Friday, August 7

ವಿದೇಶ

ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳು ಇಲ್ಲದ ಹಿನ್ನೆಲೆಯಲ್ಲಿ ಮೂರು ಸ್ಥಾನಗಳನ್ನು ಕಾಂಗ್ರೆಸ್ ಹಾಗೂ ಒಂದು ಸ್ಥಾನವನ್ನು ಬಿಜೆಪಿ ಪಡೆದುಕೊಂಡಿದೆ.ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಾಮಪತ್ರ ಹಿಂಪಡೆಯುವ ಅವಧಿ ಮುಕ್ತಾಯಗೊಂಡ ಬಳಿಕ ಯಾವುದೇ ಅಭ್ಯರ್ಥಿ ಎದುರಾಳಿಯಾಗಿ ಉಳಿಯದ ಕಾರಣ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯನ್ನು ಘೋಷಿಸಿದರು.ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಕೆ.ಎಂ. ವಿಶಾಲಾಕ್ಷಿ ಅವರು ಈ ಕುರಿತು ಅಧಿಕೃತ ಘೋಷಣೆ ಮಾಡಿದರು.ರಾಜ್ಯಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಮೂರು ಸ್ಥಾನಗಳು ಲಭಿಸಿರುವುದು ಹಾಗೂ ಬಿಜೆಪಿ ಒಂದು ಸ್ಥಾನ ಪಡೆದಿರುವುದು ವಿಧಾನಸಭೆಯಲ್ಲಿನ ಪಕ್ಷಗಳ ಸಂಖ್ಯಾಬಲದ ಆಧಾರದಲ್ಲಿ ನಡೆದಿದೆ....
ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ.ರವಿ ಪ್ರಶ್ನೆ

ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ.ರವಿ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ? ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಕೇಳಿದ್ದಾರೆ. ಆಗ ಇಲ್ಲದ ಕಂಡಿಷನ್ ಈಗ ಯಾಕೆ ಎಂದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಕಾ ಪಾಟೀಲ್ ನಿಂಗೂ ಫ್ರೀ, ಜಮೀರ್ ಅಹ್ಮದ್, ಮಹದೇವಪ್ಪ ನಿಂಗೂ ಫ್ರೀ ಎಂದು ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯನವರು ತಿಳಿಸಿದ್ದರು ಎಂದು ಗಮನ ಸೆಳೆದರು. 10 ಕೆಜಿ ಅಕ್ಕಿ ಕೊಟ್ಟಿದ್ದೀರಾ? ಮೋದಿಯವರು 5 ಕೆಜಿ ಅಕ್ಕಿ ಕೊಡದೇ ಇದ್ದರೆ, ನಿಮ್ಮನ್ನೇ ನಂಬಿದ್ದರೆ ಜನರು ಖಾಲಿ ಹೊಟ್ಟೆಯಲ್ಲಿ ನೀರು ಕುಡಿದು ಮಲಗಬೇಕಿತ್ತು ಎಂದು ತಿಳಿಸಿದರು. ನಿಮ್ಮ ಕಂಡಿಷನ್ ಯಾಕೆ, ಖಜಾನೆ ಖಾಲಿ ಎಂಬುದು ಜನರಿಗೆ ಗೊತ್ತಿದೆ ಎಂದು ತಿಳಿಸಿದರು.ಫಲಾನುಭವಿ ಜನರನ್ನು ಕಡಿಮೆ ಮಾಡಲು ಕಂಡಿಷನ್ ಹಾಕುತ್ತೀರಿ. ನಿಮ್ಮ ಹಳೆ ಭಾಷಣವನ್ನು ಜನರು ಕೇಳಿಸಿಕೊಳ್ಳುತ್ತಾರೆ ಎಂದರು. ಇದಕ್ಕೆ ಸೂಕ್ತ ಸಮಯದಲ್ಲಿ ಜನರು ಉತ್ತರ ಕೊಡುತ್ತಾರೆ ಎಂದು ಹೇಳಿದರು. ನಮಗೂ ಗ್ಯಾರಂಟಿ ಯೋಜನೆಗಳಿಗೂ ಸಂಬಂಧ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದರೆ, ನಾವು ಪ್ರಶ್ನ...
ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೈವಿಧ್ಯ
ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೆಲೂನ್‌ಗಳು, ಸ್ಪಾ/ಮಸಾಜ್ ಕೇಂದ್ರಗಳು, ಬ್ಯೂಟಿ ಪಾರ್ಲರ್‌ಗಳು, ಯುನಿಸೆಕ್ಸ್ ಸಲೂನ್‌ಗಳು ಹಾಗೂ ಜಿಮ್ನೇಷಿಯಂಗಳ ನಿಯಂತ್ರಣಕ್ಕಾಗಿ ಪ್ರತ್ಯೇಕ ಕಾನೂನು ಜಾರಿಗೆ ತರಲು ಕರ್ನಾಟಕ ಕಾನೂನು ಆಯೋಗ ಸರ್ಕಾರಕ್ಕೆ ಮಹತ್ವದ ಶಿಫಾರಸು ಮಾಡಿದೆ. ಮಂಗಳೂರಿನ ಮಾಜಿ ಸರ್ಕಾರಿ ವಕೀಲ ಮನೋರಾಜ್ ರಾಜೀವ ಅವರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ ಆಯೋಗ ತನ್ನ 76ನೇ ವರದಿಯಲ್ಲಿ ಈ ಶಿಫಾರಸುಗಳನ್ನು ನೀಡಿದೆ.ಪ್ರಸ್ತುತ ರಾಜ್ಯದಲ್ಲಿ ಸ್ಪಾ ಮತ್ತು ಮಸಾಜ್ ಕೇಂದ್ರಗಳ ಕಾರ್ಯನಿರ್ವಹಣೆಯನ್ನು ನೇರವಾಗಿ ನಿಯಂತ್ರಿಸುವ ಸ್ಪಷ್ಟ ಕಾನೂನು ಇಲ್ಲ. ಈ ಹಿನ್ನೆಲೆಯಲ್ಲಿ ಆಯೋಗವು ದೇಶ-ವಿದೇಶಗಳ ಕಾನೂನು ಮಾದರಿಗಳನ್ನು ಅಧ್ಯಯನ ನಡೆಸಿದ್ದು, ವಿಶೇಷವಾಗಿ ಸಿಂಗಾಪುರ್, ಅಮೆರಿಕದ ಹಲವು ರಾಜ್ಯಗಳು ಹಾಗೂ ಫಿಲಿಪ್ಪೀನ್ಸ್‌ನಲ್ಲಿ ಜಾರಿಯಲ್ಲಿರುವ ನಿಯಮಾವಳಿಗಳನ್ನು ಪರಿಶೀಲಿಸಿದೆ.ಕಾನೂನು ಆಯೋಗವು ಗ್ರೇಟರ್ ಬೆಂಗಳೂರು ಗವರ್ನನ್ಸ್ ಕಾಯ್ದೆ-2024ಕ್ಕೆ ತಿದ್ದುಪಡಿ ತಂದು, ಆಯುರ್ವೇದ ಆರೋಗ್ಯ ಕೇಂದ್ರಗಳು, ಸ್ಪಾ, ಯುನಿಸೆಕ್ಸ್ ಸಲೂನ್‌ಗಳು, ಬ್ಯೂಟಿ ಪಾರ್ಲರ್‌ಗಳು ಮತ್ತ...

ಸಿಎಂ ಡಿ.ಕೆ. ಶಿವಕುಮಾರ್‌ಗೆ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್‌ನ ಚುನಾವಣಾ ತಂತ್ರಗಾರ ಎಂದೇ ಗುರುತಿಸಿಕೊಂಡಿರುವ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಲಾಗಿದೆ.ಸುನೀಲ್ ಕನುಗೋಳು ಅವರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಿ ನೇಮಕಾತಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿಯೂ ಕನುಗೋಳು ಅವರು ಮುಖ್ಯ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು.ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ನ ‘ಪೇಸಿಎಂ’ ಅಭಿಯಾನ, ಗ್ಯಾರಂಟಿ ಯೋಜನೆಗಳ ಪ್ರಚಾರ ತಂತ್ರ ಹಾಗೂ ಪಕ್ಷದ ಚುನಾವಣಾ ಕಾರ್ಯತಂತ್ರ ರೂಪಿಸುವಲ್ಲಿ ಸುನೀಲ್ ಕನುಗೋಳು ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ.ಪಕ್ಷದ ಗೆಲುವಿಗೆ ತೆರೆಮರೆಯಲ್ಲಿ ತಂತ್ರಗಾರಿಕೆ ರೂಪಿಸಿದ್ದ ಅವರು, ಇದೀಗ ಆಡಳಿತಾತ್ಮಕ ವಿಚಾರಗಳಲ್ಲಿಯೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ನೀಡುವ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ....
‘ಐಡಿ ಇಲ್ಲದೆ ಪಬ್‌, ಬಾರ್ ಪ್ರವೇಶವಿಲ್ಲ’ ಅಪ್ರಾಪ್ತರ ಮದ್ಯಪಾನ ತಡೆಗೆ ಗೃಹ ಸಚಿವರ ಖಡಕ್ ಸೂಚನೆ

‘ಐಡಿ ಇಲ್ಲದೆ ಪಬ್‌, ಬಾರ್ ಪ್ರವೇಶವಿಲ್ಲ’ ಅಪ್ರಾಪ್ತರ ಮದ್ಯಪಾನ ತಡೆಗೆ ಗೃಹ ಸಚಿವರ ಖಡಕ್ ಸೂಚನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಹದಿಹರೆಯದವರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಮತ್ತು ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನ ಎಲ್ಲಾ ಪಬ್‌ಗಳು, ಬಾರ್‌ಗಳು, ಕ್ಲಬ್‌ಗಳು, ಬ್ರೂವರೀಸ್‌, ಲಾಂಜ್‌ಗಳು ಹಾಗೂ ಮದ್ಯ ಸರಬರಾಜು ಮಾಡುವ ಸಂಸ್ಥೆಗಳಲ್ಲಿ ವಯಸ್ಸಿನ ಪರಿಶೀಲನೆಯನ್ನು ಕಡ್ಡಾಯಗೊಳಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.ಮಾನ್ಯ ಗುರುತಿನ ಚೀಟಿ ಇಲ್ಲದವರಿಗೆ ಪ್ರವೇಶ ನೀಡಬಾರದು ಮತ್ತು ಅಪ್ರಾಪ್ತ ವಯಸ್ಕರಿಗೆ ಮದ್ಯ ಪೂರೈಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.ಪ್ರವೇಶ ದ್ವಾರಗಳಲ್ಲಿರುವ ಸಿಸಿಟಿವಿ ಕ್ಯಾಮೆರಾಗಳು ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು. ಅದರ ದೃಶ್ಯಾವಳಿಗಳನ್ನು ಸಂರಕ್ಷಿಸುವ ಜವಾಬ್ದಾರಿ ಸಂಸ್ಥೆಗಳ ಮಾಲೀಕರು, ವ್ಯವಸ್ಥಾಪಕರು ಮತ್ತು ಪರವಾನಗಿದಾರರ ಮೇಲಿದೆ ಎಂದು ಸಚಿವರು ತಿಳಿಸಿದ್ದಾರೆ.ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಕ್ರೈಸ್ಟ್ ವಿಶ್ವವಿದ್ಯಾಲಯ ಮತ್ತು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು ನಡೆಸಿದ ಅಧ್...
ಮೋದಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ: ‘ಈಡೇರದ ಭರವಸೆಗಳ ಪಟ್ಟಿ’ ಬಿಡುಗಡೆ

ಮೋದಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ: ‘ಈಡೇರದ ಭರವಸೆಗಳ ಪಟ್ಟಿ’ ಬಿಡುಗಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಳೆದ 12 ವರ್ಷಗಳಲ್ಲಿ ಘೋಷಿಸಲಾದ ಹಲವು ಯೋಜನೆಗಳು ಮತ್ತು ಭರವಸೆಗಳು ಜನರಿಗೆ ನಿರೀಕ್ಷಿತ ಪ್ರಯೋಜನ ತಲುಪಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದ್ದಾರೆ.ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, “ಪ್ರತಿಯೊಂದು ಭರವಸೆಯನ್ನು ಘೋಷಣೆಯಾಗಿ ಮತ್ತು ಪ್ರತಿಯೊಂದು ಘೋಷಣೆಯನ್ನು ವಂಚನೆಯಾಗಿ ಪರಿವರ್ತಿಸಲಾಗಿದೆ” ಎಂದು ಟೀಕಿಸಿದ್ದಾರೆ.ಅವರು ಕೇಂದ್ರ ಸರ್ಕಾರದ ಹಲವು ಯೋಜನೆಗಳ ಪಟ್ಟಿಯನ್ನು ಉಲ್ಲೇಖಿಸಿದ್ದು, ಅವುಗಳಲ್ಲಿ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಡಿಜಿಟಲ್ ಇಂಡಿಯಾ, ಪಿಎಲ್‌ಐ ಯೋಜನೆ, ಸ್ಟಾರ್ಟಪ್ ಇಂಡಿಯಾ, ಮುದ್ರಾ ಸಾಲ, ಪಿಎಂ ಕಿಸಾನ್, ಸ್ವಚ್ಛ ಭಾರತ್ ಮಿಷನ್, ನಮಾಮಿ ಗಂಗೆ, ಬೇಟಿ ಬಚಾವೊ ಬೇಟಿ ಪಡಾವೊ, ಆಯುಷ್ಮಾನ್ ಭಾರತ್, ಉಜ್ವಲ ಯೋಜನೆ, ಜಲ ಜೀವನ್ ಮಿಷನ್, ಪ್ರಧಾನಮಂತ್ರಿ ಆವಾಸ್ ಯೋಜನೆ, ಸ್ಮಾರ್ಟ್ ಸಿಟೀಸ್ ಮಿಷನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ ಸೇರಿವೆ.ಉದ್ಯೋಗ ಸೃಷ್ಟಿ, ರೈತರ ಆದಾಯ, ಹಣದುಬ್ಬರ ನಿಯಂತ...
ಜಾತಿ ಸಮೀಕರಣದ ಮೇಲೆ ಬಿಜೆಪಿ ಲೆಕ್ಕಾಚಾರ: ಮೇಲ್ಮನೆಗೆ ಇಬ್ಬರು ಸಂಘಟನಾ ಚತುರರು

ಜಾತಿ ಸಮೀಕರಣದ ಮೇಲೆ ಬಿಜೆಪಿ ಲೆಕ್ಕಾಚಾರ: ಮೇಲ್ಮನೆಗೆ ಇಬ್ಬರು ಸಂಘಟನಾ ಚತುರರು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಕಾಂಗ್ರೆಸ್ ಮಾದರಿಯಲ್ಲೇ ಜಾತಿ ಸಮೀಕರಣಕ್ಕೆ ಆದ್ಯತೆ ನೀಡಿರುವುದು ಗಮನ ಸೆಳೆದಿದೆ. ಪಕ್ಷವು ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ಅವರನ್ನು ಮೇಲ್ಮನೆ ಅಭ್ಯರ್ಥಿಗಳಾಗಿ ಘೋಷಿಸಿದೆ.ಪಕ್ಷದ ಹಿರಿಯ ಮುಖಂಡರಾದ ಲಿಂಗರಾಜ್ ಪಾಟೀಲ್ ಈ ಹಿಂದೆ ಬಿಜೆಪಿ ಶಿಸ್ತು ಸಮಿತಿಯ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪಕ್ಷದೊಳಗಿನ ಶಿಸ್ತು ಮತ್ತು ಸಂಘಟನೆ ಬಲಪಡಿಸುವಲ್ಲಿ ಅವರು ಗಮನಾರ್ಹ ಕೊಡುಗೆ ನೀಡಿದ್ದಾರೆ.ಇನ್ನೊಬ್ಬ ಅಭ್ಯರ್ಥಿ ರಘು ಕೌಟಿಲ್ಯ ಪ್ರಸ್ತುತ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾಗಿದ್ದು, ಹಿಂದುಳಿದ ವರ್ಗಗಳ ನಡುವೆ ಪಕ್ಷದ ನೆಲೆಯನ್ನು ವಿಸ್ತರಿಸಲು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಒಬಿಸಿ ಸಮುದಾಯವನ್ನು ಬಿಜೆಪಿ ಪರವಾಗಿ ಸಂಘಟಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದಾರೆ.ಅಭ್ಯರ್ಥಿಗಳ ಆಯ್ಕೆಯ ಮೂಲಕ ಲಿಂಗಾಯತ ಹಾಗೂ ಹಿಂದುಳಿದ ವರ್ಗಗಳ ಮತಬ್ಯಾಂಕ್‌ ಅನ...
ಐಎಎಸ್–ಐಪಿಎಸ್ ಅಧಿಕಾರಿಗಳ ವರ್ಗಾವಣೆ; ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮುನೀಶ್ ಮೌದ್ಗಿಲ್‌

ಐಎಎಸ್–ಐಪಿಎಸ್ ಅಧಿಕಾರಿಗಳ ವರ್ಗಾವಣೆ; ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮುನೀಶ್ ಮೌದ್ಗಿಲ್‌

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, ಹಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಪ್ರಮುಖ ಹುದ್ದೆಗಳ ಪುನರ್‌ವಿನ್ಯಾಸದ ಭಾಗವಾಗಿ ಈ ಬದಲಾವಣೆಗಳು ನಡೆದಿವೆ. ಮುನೀಶ್ ಮೌದ್ಗಿಲ್‌ಗೆ ಸಿಎಂ ಪ್ರಧಾನ ಕಾರ್ಯದರ್ಶಿ ಹೆಚ್ಚುವರಿ ಹೊಣೆ ಪ್ರಮುಖ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ನೂತನವಾಗಿ ಸೃಷ್ಟಿಸಲಾದ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ (ಕಾರ್ಯಕ್ರಮ ಮತ್ತು ಯೋಜನೆ ಅನುಷ್ಠಾನ) ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.ಈವರೆಗೆ ಮುಖ್ಯಮಂತ್ರಿಯವರ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಅಂಜುಂ ಪರ್ವೇಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.ಇತರ ಐಎಎಸ್ ಅಧಿಕಾರಿಗಳ ವರ್ಗಾವಣೆದೀಪಾ ಚೋಳನ್ ಅವರನ್ನು ನಗರಾಭಿವೃದ್ಧಿ ಇಲಾಖೆಯಿಂದ ಸಾರಿಗೆ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ...
ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ವಿಧಿವಶ; ಸಿಎಂ ಸಂತಾಪ

ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ವಿಧಿವಶ; ಸಿಎಂ ಸಂತಾಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರೂ ಆಗಿದ್ದ ಸೂರಜ್‌ ಹೆಗ್ಡೆ ವಿಧಿವಶರಾಗಿದ್ದಾರೆ.ಎಐಸಿಸಿ ಪದಾಧಿಕಾರಿಯಾಗಿ ಮತ್ತು ರಾಜ್ಯ ಖಾತರಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಸೂರಜ್ ಹೆಗ್ಡೆ, ಎಐಸಿಸಿ ಪದಾಧಿಕಾರಿಯಾಗಿ ಮತ್ತು ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.ಕೆಪಿಸಿಸಿ ಉಪಾಧ್ಯಕ್ಷ ಮತ್ತು ರಾಜ್ಯ ಖಾತರಿ ಸಮಿತಿಯ ಉಪಾಧ್ಯಕ್ಷರಾಗಿಯೂ ಸೂರಜ್ ಹೆಗ್ಡೆ ಕೆಲಸ ಮಾಡಿದ್ದಾರೆ.ಸೂರಜ್ ಹೆಗ್ಡೆ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಘಟನಾ ಚಾತುರ್ಯ ಮತ್ತು ಸಾರ್ವಜನಿಕ ಕಾಳಜಿಯ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಅವರ ಕೊಡುಗೆ ಅಪ್ರತಿಮವಾಗಿದೆ. ಇಂದು, ಪಕ್ಷದ ಕಾರ್ಯಕರ್ತರೊಂದಿಗೆ ಯಾವಾಗಲೂ ಅತ್ಯುತ್ತಮ ಬಾಂಧವ್ಯವನ್ನು ಕಾಯ್ದುಕೊಂಡಿದ್ದ ಸಕ್ರಿಯ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ ಎಂದಿದ್ದಾರೆ....