Sunday, August 16

ವಿದೇಶ

ಸೆಪ್ಟೆಂಬರ್ 30ರವರೆಗೆ ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ

ಸೆಪ್ಟೆಂಬರ್ 30ರವರೆಗೆ ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ನಿರಂತರ ಜಾಗೃತಿ, ಅಭಿಯಾನಗಳನ್ನು ಕೈಗೊಳ್ಳಲಾಗುತ್ತಿದ್ದು, ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದೆ.ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ ಎರಡು ತಿಂಗಳ ಸಮಗ್ರ "ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ"ವನ್ನು ಆರಂಭಿಸಲಾಗಿದೆ. ಆಗಸ್ಟ್ 1 ರಿಂದ ಸೆಪ್ಟೆಂಬರ್ 30 ರವರೆಗೆ ನಡೆಯುವ ಈ ಅಭಿಯಾನದ ಮುಖ್ಯ ಉದ್ದೇಶ ಎಂದರೆ ಹೆಚ್ಚುತ್ತಿರುವ ಮಾದಕ ದ್ರವ್ಯ ದುರುಪಯೋಗ ಮತ್ತು ಅದರ ದುಷ್ಪರಿಣಾಮಗಳನ್ನು ಪರಿಹರಿಸುವತ್ತ ಗಮನಹರಿಸುದಾಗಿದೆ. ಕೌಶಲ್ಯಾಭಿವೃದ್ಧಿ ಇಲಾಖೆಯಯಡಿಯ ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕಿ ಶ್ರೀವಿದ್ಯಾ ಈ ಕುರಿತು ಮಾಹಿತಿ ನೀಡಿದ್ದಾರೆ.ಈ ಬಗ್ಗೆ ವ್ಯಾಪಕವಾದ ಸಾರ್ವಜನಿಕ ತೊಡಗಿಸಿಕೊಳ್ಳುವಿಕೆ ಮತ್ತು ಶಿಕ್ಷಣವನ್ನು ನೀಡಲು ರಾಜ್ಯದ ಪ್ರತಿ ಗ್ರಾಮ ಪಂಚಾಯತ್‌ನಿಂದ ಎಲ್ಲಾ ಆಡಳಿತ ಹಂತಗಳಲ್ಲಿ ಸರಣಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. "ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ"ವನ್ನು ರಾಜ್ಯಾದ...
ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಸಾವಿಗೆ ಶರಣು

ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಸಾವಿಗೆ ಶರಣು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕಾರವಾರ: ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ನಟ ಚಂದ್ರಶೇಖರ್ ಸಿದ್ದಿ ಸಾವಿಗೆ ಶರಣಾಗಿದ್ದಾರೆ. ಕಾಮಿಡಿ ಕಿಲಾಡಿಗಳು ಶೋ ಮೂಲಕ ಪ್ರೇಕ್ಷಕರನ್ನು ನಕ್ಕು ನಲಿಸಿದ್ದ ಚಂದ್ರಶೇಖರ್ ಸಿದ್ದಿ ಗುರುವಾರ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ.ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಸಮೀಪದ ವಜ್ರಳ್ಳಿ ಗ್ರಾಮದ ಚಿಮನಳ್ಳಿಮೂಲದ ಚಂದ್ರಶೇಖರ್‌ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಪತಿ ಮನೆಗೆ ಬಾರದಿದ್ದಾಗ, ಪತ್ನಿ ಹುಡುಕಾಡಿದ್ದು, ಆವೇಳೆ ಆತ್ಮಹತ್ಯೆ ವಿಚಾರ ಗೊತ್ತಾಯಿತು ಎನ್ನಲಾಗಿದೆ. ಕಳೆದ 2-3 ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಚಂದ್ರಶೇಖರ್ ಸಿದ್ದಿಗೆ ಕಾರವಾರದ ಕ್ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು ಎನ್ನಲಾಗಿದೆ.ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿರುವ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ರಮ್ಯಾ ಬಗ್ಗೆ ಅಷ್ಲೀಲಾ ಪೋಸ್ಟ್ ಆರೋಪ; 43 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಎಫ್.ಐ.ಆರ್

ರಮ್ಯಾ ಬಗ್ಗೆ ಅಷ್ಲೀಲಾ ಪೋಸ್ಟ್ ಆರೋಪ; 43 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಎಫ್.ಐ.ಆರ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಹೇಳಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳ ಹೆಸರಲ್ಲಿ ಅಷ್ಲೀಲಾ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಈ ಬಗ್ಗೆ ನಟಿ ರಮ್ಯಾ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೂಕ್ತ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.ಸೋಶಿಯಲ್ ಮೀಡಿಯಾದಲ್ಲಿ ರಮ್ಯಾಗೆ ಅಶ್ಲೀಲವಾಗಿ ಕಮೆಂಟ್ ಮಾಡಿ, ಅಸಭ್ಯ ಸಂದೇಶಗಳನ್ನು ಕಳಿಸಲಾಗಿದೆ. ಅಂಥವರಿಗೆ ಕಾನೂನಿನ ಮೂಲಕ ಪಾಠ ಕಲಿಸಲು ಕೋರಿ ರಮ್ಯಾ ಅವರು ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ಈ ಮೂಲಕ ಅವರು, ಹೆಣ್ಣುಮಕ್ಕಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲವಾಗಿ ನಿಂದಿಸುವವರ ವಿರುದ್ಧ ಅವರು ಸಮರಾ ಸಾರಿದ್ದಾರೆ.‘ಸೆಲೆಬ್ರಿಟಿಯಾದ ನಮಗೆ ಟ್ರೋಲ್ ಇದ್ದೇ ಇರುತ್ತದೆ. ಆದರೆ ಈ ಮಟ್ಟಕ್ಕೆ ನನಗೆ ಯಾವಾಗಲೂ ಅನುಭವ ಆಗಿರಲಿಲ್ಲ' ಎಂದಿರುವ ನಟಿ ರಮ್ಯಾ, ರೇಣುಕಾಸ್ವಾಮಿ ಸಂದೇಶ ಕಳಿಸಿದ್ದಕ್ಕೂ ದರ್ಶನ್ ಫ್ಯಾನ್ಸ್ ಸಂದೇಶ ಕಳಿಸಿದ್ದಕ್ಕೂ ಯಾವುದೇ ವ್ಯತ್ಯಾಸ ಇಲ್ಲ ಎಂದಿದ್ದ...
ಭ್ರಷ್ಟಾಚಾರ ವಿರುದ್ಧ ಸಮಾರಾ; ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಭ್ರಷ್ಟಾಚಾರ ವಿರುದ್ಧ ಸಮಾರಾ; ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಸಂಸ್ಥೆ, ಮಂಗಳವಾರ ಬೆಳಿಗ್ಗೆ ರಾಜ್ಯದ ವಿವಿಧೆಡೆ ಏಕಕಾಲಿಕ ದಾಳಿ ನಡೆಸಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕೊಡಗು, ಹಾಸನ ಮತ್ತು ಚಿತ್ರದುರ್ಗ ಸೇರಿದಂತೆ ಐದು ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮತ್ತು ಆಸ್ತಿಗಳ ಮೇಲೆ ತನಿಖಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಎಂ. ಆಂಜನೇಯಮೂರ್ತಿ ಅವರ ನಿವಾಸ ಹಾಗೂ ಸಂಬಂಧಿಕರ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕದ ಮನೆ, ಜಕ್ಕೂರು ಕಾಂಪ್ಲೆಕ್ಸ್‌, ತುಮಕೂರು, ಮಧುಗಿರಿ ಹಾಗೂ ಗೌರಿಬಿದನೂರಿನ ಕಚೇರಿಗಳಲ್ಲೂ ದಾಳಿ ನಡೆದಿದೆ.ಚಿತ್ರದುರ್ಗ ಜಿಲ್ಲೆ ಹಿರಿಯೂರು ಟಿಹೆಚ್‌ಒ ಡಾ. ವೆಂಕಟೇಶ್ ಅವರ ಯರಗುಂಟೇಶ್ವರ ಬಡಾವಣೆಯ ಮನೆ, ಆದಿವಾಲ ಗ್ರಾಮದ ನಿವಾಸ ಮತ್ತು ಕ್ಲಿನಿಕ್‌ಗಳಲ್ಲಿ ದಾಳಿ ನಡೆದಿದೆ.ಹಾಸನ ಜಿಲ್ಲೆ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಹಾಗೂ ಕಂದಾಯ ಇಲಾಖೆ ಅಧಿಕಾರಿಯಾಗಿರುವ ಎನ್. ವೆಂಕಟೇಶ್...
ದಯಾನಂದ್ ಸಹಿತ ಐವರು ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

ದಯಾನಂದ್ ಸಹಿತ ಐವರು ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಅಮನಾತಾಗಿದ್ದ ಐವರು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಇದೀಗ ಅದೇ ಸರ್ಕಾರ ಈ ಪೊಲೀಸ್ ಅಧಿಕಾರಿಗಳ ಅಮಾನತನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತಕ್ಕೆ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದ ಸರ್ಕಾರ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್‌, ಡಿಸಿಪಿ ಶೇಖರ್ ಹೆಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಈ.ಎಸ್.ಐ. ಬಾಲಕೃಷ್ಣ ಹಾಗೂ ಇನ್ಸ್​ಪೆಕ್ಟರ್​ ಗಿರೀಶ್​ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು.ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ನಂತರ ಆರ್​ಸಿಬಿ, ಡಿಎನ್​ಎ ಹಾಗೂ ಕೆಎಸ್​​​ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನಿಸಲಾಯಿತು. ಅದರ ಬೆನ್ನಲ್ಲೇ. ಸೋಮವಾರ ​ಐಪಿಎಸ್​ ಅಧಿಕಾರಿಗಳಾದ ಬಿ.ದಯಾನಂದ್​ ಸಹಿತ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದುಕೊಂಡಿದೆ...
ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ! ಅಶೋಕ್ ಭವಿಷ್ಯ

ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ! ಅಶೋಕ್ ಭವಿಷ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮೈಸೂರು: ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರದೇಶ ಕಾಂಗ್ರೆಸ್ ನಾಯಕರ ಮುಸುಕಿನ ಗುದ್ದಾಟ ಬಗ್ಗೆ ಅಶೋಕ್ ತಮ್ಮದೇ ದಾಟಿಯಲ್ಲಿ ವಿಶ್ಲೇಷಿಸಿದರು. ಜೆಡಿಎಸ್‌ನಿಂದ ಬಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಆದರೆ ಕಾಂಗ್ರೆಸ್‌ನಲ್ಲೇ ಇದ್ದ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಲಿಲ್ಲ. ಆದ್ದರಿಂದಲೇ ಖರ್ಗೆ ಸಿಎಂ ಆಗದಿರುವ ಬಗ್ಗೆ ಹೇಳಿದ್ದಾರೆ. ಈಗಲಾದರೂ ನನ್ನನ್ನು ಸಿಎಂ ಮಾಡಿ ಋಣ ತೀರಿಸಿ ಎಂದು ಅವರು ಹೇಳಿದ್ದಾರೆ. ಸಚಿವ ರಾಜಣ್ಣ ಈಗಾಗಲೇ ಕ್ರಾಂತಿಯ ಬಗ್ಗೆ ಹೇಳಿದ್ದಾರೆ. ಖರ್ಗೆಯವರಯು ಸರಿಯಾದ ಸಮಯಕ್ಕೆ ಮಾವಿನ ಹಣ್ಣಿಗೆ ಕಲ್ಲು ಹೊಡೆದಿದ್ದಾರೆ. ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದರು.ಎಸ್‌.ಎಂ.ಕೃಷ್ಣ ನಿಧನಾನಂತರ ಅವರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಾಡುತ್ತಿದ್ದಾರೆ. ಎಸ್‌.ಎಂ.ಕೃಷ್ಣ ಐಟಿ ಬಿಟಿಗೆ ನೀಡಿದ ಕೊಡುಗೆಯಿಂದಲೇ ಇಷ್ಟು ಆದಾಯ ರಾಜ್ಯಕ್ಕೆ ಬರುತ್ತಿದೆ. ನಾನು ಜ್ಯೋತಿಷ್ಯ ಹೇಳಲ್ಲ. ಆದರೆ ಖಚಿತವಾಗಿ ಒಪ್ಪಂದ ಆಗಿದೆ ಎಂದು ಶಾಸಕ...
ಡ್ರಗ್‌ ಮಾಫಿಯಾವು ಸಿಎಂ ಸಿದ್ದರಾಮಯ್ಯನವರ ಕೊಡುಗೆ? ಏನಿದು ಬಿಜೆಪಿ ಆರೋಪ?

ಡ್ರಗ್‌ ಮಾಫಿಯಾವು ಸಿಎಂ ಸಿದ್ದರಾಮಯ್ಯನವರ ಕೊಡುಗೆ? ಏನಿದು ಬಿಜೆಪಿ ಆರೋಪ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮೈಸೂರು: ಮೈಸೂರಿನಲ್ಲಿ ಡ್ರಗ್‌ ಮಾಫಿಯಾ ತಲೆ ಎತ್ತಿರುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಡುಗೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಡ್ರಗ್‌ ಮಾಫಿಯಾ ತಲೆ ಎತ್ತಿದೆ. ಇವರನ್ನು ಯತೀಂದ್ರ ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಹೋಲಿಸಿದ್ದಾರೆ. ಮೈಸೂರಿನಲ್ಲಿ ಮಾದಕ ವಸ್ತುಗಳ ಫ್ಯಾಕ್ಟರಿಯೇ ಇರುವಾಗ ಗೃಹ ಇಲಾಖೆ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು.ಸರ್ಕಾರ ಇದುವರೆಗೂ ಎಚ್ಚೆತ್ತುಕೊಂಡಿಲ್ಲ. ಇದಕ್ಕೆ ಮಾಲೀಕ ಯಾರು? ಜಮೀನು ಕೊಟ್ಟವರು ಯಾರು? ನೂರಾರು ಕೋಟಿಯ ದಂಧೆಗೆ ಅವಕಾಶ ನೀಡಿದವರು ಯಾರು? ಎಂದು ಪ್ರಶ್ನಿಸಿರುವ ಅಶೋಕ್, ಸರ್ಕಾರ ಈ ವಿಚಾರದಲ್ಲಿ ಮೈ ಮರೆತಿದೆ. ಇದೇ ಸಿದ್ದರಾಮಯ್ಯನವರ ಕೊಡುಗೆ ಎಂದರು....
ನಾಗಮಂಗಲಕ್ಕೆ 35.75 ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆ ಮಂಜೂರು

ನಾಗಮಂಗಲಕ್ಕೆ 35.75 ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆ ಮಂಜೂರು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿಗೆ ನೂತನ ಶ್ರಮಿಕ ವಸತಿ ಶಾಲೆ ಮಂಜೂರಾಗಿದ್ದು ಒಂದು ವರ್ಷದೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚಿಸಿದ್ದಾರೆ.ನಾಗಮಂಗಲದ ಬೀರೇಶ್ವರ ಗ್ರಾಮದಲ್ಲಿ ಕಟ್ಟಡ ನಿರ್ಮಾಣವಾಗಲಿದ್ದು ಇದಕ್ಕಾಗಿ ರೂ.35.75 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 31 ಕೋಟಿ ರೂ ವೆಚ್ಚದಲ್ಲಿ ಕಟ್ಟಡ 1 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, 3 ಕೋಟಿ ವೆಚ್ಚದಲ್ಲಿ ಪೀಠೋಪಕರಣ, 75 ಲಕ್ಷ ರೂ ವೆಚ್ಚದಲ್ಲಿ ಲ್ಯಾಬ್ ಉಪಕರಣಗಳ ಪೂರೈಕೆ ವ್ಯವಸ್ಥೆ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ರೂ. 1125.25 ಕೋಟಿ ವಸತಿ ಶಾಲೆಗಳು ಪ್ರಾರಾಂಭವಾಗಲಿವೆ. 6ನೇ ತರಗತಿಯಿಂದ 12ನೇ ತರಗತಿವರೆಗೆ ವಸತಿ ಶಾಲೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದವರು ಮಾಹಿತಿ ಒದಗಿಸಿದ್ದಾರೆ.ಶಾಲೆಯ...
ಆಗಸ್ಟ್ 12,13,14 ರಂದು ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಹೋರಾಟ

ಆಗಸ್ಟ್ 12,13,14 ರಂದು ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಹೋರಾಟ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮಾತು ತಪ್ಪಿದ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಪ್ರತಿಭಟನಾ ಅಖಾಡಲ್ಲೇ ಧುಮುಕಿರುವ ರಾಜ್ಯದ ಆಶಾ ಕಾರ್ಯಕರ್ತೆಯರು, ಆಗಸ್ಟ್ 12,13,14 ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಲು ತಯಾರಿ ನಡೆಸಿದ್ದಾರೆ.ಕಳೆದ ವರ್ಷದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಸತತ ಪ್ರತಿಭಟನೆ ನಡೆಸಿರುವ ಆಶಾ ಕಾರ್ಯಕರ್ತೆಯರು, ಬೆಂಗಳೂರಿನಲ್ಲೂ ಭಾರೀ ಹೋರಾಟ ನಡೆಸಿದ್ದರು. ಆ ಸಂದರ್ಭದಲ್ಲಿ ಆಶಾ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ ನುಡಿದಂತೆ ನಡೆದಿಲ್ಲ. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಇತ್ತೀಚಿಗೆ ರಾಜ್ಯದ ಹಲವೆಡೆ ಸರಣಿ ಪ್ರತಿಭಟನೆ ನಡೆಸಿದ್ದ ಆಶಾ ಕಾರ್ಯಾಕಾರ್ಯಕರ್ತೆಯರು ಇದೀಗ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಗಸ್ಟ್ 12,13,14 ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಲು ತಯಾರಿ ನಡೆಸಿದ್ದಾರೆ.ಆಶಾಗಳ ಬೇಡಿಕೆಗಳು:ಮುಖ್ಯಮಂತ್ರಿಗಳು ಘೋಷಿಸಿರುವ ರಾಜ್ಯದ ಗೌರವಧನ & ಕೇಂದ್ರದ ಭಾಗಶಃ ಪ್ರೋತ್ಸಾಹ ...
ಕರಾವಳಿ–ಮಲೆನಾಡಲ್ಲಿ ಮಳೆಯ ಅಬ್ಬರ; ಭೂಕುಸಿತದಿಂದ ಸಂಚಾರ ಅಸ್ತವ್ಯಸ್ತ

ಕರಾವಳಿ–ಮಲೆನಾಡಲ್ಲಿ ಮಳೆಯ ಅಬ್ಬರ; ಭೂಕುಸಿತದಿಂದ ಸಂಚಾರ ಅಸ್ತವ್ಯಸ್ತ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಶನಿವಾರದಿಂದ ಮಳೆಯ ಅಬ್ಬರ ಮತ್ತಷ್ಟು ತೀವ್ರವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಭಾನುವಾರವೂ ಧಾರಾಕಾರವಾಗಿ ಮಳೆಯಾಗುತ್ತಿದೆ. ಹೀಗಾಗಿ ಜನಜೀವನದ ಮೇಲೆ ಪರಿಣಾಮ ಬೀರಿದ್ದು, ಕೆಲವಡೆ ಅವಘಡಗಳು ಸಂಭವಿಸಿವೆ.ಮಳೆ ಸಹಿತ ಬಿರುಗಾಳಿಯಿಂದಾಗಿ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ರಸ್ತೆಯ ಮೂರು ಕಡೆಗಳಲ್ಲಿ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಝರಿ ಜಲಪಾತಕ್ಕೆ ಸಂಪರ್ಕವಿರುವ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ.ಇದೇ ವೇಳೆ ಶೃಂಗೇರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ್ದು, ಈ ಮಾರ್ಗದಲ್ಲೂ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಸಂಬಂಧಪಟ್ಟ ಇಲಾಖೆಗಳು ಮರಗಳನ್ನು ತೆರವುಗೊಳಿಸಲು ಮತ್ತು ಭೂಕುಸಿತ ಸ್ಥಳದಲ್ಲಿ ರಸ್ತೆ ಸಂಚಾರ ಪುನರ್‌ಸ್ಥಾಪನೆಗಾಗಿ ಕ್ರಮ ಕೈಗೊಂಡಿವೆ....