Sunday, August 16

ವಿದೇಶ

ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್‌ಗಳನ್ನು ಅಳವಡಿಸಲು ಸರ್ಕಾರ ಟೆಂಡರ್‌

ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್‌ಗಳನ್ನು ಅಳವಡಿಸಲು ಸರ್ಕಾರ ಟೆಂಡರ್‌

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ತುಂಗಭದ್ರಾ ಜಲಾಶಯದಲ್ಲಿ 39 ಹೊಸ ಗೇಟ್‌ಗಳನ್ನು ಅಳವಡಿಸಲು ಸರ್ಕಾರ ಟೆಂಡರ್‌ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು. ಈಗಾಗಲೇ 6 ಗೇಟ್‌ಗಳ ಅಳವಡಿಕೆ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದರು.ವಿಧಾನಸಭಾ ಅಧಿವೇಶನದಲ್ಲಿ ನಿಯಮ 69ರಡಿ ಪ್ರಸ್ತಾಪವಾದ ತುಂಗಭದ್ರಾ ಜಲಾಶಯದ ಸಮಸ್ಯೆಗಳ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿದ ಅವರು, “ಜಲಾಶಯ ಬೋರ್ಡ್‌ 1633 ಅಡಿ ಬದಲಿಗೆ 1626 ಅಡಿ ಮಟ್ಟದಲ್ಲಿ ನೀರು ಸಂಗ್ರಹಿಸಲು ಸೂಚಿಸಿದೆ. ತಾಂತ್ರಿಕ ತೊಂದರೆಯಿಂದಾಗಿ ಈ ಬಾರಿ ರೈತರಿಗೆ ಎರಡನೇ ಬೆಳೆಗೆ ನೀರು ನೀಡಲು ಸಾಧ್ಯವಾಗುವುದಿಲ್ಲ” ಎಂದರು.ರೈತರ ಹಿತವನ್ನು ಕಾಪಾಡುವ ಬದ್ಧತೆಯನ್ನು ಸರ್ಕಾರ ಪುನರುಚ್ಚರಿಸಿದ ಡಿ.ಕೆ.ಶಿವಕುಮಾರ್, ಕುಡಿಯುವ ನೀರು ಹಾಗೂ ಕೈಗಾರಿಕೆಗಳಿಗೆ ನೀರಿನ ಪೂರೈಕೆಗೆ ಆದ್ಯತೆ ನೀಡಲಾಗುವುದಾಗಿ ತಿಳಿಸಿದರು. ಜೊತೆಗೆ, ದುರಸ್ತಿ ಕಾಮಗಾರಿಗಳು ಹಾಗೂ ಸಿಬ್ಬಂದಿ ಕೊರತೆ ನಿವಾರಣೆಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು....
ಟ್ರಾಫಿಕ್‌ ನಿಯಮ ಉಲ್ಲಂಘನೆ ಪ್ರಕರಣ; ಟ್ರಾಫಿಕ್ ದಂಡ ಪಾವತಿಗೆ ಶೇ.50 ರಿಯಾಯಿತಿ

ಟ್ರಾಫಿಕ್‌ ನಿಯಮ ಉಲ್ಲಂಘನೆ ಪ್ರಕರಣ; ಟ್ರಾಫಿಕ್ ದಂಡ ಪಾವತಿಗೆ ಶೇ.50 ರಿಯಾಯಿತಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರ್ಕಾರವು ಟ್ರಾಫಿಕ್‌ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಉಳಿದ ದಂಡ ಪಾವತಿಗೆ ಮತ್ತೊಮ್ಮೆ ಶೇ.50ರಷ್ಟು ರಿಯಾಯಿತಿ ನೀಡುವಂತೆ ಆದೇಶ ಹೊರಡಿಸಿದೆ.ಆಗಸ್ಟ್‌ 23ರಿಂದ ಸೆಪ್ಟೆಂಬರ್‌ 12ರವರೆಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಈ ಕುರಿತಂತೆ ಅಧಿಕೃತ ಆದೇಶ ಹೊರಡಿಸಿದ್ದಾರೆ.2023ರ ಫೆಬ್ರವರಿ 11ರೊಳಗೆ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯವಾಗಲಿದೆ. ಅನೇಕ ವರ್ಷಗಳಿಂದ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡವರಿಗೆ ಈ ಅವಕಾಶ ದೊರಕಲಿದೆ.2023ರ ಫೆಬ್ರವರಿ 12ರ ನಂತರ ದಾಖಲಾಗಿರುವ ಪ್ರಕರಣಗಳಿಗೆ ಮುಂದಿನ ವರ್ಷ ಇದೇ ರೀತಿಯ ರಿಯಾಯಿತಿ ನೀಡುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ.ಸಂಚಾರಿ ಇ- ಚಲನ್ ನಲ್ಲಿ ದಾಖಲಾಗಿರುವ ದಂಡ ಪ್ರಕರಣಗಳ, ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿ ಆದೇಶ. ಪೊಲೀಸ್ ಇಲಾಖೆಯ ಸಂಚಾರಿ ಇ -ಚಲನ್ ನಲ್ಲಿ ದಾಖಲಾದ ದಿನಾಂಕ:11.02.2023 ರ ವರೆಗಿನ ಪ್ರಕರಣಗಳಿಗೆ ಅನ್ವಯವಾಗುವಂತೆ, ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತ ...
ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಉಡುಪಿ: ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೊಳಪಡಿಸಿ ಆದೇಶಿಸಿದೆ.ಬ್ರಹ್ಮಾವರ ಪೊಲೀಸರು ಗುರುವಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿದ್ದರು. ಗುರುವಾರ ಬೆಳಗ್ಗೆ ಉಜಿರೆಯ ನಿವಾಸದಲ್ಲಿ ಮಹೇಶ್ ಶೆಟ್ಟಿಯನ್ನು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆದೊಯ್ದ ಪೊಲೀಸರು ಬ್ರಹ್ಮಾವರದಲಿರುವ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.ವಿಚಾರಣೆ ನಡೆಸಿದ ನ್ಯಾಯಾಲಯ ಮಹೇಶ್ ಶೆಟ್ಟಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದೇ ಸಂದರ್ಭದಲ್ಲಿ ಮಹೇಶ್‌ ಶೆಟ್ಟಿ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಈ ಸಂಬಂಧ ಅಗಸ್ಟ್ 23ರಂದು ನಡೆಯಲಿದೆ....
ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ಬಲಿಯಾದ ಕುಟುಂಬಗಳಿಗೆ 5 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ

ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ಬಲಿಯಾದ ಕುಟುಂಬಗಳಿಗೆ 5 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಾಟದಿಂದ ಆತ್ಮಹತ್ಯೆಗೆ ಶರಣಾದವರ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಮಾಹಿತಿ ಹಂಚಿಕೊಂಡ ಸಿಎಂ, “ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ಸರ್ಕಾರ ಈಗಾಗಲೇ ಕಠಿಣ ಕಾನೂನು ಜಾರಿಗೆ ತಂದಿದೆ. ಅದರ ಬಳಿಕ ಇಂತಹ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿದೆ” ಎಂದು ಹೇಳಿದರು. ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು. ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ನಾವು ಕಠಿಣ ಕಾನೂನನ್ನು ಜಾರಿ ಮಾಡಿದ ನಂತರದಿಂದ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂಬುದನ್ನು… pic.twitter.com/x5mq0ph80D— Siddaramaiah (@siddaramaiah) August 21, 2025...
ಗಣೇಶೋತ್ಸವ ಪರಿಸರಕ್ಕೆ ಹಾಗೂ ಜಲಚರಗಳಿಗೆ ಮಾರಕವಾಗಬಾರದು; : ಸಚಿವ ಖಂಡ್ರೆ

ಗಣೇಶೋತ್ಸವ ಪರಿಸರಕ್ಕೆ ಹಾಗೂ ಜಲಚರಗಳಿಗೆ ಮಾರಕವಾಗಬಾರದು; : ಸಚಿವ ಖಂಡ್ರೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣಪ ಮೂರ್ತಿ ಬಳಕೆಗೆ ಅವಕಾಶ ನೀಡಲಾಗುವುದಿಲ್ಲ. ಪೆಂಡಾಲ್‌ಗೆ ಅನುಮತಿ ನೀಡುವ ಮುನ್ನ ಸಮಿತಿಗಳಿಂದ ಪಿಓಪಿ ಗಣಪ ಮೂರ್ತಿ ಬಳಸುವುದಿಲ್ಲವೆಂದು ಮುಚ್ಚಳಿಕೆ ಪಡೆದುಕೊಳ್ಳುವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಶ್ರದ್ಧಾ ಭಕ್ತಿಯಿಂದ ಆಚರಿಸುವ ಹಬ್ಬವು ಪರಿಸರಕ್ಕೆ ಹಾಗೂ ಜಲಚರಗಳಿಗೆ ಮಾರಕವಾಗಬಾರದು. ಪಿಓಪಿ ಮೂರ್ತಿಗಳು ನೀರಲ್ಲಿ ಕರಗದೇ, ವಿಷಕಾರಿ ಅಂಶ ಸೇರಿಸುತ್ತವೆ. ಮಣ್ಣಿನ ಗಣಪ ಮೂರ್ತಿಗಳನ್ನೇ ಪೂಜಿಸಿ, ವಿಸರ್ಜಿಸಬೇಕು” ಎಂದು ಮನವಿ ಮಾಡಿದರು.ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ.90ರಷ್ಟು ಮಣ್ಣಿನ ಗಣಪ ಮೂರ್ತಿಗಳ ಪೂಜೆ ನಡೆಯುತ್ತಿದೆ. “ಅಲ್ಲಿ ಸಾಧ್ಯವಾಗುತ್ತಿರುವುದು ಉಳಿದ ಜಿಲ್ಲೆಗಳಲ್ಲಿ ಏಕೆ ಸಾಧ್ಯವಾಗಬಾರದು? ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಗಳು ಜಾಗೃತಿ ಮೂಡಿಸ...
ಬಾಹ್ಯಾಕಾಶ ಯಾನಿ ಶುಭಾಂಶು ಶುಕ್ಲಾ ಅವರಿಗೆ ಮೋದಿ ಪ್ರೀತಿ–ಆಶೀರ್ವಾದ

ಬಾಹ್ಯಾಕಾಶ ಯಾನಿ ಶುಭಾಂಶು ಶುಕ್ಲಾ ಅವರಿಗೆ ಮೋದಿ ಪ್ರೀತಿ–ಆಶೀರ್ವಾದ

ದೇಶ, ಪ್ರಮುಖ ಸುದ್ದಿ, ವಿದೇಶ
ಲಖನೌ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಾರತೀಯರು ನಡೆಸಿದ ಮೊದಲ ಯಶಸ್ವಿ ಕಾರ್ಯಾಚರಣೆಯ ನಂತರ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಇದು ಭಾರತೀಯ ಗಗನಯಾತ್ರಿಯೊಬ್ಬರ ಮೊದಲ ಕಾರ್ಯಾಚರಣೆಯಾಗಿದ್ದು, ಐತಿಹಾಸಿಕ ಕ್ಷಣವಾಗಿ ಗುರುತಿಸಿಕೊಂಡಿದೆ.ಸಭೆಯ ವೇಳೆ ಶುಭಾಂಶು ಅವರು ತಮ್ಮ ಕಾರ್ಯಾಚರಣೆಯ ಅನುಭವ ಹಂಚಿಕೊಂಡು, ಬಾಹ್ಯಾಕಾಶದಲ್ಲಿ ತಮ್ಮೊಂದಿಗೆ ಕೊಂಡೊಯ್ದ ತ್ರಿವರ್ಣ ಧ್ವಜವನ್ನು ಪ್ರಧಾನಿಗೆ ಉಡುಗೊರೆಯಾಗಿ ನೀಡಿದರು.ಶುಭಾಂಶು ಅವರ ತಂದೆ ಶಂಭು ದಯಾಳ್ ಶುಕ್ಲಾ, “ಪ್ರಧಾನಿ ಮೋದಿ ನನ್ನ ಮಗನಿಗೆ ಪ್ರೀತಿ ಮತ್ತು ಆಶೀರ್ವಾದ ನೀಡಿದ್ದಾರೆ. ಅದು ನಮ್ಮ ಕುಟುಂಬಕ್ಕೆ ಭಾವನಾತ್ಮಕ ಕ್ಷಣವಾಗಿತ್ತು” ಎಂದರು. ತಾಯಿ ಆಶಾ ಶುಕ್ಲಾ ಅವರು, “ಇದು ಐತಿಹಾಸಿಕ ಹಾಗೂ ಹೆಮ್ಮೆಯ ಕ್ಷಣ” ಎಂದು ಸಂತೋಷ ವ್ಯಕ್ತಪಡಿಸಿದರು.ಶುಭಾಂಶು ಲಖ್ನೋಗೆ ಬರುವ ಸಂದರ್ಭದಲ್ಲಿ ವಿಶೇಷ ಸ್ವಾಗತಕ್ಕೆ ಸಿದ್ಧತೆ ನಡೆಯುತ್ತಿದ್ದು, ಅವರ ಸಮಯಾವಕಾಶಕ್ಕೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಕುಟುಂಬದವರು ತಿಳಿಸಿದರ...
ರಾಜ್ಯದಲ್ಲಿ ಮಳೆ ಬಿರುಸುಗೊಳ್ಳಲಿದೆ: ಹಲವು ಜಿಲ್ಲೆಗಳಿಗೆ ಎಚ್ಚರಿಕೆ

ರಾಜ್ಯದಲ್ಲಿ ಮಳೆ ಬಿರುಸುಗೊಳ್ಳಲಿದೆ: ಹಲವು ಜಿಲ್ಲೆಗಳಿಗೆ ಎಚ್ಚರಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಆಗಸ್ಟ್‌ 24ರವರೆಗೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಆಗಸ್ಟ್‌ 19ರಂದು (ಮಂಗಳವಾರ) ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ ಧಾರವಾಡ, ಚಿಕ್ಕಮಗಳೂರು, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಕನ್ನಡ, ಬೆಳಗಾವಿ, ಬೀದರ್‌, ಕಲಬುರಗಿ, ವಿಜಯಪುರ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಜಾರಿಯಲ್ಲಿದೆ. ಬಾಗಲಕೋಟ, ಯಾದಗಿರಿ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ....
ಬೆಳಗಾವಿ ಬಾಣಂತಿಯರ ಸಾವು ಪ್ರಕರಣ ಕುರಿತು ಪರಿಶೀಲನೆ: ಪರಿಷತ್‌ನಲ್ಲಿ ಸಚಿವರ ಮಾಹಿತಿ

ಬೆಳಗಾವಿ ಬಾಣಂತಿಯರ ಸಾವು ಪ್ರಕರಣ ಕುರಿತು ಪರಿಶೀಲನೆ: ಪರಿಷತ್‌ನಲ್ಲಿ ಸಚಿವರ ಮಾಹಿತಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಸಂಭವಿಸಿರುವ ಬಾಣಂತಿಯರು ಮತ್ತು ಶಿಶುಗಳ ಸಾವು ವಿಚಾರದ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ.ವಿಧಾನಪರಿಷತ್‌ನ ಸೋಮವಾರದ ಕಲಾಪದಲ್ಲಿ ಸದಸ್ಯರಾದ ಎನ್‌.ನಾಗರಾಜ್‌ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿರುವ ಸಚಿವರು, ಬೆಳಗಾವಿ ಪ್ರಕರಣದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಸಮಗ್ರ ವರದಿ ಸಲ್ಲಿಸಲು ತಿಳಿಸಿದ್ದೇನೆ ಎಂದರು.ನಮ್ಮ ರಾಜ್ಯದಲ್ಲಿ ಬಾಣಂತಿಯರು/ಶಿಶುಗಳ ಮರಣ ಪ್ರಮಾಣ 7.97 ಆವರೇಜ್ ಇದೆ. ಬೆಳಗಾವಿಯಲ್ಲಿ 7.72 ರಷ್ಟು ಇದೆ. ಇದನ್ನು ನಾನು ಸಮರ್ಥನೆ ಮಾಡುತ್ತಿಲ್ಲ. ಈ ಕುರಿತು ಮಾಹಿತಿ ನೀಡುತ್ತೇನೆ ಎಂದರು.ಬೆಳಗಾವಿ ಬಿಮ್ಸ್ ಗೆ ತುಂಬಾ ದೂರದ ಊರು, ಗ್ರಾಮಗಳಿಂದ ಜನರು ಬರುತ್ತಾರೆ. ಹೈ ರಿಸ್ಕ್ ಪ್ರೆಗ್ನೆನ್ಸಿಸ್ ಕೂಡ ಇರುತ್ತದೆ. ಈ ಮರಣಗಳಿಗೆ ಸಾಕಷ್ಟು ಕಾರಣ ಇವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಲ...
ಹೃದಯಾಘಾತ ಬಗ್ಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು: ಡಾ.ಶರಣ್ ಪ್ರಕಾಶ್ ಪಾಟೀಲ್

ಹೃದಯಾಘಾತ ಬಗ್ಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು: ಡಾ.ಶರಣ್ ಪ್ರಕಾಶ್ ಪಾಟೀಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು:ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜನತೆಗೆ ಧೈರ್ಯ ತುಂಬಿದ್ದಾರೆ.ವಿಧಾನ ಪರಿಷತ್ ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರ ಪ್ರಶ್ನೆ ಉತ್ತರಿಸಿದ ಅವರು, ಇತ್ತೀಚೆಗೆ ಹೃದಯಾಘಾತ, ಪ್ರಕರಣಗಳ ಸಂಖ್ಯೆ ಹೆಚ್ಚಳದ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಜನರು ಪ್ರತಿನಿತ್ಯ ಬಂದು ಹೃದಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರ ಪ್ರಮಾಣ ಶೇ.25ರಷ್ಟು ಏರಿಕೆಯಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದರು.ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಘಾತಗಳ ಸಂಖ್ಯೆ ಹೆಚ್ಚಳವಾಗಿದೆ ಎಂಬ ಆತಂಕ ಜನರಲ್ಲಿ ಮೂಡಿದೆ. ಇದು ತಪ್ಪು ಗ್ರಹಿಕೆ. ವಾಸ್ತವವಾಗಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಸರಾಸರಿ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಶೇ.5ರಿಂದ 6ರಷ್ಟು ಪ್ರಕರಣಗಳು ಹೃದಯಾಘಾತಕ್ಕೆ ಸಂಬಂಧಿಸಿದವು. ಈ ವರ್ಷವು ಇಷ್ಟೇ...
ಧರ್ಮಸ್ಥಳಕ್ಕೆ ಬಿಜೆಪಿ ನಾಯಕರ ಭೇಟಿ; ಸುಳ್ಳು ಪ್ರಚಾರ ಬಗ್ಗೆ ಸಿಎಂ ಕ್ಷಮೆಯಾಚನೆಗೆ ಆಗ್ರಹ

ಧರ್ಮಸ್ಥಳಕ್ಕೆ ಬಿಜೆಪಿ ನಾಯಕರ ಭೇಟಿ; ಸುಳ್ಳು ಪ್ರಚಾರ ಬಗ್ಗೆ ಸಿಎಂ ಕ್ಷಮೆಯಾಚನೆಗೆ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ಹಾಸನ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿರುವ ಸಾಮೂಹಿಕ ಸಮಾಧಿ ಪ್ರಕರಣ ಆಧರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ರಾಜ್ಯ ಬಿಜೆಪಿ ನಾಯಕರು ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ನಿಯೋಗವು ಮಂಜುನಾಥ ಸ್ವಾಮಿಗೆ ದರ್ಶನ ನೀಡಿ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿತು. ನಿಯೋಗದಲ್ಲಿ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಪಕ್ಷದ ಪ್ರಮುಖ ನಾಯಕರು ಸೇರಿದ್ದರು.“ಭಕ್ತರ ಭಾವನೆಗಳಿಗೆ ಧಕ್ಕೆ, ಸಿಎಂ ಕ್ಷಮೆಯಾಚನೆ ಬೇಕು”ಸಾಮೂಹಿಕ ಸಮಾಧಿ ವಿಚಾರದ ಕುರಿತು ಸರ್ಕಾರದ ನಿಶ್ಕ್ರಿಯತೆ ಹಾಗೂ ಮೌನವನ್ನು ಟೀಕಿಸಿದ ವಿಜಯೇಂದ್ರ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡಿರುವ ಸುಳ್ಳು ಪ್ರಚಾರವನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ. ಅವರು ಜನರ ಕ್ಷಮೆಯಾಚಿಸಬೇಕು” ಎಂದು ಹೇಳಿದರು.ವಿಜಯೇಂದ್ರ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ...