Saturday, August 15

ವಿದೇಶ

‘ನಾನು ಜಾತಿಗಣತಿಯಲ್ಲಿ ಪಾಲ್ಗೊಳ್ಳಲ್ಲ, ನೀವೂ ಬಹಿಷ್ಕರಿಸಿ’; ಜನತೆಗೆ ತೇಜಸ್ವಿ ಸೂರ್ಯ ಕರೆ

‘ನಾನು ಜಾತಿಗಣತಿಯಲ್ಲಿ ಪಾಲ್ಗೊಳ್ಳಲ್ಲ, ನೀವೂ ಬಹಿಷ್ಕರಿಸಿ’; ಜನತೆಗೆ ತೇಜಸ್ವಿ ಸೂರ್ಯ ಕರೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜಾತಿ ಸಮೀಕ್ಷೆ ವಿಚಾರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ರಾಜ್ಯ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷ ಬಿಜೆಪಿ ನಾಯಕರು ಜಾತಿ ಗಣತಿಯನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ.ಜಾತಿಗಣತಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸರ್ಕಾರದ ಕಾರ್ಯಕ್ರಮ ಬಗ್ಗೆ ಕಾಟು ಟೀಕೆ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯ ಸರ್ಕಾರದ ಮೇಲೆ ನನಗೆ ನಂಬಿಕೆಯಿಲ್ಲ, ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ. ಹಾಗಾಗಿ, ಜಾತಿಗಣತಿ ಬಹಿಷ್ಕರಿಸಿ ಎಂದು ಜನತೆಗೆ ಕರೆ ನೀಡಿದರು.ನಾನು ಜಾತಿಗಣತಿಯಲ್ಲಿ ಪಾಲ್ಗೊಳ್ಳಲ್ಲ. ನನ್ನ ಮಾಹಿತಿ ಸುರಕ್ಷಿತವಾಗಿರುತ್ತೆ ಅನ್ನೋ ನಂಬಿಕೆ ಇಲ್ಲ ಎಂದಿರುವ ತೇಜಸ್ವಿ ಸೂರ್ಯ, ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ ಜೊತೆಗೆ, ಜಾತಿ ಜಾತಿ ಮಧ್ಯೆ ಗಲಾಟೆ ತರಲು ಇದನ್ನು ಮಾಡುತ್ತಿದ್ದಾರೆ. ಹಾಗಾಗಿ ಇದರಲ್ಲಿ ಪಾಲ್ಗೊಳ್ಳಬೇಡಿ ಎಂದು ಕರೆ ನೀಡಿದ್ದಾರೆ.ಹಿಂದೆ ಲಾಲು ಪ್ರಸಾದ್ ಯಾದವ್ ಮತ್ತು ಮುಲಾಯಂ ಸಿಂಗ್ ಯಾದವ್ ಅವರಂತಹ ನಾಯಕರು ಮಾಡಿದ ತಂತ್ರಗಳಂತೆಯೇ ಇಲ್ಲಿಯೂ ಬಳಕೆ ಮಾಡಲಾಗುತ್ತಿದ್ದು, ಈ ಜಾತಿ ಗಣತಿಯು ರಾಜಕೀಯ ಪ್ರೇರಿ...
ನಿರ್ಮಿತಿ ಕೇಂದ್ರ, KRIDL ಮೂಲಕ ಭಾರೀ ಅಕ್ರಮ; ಗುತ್ತಿಗೆದಾರರಿಂದಲೇ ಸಿದ್ದು ಸರ್ಕಾರದ ಭ್ರಷ್ಟಾಚಾರ ಬಯಲು

ನಿರ್ಮಿತಿ ಕೇಂದ್ರ, KRIDL ಮೂಲಕ ಭಾರೀ ಅಕ್ರಮ; ಗುತ್ತಿಗೆದಾರರಿಂದಲೇ ಸಿದ್ದು ಸರ್ಕಾರದ ಭ್ರಷ್ಟಾಚಾರ ಬಯಲು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಡಿಯಲ್ಲಿ ಭ್ರಷ್ಟಾಚಾರ ದುಪ್ಪಟ್ಟಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (ಕೆಎಸ್‌ಸಿಎ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಈ ಬೆಳವಣಿಗೆ ಅಚ್ಚರಿಗೆ ಕಾರಣವಾಗಿದೆ.ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (ಕೆಎಸ್‌ಸಿಎ) ಅಧ್ಯಕ್ಷ ಆರ್. ಮಂಜುನಾಥ್ ಮತ್ತು ಜಿ.ಎಂ. ರವೀಂದ್ರ ಅವರು ಸಹಿ ಮಾಡಿದ ಪತ್ರದಲ್ಲಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಯಾವುದೇ ಲಂಚ ಇರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಳಿ ಹೇಳಿಕೊಂಡಿದ್ದಾರೆ.ನಿರ್ಮಿತಿ ಕೇಂದ್ರಗಳು ಮತ್ತು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (ಕೆಆರ್‌ಐಡಿಎಲ್) ಅಡಿಯಲ್ಲಿರುವ ಯೋಜನೆಗಳನ್ನು ಶಾಸಕರು ಮತ್ತು ಸಚಿವರ ಅನುಯಾಯಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ. ಅವರು ಯೋಜನೆಗಳನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸುತ್ತಾರೆ ಮತ್ತು ಲಂಚ ಪಡೆಯಬೇಕೆಂದು ಒತ್ತಾಯಿಸುತ್ತಾರೆ ಎಂದು ಪಾತ್ರದಲ್ಲಿ ಆರೋಪಿಸಲಾಗಿದೆ.“ಯೋಜನೆಗಳನ್ನು ನಮಗೆ ಉಪಗುತ್ತಿಗೆ ನ...
ಮಂಗಳೂರು ದಸರಾ: ಅದ್ಧೂರಿ ಶೋಭಾಯಾತ್ರೆ ಯಶಸ್ಸಿಗೆ ಸರ್ವರ ಸಹಕಾರ ಕೋರಿದ ಪದ್ಮರಾಜ್

ಮಂಗಳೂರು ದಸರಾ: ಅದ್ಧೂರಿ ಶೋಭಾಯಾತ್ರೆ ಯಶಸ್ಸಿಗೆ ಸರ್ವರ ಸಹಕಾರ ಕೋರಿದ ಪದ್ಮರಾಜ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ಕರಾವಳಿಯಲ್ಲಿ ಮಂಗಳೂರು ದಸರಾ ಮಹೋತ್ಸವದ ವೈಭವ ಗರಿಗೆದರಿದೆ. ಕುದ್ರೋಳಿ ಗೋಕರ್ಣನಾಥ ಕ್ಷೇತ್ರವನ್ನು ಕೇಂದ್ರೀಕರಿಸಿ ನೆರವೇರುತ್ತಿರುವ ಅದ್ದೂರಿ ಮಂಗಳೂರು ದಸರಾದ ಆಕಷಣೆಯ ಕೇಂದ್ರಬಿಂದುವೆನಿಸಿರುವ ಶೋಭಾ ಯಾತ್ರೆಯು ಅಕ್ಟೊಬರ್ 2ರಂದು ನಡೆಯಲಿದೆ. ಮೈಸೂರು ದಸರಾ ಮಾದರಿಯಲ್ಲೇ ವಿಶ್ವವಿಖ್ಯಾತ ಉತ್ಸವವಾಗಿ ನೆರವೇರಿಸಲು ಕಸರತ್ತು ನಡೆಸಿರುವ ಕುದ್ರೋಳಿ ದೇವಾಲಯದ ಉತ್ಸವ ಸಮಿತಿ, ಅದ್ಧೂರಿ ಶೋಭಾಯಾತ್ರೆಗೆ ಬೇಕಾದ ವ್ಯವಸ್ಥೆಗಳಿಗೆ ಅಂತಿಮ ಸ್ಪರ್ಶ ನೀಡಿದೆ.ಈ ನಡುವೆ, ವರ್ಷಂಪ್ರತಿಯಂತೆ ಮೆರವಣಿಗೆ ಯಶಸ್ವಿಯಾಗಿ ನಡೆಯಲು ಎಲ್ಲರ ಸಹಕಾರ ಮುಖ್ಯವಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಪ್ರತಿಪಾದಿಸಿದ್ದಾರೆ. ದಸರಾ ಮಹೋತ್ಸವ ಮೆರವಣಿಗೆ ಹಿನ್ನಲೆಯಲ್ಲಿ ಕುದ್ರೋಳಿ ಕ್ಷೇತ್ರದಲ್ಲಿ ಶುಕ್ರವಾರ ಟ್ಯಾಬ್ಲೋ ಮುಖ್ಯಸ್ಥರು ಮತ್ತು ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಶೋಭಾ ಯಾತ್ರೆಯನ್ನು ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರು ಸಾಕ್ಷೀಕರಿಸುವ ನಿರೀಕ್ಷೆಯಿದೆ. ರಾಜ್ಯದ ವಿವಿಧ ಕಡೆಯಿಂದ ಕಲಾತಂಡಗಳು, ವಾದ್ಯ ತಂಡಗಳು, ಭಜನ...
ಗೃಹಸಾಲ ‘ಸಬ್ವೆನ್ಷನ್ ಮಾದರಿ’ ದುರುಪಯೋಗ; 6 ರಿಯಲ್ ಎಸ್ಟೇಟ್ ಕಂಪನಿಗಳ ಮೇಲೆ ಪ್ರಕರಣ

ಗೃಹಸಾಲ ‘ಸಬ್ವೆನ್ಷನ್ ಮಾದರಿ’ ದುರುಪಯೋಗ; 6 ರಿಯಲ್ ಎಸ್ಟೇಟ್ ಕಂಪನಿಗಳ ಮೇಲೆ ಪ್ರಕರಣ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಸಾವಿರಾರು ಮನೆ ಖರೀದಿದಾರರನ್ನು ವಂಚಿಸಿದ ಆರೋಪ ಹೊತ್ತಿರುವ ಬಿಲ್ಡರ್‌ಗಳ ವಿರುದ್ಧ ಸಿಬಿಐ ಭಾರೀ ದಾಳಿ ನಡೆಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಕೋಲ್ಕತ್ತಾ, ಬೆಂಗಳೂರು ಮತ್ತು ಮುಂಬೈ ನಗರಗಳಲ್ಲಿ ಶನಿವಾರ 12 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ವಿವಿಧ ದಾಖಲೆಗಳು ಹಾಗೂ ಡಿಜಿಟಲ್ ಪುರಾವೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ತಿಳಿಸಿದೆ. ಮನೆ ಖರೀದಿದಾರರು ಸಲ್ಲಿಸಿದ್ದ ಅರ್ಜಿಗಳ ಆಧಾರದ ಮೇಲೆ ತನಿಖೆ ಆರಂಭಗೊಂಡಿದ್ದು, ಗೃಹಸಾಲದ ವಿವಾದಾತ್ಮಕ ಸಬ್ವೆನ್ಷನ್ ಯೋಜನೆ ಮೂಲಕ ಬಿಲ್ಡರ್‌ಗಳು ಮತ್ತು ಸಾಲದಾತರ ನಡುವೆ ಅಸಮರ್ಪಕ ಸಂಬಂಧವಿದೆ ಎಂದು ಸುಪ್ರೀಂ ಕೋರ್ಟ್ ಹಿಂದೆಯೇ ಗಮನಿಸಿದೆ. ಅದರಂತೆ, ಏಳು ಪ್ರಾಥಮಿಕ ವಿಚಾರಣೆಗಳನ್ನು ಸಿಬಿಐಗೆ ಒಪ್ಪಿಸಲಾಗಿತ್ತು. ಇದಕ್ಕೂ ಮೊದಲು NCR ಪ್ರದೇಶದಲ್ಲಿ 22 ಎಫ್‌ಐಆರ್‌ಗಳನ್ನು ದಾಖಲಿಸಿದ್ದ ಸಿಬಿಐ, ಇದೀಗ NCR ಹೊರಗಿನ ಯೋಜನೆಗಳನ್ನು ಒಳಗೊಂಡ ಏಳನೇ ವಿಚಾರಣೆಯ ನಂತರ, ಸುಪ್ರೀಂ ಕೋರ್ಟ್ ಸೂಚನೆಯಂತೆ ಆರು ನಿಯಮಿತ ಪ್ರಕರಣಗಳನ್ನು ದಾಖಲಿಸಿದೆ. ಇಥಾಕಾ ಎಸ್ಟೇಟ್ ಪ್ರೈ.ಲಿ., ಎಲ್‌ಜಿಸಿಎಲ್ ಅರ್ಬನ್ ಹೋಮ್ಸ್, ಓಜೋನ್ ಅರ್ಬಾನಾ ಇನ್...
ಬೆಂಗಳೂರು–ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು

ಬೆಂಗಳೂರು–ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರು–ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ.ಮೂರು ದಶಕಗಳಿಂದ ಬಾಕಿ ಉಳಿದ ಬೇಡಿಕೆ ಈಡೇರಿದಂತಾಗಿದ್ದು, ಈಗಾಗಲೇ ಉದ್ಯಾನ ಎಕ್ಸ್‌ಪ್ರೆಸ್ ಒಂದೇ ರೈಲು ಕಾರ್ಯನಿರ್ವಹಿಸುತ್ತಿತ್ತು. ಹೊಸ ಸೇವೆಯಿಂದ ಲಕ್ಷಾಂತರ ಪ್ರಯಾಣಿಕರಿಗೆ ಕಡಿಮೆ ವೆಚ್ಚದಲ್ಲಿ ಸುಗಮ ಸಂಚಾರ ಸಿಗಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಈ ನಿರ್ಧಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಅರ್ಪಿಸಿರುವ ತೇಜಸ್ವಿ, ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. I have some great news for people of Bengaluru and Mumbai. From last 30 years, our two great cities were connected by only one super fast train -Udyan Express. Even that train took more than 24 hrs to reach. This forced most people to inevitably take bus or flights. Travel was… pic.twitter.com/NZmJ2rhiLs— Tej...
ಸಾಹಿತಿ ಎಸ್.ಎಲ್. ಭೈರಪ್ಪ ಅಂತ್ಯಕ್ರಿಯೆ; ಜೋಷಿ, ಮಹದೇವಪ್ಪ ಅವರಿಂದ ಅಂತಿಮ ಗೌರವ

ಸಾಹಿತಿ ಎಸ್.ಎಲ್. ಭೈರಪ್ಪ ಅಂತ್ಯಕ್ರಿಯೆ; ಜೋಷಿ, ಮಹದೇವಪ್ಪ ಅವರಿಂದ ಅಂತಿಮ ಗೌರವ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮೈಸೂರು: ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12:30ಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.ಬ್ರಾಹ್ಮಣ ಸಂಪ್ರದಾಯದಂತೆ ನಡೆದ ಅಂತಿಮ ವಿಧಿವಿಧಾನದಲ್ಲಿ ಪೊಲೀಸ್ ಪಡೆ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿತು.ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ, ಶಾಸಕ ಟಿ.ಎಸ್. ಶ್ರೀವತ್ಸ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿ ನಮನ ಸಲ್ಲಿಸಿದರು. ರಾಷ್ಟ್ರಧ್ವಜವನ್ನು ಪ್ರಹ್ಲಾದ್ ಜೋಷಿ ಹಾಗೂ ಮಹದೇವಪ್ಪ ಅವರು ಭೈರಪ್ಪರ ಪುತ್ರರಾದ ರವಿಶಂಕರ್ ಮತ್ತು ಉದಯ್ ಶಂಕರ್ ಅವರಿಗೆ ಹಸ್ತಾಂತರಿಸಿದರು.ಪುತ್ರರು ಅಂತಿಮ ವಿಧಿ ನೆರವೇರಿಸಿದ ವೇಳೆ, ಭೈರಪ್ಪರ ಇಚ್ಛೆಯಂತೆ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಹಾಜರಿದ್ದರು. ವಿಧಿ ವಿಧಾನಗಳ ಬಳಿಕ ಪುತ್ರರ ಜೊತೆಗೂಡಿ ಅವರು ಭೈರಪ್ಪರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು....
KRS: ಕಾವೇರಿ ಆರತಿ ವೀಕ್ಷಿಸುವ ಪ್ರವಾಸಿಗರಿಗೆ ಉಚಿತವಾಗಿ ಕಾವೇರಿ ಲಡ್ಡು ಪ್ರಸಾದ

KRS: ಕಾವೇರಿ ಆರತಿ ವೀಕ್ಷಿಸುವ ಪ್ರವಾಸಿಗರಿಗೆ ಉಚಿತವಾಗಿ ಕಾವೇರಿ ಲಡ್ಡು ಪ್ರಸಾದ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಡ್ಯ: ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ "ಕಾವೇರಿ ಆರತಿ" ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26ರ ಶುಕ್ರವಾರದಿಂದ ಐದು ದಿನಗಳ ಕಾಲ‌ ಕೆಆರ್ ಎಸ್ ನಲ್ಲಿ ನೆರವೇರಲಿದೆ.ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ ಹತ್ತು ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ "ಕಾವೇರಿ ಆರತಿ"ಯನ್ನು ವೀಕ್ಷಿಸಿ ಕಣ್ತುಂಬಿಕೊಳ್ಳಲಿದ್ದಾರೆ. ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಲಡ್ಡು ಮಾಡಿಸಿದ್ದಾರೆಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆಗಮಿಸುವವರಿಗೆ ಲಾಡು ವಿತರಣೆ ಮಾಡುವ ಮಾದರಿಯಲ್ಲಿ "ಕಾವೇರಿ ಆರತಿ" ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಡ್ಡನ್ನು ಉಚಿತವಾಗಿ ವಿತರಣೆ ಮಾಡಲಾಗುವುದು.ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್ ಎಸ್ ವೀಕ್ಷಣೆಗೆ ದಿನಂಪ್ರತಿ ಸಹಸ್ರಾರು ಸಂಖ್ಯೆ...
ತುಮಕೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ; ನಿತಿನ್ ಗಡ್ಕರಿ ಜೊತೆ ಸೋಮಣ್ಣ ಚರ್ಚೆ

ತುಮಕೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ; ನಿತಿನ್ ಗಡ್ಕರಿ ಜೊತೆ ಸೋಮಣ್ಣ ಚರ್ಚೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಕೇಂದ್ರ ರೈಲ್ವೇ ಮತ್ತು ಜಲ ಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ನವರು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ತುಮಕೂರು ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಚರ್ಚಿಸಿದರುಈ ವೇಳೆ, ಸ್ಮಾರ್ಟ್ ಸಿಟಿ ತುಮಕೂರು ನಗರದ ಬೈಪಾಸ್ ನಿರ್ಮಾಣ ಹಂತ 02ರ ಮಲ್ಲಸಂದ್ರ (NH-73) ಯಿಂದ ವಸಂತನರಸಾಪುರ (NH-48) ದವರೆಗೆ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಕಾರ್ಯಸಾಧ್ಯತೆಯನ್ನು (Alignment) ಮರುಪರಿಶೀಲಿಸಲು ಅಥವಾ ತಾಂತ್ರಿಕ ತಜ್ಞರ ತಂಡವನ್ನು ನಿಯೋಜಿಸಲು ಸಂಬಂಧಪಟ್ಟವರಿಗೆ ನಿರ್ದೇಶಿಸಲು ಸಚಿವರಲ್ಲಿ ಕೋರಲಾಯಿತು ಎಂದು ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.ತುಮಕೂರು - ಕೊರಟಗೆರೆ - ಮಧುಗಿರಿ - ಪಾವಗಡ - ರಾಯದುರ್ಗ - ಬಳ್ಳಾರಿ (225 ಕಿಮೀ) ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಬೇಕೆಂದು ಮನವಿ ಮಾಡಿರುವುದಾಗಿ ವಿ ಸೋಮಣ್ಣ ಮಾಹಿತಿ ಹಂಚಿಕೊಂಡಿದ್ದಾರೆ.288 ಕಿಮೀ. ಉದ್ದದ 13,139 ಕೋಟಿ ರೂ. ವೆಚ್ಚದ ಬೆಂಗಳೂರು ನಗರದ ಸಂಚಾರ ದಟ್ಟಣೆಯನ್ನು ನಿವಾರಿಸಲು ಭಾರತ್ ಮಾಲ...
ದೀನ ದಯಾಳ ಉಪಾಧ್ಯಾಯರು ಆದರ್ಶದ ದೀಪಸ್ತಂಭ: ದತ್ತಾತ್ರೇಯ ಹೊಸಬಾಳೆ

ದೀನ ದಯಾಳ ಉಪಾಧ್ಯಾಯರು ಆದರ್ಶದ ದೀಪಸ್ತಂಭ: ದತ್ತಾತ್ರೇಯ ಹೊಸಬಾಳೆ

ದೇಶ, ರಾಜ್ಯ, ವಿದೇಶ
ಬೆಂಗಳೂರು: ಸಾವಿರಾರು ಜನರನ್ನು ಪ್ರೇರೇಪಿಸಿದ ರಾಷ್ಟ್ರಪುರುಷ ದೀನದಯಾಳ ಉಪಾಧ್ಯಾಯರು. ತಮ್ಮ ವ್ಯಕ್ತಿತ್ವ, ಕರ್ತೃತ್ವ, ಸಾಧನೆ, ಚಿಂತನೆಯ ಮೂಲಕ ದೀನ ದಯಾಳ ಉಪಾಧ್ಯಾಯರು ಆಧಾರ ದೀಪಸ್ತಂಭವಾಗಿದ್ದಾರೆ. ಅವರ ಬದುಕು ಗಂಗಾಪ್ರವಾಹವಿದ್ದಂತೆ. ಅದರಲ್ಲಿ ನಮ್ಮ ಪಾತ್ರ ಎಷ್ಟು ಎನ್ನುವುದು ಮುಖ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದರು.ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಗಳೂರು ಮಹಾನಗರ ವತಿಯಿಂದ ಜೆಪಿನಗರದ ಆರ್ ವಿ ಡೆಂಟಲ್ ಕಾಲೇಜಿನಲ್ಲಿ ನಡೆದ ಪಂಡಿತ್ ದೀನದಯಾಳ ಉಪಾಧ್ಯಾಯ ಅವರ 109ನೇ ವರ್ಷದ ಜಯಂತಿಯ ನಿಮಿತ್ತ ಸಂಸ್ಮರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸ್ವಯಂಸೇವಕ ಎಂಬ ವಿಶೇಷವಾದ ಕಲ್ಪನೆ ಇಂದು ಸಹಜವಾಗಿದೆ. ಯಾವ ಸಂಘವೂ ಯಾರನ್ನೂ ನಿರ್ಮಾಣ ಮಾಡುವುದಿಲ್ಲ, ಬದಲಾಗಿ ಇರುವವರನ್ನು ಸೇರಿಸಿ ಸಂಘಟನೆ ರೂಪುಗೊಳ್ಳುತ್ತದೆ. ಆದರೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸ್ವಯಂಸೇವಕರ ನಿರ್ಮಾಣ ಮಾಡುವ ಸಂಘಟನೆ. ಅಂತಹ ಶ್ರೇಷ್ಠ, ಆದರ್ಶ, ಪ್ರೇರಣಾದಾಯಿ ಸ್ವಯಂಸೇವಕ ದೀನ ದಯಾಳ ಉಪಾಧ್ಯಾಯ. ಅವರನ್ನು ಚಿಂತಕರಾಗಿ, ದ್ರಷ್ಟಾರರಾಗಿ, ಆದರ್ಶ ರಾಜಕಾರಣಿಯ...
ಮೈಸೂರು ಮಾದರಿಯಲ್ಲೇ ಮುಂದಿನ ವರ್ಷದಿಂದ ಮಂಗಳೂರು ದಾಸರಾಗೂ ಸರ್ಕಾರದಿಂದ ಅನುದಾನ; ಗುಂಡೂರಾವ್

ಮೈಸೂರು ಮಾದರಿಯಲ್ಲೇ ಮುಂದಿನ ವರ್ಷದಿಂದ ಮಂಗಳೂರು ದಾಸರಾಗೂ ಸರ್ಕಾರದಿಂದ ಅನುದಾನ; ಗುಂಡೂರಾವ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ನಾಡಿನ ಮಹಾಉತ್ಸವವಾಗಿರುವ ಮೈಸೂರು ದಸರಾದಷ್ಟೇ ಮಂಗಳೂರು ದಸರಾ ವೈಭವಯುತವಾಗಿ ನಡೆಯುತ್ತಿದೆ. ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ದಸರಾ ನಾಡಿನ ಹೆಮ್ಮೆಯ ಉತ್ಸವವಾಗಿ ರೂಪುಗೊಂಡಿದೆ ಎಂದು ರಾಜ್ಯ ಧಾರ್ಮಿಕ ದತ್ತಿ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ‘ಮಂಗಳೂರು ದಸರಾ-2025’ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಜನಾರ್ಧನ ಪೂಜಾರಿ ಒಬ್ಬ ಅಪ್ರತಿಮ ಸಂಘಟಕ. ರಾಜಕೀಯ ನಾಯಕರಿಗೂ ಅವರು ಮಾರ್ಗದರ್ಶಕ. ಅವರ ನೇತೃತ್ವದಲ್ಲೇ ನಡೆಯುತ್ತಿರುವ ಮಂಗಳೂರು ದಸರಾವು ವರ್ಷದಿಂದ ವರ್ಷಕ್ಕೆ ವೈಭವನ್ನು ಹೆಚ್ಚಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು.ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಮಂಗಳೂರು ದಸರಾ ಮಹೋತ್ಸವ ವೈಭವಯುತವಾಗಿ ನಡೆಯುತ್ತಿದ್ದು, ಮುಂದಿನ ವರ್ಷದಿಂದ ಮೈಸೂರು, ಮಡಿಕೇರಿ ಮಾದರಿಯಲ್ಲೇ ಮ...