Sunday, August 9

ವಿದೇಶ

ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ವಿಧಿವಶ; ಸಿಎಂ ಸಂತಾಪ

ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ವಿಧಿವಶ; ಸಿಎಂ ಸಂತಾಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರೂ ಆಗಿದ್ದ ಸೂರಜ್‌ ಹೆಗ್ಡೆ ವಿಧಿವಶರಾಗಿದ್ದಾರೆ.ಎಐಸಿಸಿ ಪದಾಧಿಕಾರಿಯಾಗಿ ಮತ್ತು ರಾಜ್ಯ ಖಾತರಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಸೂರಜ್ ಹೆಗ್ಡೆ, ಎಐಸಿಸಿ ಪದಾಧಿಕಾರಿಯಾಗಿ ಮತ್ತು ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.ಕೆಪಿಸಿಸಿ ಉಪಾಧ್ಯಕ್ಷ ಮತ್ತು ರಾಜ್ಯ ಖಾತರಿ ಸಮಿತಿಯ ಉಪಾಧ್ಯಕ್ಷರಾಗಿಯೂ ಸೂರಜ್ ಹೆಗ್ಡೆ ಕೆಲಸ ಮಾಡಿದ್ದಾರೆ.ಸೂರಜ್ ಹೆಗ್ಡೆ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಘಟನಾ ಚಾತುರ್ಯ ಮತ್ತು ಸಾರ್ವಜನಿಕ ಕಾಳಜಿಯ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಅವರ ಕೊಡುಗೆ ಅಪ್ರತಿಮವಾಗಿದೆ. ಇಂದು, ಪಕ್ಷದ ಕಾರ್ಯಕರ್ತರೊಂದಿಗೆ ಯಾವಾಗಲೂ ಅತ್ಯುತ್ತಮ ಬಾಂಧವ್ಯವನ್ನು ಕಾಯ್ದುಕೊಂಡಿದ್ದ ಸಕ್ರಿಯ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ ಎಂದಿದ್ದಾರೆ....
ವನ್ಯಜೀವಿ ಸೇವಾ ಪ್ರಶಸ್ತಿ: ನಾಲ್ವರು ಅರಣ್ಯ ಸಂರಕ್ಷಕರಿಗೆ ವಿಶಿಷ್ಟ ಗೌರವ

ವನ್ಯಜೀವಿ ಸೇವಾ ಪ್ರಶಸ್ತಿ: ನಾಲ್ವರು ಅರಣ್ಯ ಸಂರಕ್ಷಕರಿಗೆ ವಿಶಿಷ್ಟ ಗೌರವ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಭಾರತದ ಪ್ರಮುಖ ಅಗರಬತ್ತಿ ತಯಾರಿಕಾ ಸಂಸ್ಥೆಯಾದ ಸೈಕಲ್ ಪ್ಯೂರ್ ಅಗರಬತ್ತಿ ವತಿಯಿಂದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 14ನೇ ವಾರ್ಷಿಕ ವನ್ಯಜೀವಿ ಸೇವಾ ಪ್ರಶಸ್ತಿ ಸಮಾರಂಭದಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ನಾಲ್ವರು ಅರಣ್ಯ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೆಂಕಟೇಶ್ ಬಾಬು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ವಿನಯ್ ಕುಮಾರ್ ಇ., ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಸುನಿಲ್ ವಿ. ಬೆಳವಿ ಹಾಗೂ ಕಾವೇರಿ ವನ್ಯಜೀವಿ ವಿಭಾಗದ ಶರಣಪ್ಪ ಅವರಿಗೆ ತಲಾ ₹1 ಲಕ್ಷ ನಗದು ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಕಾರ್ಯಕ್ರಮವು ಕೆಎಸ್‌ಸಿಎ ಟೈಗರ್ ಕಪ್ 2026 ಕ್ರಿಕೆಟ್ ಟೂರ್ನಿಯ ಸಮಾರೋಪ ಸಮಾರಂಭದ ಅಂಗವಾಗಿ ನಡೆಯಿತು. ವನ್ಯಜೀವಿ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಏಪ್ರಿಲ್ 5ರಿಂದ ಮೇ 10ರವರೆಗೆ ನಡೆದ ಟೂರ್ನಿಯಲ್ಲಿ 12, 14 ಮತ್ತು 16 ವರ್ಷದೊಳಗಿನ ವಿಭಾಗಗಳಲ್ಲಿ 56 ತಂಡಗಳು ಸ್ಪರ್ಧಿಸಿದ್ದವು.ಕಾರ್ಯಕ್ರಮದಲ್ಲಿ ಮಾಜಿ ಭಾರತೀಯ ಕ್ರಿಕೆಟಿಗ ಹ...
ಡಿಕೆಶಿ ಸಂಧಾನ: ರಾಮಲಿಂಗಾ ರೆಡ್ಡಿ ರಾಜೀನಾಮೆ ವಿವಾದಕ್ಕೆ ತಾತ್ಕಾಲಿಕ ತೆರೆ?

ಡಿಕೆಶಿ ಸಂಧಾನ: ರಾಮಲಿಂಗಾ ರೆಡ್ಡಿ ರಾಜೀನಾಮೆ ವಿವಾದಕ್ಕೆ ತಾತ್ಕಾಲಿಕ ತೆರೆ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ನಡೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರೂ, ಇದೀಗ ವಿವಾದ ಶಮನವಾಗುವ ಲಕ್ಷಣಗಳು ಕಂಡುಬಂದಿವೆ.ಹೈಕಮಾಂಡ್ ಸೂಚನೆಯ ಬಳಿಕ ಶುಕ್ರವಾರ ತಡರಾತ್ರಿ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ನಡುವೆ ಸುಮಾರು ಎರಡೂವರೆ ಗಂಟೆಗಳ ಕಾಲ ಸುದೀರ್ಘ ಸಂಧಾನ ಮಾತುಕತೆ ನಡೆಯಿತು. ರಾತ್ರಿ 11 ಗಂಟೆಯಿಂದ ಬೆಳಗಿನ 1.30ರವರೆಗೆ ನಡೆದ ಸಭೆಯಲ್ಲಿ ಭಿನ್ನಾಭಿಪ್ರಾಯಗಳ ಕುರಿತು ಚರ್ಚೆ ನಡೆಸಲಾಗಿದೆ.“ಬೆಂಗಳೂರು ನಗರಾಭಿವೃದ್ಧಿ ಖಾತೆ ಇಲ್ಲದಿದ್ದರೆ ಸಚಿವ ಸ್ಥಾನವೇ ಬೇಡ” ಎಂಬ ನಿಲುವು ತಳೆದಿದ್ದ ರಾಮಲಿಂಗಾ ರೆಡ್ಡಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. 2023ರಲ್ಲೇ ಬೆಂಗಳೂರು ಅಭಿವೃದ್ಧಿ ಖಾತೆ ನೀಡುವ ಭರವಸೆ ನೀಡಲಾಗಿತ್ತು ಎಂದು ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದರು.ಮಾತುಕತೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, “ಇದು ನಮ್ಮ ಕುಟುಂಬದ ...
ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

ಖಾತೆ ಹಂಚಿಕೆ ಕಿಚ್ಚು: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿವಾದ ಭುಗಿಲೆದ್ದಿದ್ದು, ಅಸಮಾಧಾನಗೊಂಡಿರುವ ಸಚಿವ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.ತಮಗೆ ನಿರೀಕ್ಷಿತ ಖಾತೆ ನೀಡದಿರುವುದರಿಂದ ತೀವ್ರ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ, ಶುಕ್ರವಾರ ತುರ್ತು ಸುದ್ದಿಗೋಷ್ಠಿ ನಡೆಸಿ ತಮ್ಮ ನಿರ್ಧಾರವನ್ನು ಬಹಿರಂಗಪಡಿಸಿದರು. “ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. #WATCH | Bengaluru | Ramalinga Reddy resigns as Karnataka Minister, says, "I am still in the Congress party; I have not resigned from the party. I have been in the Congress party for the past 53 years. I have handled several responsibilities within the party.I have served as a… pic.twitter.com/5SnASNSpJl— ANI (@ANI) June 5, 2026ಖಾತೆ ಹಂಚಿಕೆ ಕುರಿತಂತೆ ಅವರು ಗುರುವಾರವೇ ಮುಖ್ಯಮಂತ್ರಿ ಡಿ....
ರೌಡಿಸಂಗೆ ಡಿಕೆಶಿ ಬ್ರೇಕ್: ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್ ಹೀಗಿರುತ್ತೆ

ರೌಡಿಸಂಗೆ ಡಿಕೆಶಿ ಬ್ರೇಕ್: ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್ ಹೀಗಿರುತ್ತೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರೌಡಿಸಂ ವಿರುದ್ಧ ಸಮರ ಸಾರಿದ್ದು, ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್‌ಗಳನ್ನು ರಚಿಸಲು ಆದೇಶಿಸಿದ್ದಾರೆ.ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ, ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ಇಡಲು ಹಾಗೂ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ವಿಶೇಷ ತಂಡಗಳನ್ನು ಸ್ಥಾಪಿಸುವಂತೆ ಸೂಚನೆ ನೀಡಿದ್ದಾರೆ. ನೂತನ ಸ್ಕ್ವಾಡ್ ಹೇಗಿರಲಿದೆ?ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್ ರಚನೆ ಪ್ರತಿ ತಂಡದಲ್ಲಿ 10 ರಿಂದ 15 ಪೊಲೀಸ್ ಕಾನ್ಸ್‌ಟೇಬಲ್‌ಗಳು ಹಳೆಯ ರೌಡಿಗಳ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಅಪರಾಧ ಜಗತ್ತಿಗೆ ಹೊಸದಾಗಿ ಪ್ರವೇಶಿಸುವ ಯುವಕರ ಗುರುತಿಸುವಿಕೆ ರೌಡಿಗಳನ್ನು ಪತ್ತೆಹಚ್ಚಿ ಕಾನೂನಿನ ಚೌಕಟ್ಟಿಗೆ ತರುವುದು ಡ್ರಗ್ಸ್, ಗಾಂಜಾ, ಜೂಜಾಟ, ಮಟ್ಕಾ ಹಾಗೂ ಅಕ್ರಮ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಯಾವುದೇ ಕ್ರಿಮಿನಲ್ ಚಟುವಟಿಕೆಗೆ ಅವಕಾಶ ನೀಡದಂತೆ ಮೇಲ್ವಿಚಾರಣೆರಾಜ್ಯದ ಹಲವು ಜಿಲ್ಲ...
ವಾಹನ ಸವಾರರಿಗೆ ಸಿಹಿಸುದ್ದಿ: ಸಂಚಾರ ದಂಡದಲ್ಲಿ ಮತ್ತೆ 50% ರಿಯಾಯಿತಿ

ವಾಹನ ಸವಾರರಿಗೆ ಸಿಹಿಸುದ್ದಿ: ಸಂಚಾರ ದಂಡದಲ್ಲಿ ಮತ್ತೆ 50% ರಿಯಾಯಿತಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಉಳಿದಿರುವ ದಂಡ ಪಾವತಿಸಲು ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಸುವರ್ಣಾವಕಾಶ ನೀಡಿದೆ. ಬಾಕಿ ದಂಡದ ಮೊತ್ತದಲ್ಲಿ ಶೇಕಡಾ 50ರಷ್ಟು ರಿಯಾಯಿತಿ ಘೋಷಿಸಲಾಗಿದ್ದು, ಜೂನ್ 21ರಿಂದ ಜುಲೈ 10ರವರೆಗೆ ಈ ಸೌಲಭ್ಯ ಲಭ್ಯವಾಗಲಿದೆ.ಸಂಚಾರ ದಂಡ ಕಟ್ಟಲು ಸಾಧ್ಯವಾಗದೆ ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರ ಹಿತದೃಷ್ಟಿಯಿಂದ ಸಾರಿಗೆ ಮತ್ತು ಪೊಲೀಸ್ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಕಳೆದ ವರ್ಷ ನವೆಂಬರ್‌ನಲ್ಲೂ ಇದೇ ರೀತಿಯ ರಿಯಾಯಿತಿ ನೀಡಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.ಪೊಲೀಸ್ ಇಲಾಖೆಯ ಇ-ಚಲನ್ ವ್ಯವಸ್ಥೆಯಲ್ಲಿ 2026ರ ಮೇ ತಿಂಗಳಿಗಿಂತ ಮೊದಲು ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991ರಿಂದ 2022ರವರೆಗೆ ಬಾಕಿ ಉಳಿದಿರುವ ಪ್ರಕರಣಗಳಿಗೆ ಈ ರಿಯಾಯಿತಿ ಅನ್ವಯವಾಗಲಿದೆ.ಒಟ್ಟು 20 ದಿನಗಳ ಕಾಲಾವಕಾಶ ನೀಡಲಾಗಿದ್ದು, ಈ ಅವಧಿಯಲ್ಲಿ ದಂಡ ಪಾವತಿಸಿದರೆ ಅರ್ಧ ಮೊತ್ತವನ್ನು ಮಾತ್ರ ಪಾವತಿಸಬಹುದಾಗಿದೆ.ಸಾರ್ವಜನಿಕರು ಅಸ್ತ್ರಂ ಆ್ಯಪ್, ಕೆಎಸ್...
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ; ಒಬಿಸಿ ನಾಯಕರಿಗೆ ಮಣೆ

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ; ಒಬಿಸಿ ನಾಯಕರಿಗೆ ಮಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಾಲ್ಕು ಸ್ಥಾನಗಳಿಗೆ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರಿಗೆ ಅವಕಾಶ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಬಿ.ಕೆ. ಹರಿಪ್ರಸಾದ್, ಪಿ.ವಿ. ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಅವಕಾಶ ಕಲ್ಪಿಸಲಾಗಿದೆ.ಈ ಪೈಕಿ ಬಿ.ಕೆ. ಹರಿಪ್ರಸಾದ್ ಮತ್ತು ತಿಪ್ಪಣ್ಣಪ್ಪ ಕಮಕನೂರು ಅವರನ್ನು ಮತ್ತೊಂದು ಅವಧಿಗೆ ಮುಂದುವರಿಸಲಾಗಿದ್ದು, ಪಿ.ವಿ. ಮೋಹನ್ ಹಾಗೂ ಶಿವಣ್ಣ ಮಳವಳ್ಳಿ ಅವರಿಗೆ ಮೊದಲ ಬಾರಿಗೆ ಅವಕಾಶ ನೀಡಲಾಗಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಸಮೀಕರಣಕ್ಕೆ ಹೆಚ್ಚಿನ ಒತ್ತು ನೀಡಿರುವುದು ಕಂಡುಬಂದಿದ್ದು, ನಾಲ್ಕು ಸ್ಥಾನಗಳಿಗೂ ಒಬಿಸಿ ಸಮುದಾಯದ ನಾಯಕರನ್ನು ಕಣಕ್ಕಿಳಿಸಿರುವುದು ವಿಶೇಷವಾಗಿದೆ.ಹೊಸ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದಿರುವ ಈ ಮೊದಲ ಮಹತ್ವ...
ಕೆಪಿಸಿಸಿಗೆ ಹೊಸ ಸಾರಥಿ: ಡಿಕೆಶಿ ಬಳಿಕ ಬಿ.ಕೆ. ಹರಿಪ್ರಸಾದ್‌ಗೆ ಅಧ್ಯಕ್ಷ ಪಟ್ಟ

ಕೆಪಿಸಿಸಿಗೆ ಹೊಸ ಸಾರಥಿ: ಡಿಕೆಶಿ ಬಳಿಕ ಬಿ.ಕೆ. ಹರಿಪ್ರಸಾದ್‌ಗೆ ಅಧ್ಯಕ್ಷ ಪಟ್ಟ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಡಿ.ಕೆ. ಶಿವಕುಮಾರ್ ಅವರ ಉತ್ತರಾಧಿಕಾರಿಯಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರ ಪರವಾಗಿ ಆದೇಶ ಹೊರಡಿಸಲಾಗಿದ್ದು, ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆರು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಹಿಂದುಳಿದ ವರ್ಗದ ...
ಸಿಎಂ ಕಚೇರಿಗೆ ಹೊಸ ತಂಡ: ತುಷಾರ್ ಗಿರಿನಾಥ್ ಎಸಿಎಸ್, ಅತೀಕ್ ಹಣಕಾಸು ಸಲಹೆಗಾರ

ಸಿಎಂ ಕಚೇರಿಗೆ ಹೊಸ ತಂಡ: ತುಷಾರ್ ಗಿರಿನಾಥ್ ಎಸಿಎಸ್, ಅತೀಕ್ ಹಣಕಾಸು ಸಲಹೆಗಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿ ಕಚೇರಿಯ ಪ್ರಮುಖ ಹುದ್ದೆಗಳಿಗೆ ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್)ಯಾಗಿ ನೇಮಕ ಮಾಡಲಾಗಿದೆ. ಅವರು ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನೂ ಮುಂದುವರಿಸಲಿದ್ದಾರೆ.ಇದೇ ವೇಳೆ, ರಾಜೇಂದ್ರ ಚೋಳನ್ ಅವರನ್ನು ಮುಖ್ಯಮಂತ್ರಿಯವರ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅವರು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ಹೊಂದಿರುವ ಹೆಚ್ಚುವರಿ ಜವಾಬ್ದಾರಿಯನ್ನೂ ನಿರ್ವಹಿಸಲಿದ್ದಾರೆ.ಮತ್ತೊಂದೆಡೆ, ನಿವೃತ್ತ ಐಎಎಸ್ ಅಧಿಕಾರಿ ಅತೀಕ್ ಎಲ್.ಕೆ. ಅವರನ್ನು ಮುಖ್ಯಮಂತ್ರಿಯವರ ಹಣಕಾಸು ಸಲಹೆಗಾರರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.ಸರ್ಕಾರದ ಆದೇಶದ ಪ್ರಕಾರ, ಮುಖ್ಯಮಂತ್ರಿಯವರ ಹಣಕಾಸು ಸಲಹೆಗಾರರ ವೇತನ ಮತ್ತು ಇತರೆ ಸೌಲಭ್ಯಗಳು ರಾಜ್ಯದ ಮುಖ್ಯ ಕಾರ್ಯದರ್ಶಿ ಹುದ್ದೆಗೆ...
ಸರ್ಕಾರ ಬದಲಾಯ್ತು, ಭ್ರಷ್ಟ ವ್ಯವಸ್ಥೆ ಬದಲಾಗುತ್ತಾ? ಕಾಂಗ್ರೆಸ್’ಗೆ ಬಿಜೆಪಿ ಪ್ರಶ್ನೆ

ಸರ್ಕಾರ ಬದಲಾಯ್ತು, ಭ್ರಷ್ಟ ವ್ಯವಸ್ಥೆ ಬದಲಾಗುತ್ತಾ? ಕಾಂಗ್ರೆಸ್’ಗೆ ಬಿಜೆಪಿ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಇದೇ ವೇಳೆ ಕಾಂಗ್ರೆಸ್ ಸರ್ಕಾರದ ಕಳೆದ ಮೂರು ವರ್ಷಗಳ ಆಡಳಿತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ, ಮುಖ್ಯಮಂತ್ರಿ ಬದಲಾವಣೆಯಿಂದ ಮಾತ್ರ ರಾಜ್ಯದ ಸ್ಥಿತಿ ಬದಲಾಗುವುದಿಲ್ಲ ಎಂದು ಹೇಳಿರುವ ಅವರು, ಕಳೆದ ಮೂರು ವರ್ಷಗಳ ಭ್ರಷ್ಟಾಚಾರ, ಆಡಳಿತ ವೈಫಲ್ಯ ಮತ್ತು ಮುರಿದ ಭರವಸೆಗಳ ಪರಿಣಾಮವನ್ನು ಹೊಸ ಮುಖ್ಯಮಂತ್ರಿಯೂ ಎದುರಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.“ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ರಾಜ್ಯದ ಅಭಿವೃದ್ಧಿ ಮತ್ತು ಜನರ ಹಿತಕ್ಕಾಗಿ ಅವರು ಕೆಲಸ ಮಾಡಲಿ ಎಂದು ಹಾರೈಸುತ್ತೇನೆ. ಆದರೆ ಈ ಬದಲಾವಣೆಯಿಂದ ರಾಜ್ಯದ ಜನರಲ್ಲಿ ಯಾವುದೇ ಹೊಸ ನಿರೀಕ್ಷೆ ಮೂಡಿಲ್ಲ ಎಂಬುದು ವಾಸ್ತವ,” ಎಂದು ಅಶೋಕ್ ಹೇಳಿದ್ದಾರೆ.ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ, ವರ್ಗಾವಣೆ ದಂಧೆ, ಕಮಿಷನ್ ಸಂಸ್ಕೃತಿ ಹಾಗೂ ಆಡಳಿತ ವೈಫಲ್ಯಗಳು ರಾಜ್...