Friday, August 14

ವಿದೇಶ

RSS ಹಿರಿಯ ನಾಯಕ ಕೃ.ನರಹರಿ ವಿಧಿವಶ; ಗಣ್ಯರ ಕಂಬನಿ

RSS ಹಿರಿಯ ನಾಯಕ ಕೃ.ನರಹರಿ ವಿಧಿವಶ; ಗಣ್ಯರ ಕಂಬನಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಕೃ. ನರಹರಿ ಅವರು ತಮ್ಮ 93 ವರ್ಷ ವಯಸ್ಸಿನಲ್ಲಿ ಗುರುವಾರ ಬೆಳಗ್ಗೆ 4.30ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ.ನರಹರಿ ಅವರ ನಿಧಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರೂ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಪ್ರಸಿದ್ಧ ಶಿಕ್ಷಣ ತಜ್ಞರೂ ಆಗಿದ್ದ ಕೃ. ನರಹರಿ ವಿಧಿವಶರಾಗಿದ್ದಾರೆ. ನಿಧನದಿಂದಾಗಿ ಒಂದು ಸಮಾಜಸಮರ್ಪಿತ ಜೀವನ ಅಂತ್ಯಗೊಂಡಿದೆ ಎಂದವರು ಸಂತಾಪ ಸೂಚಿಸಿದ್ದಾರೆ.ಸಂಘದ ಹಾಗೂ ಸಮಾಜ ಜೀವನದ ಹಲವು ರಂಗಗಳಲ್ಲಿ ನಿರಂತರ ಕ್ರಿಯಾಶೀಲರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಾ ಅಸಂಖ್ಯಾತ ಕಾರ್ಯಕರ್ತರಿಗೆ ಕೃ. ನರಹರಿ ಪ್ರೇರಣೆಯಾಗಿದ್ದರು ಎಂದು ದತ್ತಾತ್ರೇಯ ಹೊಸಬಾಳೆ ಸ್ಮರಿಸಿದ್ದಾರೆ. ಶಿಕ್ಷಣ ರಂಗಕ್ಕೆ ಅವರು ನೀಡಿ...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲಿನ ದಾಳಿಗೆ ವ್ಯಾಪಕ ಖಂಡನೆ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲಿನ ದಾಳಿಗೆ ವ್ಯಾಪಕ ಖಂಡನೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು : ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ಸಿಎಂ ಸಿದ್ದರಾಮಯ್ಯ  ಖಂಡಿಸಿದ್ದಾರೆ.ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಅಭಿಪ್ರಾಯವನ್ನೂ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ ಎಂದಿದ್ದಾರೆ.ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ...
ಸಮೀಕ್ಷೆಯನ್ನು ನಡೆಸದಿದ್ದರೆ, ಜನರ ಸ್ಥಿತಿಗತಿ ಅರಿಯಲು ಸಾಧ್ಯವಿಲ್ಲ’

ಸಮೀಕ್ಷೆಯನ್ನು ನಡೆಸದಿದ್ದರೆ, ಜನರ ಸ್ಥಿತಿಗತಿ ಅರಿಯಲು ಸಾಧ್ಯವಿಲ್ಲ’

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕೊಪ್ಪಳ: ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸೋಮಣ್ಣ ಮಾತಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದರು. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ಮಂಗಳವಾರ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಇದು ಒಳ್ಳೆಯ ಬೆಳವಣಿಗೆ. ಸಮಾಜದಲ್ಲ...
ಸೂಕ್ತ ಸಿದ್ಧತೆ ಇಲ್ಲದೆ ಆತುರದಲ್ಲಿ ಜಾತಿ ಸಮೀಕ್ಷೆ; ಸರ್ಕಾರಕ್ಕೆ ವಿಜಯೇಂದ್ರ ತರಾಟೆ

ಸೂಕ್ತ ಸಿದ್ಧತೆ ಇಲ್ಲದೆ ಆತುರದಲ್ಲಿ ಜಾತಿ ಸಮೀಕ್ಷೆ; ಸರ್ಕಾರಕ್ಕೆ ವಿಜಯೇಂದ್ರ ತರಾಟೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮೈಸೂರು: “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಹೆಸರಿನಲ್ಲಿ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ದಿನೇ ದಿನೇ ಗೊಂದಲ ಸೃಷ್ಟಿಸುತ್ತಿದೆ. ಇದು ಎಲ್ಲಾ ಸಮುದಾಯಗಳಲ್ಲಿಯೂ ಅಶಾಂತಿ ಉಂಟುಮಾಡಿದೆ,” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರವು ಯಾವುದೇ ಸೂಕ್ತ ಸಿದ್ಧತೆ ಇಲ್ಲದೆ ಆತುರದಲ್ಲಿ ಈ ಸಮೀಕ್ಷೆ ಪ್ರಾರಂಭಿಸಿರುವುದು ಸ್ಪಷ್ಟವಾಗಿದೆ. ಇದರ ಪರಿಣಾಮವಾಗಿ ಜನರಲ್ಲಿ ಗೊಂದಲ ಹೆಚ್ಚಾಗಿದೆ,” ಎಂದರು.“ಕಾಂಗ್ರೆಸ್ ಪಕ್ಷದೊಳಗೆ ಅಕ್ಟೋಬರ್ ಅಥವಾ ನವೆಂಬರ್ ಕ್ರಾಂತಿಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಸಂಭವನೀಯ ರಾಜಕೀಯ ಕ್ರಾಂತಿ ಮತ್ತು ಈ ಜಾತಿ ಗಣತಿಯ ನಡುವೆ ಯಾವುದೇ ಸಂಬಂಧವಿದೆಯೇ ಎಂಬ ಪ್ರಶ್ನೆ ಈಗ ಎಲ್ಲೆಡೆ ಕೇಳಿಬರುತ್ತಿದೆ,” ಎಂದು ವಿಜಯೇಂದ್ರ ಅಭಿಪ್ರಾಯಪಟ್ಟರು.ಗಣತಿ ಕಾರ್ಯದಲ್ಲಿ ವಿಕಲಚೇತನರನ್ನು ಸೇರಿಸಿರುವ ಬಗ್ಗೆ ಟೀಕೆ ವ್ಯಕ್ತಪಡಿಸಿದ ಅವರು, “ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಏಕೆ ಇಷ್ಟೊಂದು ಆತುರದಲ್ಲಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ,” ಎಂದು ಹೇಳಿದರ...
EDಯಿಂದ ಓಜೋನ್ ಅರ್ಬಾನಾ ಕಂಪನಿಯ 423 ಕೋ.ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

EDಯಿಂದ ಓಜೋನ್ ಅರ್ಬಾನಾ ಕಂಪನಿಯ 423 ಕೋ.ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ), 2002 ರ ಅಡಿಯಲ್ಲಿ ತಾತ್ಕಾಲಿಕ ಜಪ್ತಿ ಆದೇಶ ಹೊರಡಿಸಿದ್ದು, ಓಜೋನ್ ಅರ್ಬಾನಾ ಇನ್ಫ್ರಾ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರ 423.38 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದೆ.ಇಡಿ ಶನಿವಾರ ಅಧಿಕೃತ ಹೇಳಿಕೆಯ ಪ್ರಕಾರ, ಓಜೋನ್ ಅರ್ಬಾನಾ ಇನ್ಫ್ರಾ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವಿರುದ್ಧದ ಪ್ರಮುಖ ಆರೋಪವೆಂದರೆ ಅದು ಸಮಯಕ್ಕೆ ಸರಿಯಾಗಿ ಪ್ರೊಜೆಕ್ಷನ್ ನಿರ್ಮಾಣವನ್ನು ಪೂರ್ಣಗೊಳಿಸುವಲ್ಲಿ ವಿಫಲವಾಗಿದೆ ಮತ್ತು ಗ್ರಾಹಕರಿಗೆ ಸ್ವಾಧೀನವನ್ನು ಹಸ್ತಾಂತರಿಸುವಲ್ಲಿ ವಿಫಲವಾಗಿದೆ.ಫ್ಲಾಟ್ ಅನ್ನು ಮನೆ ಖರೀದಿದಾರರಿಗೆ ಹಸ್ತಾಂತರಿಸುವವರೆಗೆ ನಿರ್ಮಾಣ ಪೂರ್ವ ಇಎಂಐಗಳನ್ನು ಪಾವತಿಸಲು ಆಫರ್ ನೀಡುವ ಮೂಲಕ ಕಂಪನಿಯು ವಂಚಿಸಿದೆ ಎಂದು ಆರೋಪಿಸಲಾಗಿದೆ ಎಂದು ಇಡಿ ತಿಳಿಸಿದೆ.ಆದಾಗ್ಯೂ, ಅದು ತನ್ನ ಬದ್ಧತೆಗಳನ್ನು ಪೂರೈಸಲು ವಿಫಲವಾಗಿದೆ ಮತ್ತು ಯೋಜನೆ/ಫ್ಲಾಟ್‌ಗಳನ್ನು ಪೂರ್ಣಗೊಳಿಸಲಿಲ್ಲ. ಬಿಲ್ಡರ್ ವಸತಿ ಘಟಕಗಳನ್ನು ಮನೆ ಖರೀದಿದಾರರಿಗೆ ಹಸ್ತಾಂತರಿಸಲಿಲ್ಲ...
ಸಂವಿಧಾನಿಕ ಹುದ್ದೆಯಲ್ಲಿಲ್ಲದ ಮಹದೇವಪ್ಪನ ಮೊಮ್ಮಗನಿಗೆ ಗೌರವ ವಂದನೆ ಸ್ವೀಕರಿಸುವ ವಾಹನದಲ್ಲಿ ಅವಕಾಶ; ವ್ಯಾಪಕ ಆಕ್ರೋಶ

ಸಂವಿಧಾನಿಕ ಹುದ್ದೆಯಲ್ಲಿಲ್ಲದ ಮಹದೇವಪ್ಪನ ಮೊಮ್ಮಗನಿಗೆ ಗೌರವ ವಂದನೆ ಸ್ವೀಕರಿಸುವ ವಾಹನದಲ್ಲಿ ಅವಕಾಶ; ವ್ಯಾಪಕ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಸಂವಿಧಾನದ ಹೆಸರಲ್ಲಿ ಜನರನ್ನು ಯಾಮಾರಿಸುತ್ತಿರುವ ಕಾಂಗ್ರೆಸ್ ಅಸಂವಿಧಾನಿಕ ನಡೆಗಳ ಬಗ್ಗೆ ಪ್ರತಿಪಕ್ಷ ಜೆಡಿಎಸ್ ಆಕ್ರೋಶ ಹೊರ ಹಾಕಿದೆ. ಸಂವಿಧಾನದ ಹೆಸರಲ್ಲಿ ಜನರನ್ನು ಯಾಮಾರಿಸುತ್ತಿರುವ @INCKarnataka ಅಸಂವಿಧಾನಿಕ ನಡೆಗಳು. ಸಚಿವ @CMahadevappaಮೊಮ್ಮಗನಿಗಾಗಿ ನಾಡಹಬ್ಬ ದಸರಾ ಪರೇಡ್'ನಲ್ಲಿ ಸಾಂವಿಧಾನಿಕ ಹುದ್ದೆ ದುರ್ಬಳಕೆ ಮಾಡಿಕೊಂಡಿರುವುದು ಸಂವಿಧಾನಕ್ಕೆ ಮಾಡಿರುವ ಅಪಚಾರ.‌ ಸಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಮಹದೇವಪ್ಪನ ಮೊಮ್ಮಗನನ್ನು ಗೌರವ ವಂದನೆ ಸ್ವೀಕರಿಸುವ… pic.twitter.com/5bmyvysCjH— Janata Dal Secular (@JanataDal_S) October 4, 2025ಸಚಿವ ಮಹದೇವಪ್ಪ ಮೊಮ್ಮಗನಿಗಾಗಿ ನಾಡಹಬ್ಬ ದಸರಾ ಪರೇಡ್'ನಲ್ಲಿ ಸಾಂವಿಧಾನಿಕ ಹುದ್ದೆ ದುರ್ಬಳಕೆ ಮಾಡಿಕೊಂಡಿರುವುದು ಸಂವಿಧಾನಕ್ಕೆ ಮಾಡಿರುವ ಅಪಚಾರ.‌ ಸಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಮಹದೇವಪ್ಪನ ಮೊಮ್ಮಗನನ್ನು ಗೌರವ ವಂದನೆ ಸ್ವೀಕರಿಸುವ ವಾಹನದಲ್ಲಿ ಅವಕಾಶ ಮಾಡಿಕೊಟ್ಟಿದ್ದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಜೆಡಿಎಸ್ ಹೇಳಿದೆ.ದಸರಾ ಉತ್ಸವ ಜಂಬೂ ಸವಾರಿ ವೀಕ್ಷಿಸಲು 6,...
ತುಳುನಾಡ ಕುವರಿಗೆ ಮತ್ತೆ ಬಾಗಿಲು ತೆರೆದ  ಬಿಗ್ ಬಾಸ್ ಮನೆ

ತುಳುನಾಡ ಕುವರಿಗೆ ಮತ್ತೆ ಬಾಗಿಲು ತೆರೆದ ಬಿಗ್ ಬಾಸ್ ಮನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ ಅಚ್ಚರಿಯ ತಿರುವು ಕಂಡಿದೆ. ಶೋ ಆರಂಭವಾದ ಮೊದಲ ದಿನವೇ ಉಡುಪಿಯ ರಕ್ಷಿತಾ ಶೆಟ್ಟಿ ಅವರನ್ನು ಮನೆಯಿಂದ ಹೊರಗೆ ಕಳಿಸಲಾಗಿತ್ತು. ಕನ್ನಡ ಬಿಗ್ಬಾಸ್ ಇತಿಹಾಸದಲ್ಲಿಯೇ ಇಷ್ಟು ಬೇಗ ಎಲಿಮಿನೇಟ್ ಆದ ಸ್ಪರ್ಧಿ ಅವರು. ಆದರೆ ಈಗ, ಪ್ರೇಕ್ಷಕರ ಬೇಡಿಕೆ ಮತ್ತು ಸಾಮಾಜಿಕ ಮಾಧ್ಯಮದ ಚರ್ಚೆಗಳ ಮಧ್ಯೆ, ರಕ್ಷಿತಾ ಶೆಟ್ಟಿ ಮತ್ತೆ ಬಿಗ್ಬಾಸ್ ಮನೆಯಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಮರಳಿಬಂದಳು ರಕ್ಷಿತಾವಾರದ ಕತೆ ಕಿಚ್ಚನ ಜೊತೆ | ಇಂದು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌‌ಕತೆ #colorfulstory #KicchaSudeep #ExpectTheUnexpected #CKPromo pic.twitter.com/X6cFlWGWA2— Colors Kannada (@ColorsKannada) October 4, 2025ಕಳೆದ ಭಾನುವಾರ ಶೋ ಪ್ರಾರಂಭವಾದಾಗ 19 ಮಂದಿ ಸ್ಪರ್ಧಿಗಳು ಮನೆ ಸೇರಿದ್ದರು. ಆದರೆ ಕೇವಲ 24 ಗಂಟೆಗಳಲ್ಲೇ ರಕ್ಷಿತಾರ ಹೊರಹಾಕುವ ನಿರ್ಧಾರ ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣವಾಯಿತು. ಅವರ ಆಟವನ್ನೇ ನೋಡದೆ ತೆಗೆದುಕೊಳ್ಳ...
ಬೆಳೆ ಹಾನಿ ತಕ್ಷಣ ಸಮೀಕ್ಷೆ ನಡೆಸಿ ಪರಿಹಾರ ನೀಡಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

ಬೆಳೆ ಹಾನಿ ತಕ್ಷಣ ಸಮೀಕ್ಷೆ ನಡೆಸಿ ಪರಿಹಾರ ನೀಡಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ವಿಜಯಪುರ: ವಿಜಯಪುರದಲ್ಲಿ ಪ್ರವಾಹ ಮತ್ತು ಅತಿಯಾದ ಮಳೆಯ ಪರಿಣಾಮವಾಗಿ ಬೆಳೆ ಹಾನಿ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಶನಿವಾರ ರಾಜ್ಯ ಸರ್ಕಾರವನ್ನು ತಕ್ಷಣ ಬೆಳೆ ಹಾನಿ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಲು ಒತ್ತಾಯಿಸಿದೆ.ವಿಜಯಪುರ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳು ಹಾಗೂ ಕಡಲೆ, ಸೂರ್ಯಕಾಂತಿ ಮತ್ತು ಕಬ್ಬಿನ ಬೆಳೆ ಹಾನಿ ಸಂಭವಿಸಿರುವ ತೋಟಗಳಿಗೆ ಭೇಟಿ ನೀಡಿದ ನಂತರ, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಸರ್ಕಾರದ ಕಡೆಗೆ ಶಬ್ದ ಎತ್ತಿ, "ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಪರಿಹಾರ ನೀಡಬೇಕು" ಎಂದು ತಿಳಿಸಿದ್ದಾರೆ.ಬಿಜೆಪಿ ಪಕ್ಷದ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಸಂಸದರು ರಮೇಶ್ ಜಿಗಜಿಣಗಿ, ಪಿ.ಸಿ. ಗದ್ದಿಗೌಡರ್ ಮತ್ತು ಇತರರು ಅಶೋಕ ಅವರ ನೇತೃತ್ವದಲ್ಲಿ ನಿಯೋಗ ರೂಪಿಸಿಕೊಂಡು ಭೀಮಾ ಮತ್ತು ಡೋಣಿ ನದಿ ಪ್ರದೇಶಗಳ ಹಾನಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು.ನಿಯೋಗವು ಅಂಜುತ್ಗಿ, ಅಗರ್ಖೇಡ್, ಮಿರಗಿ, ದೇವನಾಗವ್ ಸೇರಿ...
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂಬ ದೇವೇಗೌಡರ ಹೇಳಿಕೆಗೆ ಸುರ್ಜೆವಾಲಾ ತಿರುಗೇಟು

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂಬ ದೇವೇಗೌಡರ ಹೇಳಿಕೆಗೆ ಸುರ್ಜೆವಾಲಾ ತಿರುಗೇಟು

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಬದಲಿಗೆ ಇವು 'ಸಾಮಾಜಿಕ ನ್ಯಾಯ'ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿವೆ. ಆದರೆ, ಈಗ ಕಾಂಗ್ರೆಸ್‌ನ ಗ್ಯಾರಂಟಿಗಳನ್ನು ವಿರೋಧಿಸಲು ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ. ದೇವೇಗೌಡರನ್ನೇ ಬಿಜೆಪಿ ಕಣಕ್ಕಿಳಿಸಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ.ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂಬ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸುರ್ಜೇವಾಲಾ, ಬಿಜೆಪಿ-ಜೆಡಿಎಸ್ ಮೈತ್ರಿಯ ದ್ವೇಷಕ್ಕೆ ಮಿತಿಯೇ ಇಲ್ಲ. ಜನರ ಬದುಕಿಗೆ ಬೆಳಕಾಗಿರುವ ಈ ಯೋಜನೆಗಳನ್ನು ವಿರೋಧಿಸಲು ದೇವೇಗೌಡರನ್ನೇ ಬಿಜೆಪಿ ಮುಂದೆ ಬಿಟ್ಟಿದೆ. ಇಂತಹ 'ಕುರುಡು ದೃಷ್ಟಿಯುಳ್ಳ ಪಕ್ಷಗಳು' ನಾಚಿಕೆಪಡಬೇಕು ಎಂದು ಖಂಡಿಸಿದ್ದಾರೆ.ಗ್ಯಾರಂಟಿಗಳಿಂದ ಆದ ಪರಿವರ್ತನೆ:ಈ ಯೋಜನೆಗಳ ಯಶಸ್ಸಿನ ಅಂಕಿ-ಅ...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪೂರ್ಣ ಐದು ವರ್ಷಗಳ ಕಾಲ ಮುಂದುವರಿಯಲಿದೆ; ರಾಜಣ್ಣ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪೂರ್ಣ ಐದು ವರ್ಷಗಳ ಕಾಲ ಮುಂದುವರಿಯಲಿದೆ; ರಾಜಣ್ಣ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ತುಮಕೂರು: “ನವೆಂಬರ್‌ನಲ್ಲಿ ಕ್ರಾಂತಿ ಅಥವಾ ಸರ್ಕಾರ ಬದಲಾವಣೆ ಆಗುತ್ತದೆ ಎನ್ನುವುದು ಸಂಪೂರ್ಣ ಸುಳ್ಳು,” ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಸ್ಪಷ್ಟಪಡಿಸಿದ್ದಾರೆ.ತುಮಕೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅವಧಿ ಪೂರೈಸುತ್ತದೆ. ಬದಲಾವಣೆಯ ಯಾವುದೇ ಸಾಧ್ಯತೆ ಇಲ್ಲ,” ಎಂದರು.ಅವರು ಮುಂದುವರಿದು, “ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಕಾರ್ಪೊರೇಷನ್, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸುವ ಉದ್ದೇಶ ಹೊಂದಿದೆ,” ಎಂದರು.ನವೆಂಬರ್‌ನಲ್ಲಿ ಸರ್ಕಾರದಲ್ಲಿ ಬದಲಾವಣೆ ಅಥವಾ ಕ್ರಾಂತಿ ಆಗಲಿದೆ ಎಂಬ ಕೆಲವು ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, “ಇಂತಹ ಊಹಾಪೋಹಗಳಿಗೆ ಯಾವುದೇ ಆಧಾರವಿಲ್ಲ. ಜನರನ್ನು ತಪ್ಪು ದಾರಿಗೆಳೆವ ಪ್ರಯತ್ನ ಮಾತ್ರ ನಡೆಯುತ್ತಿದೆ,” ಎಂದು ಹೇಳಿದರು....