Sunday, August 16

ವಿದೇಶ

ಸ್ಮಾರ್ಟ್ ಮೀಟರ್ ಹಗರಣ: ಇಂಧನ ಸಚಿವರ ವಜಾಕ್ಕೆ ಬಿಜೆಪಿ ಆಗ್ರಹ

ಸ್ಮಾರ್ಟ್ ಮೀಟರ್ ಹಗರಣ: ಇಂಧನ ಸಚಿವರ ವಜಾಕ್ಕೆ ಬಿಜೆಪಿ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸ್ಮಾರ್ಟ್ ಮೀಟರ್ ಹಗರಣದ ಹಿನ್ನೆಲೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರನ್ನು ವಜಾಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ಒತ್ತಾಯಿಸಿದೆ.ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಶಾಸಕ ಸಿ.ಎನ್. ಅಶ್ವತ್ಥನಾರಾಯಣ್, ಸ್ಮಾರ್ಟ್ ಮೀಟರ್ ಹಗರಣದಲ್ಲಿ 15,000 ಕೋಟಿ ರೂ.ಗಳಿದ್ದು, ಅದು ಸಣ್ಣ ಮೊತ್ತವಲ್ಲ ಎಂದು ಆರೋಪಿಸಿದರು.“ಸ್ಮಾರ್ಟ್ ಮೀಟರ್ ಹಗರಣದ ಬಗ್ಗೆ ಪಿಸಿಆರ್ ದಾಖಲಾಗಿರುವುದರಿಂದ ಸಚಿವ ಜಾರ್ಜ್ ರಾಜೀನಾಮೆ ನೀಡುತ್ತೀರಾ? ನೀವು (ಜಾರ್ಜ್) ಕಾನೂನನ್ನು ಗೌರವಿಸುವುದಾಗಿ ಹೇಳಿಕೊಂಡರೆ, ತಕ್ಷಣ ರಾಜೀನಾಮೆ ನೀಡಿ,” ಎಂದು ಅವರು ಹೇಳಿದರು.ವಿಧಾನಸಭೆಯಲ್ಲಿ ಈ ವಿಷಯವನ್ನು ಹೆಚ್ಚು ಬಲವಾಗಿ ಪ್ರಸ್ತಾಪಿಸುವ ಬಗ್ಗೆ ಬಿಜೆಪಿ ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚಿಸುತ್ತದೆ ಎಂದು ಅವರು ತಿಳಿಸಿದರು. “ಈ ಭ್ರಷ್ಟಾಚಾರ ಹಗರಣವು ಸಿದ್ದರಾಮಯ್ಯ ಅವರ ಇಮೇಜ್‌ಗೆ ಮತ್ತಷ್ಟು ಹಾನಿ ಮಾಡಿದೆ ಅಥವಾ ಕಳಂಕ ತಂದಿದೆ. ಇದು ಅಪಾರ ಪ್ರಮಾಣದ ಹಣವನ್ನು ಒಳಗೊಂಡಿದ್ದರೂ, ಈ ವಿಷಯದ ಬಗ್ಗೆ ಮುಖ್ಯಮಂತ್ರಿಯ ಮೌನ ಕುತೂಹಲಕಾರ...
ವರ್ಗಾವಣೆಗಾಗಿ ಅಧಿಕಾರಿಗಳ ನಕಲಿ ಸಹಿ; KSRTC ನೌಕರ ಅಮಾನತು

ವರ್ಗಾವಣೆಗಾಗಿ ಅಧಿಕಾರಿಗಳ ನಕಲಿ ಸಹಿ; KSRTC ನೌಕರ ಅಮಾನತು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನಕಲಿ ಸಹಿ‌ ಮಾಡಿ ವಂಚನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಿಬ್ಬಂದಿಯೊಬ್ಬರನ್ನು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಆಡಳಿತ ಮಂಡಳಿ ಅಮಾನತು ಮಾಡಿದೆ. ನಿಗಮದ‌ ಸಿಬ್ಬಂದಿಯೊಬ್ಬರು ನಕಲಿ ಸಹಿ‌ ಮಾಡಿ ವಂಚನೆ ಮಾಡಿರುವ ವಿಷಯವು ಸಾರಿಗೆ ಹಾಗೂ ಮುಜರಾಯಿ ಸಚಿವರ ಗಮನಕ್ಕೆ ಬಂದ ಕೂಡಲೇ ವಿಚಾರಣೆ ನಡೆಸಲು ಸೂಚಿಸಿ ಸೂಕ್ತ ಶಿಸ್ತಿನ ಕ್ರಮ ತೆಗದುಕೊಳ್ಳಲು ನಿರ್ದೇಶಿಸಿದ್ದು, ಅದರಂತೆ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಯಲ್ಲಿ ಇಂದು ಸದರಿಯವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.KSRTC ಕೇಂದ್ರ ಕಚೇರಿಯ ಲೆಕ್ಕಪತ್ರ ವಿಭಾಗದ ಕಿ-ಸ-ಕಂ-ಡಾ-ಎ-ಆಪರೇಟರ್ ರಿಚರ್ಡ್ ಜೆಎಂಬವರು, ಸಂಸ್ಥೆಯ ಸಿಬ್ಬಂದಿಯಾದ ನಾಗರಾಜಪ್ಪ, ಸಹಾಯಕ ಕುಶಲಕರ್ಮಿ, ಶಿವಮೊಗ್ಗ ಘಟಕ ರವರನ್ನು ಅವರ ಕೋರಿಕೆಯಂತೆ ದಾವಣಗೆರೆ ವಿಭಾಗಕ್ಕೆ ವರ್ಗಾವಣೆ ಮಾಡಿಸುವುದಾಗಿ ನಂಬಿಸಿ ಅವರಿಂದ, ವಜಾಗೊಂಡ ಚಾಲಕರಾದ ನಾಗರಾಜ ಎನ್.ಎ ರವರನ್ನು ಪುನರ್ ನೇಮಕ ಮಾಡಿಸುವುದಾಗಿ ಮತ್ತು ಅವರ ಸ್ನೇಹಿತ ಕುಂದಾಪುರ ಘಟಕದ ಚಾಲಕ ಚಂದ್ರಹಾಸ ಎಸ್ ಆಚಾರಿ ಅವರನ್ನು ಶಿವಮೊಗ್ಗ ವಿಭಾಗಕ್ಕೆ ವರ್...
ಐಟಿಐ ಕೌಶಲ್ಯ ಅಭಿವೃದ್ಧಿ, ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜೊತೆ ಶೀಘ್ರದಲ್ಲೇ ಸರ್ಕಾರ ಒಪ್ಪಂದ

ಐಟಿಐ ಕೌಶಲ್ಯ ಅಭಿವೃದ್ಧಿ, ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜೊತೆ ಶೀಘ್ರದಲ್ಲೇ ಸರ್ಕಾರ ಒಪ್ಪಂದ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯಾದ್ಯಂತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) ವಿದ್ಯಾರ್ಥಿಗಳಿಗೆ ಉದ್ಯಮ-ಸಂಬಂಧಿತ ಉದ್ಯೋಗ ಕೌಶಲ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು ದೇಶದ ಪ್ರಮುಖ ವಾಹನ ತಯಾರಕ ಸಂಸ್ಥೆಗಳಲ್ಲಿ ಒಂದಾದ ಬಜಾಜ್ ಆಟೋ ಜೊತೆ ಶೀಘ್ರದಲ್ಲೇ ಒಪ್ಪಂದ ಮಾಡಿಕೊಳ್ಳಲಿದೆ.ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಶೈಕ್ಷಣಿಕ ಮತ್ತು ಕೈಗಾರಿಕಾ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿದರು. ಐಟಿಐ ವಿದ್ಯಾರ್ಥಿಗಳಿಗೆ ಬಜಾಜ್ ಉತ್ಪಾದನಾ ವ್ಯವಸ್ಥೆಗಳು (ಬಿಎಂಎಸ್) ಅನ್ನು ಜಾರಿಗೆ ತರುವ ಪ್ರಸ್ತಾಪದ ಕುರಿತು ಪ್ರಮುಖವಾಗಿ ಚರ್ಚಿಸಿ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಲಾಯಿತು.ಕರ್ನಾಟಕವು 272 ಸರ್ಕಾರಿ, 192 ಅನುದಾನಿತ ಮತ್ತು 853 ಖಾಸಗಿ ಐಟಿಐಗಳನ್ನು ಹೊಂದಿದ್ದರೂ, ಹೆಚ್ಚಿನ ಪ್ರಮಾಣದ ಪದವೀಧರರು ಇನ್ನೂ ಉದ್ಯೋಗ ಹುಡುಕುತ್ತಿದ್ದಾರೆ. ಇಂತಹ ಸಹಯೋಗಗಳ ಉದ್ಯೋಗ ಸಮಸ್ಯೆ ನಿವಾರಿಸಬಹುದು ಎಂದು ಡಾ. ಪಾಟೀಲ್ ಗಮನ ಸೆಳೆದರು. "ರಾಜ್ಯದ ನಾಲ್ಕು ಪ್ರಾದೇಶಿಕ ಕೇಂದ್ರಗಳಲ್ಲ...
ಶಿವಮೊಗ್ಗದಲ್ಲಿ ಪ್ರಮುಖ ವೈದ್ಯಕೀಯ ಮೂಲಸೌಕರ್ಯ ಉತ್ತೇಜನ; ಶರಣಪ್ರಕಾಶ್‌ ಪಾಟೀಲ್‌

ಶಿವಮೊಗ್ಗದಲ್ಲಿ ಪ್ರಮುಖ ವೈದ್ಯಕೀಯ ಮೂಲಸೌಕರ್ಯ ಉತ್ತೇಜನ; ಶರಣಪ್ರಕಾಶ್‌ ಪಾಟೀಲ್‌

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ ಸಲ್ಲಿಸುವ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗವನ್ನು ಅಭಿವೃದ್ಧಪಡಿಸಲಾಗುವುದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.ಬುಧವಾರ ವಿಕಾಸ ಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸಿಮ್ಸ್) ಮತ್ತು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ಸೇವಾ ವಿತರಣೆ ಹೆಚ್ಚಿಸುವ ಕುರಿತು ಸಚಿವರು ಪರಿಶೀಲನೆ ನಡೆಸಿದರು.ಶಿವಮೊಗ್ಗ ನಗರವನ್ನು ಪೂರ್ಣ ಪ್ರಮಾಣದ ಪ್ರಾದೇಶಿಕ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ಇದೇ ಸಂದರ್ಭದಲ್ಲಿ ಸಚಿವರು ನಿರ್ಧರಿಸಿದರು. ಈ ಕೇಂದ್ರವು ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರ ಸಂಪೂರ್ಣ ಆರೋಗ್ಯ ಅಗತ್ಯಗಳನ್ನು ಪೂರೈಸಲು ವಿನ್ಯಾಸಗೊಳಿಸಲಾದ ವೈದ್ಯಕೀಯ ಕಾಲೇಜುಗಳು, ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಸಂಸ್ಥೆಗಳ ಸಮೂಹವನ್ನು ಒಳಗೊಂಡಿರ...
ಸೆ.22ರಿಂದ ರಾಜ್ಯದಲ್ಲಿ ಹೊಸ ಜಾತಿ ಜನಗಣತಿ; 15 ದಿನಗಳಲ್ಲಿ ಪೂರ್ಣಗೊಳಿಸಲು ಸರ್ಕಾರ ಸಿದ್ಧತೆ

ಸೆ.22ರಿಂದ ರಾಜ್ಯದಲ್ಲಿ ಹೊಸ ಜಾತಿ ಜನಗಣತಿ; 15 ದಿನಗಳಲ್ಲಿ ಪೂರ್ಣಗೊಳಿಸಲು ಸರ್ಕಾರ ಸಿದ್ಧತೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ನೂತನ ಜಾತಿ ಜನಗಣತಿ ಕಾರ್ಯವನ್ನು ಕೈಗೊಳ್ಳಲು ಕರ್ನಾಟಕ ಸರ್ಕಾರ ನಿರ್ಧರಿಸಿದ್ದು, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರೊಳಗೆ ಈ ಸಮೀಕ್ಷೆಯನ್ನು ಪೂರ್ಣಗೊಳಿಸಲು ಸಿದ್ಧತೆ ನಡೆಸಿದೆ.ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪೂರ್ವಸಿದ್ಧತಾ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. “ಸಮೀಕ್ಷೆಯು ವೈಜ್ಞಾನಿಕ, ಪಾರದರ್ಶಕವಾಗಿರಬೇಕು. ಪ್ರಶ್ನೆಗಳ ಅಂತಿಮ ಆಯ್ಕೆಗೆ ತಜ್ಞರ ಸಮಿತಿಯ ಸಲಹೆ ಪಡೆಯಬೇಕು. ಈ ಬಾರಿ 1.65 ಲಕ್ಷ ಗಣತಿದಾರರ ಅಗತ್ಯವಿದ್ದು, ಶಿಕ್ಷಕರ ಜೊತೆಗೆ ಇತರೆ ಇಲಾಖೆಗಳ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗುವುದು,” ಎಂದು ಸಿಎಂ ಸಭೆಯಲ್ಲಿ ಸೂಚಿಸಿದರು.ಅಕ್ಟೋಬರ್ ಅಂತ್ಯದೊಳಗೆ ಸಮೀಕ್ಷೆಯ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆಯಿದ್ದು, ತರಬೇತಿ ಸೇರಿದಂತೆ ಎಲ್ಲ ಪೂರ್ವಸಿದ್ಧತೆಗಳನ್ನು ತಕ್ಷಣ ಆರಂಭಿಸಲು ಸೂಚಿಸಲಾಗಿದೆ. ಹಿಂದುಳಿದ ವರ್ಗಗಳ ಆಯೋಗ ನೀಡಿದ ಪ್ರಸ್ತಾವನೆಯನ್ವಯ, ಈ ಬಾರಿ ರಾಜ್ಯದ ಎಲ್ಲ 7 ಕೋಟಿ ಜನರನ್ನು ಒಳ...
ಸಣ್ಣ ವ್ಯಾಪಾರಿಗಳಿಗೆ ನೀಡಿದ್ದ ಜಿಎಸ್‌ಟಿ ನೋಟಿಸ್ ತಕ್ಷಣ ಹಿಂಪಡೆಯಬೇಕು; ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ

ಸಣ್ಣ ವ್ಯಾಪಾರಿಗಳಿಗೆ ನೀಡಿದ್ದ ಜಿಎಸ್‌ಟಿ ನೋಟಿಸ್ ತಕ್ಷಣ ಹಿಂಪಡೆಯಬೇಕು; ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಖಜಾನೆ ತುಂಬಿಸುವ ಹೊಣೆಗಾರಿಕೆಯನ್ನು ವಹಿಸಿಕೊಂಡಿರುವ ವಾಣಿಜ್ಯ ತೆರಿಗೆ ಇಲಾಖೆ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೂ ಜಿಎಸ್‌ಟಿ ನೋಟಿಸ್ ನೀಡಿರುವುದು ಆತಂಕಕರಿ ಬೆಳವಣಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಹಾರಾಷ್ಟ್ರವನ್ನು ಹಿಂದಿಕ್ಕಿ ಕರ್ನಾಟಕ ಜಿಎಸ್‌ಟಿ ಸಂಗ್ರಹದಲ್ಲಿ ಮೊದಲ ಸ್ಥಾನಕ್ಕೆ ಬರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಟಾರ್ಗೆಟ್ ನೀಡಿದ್ದರು. ಅದೇನೂ ತೀವ್ರವಾಗಿ ವ್ಯಾಪಾರಿಗಳಿಗೆ ನೋಟಿಸ್‌ಗಳ ರೂಪದಲ್ಲಿ ಸ್ಪಷ್ಟವಾಗುತ್ತಿದೆ” ಎಂದರು.ಸಣ್ಣ ವ್ಯಾಪಾರಿಗಳ ಮೇಲೂ ತೆರಿಗೆ ಹೊರೆ ಬೀಳುತ್ತಿದೆ ಎಂದು ದೂರಿ, ಹಾಲು, ಮೊಸರು ಮಾರಾಟ ಮಾಡುವವರಿಗೂ ನೋಟಿಸ್ ನೀಡಿರುವುದನ್ನು ಖಂಡಿಸಿದ ಅವರು, “ಮೂರು ಜಿಎಸ್‌ಟಿ ಸ್ಲ್ಯಾಬ್‌ಗಳಿದ್ದರೂ ಎಲ್ಲರಿಗೂ ಶೇಕಡಾ 18ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಇದು ನಿರ್ದಾಕ್ಷಿಣ್ಯ ಕ್ರಮ” ಎಂದರು.ಈ ನೋಟಿಸ್‌ಗಳನ್ನು ಪರಿಶೀಲಿಸದೆಯೇ ನೀಡಲಾಗುತ್ತಿದ್ದು, ಇದೀಗ ವ್ಯಾಪಾರಿಗಳ ...
ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೋಟಿಸ್ ನೀಡಿದ್ದರೆ ಬಾಕಿ ಮನ್ನಾ; ಸಿಎಂ ಘೋಷಣೆ

ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೋಟಿಸ್ ನೀಡಿದ್ದರೆ ಬಾಕಿ ಮನ್ನಾ; ಸಿಎಂ ಘೋಷಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಯಾರಿಗಾದರೂ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೋಟಿಸ್ ನೀಡಿದ್ದರೆ ಆ ಹಳೆ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ ಟಿ ನೋಂದಣಿಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೋಟಿಸ್ ಕುರಿತು ಗೊಂದಲ ಇದೆ. ಜಿಎಸ್‌ಟಿ ಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಇದಕ್ಕೆ ಸಂಬಂಧಿಸಿದ ಎಲ್ಲ ನೀತಿ-ನಿಯಮಾವಳಿಗಳನ್ನು ಕೇಂದ್ರ ಸರ್ಕಾರವೇ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ. ಈ ನೀತಿ-ನಿಯಮಾವಳಿಗಳ… pic.twitter.com/Yz1fLU8FAW— CM of Karnataka (@CMofKarnataka) July 23, 2025ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೋಟಿಸ್ ಕುರಿತು ಗೊಂದಲ ಇದೆ. ಜಿಎಸ್‌ಟಿ ಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಇದಕ್ಕೆ ಸಂಬಂಧಿಸಿದ ಎಲ್ಲ ನೀತಿ-ನಿಯಮಾವಳಿಗಳನ್ನು ಕೇಂದ್ರ ಸರ್ಕಾರವೇ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ ರಾಜ್ಯ ಸರ್ಕಾರಗಳ ಕ...
ಮಾವು ಖರೀದಿ ಮಿತಿ 200 ಕ್ವಿಂಟಾಲ್‌ಗೆ ವಿಸ್ತರಣೆ

ಮಾವು ಖರೀದಿ ಮಿತಿ 200 ಕ್ವಿಂಟಾಲ್‌ಗೆ ವಿಸ್ತರಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ದಾವಿಸಿರುವ ಸರ್ಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ 40 ಕ್ವಿಂಟಾಲ್‌ನAತೆ ಗರಿಷ್ಠ 5 ಎಕರೆಗೆ 200 ಕ್ವಿಂಟಾಲ್‌ವರೆಗೆ ಮಿತಿಗೊಳಿಸಿ ಖರೀದಿಸಲು ಆದೇಶ ಹೊರಡಿಸಿದೆ.ಈ ಆದೇಶವು ಸದರಿ ಯೋಜನೆಯಡಿ ಈಗಾಗಲೇ ನೋಂದಾಯಿಸಿರುವ ರೈತರಿಗೂ ಸಹ ಅನ್ವಯವಾಗಲಿದೆ. ಪ್ರತಿ ಕೆ.ಜಿ.ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಲಾ 2 ರೂಪಾಯಿಗಳಂತೆ ಒಟ್ಟು 4 ರೂಪಾಯಿ ಬೆಂಬಲ ಬೆಲೆಯೊಂದಿಗೆ ಮಾವು ಖರೀದಿಗೆ ದಿ:25-06-2025ರಂದು ಆದೇಶ ಹೊರಡಿಸಲಾಗಿತ್ತು.ಈ ಆದೇಶದನ್ವಯ ಪ್ರತಿ ಎಕರೆಗೆ 20 ಕ್ವಿಂಟಾಲ್‌ನAತೆ ಗರಿಷ್ಟ 5 ಎಕರೆಗೆ 100 ಕ್ವಿಂಟಾಲ್‌ವರೆಗೆ ಮಿತಿಗೊಳಿಸಲಾಗಿತ್ತು ಇದೀಗ ಮಾರ್ಪಾಡು ಆದೇಶದಲ್ಲಿ ಈ ಮಿತಿಯನ್ನು 200 ಕ್ವಿಂಟಾಲ್‌ಗೆ ವಿಸ್ತರಿಸಲಾಗಿದೆ.ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿರವರು ಖರೀದಿ ಮಿತಿ ವಿಸ್ತರಣೆ ಕುರಿತಂತೆ ಪತ್ರ ಬರೆದು ಕೇಂದ್ರಕ್ಕೂ ಮನವಿ ಮಾಡಿದ್ದು, ಖರೀದಿ ಕೇಂದ್ರಗಳಲ್ಲಿ ಅಗತ್ಯ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ...
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೇಂದ್ರದ ಡಿಜಿಟಲ್ ಕ್ರಾಂತಿಗೆ ಅಡ್ಡಿ: ಸಿ.ಟಿ.ರವಿ

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೇಂದ್ರದ ಡಿಜಿಟಲ್ ಕ್ರಾಂತಿಗೆ ಅಡ್ಡಿ: ಸಿ.ಟಿ.ರವಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡುವ ಮೂಲಕ ಡಿಜಿಟಲ್ ಇಂಡಿಯಾ ಅನ್ನು ಹಿಮ್ಮೆಟ್ಟಿಸುವುದಕ್ಕೆ ಷಡ್ಯಂತ್ರ ಮಾಡಿದೆ ಎಂಬ ಅನುಮಾನ ಉಂಟಾಗುತ್ತಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನದ’ಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಪಿಐ ಪಾವತಿಯಲ್ಲಿ ಜಾಗತಿಕ ದಾಖಲೆ ಬರೆದಿದೆ. ಆದರೆ ಕಾಂಗ್ರೆಸ್ ಸರ್ಕಾರದವರು ಜನರಿಗೆ ಆತಂಕ ಮತ್ತು ಭಯದ ವಾತಾವರಣ ನಿರ್ಮಿಸಿದ್ದಾರೆ. ಅಂದರೆ ಕೇಂದ್ರದ ಸರ್ಕಾರದ ಡಿಜಿಟಲ್ ವಹಿವಾಟು ಯೋಜನೆಯ ಪ್ರಯತ್ನಕ್ಕೆ ಭಯ ನಿರ್ಮಾಣ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.ನೋಟಿಸ್ ಪರಿಣಾಮದಿಂದ ಸಣ್ಣ ವ್ಯಾಪಾರಿಗಳು ಭಯಗೊಂಡು ಯುಪಿಐ ಪಾವತಿ ಇಲ್ಲ; ನಗದು ಮಾತ್ರ ಎಂದು ಬೋರ್ಡ್ ಹಾಕಿದ್ದಾರೆ. ಭಯಪಡಿಸಿದ ಪರಿಣಾಮ ಮಧ್ಯವರ್ತಿಗಳು ಮತ್ತು ಕೆಲವು ಅಧಿಕಾರಿಗಳು ಲಂಚದ ಬೇಡಿಕೆ ಇಟ್ಟಿರುವ ದೂರು ಕೂಡ ಬಂದಿದೆ. ಆದಕಾರಣ ರಾಜ್ಯ ತೆರಿಗೆ ಇಲಾಖೆ ನೀಡಿರುವ ನೋಟಿಸನ್ನು ಸರ್ಕಾರ ಹಿಂಪಡ...
ಯಾರೋ ವ್ಯಕ್ತಿಗಳಿಗಾಗಿ ಧಾರ್ಮಿಕ ಕೇಂದ್ರದ ಬಗ್ಗೆ, ಧರ್ಮದ ಬಗ್ಗೆ ಮಾತಾಡುವುದು ಸರಿಯಲ್ಲ

ಯಾರೋ ವ್ಯಕ್ತಿಗಳಿಗಾಗಿ ಧಾರ್ಮಿಕ ಕೇಂದ್ರದ ಬಗ್ಗೆ, ಧರ್ಮದ ಬಗ್ಗೆ ಮಾತಾಡುವುದು ಸರಿಯಲ್ಲ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ ತನಿಖೆ ನಡೆಯಬಾರದು ಎಂದರು.ದಕ್ಷಿಣ ಭಾರತದಲ್ಲಿ ತಿರುಪತಿ ಹಾಗೂ ಧರ್ಮಸ್ಥಳ ಕೋಟ್ಯಂತರ ಹಿಂದೂಗಳ ಶ್ರದ್ಧಾಕೇಂದ್ರವಾಗಿದೆ. ಧರ್ಮಸ್ಥಳದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಯುವಕನೊಬ್ಬ ವೀಡಿಯೋಗಳನ್ನು ಅಪ್‌ಲೋಡ್‌ ಮಾಡುತ್ತಿದ್ದಾನೆ. ಈ ನಡುವೆ ಕೇರಳ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಕೇರಳ ಸರ್ಕಾರ ಅಲ್ಲಿನ ದೇವಸ್ಥಾನಗಳ ವಿಚಾರದಲ್ಲಿ ಹೇಗೆ ನಡೆದುಕೊಳ್ಳುತ್ತಿದೆ, ಶಬರಿಮಲೆ ಅಯ್ಯಪ್ಪ...