ಕ್ರೈಸ್ತ ಜಾತಿ ಎಡವಟ್ಟು ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ; CSS ಸ್ವಾಗತ
ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊಮ್ಮುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಜಾಣ್ಮೆಯ ನಿರ್ಧಾರ ಕೈಗೊಂಡಿದ್ದಾರೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಲ್ಲ, ಈ ಸಂಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ (CSS) ಮನವಿ ಸಲ್ಲಿಸಿದ ಬೆನ್ನಲ್ಲೇ, ಕ್ರಿಶ್ಚಿಯನ್ ಜಾತಿಗಳ ಮುಂದಿದ್ದ ಹಿಂದೂ ಹೆಸರುಗಳನ್ನೂ ಕೈಬಿಡಬೇಕೆಂದು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.ಸಿಎಂ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೂಕ್ತ ತಿದ್ದುಪಡಿಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ, ಕ್ರೈಸ್ತ ಜಾತಿ ವಿವಾದಕ್ಕೆ ತೆರೆ ಎಳೆದ ಸಿಎಂ ನಿರ್ಧಾರವನ್ನು ಕ್ರಿಶ್ಚಿಯನ್ ಸೇವಾ ಸಂಘದ ಅಧ್ಯಕ್ಷ ಶಾಜಿ ಟಿ ವರ್ಗೀಸ್ ಸ್ವಾಗತಿಸಿದ್ದಾರೆ.ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರತಿಪಾದಿಸುತ್ತಿರುವ ಕ್ರೈಸ್ತಧರ್ಮದ ಹಾಗೂ ಜನರ ಹಿತಾಸಕ್ತಿ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿರುವ ಕ್ರಿಶ್ಚಿಯನ್ ಸೇವಾ ಸಂಘದ ಅಧ್...









