
ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಿ: ಎನ್ ಚಲುವರಾಯಸ್ವಾಮಿ
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆರೆ, ಕಟ್ಟೆಗಳನ್ನು ತುಂಬಿಸಲು ಆದ್ಯತೆ ನೀಡಿ. ಇದರಿಂದ ಮುಂದಿನ ದಿನಗಳಲ್ಲಿ ರೈತರಿಗೆ ಉಪಯುಕ್ತವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.ಅವರು ಇಂದು ಕೆ.ಆರ್.ಎಸ್ ನ ಕಾವೇರಿ ಸಭಾಂಗಣದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಮಾತನಾಡಿದರು. ಇದು ಉತ್ತಮ ಸಮಯವಾಗಿದ್ದು, ತಾಲ್ಲೂಕುಗಳ ಕೊನೆಯ ಭಾಗದಲ್ಲಿರುವ ಕೆರೆಗಳಿಗೆ ನೀರು ತುಂಬುವಂತೆ ನೋಡಿಕೊಳ್ಳಿ ಎಂದರು.ಕೆ.ಆರ್.ಎಸ್ ಜಲಾಶಯ ತುಂಬಿದ್ದು, ರೈತರು, ಜನಪ್ರತಿನಿಧಿಗಳು ಹಾಗೂ ಸಂಘಟನೆಗಳಿಂದ ಕೃಷಿ ಪದ್ಧತಿಗೆ ನೀರು ಸಿಗುತ್ತಿಲ್ಲ ಎಂಬ ದೂರು ಬಾರದಂತೆ ನೋಡಿಕೊಂಡು ಎಚ್ಚರಿಕೆಯಿಂದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.ಕೆರೆಗಳಿಂದ ಹೂಳು ತೆಗೆಯುವ ಕೆಲಸ ಹಾಗೂ ಕೆರೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಅನುದಾನದ ಕೊರತೆ ಇಲ್ಲ. ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಅನುದಾನ ಪಡೆದು ಕೆರೆಗಳ ನಿರ್ವಹಣೆಯ ಕಾಮಗಾರಿಗಳನ್ನು ನಡೆಸಿ ಎಂದರು.ರೈತರ ಪರವಾಗಿ ಸದಾ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತದೆ. ಮುಂಗಾರು ಬೆ...








