಶಿ ವರ್ತನೆಗೆ ವಿಜಯೇಂದ್ರ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪಾಳೇಗಾರಿಕೆ ಸಂಸ್ಕೃತಿಗೆ ಜಾಗವಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜನಪ್ರತಿನಿಧಿಯನ್ನು ಅಪಮಾನಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಅಗೌರವ ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಸ್ಥಳೀಯ ಶಾಸಕ ಮುನಿರತ್ನರನ್ನೇ ಆಹ್ವಾನಿಸದೆ, ಶಾಸಕರೊಂದಿಗೆ ಉಡಾಫೆಯಿಂದ ವರ್ತಿಸಿರುವುದು ಹಾಗೂ ಅವರು ಧರಿಸಿದ್ದ RSS ಗಣವೇಶವನ್ನು ಅಪಮಾನಿಸಿರುವುದು ಉದ್ಧಟತನದ ಪರಮಾವಧಿಯಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಡಿಕೆ ಶಿವಕುಮಾರ್ ಅವರ ಈ ನಡೆ ಸರ್ವಾಧಿಕಾರಿತನವನ್ನು ಪ್ರತಿಬಿಂಬಿಸಿದೆ ಎಂದು ಪ್ರತಿಕ್ರಿಯಿಸಿರುವ ವಿಜಯೇಂದ್ರ ಅಧಿಕಾರ ಶಾಶ್ವತವಲ್ಲ, ಅದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರು ನೀಡುವ ಭಿಕ್ಷೆ ಎಂಬ ಪರಿಜ್ಞಾನವಿಲ್ಲದೆ ನಡೆದುಕೊಳ್ಳುತ್ತಿರುವ ಅವರ ವರ್ತನೆ ಅತ್ಯಂತ ಖಂಡನೀಯ. ಅವರ ನಡೆ, ನುಡಿ, ವರ್ತನೆಯನ್ನು ಜನರು ಗಮನಿಸುತ್ತಿದ್ದಾರೆ, ತಕ್ಕ ಉ...

‘ನನಗೆ ನನ್ನ ಗುರಿ ಗೊತ್ತಿದೆ, ನನಗೆ ಯಾವ ಆತುರವೂ ಇಲ್ಲ’: ಸಿಎಂ ಕನಸಿನ ಬಗ್ಗೆ ಡಿಕೆಶಿ ಮಾತು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ಹೇಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಈ ಕುರಿತಂತೆ ಸಾಮಾಜಿಕ ಮಾಧ್ಯಮ 'X'ನಲ್ಲಿ ಪೋಸ್ಟ್ ಹಾಕಿರುವ ಡಿಕೆಶಿ, 'ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಬೇಸರ ತಂದಿದೆ' ಎಂದು ಬರೆದುಕೊಂಡಿದ್ದಾರೆ.'ನನಗೆ ನನ್ನ ಗುರಿ ಗೊತ್ತಿದೆ, ನನಗೆ ಯಾವ ಆತುರವೂ ಇಲ್ಲ, ಈ ರೀತಿ ಹೇಳುವ ಅವಶ್ಯಕತೆಯೂ ಇಲ್ಲ' ಎಂದವರು ಹೇಳಿದ್ದಾರೆ.'ನಾನು ಯಾವುದೇ ಹುದ್ದೆಗಾಗಿ ಆತುರದಲ್ಲಿಲ್ಲ. ರಾಜ್ಯದ ಜನರ ಸೇವೆ ಮತ್ತು ಬೆಂಗಳೂರು ನಾಗರಿಕರಿಗೆ ಉತ್ತಮ ಆಡಳಿತ ನೀಡುವುದೇ ನನ್ನ ಉದ್ದೇಶ. ನಾನು ಸಾರ್ವಜನಿಕರ ಸೇವೆಗಾಗಿಯೇ ಹಗಲು-ರಾತ್ರಿ ಶ್ರಮಿಸುತ್ತಿದ್ದೇನೆ. ಸತ್ಯವನ್ನು ತಿರುಚಿ, ದಾರಿ ತಪ್ಪಿಸುವ ವರದಿಗಳಿಂದ ದೂರವಿರುವಂತೆ ಮಾಧ್ಯಮ ಮಿತ್ರರಲ್ಲಿ ನನ್ನ ಮನವಿ' ಎಂದವರು ಬರೆದುಕೊಂಡಿದ್ದಾರೆ. ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ! ಸಿಎಂ ಆಗ...
CJI ಮೇಲೆ ಶೂ ಎಸದವರು ಸನಾತನಿಗಳಲ್ಲ, ದೇಶದ್ರೋಹಿಗಳು; ಕಠಿಣ ಕಾನೂನು ಕ್ರಮಕ್ಕೆ ಮನೋರಾಜ್ ಆಗ್ರಹ

CJI ಮೇಲೆ ಶೂ ಎಸದವರು ಸನಾತನಿಗಳಲ್ಲ, ದೇಶದ್ರೋಹಿಗಳು; ಕಠಿಣ ಕಾನೂನು ಕ್ರಮಕ್ಕೆ ಮನೋರಾಜ್ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಮೇಲೆ ವಕೀಲನೊಬ್ಬ ಶೂ ಎಸೆದ ಘಟನೆಯನ್ನು ಕಾಂಗ್ರೆಸ್ ಪಕ್ಷದ ಕಾನೂನು ಘಟಕ ಖಂಡಿಸಿದೆ. ಈ ಬಗ್ಗೆ ಕರ್ನಾಟಕದ ವಕೀಲರೂ ಆಕ್ರೋಶ ಹೊರಹಾಕಿದ್ದಾರೆ.ಮಂಗಳೂರಿನ ವಕೀಲರ ಸಂಘದ ಮಾಜಿ ಅಧ್ಯಕ್ಷರೂ ಆದ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್ ಪ್ರತಿಕ್ರಿಯಿಸಿ, ಮುಖ್ಯ ನ್ಯಾಯಮೂರ್ತಿಗಳ ಮೇಲೆ ವಕೀಲ ರಾಕೇಶ್ ಕಿಶೋರ್ ನಡೆಸಿರುವ ದಾಳಿಯನ್ನು ಇಡೀ ದೇಶವೇ ಖಂಡಿಸಬೇಕಿದೆ. ಕೃತ್ಯ ಎಸಗಿದ ವ್ಯಕ್ತಿಯ ವಿರುದ್ಧ ಮೊಕದ್ದಮೆ ದಾಖಲಿಸಿ, ಅಪರಾಧಿಗೆ ಶಿಕ್ಷೆ ಆಗಲೇಬೇಕಿದೆ ಎಂದಿದ್ದಾರೆ.ನ್ಯಾಯಮೂರ್ತಿಗಳ ಮೇಲೆ ದಾಳಿ ಮಾಡಿರುವ ಘಟನೆಯನ್ನು ಸಹಿಸಲಾಗದು. ಇದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಮಾತ್ರವಲ್ಲ, ಸಂವಿಧಾನಕ್ಕೂ ಮಾಡಿರುವ ಅಪಚಾರವಾಗಿದೆ. ತಮ್ಮ ಮೇಲೆ ಶೂ ಎಸಗಿದವನನ್ನು ಕ್ಷಮಿಸಿರುವುದು ಮುಖ್ಯ ನ್ಯಾಯಮೂರ್ತಿಗಳ ಒಳ್ಳೆಯ ಗುಣವೇ ಆಗಿರಬಹುದು. ಆದರೆ, ಇದು ಸಂವಿಧಾನಕ್ಕೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿರುವ ಆಘಾತ ಎಂದು ಮನೋರಾಜ್ ರಾಜೀವ್ ಹೇಳಿದ್ದಾರೆ.ಸಿಜೆಐ ಬಿ.ಆರ್.ಗವಾಯಿಯವರು ಒಳ್ಳೆಯ ಮನಸ್ಸುಳ...
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಪ್ರಕರಣ: ಏಳು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್ ಪ್ರಕರಣ: ಏಳು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನಟಿ ಮತ್ತು ಮಾಜಿ ಸಂಸದೆಯಾದ ರಮ್ಯಾ (ದಿವ್ಯಾ ಸ್ಪಂದನ) ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದ ಆರೋಪ ಎದುರಿಸುತ್ತಿರುವ ಏಳು ಮಂದಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ನ್ಯಾ. ಶಿವಶಂಕರ್ ಅಮರಣ್ಣವರ್ ಅವರಿದ್ದ ಪೀಠವು, ಈಗಾಗಲೇ ಆರೋಪಪಟ್ಟಿ ದಾಖಲಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ.ಜಾಮೀನು ಸಿಕ್ಕಿರುವವರು ಕೆ. ಪ್ರಮೋದ್, ಮಂಜುನಾಥ್, ರಾಜೇಶ್ ಸಿ.ವೈ., ಓಬಣ್ಣ ಟಿ., ಗಂಗಾಧರ್ ಕೆ.ಎಂ. ಹಾಗೂ ಚಿನ್ಮಯ್ ಶೆಟ್ಟಿ. ಮತ್ತೊಬ್ಬ ಆರೋಪಿ ವಿಕಾಸ್ ಬಿ.ಎ. ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು (anticipatory bail) ನೀಡಿದೆ....

ಪತ್ರಕರ್ತರ ಚಿಕಿತ್ಸೆಗೆ ಜಿಬಿಎನಲ್ಲೂ ಅನುದಾನ: ಡಿಕೆಶಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪತ್ರಕರ್ತರ ಆರೋಗ್ಯ ದೃಷ್ಟಿಯಿಂದ ಚಿಕಿತ್ಸಾ ವೆಚ್ಚ ಭರಿಸಲು ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಲ್ಲೂ 2 ಕೋಟಿ ರೂ.ಗಳಿಗೂ ಮೀಸಲಿಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಬಿಬಿಎಂಪಿಯಲ್ಲಿ ಪತ್ರಕರ್ತರು ಸಾಮೂಹಿಕವಾಗಿ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಡಿ.ಕೆ.ಶಿವಕುಮಾರ್ ಅವರು, ಪತ್ರಕರ್ತರ ಚಿಕಿತ್ಸಾ ವೆಚ್ಚದ ಹಣವನ್ನು 5 ಪಾಲಿಕೆಗಳಲ್ಲಿ ಪ್ರತ್ಯೇಕವಾಗಿ ನೀಡುವ ಬದಲು ಜಿಬಿಎ ಮೂಲಕವೇ ನೀಡುವುದು ಸೂಕ್ತ ಎಂದರು.ಈ ಹಿಂದೆ ಬಿಬಿಎಂಪಿಯಲ್ಲಿ ಬಜೆಟ್ ನಲ್ಲಿ ನಿಗದಿ ಮಾಡುತ್ತಿದ್ದಂತೆ ಈಗ ಎಲ್ಲಾ 5 ನಗರ ಪಾಲಿಕೆಗಳಲ್ಲೂ ಪ್ರತ್ಯೇಕವಾಗಿ ಬಜೆಟ್ ನಲ್ಲಿ ಹಣ ನಿಗದಿ ಮಾಡಿದರೆ ಅದು ದುರ್ಬಳಕೆ ಆಗುವ ಸಾಧ್ಯತೆ ಇದೆ. ಆದ್ದರಿಂದ ಪತ್ರಕರ್ತರ ಚಿಕಿತ್ಸೆ ಬಳಕೆಯಾಗಬೇಕೆಂದರೆ ಏಕ ಮಾರ್ಗದಲ್ಲಿ ನೀಡುವಂತಾಗಬೇಕು ಎಂದು ಹೇಳಿದರು.ಜಿಬಿಎ ಅನುದಾನದಲ್ಲೇ ಪತ್ರಕರ್ತರಿಗೆ ಇಂತಿಷ್ಟು ಹಣ ನಿಗದಿ ಮಾಡಿ ಅದರ ಮೂಲಕ ನಿಯಮದ ಪ್ರಕಾರ ಹಂಚಿಕೆ ಮಾಡಲಾಗುವುದು ಎಂದು ಶಿವಕುಮಾರ್ ವಿವರಿಸಿದರು.ಈ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಶಿವಕ...
ಮಂಗಳೂರು ಬ್ಲೂಬೆರ್ರಿ ಹಿಲ್ಸ್ ಬಳಿ ವಾಣಿಜ್ಯ ಕಚೇರಿ ಟೆಕ್ ಪಾರ್ಕ್: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪದ್ಮರಾಜ್ ಸ್ವಾಗತ

ಮಂಗಳೂರು ಬ್ಲೂಬೆರ್ರಿ ಹಿಲ್ಸ್ ಬಳಿ ವಾಣಿಜ್ಯ ಕಚೇರಿ ಟೆಕ್ ಪಾರ್ಕ್: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪದ್ಮರಾಜ್ ಸ್ವಾಗತ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ಕರಾವಳಿ ಅಭಿವೃದ್ಧಿಯತ್ತ ರಾಜ್ಯ ಸರ್ಕಾರ ಮತ್ತೊಮ್ಮೆ ದಿಟ್ಟ ಹೆಜ್ಜೆ ಇಟ್ಟಿದೆ. ಮಂಗಳೂರು ಹೊರವಲಯದ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ಬಳಿ ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಸ್ವಾಗತಿಸಿದ್ದಾರೆ.ಈ ಕುರಿತಂತೆ ಮಾಧ್ಯಮ ಹೇಳಿಕೆ ನೀಡಿರುವ ಪದ್ಮರಾಜ್ ಆರ್.ಪೂಜಾರಿ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129,113ರ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ (ಡಿಬಿಎಫ್‌ಒಟಿ) ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ.ಈ ಯೋಜನೆಯಿಂದ ಕರಾವಳಿಯಲ್ಲಿ ಸಹಸ್ರಾರು ಮಂದಿಗೆ ಉದ್ಯೋಗಾವಕಾಶ ಲಭಿಸಲಿದೆ. ...
ದೇವೇಗೌಡರು ಆರೋಗ್ಯವಾಗಿದ್ದಾರೆ, ಚಿಂತಿಸಬೇಕಾಗಿಲ್ಲ: ಕುಮಾರಸ್ವಾಮಿ

ದೇವೇಗೌಡರು ಆರೋಗ್ಯವಾಗಿದ್ದಾರೆ, ಚಿಂತಿಸಬೇಕಾಗಿಲ್ಲ: ಕುಮಾರಸ್ವಾಮಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: “ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಚಿಂತಿಸಬೇಕಾಗಿಲ್ಲ. ಇನ್ನೂ ಮೂರರಿಂದ ನಾಲ್ಕು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ,” ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಚಿಂತಿಸಬೇಕಾಗಿಲ್ಲ. ತಂದೆಯವರಿಗೆ ಯಾವುದೇ ತೀವ್ರವಾದ ಆರೋಗ್ಯ ಸಮಸ್ಯೆಗಳಿಲ್ಲ. ಕಳೆದ ಮೂರು ದಿನಗಳಿಂದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ದೇವರ ಕೃಪೆ ಮತ್ತು ಜನರ ಆಶೀರ್ವಾದದಿಂದ ಅವರು ಉತ್ತಮ ಸ್ಥಿತಿಯಲ್ಲಿದ್ದಾರೆ” ಎಂದು ಹೇಳಿದರು.ಈ ನಡುವೆ ಜೆಡಿ(ಎಸ್) ಪಕ್ಷವು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ, “ಪಕ್ಷದ ಆತ್ಮೀಯ ಕಾರ್ಯಕರ್ತರು ಹಾಗೂ ಹಿತೈಷಿಗಳು ಚಿಂತಿಸಬೇಕಾಗಿಲ್ಲ. ಮಾಜಿ ಪ್ರಧಾನಿ ಮತ್ತು ಜೆಡಿ(ಎಸ್) ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಚೇತರಿಸಿಕೊಂಡಿದ್ದಾರೆ, ಉತ್ತಮ ಆರೋಗ್ಯದಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಯಾವುದೇ...
‘ಋತುಚಕ್ರ ರಜೆ ನೀತಿ’ ಐತಿಹಾಸಿಕ ತೀರ್ಮಾನ; ಪದ್ಮರಾಜ್ ಆರ್. ಪೂಜಾರಿ

‘ಋತುಚಕ್ರ ರಜೆ ನೀತಿ’ ಐತಿಹಾಸಿಕ ತೀರ್ಮಾನ; ಪದ್ಮರಾಜ್ ಆರ್. ಪೂಜಾರಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ಕರ್ನಾಟಕದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ರಜೆ ಎಂದು ವರ್ಷದಲ್ಲಿ ಹನ್ನೆರಡು ದಿನ ರಜೆ ನೀಡಲು ಮುಖ್ಯಮಂತ್ರಿ ಸಿದ್ದರಾಮ್ಯನವರ ನೇತೃತ್ವದ ಸರ್ಕಾರ ಒಪ್ಪಿಗೆ ನೀಡಿರುವುದು ಅಭಿನಂದನೀಯ. ಕರ್ನಾಟಕ ರಾಜ್ಯ ಸರ್ಕಾರ ಹೆಣ್ಣು ಮಕ್ಕಳ ಪರವಾಗಿ ಐತಿಹಾಸಿಕ ನಿರ್ಣಯ ಕೈಗೊಂಡಿದೆ ಎಂದು ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.ಸಂಪುಟದ ನಿರ್ಧಾರ ಸ್ವಾಗತಿಸಿರುವ ಪದ್ಮರಾಜ್, ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ದುಡಿಯುವ ಎಲ್ಲ ಮಹಿಳೆಯರಿಗೂ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರದ ರಜೆ ನೀಡುವುದರಿಂದ ಮಹಿಳೆಯರ ಆರೋಗ್ಯದ ದೃಷ್ಟಿಯಿಂದಲೂ ಇದೊಂದು ಉತ್ತಮ ನಿರ್ಧಾರ ಎಂದಿದ್ದಾರೆ.ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀತಿಯನ್ನು ಜಾರಿಗೆ ತರಲು ಸಚಿವ ಸಂಪುಟ ನಿರ್ಣಯಿಸಿರುವುದರಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದಿರುವ ಅವರು, ಸದಾ ಮಹಿಳೆಯರ ಪರ ಧ್ವ...
‘ನೀರಿದ್ದರೆ ನಾಳೆ’: ರಾಜ್ಯ ಸರ್ಕಾರದ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

‘ನೀರಿದ್ದರೆ ನಾಳೆ’: ರಾಜ್ಯ ಸರ್ಕಾರದ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 'ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ "ನೀರಿದ್ದರೆ ನಾಳೆ" ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು, ನಾಗರಿಕತೆ ಬೆಳೆದದ್ದು - ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ ಎಂದರು.ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ‌ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ಗಮನಸೆಳೆದರು.144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್...