Friday, August 14

ವಿದೇಶ

ರಾಜ್ಯದ ಸಾಮಾಜಿಕ, ಆರ್ಥಿಕ ಸ್ಥಿತಿಗೆ ‘ಶಕ್ತಿ’ ನೀಡಿದ ಗ್ಯಾರೆಂಟಿ.. ಅಧ್ಯಯನ ವರದಿಯ ಹೈಲೈಟ್ಸ್ ಹೀಗಿದೆ.

ರಾಜ್ಯದ ಸಾಮಾಜಿಕ, ಆರ್ಥಿಕ ಸ್ಥಿತಿಗೆ ‘ಶಕ್ತಿ’ ನೀಡಿದ ಗ್ಯಾರೆಂಟಿ.. ಅಧ್ಯಯನ ವರದಿಯ ಹೈಲೈಟ್ಸ್ ಹೀಗಿದೆ.

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ಜಾರಿಗೆ ತಂದ ಕರ್ನಾಟಕ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳು ಕರ್ನಾಟಕದಲ್ಲಿ ಪರಿಣಾಮಕಾರಿ ಬದಲಾವಣೆಯನ್ನು ತಂದಿವೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ (ಸಂವಹನ) ಸಂಸದ ಜೈರಾಮ್ ರಮೇಶ್ ಹೇಳಿದ್ದಾರೆ. Our statement on a new study led by @tarauk evaluating the impact of Karnataka’s guarantee schemes on the empowerment of women pic.twitter.com/hz1BNPlLnE— Jairam Ramesh (@Jairam_Ramesh) October 3, 2025ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಯಶೋಗಾಥೆ ಕುರಿತಂತೆ ಮಾಧ್ಯಮ ಹೇಳಿಕೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಜೈರಾಮ್ ರಮೇಶ್, ನಾಲ್ಕು ಖ್ಯಾತ ಸಂಶೋಧನೆ ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಒಳಗೊಂಡ ಸ್ವತಂತ್ರ ಅಧ್ಯಯನದ ಹೊಸ ವರದಿಯು ಈ ಖಾತರಿಗಳ ಫಲಿತಾಂಶಗಳನ್ನು ಸಮಗ್ರವಾಗಿ ಮೌಲ್ಯಮಾಪನ ಮಾಡುತ್ತದೆ ಎಂದಿದ್ದಾರೆ. ಅದರಲ್ಲೂ ಶಕ್ತಿ ಯೋಜನೆಯಿಂದಾಗಿ ಕರ್ನಾಟಕದಲ್ಲಿ ನಿರುದ್ಯೋಗ ಪ್ರಮಾಣ ಕಡಿಮೆಯಾಗಿದೆ ಎಂದು ಅವರು ಬೊಟ್ಟು ಮಾಡಿದ್ದಾರೆ.ಅಧ್ಯಯನದ ಹೊಸ ವರದಿಯ ಮು...
ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಖರ್ಗೆ ಡಿಸ್ಚಾರ್ಜ್

ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಖರ್ಗೆ ಡಿಸ್ಚಾರ್ಜ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಶಸ್ವಿ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ನಂತರ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.ಕಾಂಗ್ರೆಸ್ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, 'ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅವರು ಆರೋಗ್ಯವಾಗಿದ್ದಾರೆ ಮತ್ತು ಎಲ್ಲರ ಶುಭ ಹಾರೈಕೆಗಳಿಗೆ ಧನ್ಯವಾದಗಳು” ಎಂದು ಹೇಳಲಾಗಿದೆ.ಖರ್ಗೆ ಆಯಾಸ ಮತ್ತು ಉಸಿರಾಟದ ತೊಂದರೆಗಳಿಂದ ಬಳಲುತ್ತಿದ್ದುದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆಯಂತೆ ಅವರು ಶೀಘ್ರವೇ ತಮ್ಮ ಚಟುವಟಿಕೆಗಳನ್ನು ಪುನರಾರಂಭಿಸಬಹುದು ಎಂದು ತಿಳಿಸಲಾಗಿದೆ.ಈ ಕುರಿತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಮಾಧ್ಯಮದೊಂದಿಗೆ ಮಾತನಾಡಿ, ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ಸಣ್ಣ ಪ್ರಕ್ರಿಯೆಯಾಗಿತ್ತು. ಚಿಕಿತ್ಸೆ ಬಳಿಕ ಅವರು ಸ್ಥಿರರಾಗಿದ್ದಾರೆ. ಅಕ್ಟೋಬರ್ 3ರಿಂದ ತಮ್ಮ ಕರ್ತವ್ಯವನ್ನು ಪುನರಾರಂಭಿಸಲಿದ್ದಾರೆ ಎಂದು ತಿಳಿಸಿದ್ದಾರೆ.ಶಸ್ತ್ರಚಿಕಿತ್ಸೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಖರ್ಗೆಯೊಂದಿಗೆ ಮಾತನ...
ಮೈಸೂರು ದಸರಾ ಮೆರವಣಿಗೆಯಲ್ಲಿ ಕುತೂಹಲ ಕೆರಳಿಸಿದ ‘ಶಕ್ತಿ’ ಸ್ತಬ್ಧಚಿತ್ರ

ಮೈಸೂರು ದಸರಾ ಮೆರವಣಿಗೆಯಲ್ಲಿ ಕುತೂಹಲ ಕೆರಳಿಸಿದ ‘ಶಕ್ತಿ’ ಸ್ತಬ್ಧಚಿತ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಈ ಬಾರಿ ಸ್ತಬ್ಧಚಿತ್ರಗಳ ಅದ್ಧೂರಿ ಮೆರವಣಿಗೆ ವೈಭವ ಹೆಚ್ಚಿಸಿತು.ಚಿನ್ನದ ಅಂಬಾರಿಯಲ್ಲಿ ಕಂಗೊಳಿಸುತ್ತಿದ್ದ ನಾಡದೇವಿ ಚಾಮುಂಡೇಶ್ವರಿಯನ್ನು ಹೊತ್ತ ಅಭಿಮನ್ಯು ಆನೆ ಲಕ್ಷಾಂತರ ಜನರನ್ನು ರಂಜಿಸಿತು. 750 ಕೆ.ಜಿ ತೂಕದ ಅಂಬಾರಿ ಹೊತ್ತ ಅಭಿಮನ್ಯು ಗಾಂಭೀರ್ಯದಿಂದ ಹೆಜ್ಜೆ ಹಾಕಿದ ದೃಶ್ಯ ಮನಮುಟ್ಟಿತು. ಕುಮ್ಕಿ ಆನೆಗಳು ಕಾವೇರಿ, ರೂಪಾ ಸಾಥ್ ನೀಡಿದವು.ಅರಮನೆಯ ಬಲರಾಮ ದ್ವಾರದಿಂದ ಪ್ರಾರಂಭವಾದ ಜಂಬೂ ಸವಾರಿ, ಸುಮಾರು 5 ಕಿ.ಮೀ ಉದ್ದದ ಮಾರ್ಗದಲ್ಲಿ ಸಾಗಿತು. ಮಾರ್ಗಮಧ್ಯೆ ನಡೆದ 58 ಸ್ತಬ್ಧಚಿತ್ರಗಳು ಜನರ ಕುತೂಹಲ ಕೆರಳಿಸಿದವು. ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರ ಮುಂದಿಡುವ ಉದ್ದೇಶದಿಂದ ಸ್ತಬ್ಧಚಿತ್ರಗಳನ್ನು ರೂಪಿಸಲಾಗಿತ್ತು. ವಿಶೇಷವಾಗಿ ಮಹಿಳೆಯರಿಗೆ ಉಚಿತ ಸಾರಿಗೆ ಒದಗಿಸಿರುವ ‘ಶಕ್ತಿ’ ಗ್ಯಾರೆಂಟಿ ಯೋಜನೆಯ ಸ್ತಬ್ಧಚಿತ್ರ ಜನಮೆಚ್ಚುಗೆಗೆ ಪಾತ್ರವಾಯಿತು. ಸಮಾಜದಲ್ಲಿ ಬದಲಾವಣೆಗೆ ಕಾರಣವಾಗಿರುವ ಈ ಯೋಜನೆಯ ಯಶಸ್ಸು ಮೆರವಣಿಗೆಯಲ್ಲಿ ಪ್ರತ್ಯಕ್ಷವಾಯಿತು....
ಗಾಂದೀಜಿ ಹಾದಿಯಲ್ಲಿ ರಾಜ್ಯ ಸರ್ಕಾರ;  ಆರ್ಥಿಕ ದುರ್ಬಲರಿಗೆ ಗ್ಯಾರಂಟಿ ಮೂಲಕ ‘ಶಕ್ತಿ’ಯಾಗಿದ್ದೇವೆ ಎಂದ ರಾಮಲಿಂಗಾ ರೆಡ್ಡಿ

ಗಾಂದೀಜಿ ಹಾದಿಯಲ್ಲಿ ರಾಜ್ಯ ಸರ್ಕಾರ; ಆರ್ಥಿಕ ದುರ್ಬಲರಿಗೆ ಗ್ಯಾರಂಟಿ ಮೂಲಕ ‘ಶಕ್ತಿ’ಯಾಗಿದ್ದೇವೆ ಎಂದ ರಾಮಲಿಂಗಾ ರೆಡ್ಡಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ರವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ, ಸರ್ಕಾರದ‌ ಪರವಾಗಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ರಾಷ್ಟ್ರನಾಯಕರಿಗೆ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ ಭಾರತೀಯರ ಮನಸ್ಸಿನಲ್ಲಿ ಅಚ್ಚಳಿಯದೇ ಸದಾ ಶಾಶ್ವತವಾಗಿರುವ ಹೆಸರು ಅಂದರೆ ಅದು ರಾಷ್ಟ್ರಪಿತ ಮಹಾತ್ಮ ಗಾಂಧಿ. ಅಹಿಂಸಾ ಮಾರ್ಗದಲ್ಲಿ ನಡೆದು ದೇಶಕ್ಕೆ ಸ್ವಾತಂತ್ರ್ಯ ಗಳಿಸಿಕೊಟ್ಟ ಗಾಂಧಿಜಿ ದೇಶ ಕಂಡ ಮಹಾನ್ ನಾಯಕ ಎಂದರು.ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಮಹನೀಯರು ಮಹತ್ವದ ಪಾತ್ರವಹಿಸಿದ್ದಾರೆ. ಮಹಾರಾಷ್ಟ್ರ ಪ್ರಾಂತ್ಯದಲ್ಲಿ ಗೋಪಾಲಕೃಷ್ಣ ಗೋಖಲೆ (ಗಾಂಧಿಯವರು ಗುರುಗಳು), ಲಾಲಲಜಪತರಾಯ್ ಪಂಜಾಬ್, ಬಿಪಿನ್ ಚಂದ್ರ ಪಾಲ್ ಬಂಗಾಳ, ಬಾಲಗಂಗಾಧರ ನಾಥ್ ತಿಲಕ್ , ಮೋತಿಲಾಲ್ ನೆಹರು, ಇವರೆಲ್ಲರೂ 1930 ರ ಮುಂಚೆಯೇ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು. ಪಶ್ಚಿಮ‌ ಬಂಗಾಳದಲ್ಲಿ ಸುಭಾಸ್ ಚಂದ್ರ ಬೋಸ್ , ಗುಜರಾತ್ ನಲ್ಲಿ‌ ಸರದಾ...
RSS 100 ವರ್ಷ: ವಿಜಯದಶಮಿ ಮೆರವಣಿಗೆಗಳಲ್ಲಿ ಸಾವಿರಾರು ಆರ್‌ಎಸ್‌ಎಸ್ ಸ್ವಯಂಸೇವಕರು ಭಾಗಿ

RSS 100 ವರ್ಷ: ವಿಜಯದಶಮಿ ಮೆರವಣಿಗೆಗಳಲ್ಲಿ ಸಾವಿರಾರು ಆರ್‌ಎಸ್‌ಎಸ್ ಸ್ವಯಂಸೇವಕರು ಭಾಗಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ರಾಷ್ಟ್ರಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಸ್ಥಾಪನೆಯ 100 ವರ್ಷಗಳನ್ನು ಪೂರೈಸಿ 101ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಆರ್‌ಎಸ್‌ಎಸ್ ಶತಮಾನೋತ್ಸವ ಗಮನಸೆಳೆದಿದೆ.1925ರ ವಿಜಯದಶಮಿಯಂದು ಡಾ. ಕೇಶವ್ ಬಲಿರಾಮ ಹೆಡ್ಗೆವಾರ್ ಸಂಘವನ್ನು ಸ್ಥಾಪಿಸಿದ್ದರು. ಈ ಸಂಘಟನೆಗೆ ಇದೀಗ ಶತಮಾನೋತ್ಸವ. ಈ ಹಿನ್ನೆಲೆಯಲ್ಲಿ, ದೆಹಲಿಯಲ್ಲಿ ವಿಜಯದಶಮಿ ಪೂಜೆ ಹಾಗೂ ಪಥಸಂಚಲನಗಳನ್ನು ಅದ್ದೂರಿಯಾಗಿ ಆಯೋಜಿಸಲಾಯಿತು. ಶಾಸ್ತ್ರಪೂಜೆ ಮತ್ತು ಪಥಮೆರವಣಿಗೆಗಳು ಸೇರಿದಂತೆ ದೇಶಾದ್ಯಂತ 346 ಸ್ಥಳಗಳಲ್ಲಿ ಕಾರ್ಯಕ್ರಮಗಳು ಜರುಗಿದವು.ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಸ್ವಯಂಸೇವಕರು ಸಂಪೂರ್ಣ ಸಮವಸ್ತ್ರದಲ್ಲಿ ಸಾಂಪ್ರದಾಯಿಕ ಸಂಘ ಘೋಷ್ ಜೊತೆ ಪಥಸಂಚಲನ ನಡೆಸಿದರು. ಅನೇಕರು ವ್ಯವಸ್ಥಾಪನಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಪಥಸಂಚಲನ ಹಾದುಹೋದ ಮಾರ್ಗದಲ್ಲಿ ನಾಗರಿಕರು ಪುಷ್ಪಾರ್ಚನೆ ಮೂಲಕ ಸ್ವಾಗತಿಸಿದರು.ಆರ್‌ಎಸ್‌ಎಸ್ ರಾಷ್ಟ್ರೀಯ ಹಾಗೂ ಪ್ರಾಂತೀಯ ನಾಯಕರು ವಿವಿಧ ಕೇಂದ್ರಗಳಲ್ಲಿ ಭಾಗವಹಿಸಿ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ಪಶ್ಚಿಮ ...
ಹಿಂದೂ ಸಮಾಜವನ್ನು ವಿಭಜಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನ: ಜೋಶಿ ಆರೋಪ

ಹಿಂದೂ ಸಮಾಜವನ್ನು ವಿಭಜಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನ: ಜೋಶಿ ಆರೋಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಧಾರವಾಡ: ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಜನಗಣತಿ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಕಿಡಿಕಾರಿದ್ದಾರೆ.ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, “ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣದ ನಾಯಕರು ಈಗಾಗಲೇ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಹುದ್ದೆ ಉಳಿಸಿಕೊಳ್ಳಲು ರಾಜಕೀಯ ಲೆಕ್ಕಾಚಾರವಾಗಿ ಜಾತಿ ಜನಗಣತಿಯನ್ನು ಮುನ್ನಡೆಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆ ಅನಗತ್ಯ ಹಾಗೂ ವೈಯಕ್ತಿಕ ಪ್ರಶ್ನೆಗಳನ್ನು ಒಳಗೊಂಡಿದೆ ಎಂದು ಅವರು ಟೀಕಿಸಿದರು. “ಕ್ರಿಶ್ಚಿಯನ್ ಲಿಂಗಾಯತ ಅಥವಾ ಕ್ರಿಶ್ಚಿಯನ್ ಬ್ರಾಹ್ಮಣ ಎಂದು ವರ್ಗೀಕರಣ ಮಾಡುವುದರ ಅರ್ಥವೇನು? ಇದು ಹಿಂದೂ ಮತಾಂತರಕ್ಕೆ ಉತ್ತೇಜನ ನೀಡುವ ಸಮೀಕ್ಷೆ” ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು.ವೀರಶೈವ-ಲಿಂಗಾಯತ ಮಠಾಧೀಶರೂ ಸಹ ಎಲ್ಲರೂ ಹಿಂದೂಗಳೇ ಎಂಬ ಅಭಿಪ್ರಾಯ ವ...

ಮಲ್ಲಿಕಾರ್ಜುನ ಖರ್ಗೆ ಚೇತರಿಕೆ: ಡಾ. ಶರಣಪ್ರಕಾಶ್‌ ಪಾಟೀಲ್‌

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಎಐಸಿಸಿ ಅಧ್ಯಕ್ಷರೂ ಹಾಗು ಮಾರ್ಗದರ್ಶಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ.ಈ ಸಂಬಂಧ ಬುಧವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಖರ್ಗೆ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ವೈದ್ಯರು ನಿರಂತರ ನಿಗಾ ವಹಿಸಿ ಚಿಕಿತ್ಸೆ ನೀಡಿದ್ದರಿಂದ ಈಗ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ. ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.ವೈದ್ಯರ ಸಲಹೆ-ಸೂಚನೆಯಂತೆ ಮಲ್ಲಿಕಾರ್ಜುನ ಖರ್ಗೆ ಅವರು ಒಂದು ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ನಂತರ ಎಂದಿನ ದೈನಂದಿನ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ...
ಒಬಿಸಿ ಮೀಸಲಾತಿ ಬಗ್ಗೆ ನಿಲುವು ಸ್ಪಷ್ಟಪಡಿಸಲು ಬಿಜೆಪಿಗೆ ರಮೇಶ್ ಬಾಬು ಆಗ್ರಹ

ಒಬಿಸಿ ಮೀಸಲಾತಿ ಬಗ್ಗೆ ನಿಲುವು ಸ್ಪಷ್ಟಪಡಿಸಲು ಬಿಜೆಪಿಗೆ ರಮೇಶ್ ಬಾಬು ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರ್ಕಾರ ಕೈಗೊಂಡಿರುವ ಜಾತಿ ಸಮೀಕ್ಷೆ ರಾಜಕೀಯ ಪಕ್ಷಗಳ ಜಂಘಿಕುಸ್ತಿಗೆ ಕಾರಣಾವಾಗಿದೆ. ಇದೀಗ ಈ ಜಟಾಪಟಿ ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದೆ. ಕರ್ನಾಟಕ ಸರ್ಕಾರದ ಒಬಿಸಿ ಸಮೀಕ್ಷೆಯನ್ನು ವಿರೋಧಿಸಿದ್ದಕ್ಕಾಗಿ ಮತ್ತು ಒಬಿಸಿ ಮೀಸಲಾತಿ ಬಗ್ಗೆ ಬಿಜೆಪಿಯ ಸ್ಪಷ್ಟ ನಿಲುವನ್ನು ಸ್ಪಷ್ಟಪಡಿಸಲು ಕೋರಿ ಕಾಂಗ್ರೆಸ್ ಶಾಸಕ ರಮೇಶ್ ಬಾಬು ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬೆಂಗಳೂರು ದಕ್ಷಿಣ ಸಂಸದ ಶ್ರೀ ತೇಜಸ್ವಿ ಸೂರ್ಯ ಅವರ ನಡೆ ಬಗ್ಗೆ ಈ ಪತ್ರದಲ್ಲಿ ರಮೇಶ್ ಬಾಬು ಆಕ್ರೋಶ ಹೊರಹಾಕಿದ್ದಾರೆ.ಸಾಮಾಜಿಕ ನ್ಯಾಯ, ಸಮಾನ ಪ್ರಾತಿನಿಧ್ಯ ಮತ್ತು ಹಿಂದುಳಿದ ವರ್ಗಗಳ ಹಿತಾಸಕ್ತಿಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸಾಂವಿಧಾನಿಕ ನಿಬಂಧನೆಗಳು ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ಅನುಗುಣವಾಗಿ ಕರ್ನಾಟಕದಲ್ಲಿ ಒಬಿಸಿ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ. ಕಲ್ಯಾಣ ನೀತಿಗಳನ್ನು ರೂಪಿಸಲು ಮತ್ತು ಮೀಸಲಾತಿ ವ್ಯವಸ್ಥೆಯನ್ನು ರಕ್ಷಿಸಲು ಅಗತ್ಯವಾದ ಒಬಿಸಿ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿ...
ಮಂಗಳೂರು ದಸರಾಕ್ಕೆ ‘ಮ್ಯಾರಥಾನ್’ ರಂಗು; 2 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

ಮಂಗಳೂರು ದಸರಾಕ್ಕೆ ‘ಮ್ಯಾರಥಾನ್’ ರಂಗು; 2 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ-2025’ರ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್, ಯೂನಿಯನ್‌ ಬ್ಯಾಂಕ್ ವತಿಯಿಂದ ಭಾನುವಾರ ಮೂರನೇ ಆವೃತ್ತಿಯ ರಾಜ್ಯಮಟ್ಟದ ಮಂಗಳೂರು ದಸರಾ ಮ್ಯಾರಥಾನ್-2025 ಸ್ಪರ್ಧೆ ಗಮನಸೆಳೆಯಿತು.ಮ್ಯಾರಥಾನ್‌ ನಲ್ಲಿ ಚಿಣ್ಣರಿಂದ ವೃದ್ಧರವರೆಗೂ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದರು. ಕೇರಳ, ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸ್ಪರ್ಧಾಳುಗಳು ಪಾಲ್ಗೊಂಡರು.21 ಕೆ ರನ್, 10ಕೆ ರನ್, 5ಕೆ ರನ್, 2ಕೆ ಸ್ಯಾರಿ ರನ್ ಆಯೋಜಿಸಲಾಗಿತ್ತು. ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. 21 ಕಿ.ಮೀ. ಪ್ರಥಮ ವಿಜೇತರಿಗೆ 25 ಸಾವಿರ ರೂ., ದ್ವಿತೀಯ ಬಹುಮಾನ 15 ಸಾವಿರ ರೂ., ತೃತೀಯ 10 ಸಾವಿರ ರೂ., 10 ಕಿ.ಮೀ. ಪ್ರಥಮ 15 ಸಾವಿರ ರೂ., ದ್ವಿತೀಯ 10 ಸಾವಿರ ರೂ., ತೃತೀಯ 5 ಸಾವಿರ ರೂ. 5 ಕಿ.ಮೀ.ನಲ್ಲಿ ಪ್ರಥಮ 5 ಸಾವಿರ ರೂ., ದ್ವಿತೀಯ 2 ಸಾವಿರ ರೂ., ತೃತೀಯ 1 ಸಾವಿರ ರೂ. ನೀಡಲಾಯಿತು.ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀರ್‌ ಕುಮಾರ್‌ ರೆಡ್ಡಿ ಚಾಲನೆ ನೀಡಿದರು. ಯೂನಿಯನ್‌ ಬ್ಯಾಂಕ್ ಮಂಗಳೂರು ಪ್ರಾದೇಶಿಕ ...
ವೈಯಕ್ತಿಕ ಮಾಹಿತಿ ನೀಡಬೇಡಿ, ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಿ: ಬಿಜೆಪಿ ಸಲಹೆ

ವೈಯಕ್ತಿಕ ಮಾಹಿತಿ ನೀಡಬೇಡಿ, ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಿ: ಬಿಜೆಪಿ ಸಲಹೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ಎಲ್ಲ ವಿವರವನ್ನು ಬಹಿರಂಗೊಳಿಸಬಾರದು. ಜನರ ಬಳಿ ಏನೇನೋ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇಂತಹ ಪ್ರಶ್ನೆಗಳಿಗೆ ಉತ್ತರ ನೀಡುವುದು ಜನರಿಗೆ ಬಿಟ್ಟ ವಿಚಾರ. ಇದನ್ನು ಕಾಂಗ್ರೆಸ್‌ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಖಜಾನೆಯಲ್ಲಿ ಹಣವಿಲ್ಲದೆ, ರೇಷನ್‌ ಕಾರ್ಡ್ ರದ್ದು ಮಾಡುತ್ತಿದ್ದಾರೆ. ಅದಕ್ಕಾಗಿ ಮಾನದಂಡ ಬೇಕಾಗುತ್ತದೆ. ಈ ಕಾರಣಕ್ಕಾಗಿ ಹಾಗೂ ಯೋಜನೆಗಳಿಗೆ ಕತ್ತರಿ ಹಾಕಲು ಜಾತಿ ಸಮೀಕ್ಷೆ ಮಾಡಲಾಗುತ್ತಿದೆ ಎಂದರು.ಮುಂದಿನ ಬಜೆಟ್‌ ರಚನೆ ಸಿಎಂ ಸಿದ್ದರಾಮಯ್ಯನವರಿಗೆ ಕಗ್ಗಂಟಾಗಿದೆ. ಅದಕ್ಕಾಗಿ ಹಣ ಉಳಿಸಬೇಕಿದೆ. ಇದು ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಅಲ್ಲ, ಇದು ಸಿದ್ದರಾಮಯ್ಯನವರ ಜಾ...