
ರಾಜೀವ್ ಗಾಂಧಿ ವಿವಿಗೆ ಇದೆ 1500 ಕ್ಕೂ ಹೆಚ್ಚು ಅಂಗಸಂಸ್ಥೆಗಳು, ಕಾಲೇಜುಗಳು
ಬೆಂಗಳೂರು: ವೈದ್ಯಕೀಯ ಕಲಿಕೆ ಎಂದರೆ ಕೇವಲ ವೈದ್ಯರು, ನರ್ಸ್‌ಗಳು, ಔಷಧ ಶಾಸ್ತ್ರಜ್ಞರು ಅಥವಾ ಸಂಶೋಧಕರನ್ನು ತಯಾರಿಸುವುದಲ್ಲ. ಜ್ಞಾನದೊಂದಿಗೆ ಕರುಣೆ, ಮಾನವೀಯತೆ ಹಾಗೂ ವೃತ್ತಿಪರತೆಯನ್ನೂ ಹೊಂದಿರುವ ಹೊಸ ತಲೆಮಾರನ್ನು ರೂಪಿಸಬೇಕಾಗಿದೆ ವೈದ್ಯಕೀಯ ಶಿಕ್ಷಣ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ಪ್ರತಿಪಾದಿಸಿದ್ದಾರೆ.ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಸಚಿವರು, ವೈದ್ಯಕೀಯ ಕ್ಷೇತ್ರದಲ್ಲಿರುವವರು ತಾಂತ್ರಿಕ ಕೌಶಲ್ಯದ ಜೊತೆಗೆ ಸಂವಹನ ಕೌಶಲ್ಯ ಹಾಗೂ ಮನವೀಯತೆಯನ್ನೂ ಬೆಳೆಸಿಕೊಳ್ಳಬೇಕು. ವೈದ್ಯರಾದವರು ರೋಗಿಗಳೊಂದಿಗೆ ಹೇಗೆ ನಡೆದುಕೊಳ್ಳುತ್ತಾರೆ, ಹೇಗೆ ವ್ಯವಹರಿಸುತ್ತಾರೆ ಎನ್ನುವುದೂ ಮುಖ್ಯ. ವೃತ್ತಿಯ ಜೊತೆಗೆ ಸೇವೆಗೂ ಅವಕಾಶವಿರುವ ಕ್ಷೇತ್ರ ಎಂದರೆ ವೈದ್ಯಕೀಯ ಕ್ಷೇತ್ರ. ಈ ಕ್ಷೇತ್ರದಲ್ಲಿರುವ ಶಿಕ್ಷಕರು ವೃತ್ತಿಯ ಜೊತೆಗೆ ಸೇವಾ ಮನೋಭಾವವನ್ನೂ ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.ವೈದ್ಯಕೀಯ ಶಿಕ್ಷಣದಲ್ಲಿ ಕರ್ನಾಟಕ ಮುಂಚೂಣಿಯಲ...









