Monday, August 17

ವಿದೇಶ

‘ರಾಷ್ಟ್ರ ರಾಜಕಾರಣ’: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

‘ರಾಷ್ಟ್ರ ರಾಜಕಾರಣ’: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ, ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಗಳು ಆಗಲಿವೆ ಎಂಬ ಮಾತುಗಳು ಕೇಳಿಬರುತ್ತಿವೆ. ಎಐಸಿಸಿಯ ಹಿಂದುಳಿದ ವರ್ಗಗಳ ವಿಭಾಗದಲ್ಲಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸ್ಥಾನ ನೀಡಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ವಿದ್ಯಮಾನಗಳು ಬಿರುಸುಗೊಂಡಿವೆ. ಈ ಬೆಳವಣಿಗೆಯನ್ನು ಮುಂದಿಟ್ಟು ಪ್ರತಿಪಕ್ಷ ಬಿಜೆಪಿ ನಾಯಕರು ಕೂಡಾ ಸಿಎಂ ಬದಲಾವಣೆ ಸಾಧ್ಯತೆ ಬಗ್ಗೆ ವಿಶ್ಲೇಷಣೆ ಮಾಡುತ್ತಿದ್ದಾರೆ.ಈ ನಡುವೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, 'ಎಐಸಿಸಿಯ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸದಸ್ಯರಾಗಿ ನನ್ನನ್ನು ನೇಮಕ ಮಾಡಲಾಗಿದೆ. ಮಾಧ್ಯಮಗಳು ಇದನ್ನು ತಪ್ಪಾಗಿ ಅರ್ಥೈಸಿ ಮಂಡಳಿಯ ಅಧ್ಯಕ್ಷರಾಗಿ ನನ್ನ ನೇಮಕ ಮಾಡಲಾಗಿದೆ ಎಂದು ವರದಿ‌ ಮಾಡಿವೆ. ಇದು ತಪ್ಪು ಮಾಹಿತಿಯಾಗಿದೆ' ಎಂದು ಸ್ಪಷ್ಟನೆ ನೀಡಿದ್ದಾರೆ.'ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡ...
ಸಿಎಂ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ?

ಸಿಎಂ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. .ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆಗೆ ಅಗ್ರಿಮೆಂಟ್‌ ಆಗಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೂಡ ಒಪ್ಪಿಕೊಂಡಿದ್ದಾರೆ. ಕಳೆದ ಆರು ತಿಂಗಳಿಂದ ನಾನು ಇದನ್ನೇ ಹೇಳುತ್ತಿದ್ದೇನೆ. ಸಿದ್ದರಾಮಯ್ಯನವರನ್ನು ಅತಂತ್ರ ಮಾಡಲು ಕುತಂತ್ರ ನಡೆದಿದೆ. ಅವರಿಗೆ ಗೇಟ್‌ಪಾಸ್‌ ನೀಡುವುದು ಗ್ಯಾರಂಟಿಯಾಗಿದೆ. ನಾನು ಹೇಳಿದ್ದ ಜ್ಯೋತಿಷ್ಯ ನಿಜವಾಗಿದೆ. ಕಾಂಗ್ರೆಸ್‌ನ ಶಾಸಕರು ರಾಜಾರೋಷವಾಗಿ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ. ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸಿದ್ದರಾಮಯ್ಯನವರಿಗೆ ಬೋರ್ಡಿಂಗ್‌ ಪಾಸ್‌ ಇದ್ದಂತೆ ಎಂದರು.ಸರ್ಕಾರ ಎರಡೂವರೆ ವರ್ಷಗಳಲ್ಲಿ ಟೇಕಾಫ್‌ ಆಗಿಲ್ಲ. ಶಾಸಕರೆಲ್ಲರೂ ತಿರುಗುಬಿದ್ದಿದ್ದಾರೆ. ಶಾಸಕರು ಸಿದ್ದರಾಮಯ್ಯನವರ ಪರವಾಗಿ ಇಲ್ಲ ಎಂಬುದು ಸುರ್ಜೇವಾಲಾ ಅವರ ಸಭೆಯಿಂದ ಗೊತ್ತಾಗಿದೆ. ಸಿದ್ದರಾಮ...
ಬೋಗಸ್ ಸಮೀಕ್ಷೆಗೆ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ದುಂದುವೆಚ್ಚ?

ಬೋಗಸ್ ಸಮೀಕ್ಷೆಗೆ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ದುಂದುವೆಚ್ಚ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೋಗಸ್ ಸಮೀಕ್ಷೆಗೆ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ದುಂದುವೆಚ್ಚ ಮಾಡಿದೆ ಎಂದು ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರ ಹಾಕಿದೆ.ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆ ಸಂಬಂಧ ನಡೆಯುತ್ತಿರುವ ಸಮೀಕ್ಷೆ ಸಂಪೂರ್ಣ ಬೋಗಸ್‌ ಎನ್ನುವುದಕ್ಕೆ ಮೇಲಿಂದ ಮೇಲೆ ಸಾಕ್ಷ್ಯ ಲಭಿಸುತ್ತಿದೆ. ಇದರ ಬೆನ್ನಲ್ಲೇ ಸಮೀಕ್ಷೆ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಕೋಟ್ಯಂತರ ಹಣ ದುಂದುವೆಚ್ಚ ಮಾಡುತ್ತಿರುವ ವರದಿ ಹೊರಬಂದಿದೆ ಎಂದು ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿ ಗಂಭೀರ ಆರೋಪ ಮಾಡಿದೆ.ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪರಿಶಿಷ್ಟ ಜಾತಿ ಸಮೀಕ್ಷೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಸಮೀಕ್ಷೆ ಖಾತರಿಪಡಿಸಿಕೊಳ್ಳುವ ಉದ್ದೇಶದಿಂದ ಮನೆ ಮನೆಗಳಿಗೆ ಸ್ಟಿಕ್ಕರ್‌ ಅಂಟಿಸಲು 3.60 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈವರೆಗೂ ಬೆಂಗಳೂರು ನಗರದಲ್ಲಿ 60%ರಷ್ಟು ಕೂಡ ಸರ್ವೇ ನಡೆದಿಲ್ಲ. ಇನ್ನೂ ಕೆಲವೆಡೆ ಸಮೀಕ್ಷೆ ಮಾಡದೇ ಸ್ಟಿಕ್ಕರ್ ಅಂಟಿಸಿದ್ದಾರೆ. ಕೆಲವೆಡೆ ಬೇಕರಿ, ದಿನಸಿ ಅಂಗಡಿಗಳಿಗೂ ಸಮೀಕ್ಷೆ ಪೂರ್ಣ ಎಂಬ ಸ್ಟಿಕ್ಕರ್ ಅಂಟಿಸಲಾಗಿದೆ‌ ಎಂದು ಬಿಜೆಪಿ ದೂರಿದೆ.ಸಮೀಕ್ಷೆ...
ಕಾಗಿನೆಲೆ ಗುರುಪೀಠಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ: ಸಿಎಂ ಭರವಸೆ

ಕಾಗಿನೆಲೆ ಗುರುಪೀಠಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ: ಸಿಎಂ ಭರವಸೆ

ರಾಜ್ಯ, ವಿದೇಶ
ಬೆಂಗಳೂರು: ಕಾಗಿನೆಲೆ ಮಹಾಸಂಸ್ಥಾನದ ಪೀಠದ ವತಿಯಿಂದ ಸಮಾಜಮುಖಿ ಕೆಲಸಗಳಾಗುತ್ತಿರುವುದು ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಕೊಂಡಾಡಿದ್ದಾರೆ.ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಹಾಗೂ ಶಾಖಾಮಠ ಮತ್ತು ಬೆಂಗಳೂರು ಭಕ್ತರ ಭಂಡಾರದ ಕುಟೀರ ಲೋಕಾರ್ಪಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಗಿನೆಲೆ ಗುರುಪೀಠದ ಶಾಖಾಮಠದ ಭಕ್ತರ ಭಂಡಾರದ ಕುಟೀರಕ್ಕೆ ಹಿಂದೆ ನಾನೇ ಶಂಕುಸ್ಥಾಪನೆ ಮಾಡಿದ್ದೆ, ಇಂದು ನಾನೇ ಉದ್ಘಾಟನೆ ಮಾಡುತ್ತಿರುವುದು ಹೆಚ್ಚು ಸಂತಸ ನೀಡಿದೆ. ಕಾಗಿನೆಲೆ ಗುರುಪೀಠದ ಸ್ವಾಮಿಗಳು ಶಾಖಾಮಠದ ನಿರ್ಮಾಣಕ್ಕೆ ಸಾಕಷ್ಟು ಶ್ರಮಿಸಿದ್ದಾರೆ. 10 ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ಒಂದು ಎಕರೆ ಜಾಗವನ್ನು ಮಹೇಶ್ ಅವರು ಕೊಟ್ಟಿದ್ದು ಶ್ಲಾಘನೀಯ. ಅವರಿಗೆ ಎಲ್ಲರ ಪರವಾಗಿ ಧನ್ಯವಾದ ಹೇಳಿದರು.ಕಾಗಿನೆಲೆ ಗುರುಪೀಠದ ನಿರಂಜನಾನಂದ ಸ್ವಾಮೀಜಿಯವರು ಯಾವುದೇ ಕಟ್ಟಡಗಳನ್ನು ಅತ್ಯಂತ ಕ್ಷಿಪ್ರವಾಗಿ ಕಟ್ಟುತ್ತಾರೆ. ಎರಡೇ ವರ್ಷಗಳಲ್ಲಿ ಭಕ್ತರಿಂದ ವಂತಿಗೆ ಪಡೆದು ನಿರ್ಮಾಣ ಮಾಡಿದ್ದಾರೆ. ಇದು ಅವರ ಕಾರ್ಯದಕ್ಷತೆಗೆ ಸಾಕ್ಷಿ. ಸಚಿವರಾದ ಬೈರತಿ ಸುರೇಶ್ ಅವರು 50 ಲಕ್ಷ ರೂ.ಗಳ ...
ಕಮಿಷನ್ ಅವಾಂತರ; ಸಚಿವ ಶಿವರಾಜ್ ತಂಗಡಗಿ ರಾಜೀನಾಮೆಗೆ ಬಿಜೆಪಿ ಆಗ್ರಹ

ಕಮಿಷನ್ ಅವಾಂತರ; ಸಚಿವ ಶಿವರಾಜ್ ತಂಗಡಗಿ ರಾಜೀನಾಮೆಗೆ ಬಿಜೆಪಿ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಹಿಂದೂ ಮಠಗಳನ್ನು ಟಾರ್ಗೆಟ್ ಮಾಡಿ ಕಮಿಷನ್ ಗೆ ಡಿಮ್ಯಾಂಡ್ ಇಟ್ಟಿರುವ ಆರೋಪದಲ್ಲಿ ಸಿಲುಕಿರುವ ಸಚಿವ ಶಿವರಾಜ್ ತಂಗಡಗಿ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಒತ್ತಾಯಿಸಿದೆ.ಇಷ್ಡುದಿನ ಗುತ್ತಿಗೆದಾರರು, ಅಧಿಕಾರಿಗಳಿಂದ ಕಲೆಕ್ಷನ್, ಕಮಿಷನ್ ಪಡೆಯುತ್ತಿದ್ದ ಕಾಂಗ್ರೆಸ್ ಸರ್ಕಾರ ಇದೀಗ ಹಿಂದೂ ಮಠಗಳನ್ನು ಟಾರ್ಗೆಟ್ ಮಾಡಿ ಕಮಿಷನ್ ಗೆ ಡಿಮ್ಯಾಂಡ್ ಇಟ್ಟು ಸಿಕ್ಕಿಬಿದ್ದಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ.ನೆಲಮಂಗಲದ ತೈಲೇಶ್ವರ ಗಾಣಿಗ ಮಠಕ್ಕೆ ಮಂಜೂರಾದ ಅನುದಾನದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಸಚಿವ ಶಿವರಾಜ್ ತಂಗಡಿಗೆ 25% ಕಮಿಷನ್‌ ಕೇಳಿದ್ದಾರೆಂದು ಪೂರ್ಣಾನಂದಪೂರಿ ಸ್ವಾಮೀಜಿ ಭ್ರಷ್ಟ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ ಎಂದಿರುವ ಬಿಜೆಪಿ, 'ಮಠಗಳು ಬಳಿ ಕಮಿಷನ್ ಕೇಳುವ ನಿಮ್ಮ ಸರ್ಕಾರಕ್ಕೆ ಮಸೀದಿಗಳಿಂದಲೂ ಕಮಿಷನ್ ಕೇಳುವ ತಾಕತ್ತು ಇದೆಯಾ?' ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದೆ.ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ಈ ಕೂಡಲೇ ರಾಜೀನಾಮೆ...
ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತಾಡಿದರೆ, ಏಕವಚನದಲ್ಲಿ ಮಾತಾಡಿದರೆ ಕ್ರಮವಿಲ್ಲ

ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತಾಡಿದರೆ, ಏಕವಚನದಲ್ಲಿ ಮಾತಾಡಿದರೆ ಕ್ರಮವಿಲ್ಲ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಲವಾರು ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್‌ ಸದಸ್ಯರಾದ ಎನ್‌.ರವಿಕುಮಾರ್‌ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ. ಐಎಎಸ್‌ ಅಧಿಕಾರಿಯಾದ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತನಾಡಿದ್ದರು. ಆದರೂ ಕ್ರಮ ಕೈಗೊಳ್ಳಲಿಲ್ಲ. ರಾಜ್ಯದಲ್ಲಿ ಎಲ್ಲೂ ಅಭಿವೃದ್ಧಿ ಕಾರ್ಯ ನಡೆಯದೆ, ಶಾಸಕರು ದಂಗೆ ಏಳುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಹೈಕೋರ್ಟ್‌ ಸೂಚಿಸಿದೆ. ಈ ಸಮಸ್ಯೆಗಳನ್ನು ಮರೆಮಾಚಲು ರವಿಕುಮಾರ್‌ ಹೇಳಿಕೆಯನ್ನು ವಿವಾದ ಮಾಡಲಾಗಿದೆ ಎಂದರು.ಬಿಜೆಪಿಯವರು ಮಾಡಿದರೆ ಎಫ್‌ಐಆರ್‌ ದಾಖಲಿಸುತ್ತಾರೆ. ಕಾಂಗ್ರೆಸ್‌ನವರು ಮಾಡಿದರೆ ಯಾವುದೇ ದೂರು ದಾಖಲಾಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಕರೆಯುತ್ತಾರೆ....
ಬೆಂಗಳೂರು ಸುರಂಗ ರಸ್ತೆ ಟೆಂಡರ್ ಪ್ರಕ್ರಿಯೆ ಶೀಘ್ರ ಅಂತಿಮ: ಡಿಕೆಶಿ

ಬೆಂಗಳೂರು ಸುರಂಗ ರಸ್ತೆ ಟೆಂಡರ್ ಪ್ರಕ್ರಿಯೆ ಶೀಘ್ರ ಅಂತಿಮ: ಡಿಕೆಶಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸುರಂಗ ರಸ್ತೆ ಯೋಜನೆಯ ಮೊದಲ ಹಂತದ ಟೆಂಡರ್ ಪ್ರಕ್ರಿಯೆಯನ್ನು 4-5 ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಶುಕ್ರವಾರ ರಾತ್ರಿ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ ಹಂತಕ್ಕೆ ಅಂದಾಜು 17,000 ಕೋಟಿ ರೂ. ಮತ್ತು ಎರಡನೇ ಹಂತಕ್ಕೆ 23,000 ಕೋಟಿ ರೂ. ಖರ್ಚು ಮಾಡಲಾಗುವುದು ಎಂದು ಶಿವಕುಮಾರ್ ಹೇಳಿದರು.“ಹೆಬ್ಬಾಳ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್‌ವರೆಗೆ ಸುಮಾರು 40 ಕಿಲೋಮೀಟರ್ ಮತ್ತು ಮೈಸೂರು ರಸ್ತೆಯಿಂದ ಕೆ.ಆರ್. ಪುರಂವರೆಗೆ ಸುಮಾರು 23 ಕಿಲೋಮೀಟರ್ ಉದ್ದದ ಅವಳಿ ಸುರಂಗ ರಸ್ತೆ ಯೋಜನೆಯನ್ನು ನಾವು ಪ್ರಾರಂಭಿಸಿದ್ದೇವೆ” ಎಂದು ಶಿವಕುಮಾರ್ ಹೇಳಿದರು."130 ಕಿಲೋಮೀಟರ್ ಫ್ಲೈಓವರ್‌ಗಳು ಮತ್ತು ಹೊಸ ಮೆಟ್ರೋ ಮಾರ್ಗಗಳನ್ನು ಯೋಜಿಸಲಾಗಿರುವ ಸ್ಥಳಗಳಲ್ಲಿ ಡಬಲ್ ಡೆಕ್ಕರ್ ರಚನೆಗಳನ್ನು ನಿರ್ಮಿಸಲಾಗುವುದು. ಈಗಾಗಲೇ, 7 ಕಿಲೋಮೀಟರ್ ಡಬಲ್ ಡೆಕ್ಕರ್ ರಚನೆಗಳನ್ನು ನಿರ್ಮಿಸಲಾಗಿದೆ ಮತ್ತು 37 ಕಿಲೋಮೀಟರ್ ಡಬಲ್ ಡೆಕ್ಕರ್ ಯೋಜನೆಯು ಪೈಪ್‌ಲೈನ್‌ನಲ್ಲಿದೆ" ಎಂದು ಶಿವಕುಮಾರ್ ಹೇಳಿದರು.ಇದಕ್...
ಪರಿಶಿಷ್ಟ ಜಾತಿಯೇತರ ಮನೆಗಳಿಗೂ ಜಾತಿ ಜನಗಣತಿ ಸ್ಟಿಕ್ಕರ್‌; ಬಿಜೆಪಿ ಆಕ್ರೋಶ

ಪರಿಶಿಷ್ಟ ಜಾತಿಯೇತರ ಮನೆಗಳಿಗೂ ಜಾತಿ ಜನಗಣತಿ ಸ್ಟಿಕ್ಕರ್‌; ಬಿಜೆಪಿ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪರಿಶಿಷ್ಟ ಜಾತಿಯವರ ಜನಗಣತಿ ಕಾರ್ಯವನ್ನು ಸಮರ್ಪಕವಾಗಿ ನಡೆಸಲಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಸಮೀಕ್ಷೆ ಕೈಗೊಳ್ಳುವವರು ಮಾಹಿತಿ ಸಂಗ್ರಹಿಸದೇ ಮನೆಗಳಲ್ಲಿ ಸ್ಟಿಕ್ಕರ್ ಅಂಟಿಸಿ ಹೊಂದುತ್ತಿದ್ದಾರೆ. ಪರಿಶಿಷ್ಟ ಜಾತಿಯವರಲ್ಲದವರ ಮನೆಗಳಿಗೂ ಸ್ಟಿಕ್ಕರ್ ಅಂಟಿಸಿ ಸಮೀಕ್ಷೆ ನಡೆಸುತ್ತಿರುವವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂಬ ಆರೋಪವೂ ಪ್ರತಿಧ್ವನಿಸಿದೆ.ಈ ಬಗ್ಗೆ ಆಕ್ರೋಶ ಹೊರ ಹಾಕಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪ'ರಿಶಿಷ್ಟ ಜಾತಿಯವರ ಮನೆಗೆ ಬಂದು ಸ್ಟಿಕರ್ ಅಂಟಿಸಿ ಹೋಗಿದ್ದರೆ ಅದನ್ನು ಒಪ್ಪಬಹುದಿತ್ತು, ಆದರೆ ಎಲ್ಲಾ ಮನೆಗಳಿಗೂ ಸರ್ಕಾರ ಸ್ಟಿಕರ್ ಅಂಟಿಸಿಕೊಂಡು ಹೋಗುತ್ತಿದ್ದಾರೆ. ಪರಿಶಿಷ್ಟ ಜಾತಿಯೇತರ ಮನೆಗಳಿಗೂ ಸ್ಟಿಕ್ಕರ್‌ ಅಂಟಿಸುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ. ಪರಿಶಿಷ್ಟ ಜಾತಿಯವರ ಮನೆಗೆ ಬಂದು ಸ್ಟಿಕರ್ ಅಂಟಿಸಿ ಹೋಗಿದ್ದರೆ ಅದನ್ನು ಒಪ್ಪಬಹುದಿತ್ತು, ಆದರೆ ಎಲ್ಲಾ ಮನೆಗಳಿಗೂ ಸರ್ಕಾರ ಸ್ಟಿಕರ್ ಅಂಟಿಸಿಕೊಂಡು ಹೋಗುತ್ತಿದೆ. ಪರಿಶಿಷ್ಟ ಜಾತಿಯೇತರ ಮನೆಗಳಿಗೂ ಸ್ಟಿಕ್ಕರ್‌ ಅಂಟಿಸುತ್ತಿದ್ದಾರೆ.ಆನ್‍ಲೈನ್‍ನಲ್ಲೂ ...
ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ‘ಜನೋಪಕಾರಿ ಶ್ರೀ ದೊಡ್ಡಣ್ಣಶೆಟ್ಟರ ಹೆಸರು

ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ‘ಜನೋಪಕಾರಿ ಶ್ರೀ ದೊಡ್ಡಣ್ಣಶೆಟ್ಟರ ಹೆಸರು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ 'ಜನೋಪಕಾರಿ ಶ್ರೀ ದೊಡ್ಡಣ್ಣಶೆಟ್ಟರ ಕಲಾಸಿಪಾಳ್ಯ ಬಸ್ ನಿಲ್ದಾಣ' ಎಂದು ಮರು ನಾಮಕರಣ ಮಾಡಲು ಸರ್ಕಾರ ತೀರ್ಮಾನಿಸಿದೆ.ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ( SLN ಚಾರಿಟಿ) ಯನ್ನು ಶ್ರೀ ದೊಡ್ಡಣ್ಣಶೆಟ್ಟರು 1906 ರಲ್ಲಿಯೇ ಸ್ಥಾಪಿಸಿ. ಸಮಾಜದಲ್ಲಿನ ಬಡವರು, ಹಿಂದುಳಿದವರು ಎಂಬ ಭೇದಭಾವವಿಲ್ಲದೇ ಸರ್ವ ಜನಾಂಗಕ್ಕೂ ಸಮಾನ ಶಿಕ್ಷಣವನ್ನು ನೀಡಬೇಕೆಂಬ ದೂರದೃಷ್ಟಿಯನ್ನು ಇಟ್ಟುಕೊಂಡು, ಶಾಲಾ ಕಾಲೇಜುಗಳನ್ನು ಸ್ಥಾಪಿಸಿ ಸಮಾಜ ಸೇವೆಯಲ್ಲಿ ತಮ್ಮನ್ನು ತಾವೇ ತೊಡಗಿಸಿಕೊಂಡಿದ್ದರು. ಶ್ರೀ ದೊಡ್ಡಣ್ಣ ಶೆಟ್ಟರ ಸೇವೆಯನ್ನು ಗುರುತಿಸಿ, ಅಂದಿನ ಮೈಸೂರು ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ರಾಜರ ದರ್ಭಾರಿಗೆ ಆಹ್ವಾನಿಸಿ 'ಜನೋಪಕಾರಿ' ಎಂಬ ಬಿರುದನ್ನು ಹಾಗೂ ಪದಕವನ್ನು ನೀಡಿ ಸನ್ಮಾನಿಸಿದ್ದರು.ದೊಡ್ಡಣ್ಣ ಶೆಟ್ಟರು‌ ತಮ್ಮ 5 ಎಕರೆ ಭೂಮಿಯನ್ನು ಉಚಿತವಾಗಿ ಕಲಾಸಿಪಾಳ್ಯದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ನೀಡಿದ ಮಹಾದಾನಿ. ದೊಡ್ಡಣ್ಣ ಶೆಟ್ಟರು ಸ್ಥಾಪಿಸಿರುವ ಈ ಸಂಸ್ಥೆಯ ಕಾರ್ಯಕ್ರಮಗಳಿಗೆ ನಾಲ್ವಡಿ ಕ...
ರವಿಕುಮಾರ್ ವಿರುದ್ಧ ದೂರು ನೀಡಿದ IAS ಅಧಿಕಾರಿಗಳ ಸಂಘ ಹಿಂದೆ ಸಿದ್ದರಾಮಯ್ಯ ಅಪಮಾನಿಸಿದಾಗ ಎಲ್ಲಿತ್ತು? ವಿಜಯೇಂದ್ರ ಪ್ರಶ್ನೆ

ರವಿಕುಮಾರ್ ವಿರುದ್ಧ ದೂರು ನೀಡಿದ IAS ಅಧಿಕಾರಿಗಳ ಸಂಘ ಹಿಂದೆ ಸಿದ್ದರಾಮಯ್ಯ ಅಪಮಾನಿಸಿದಾಗ ಎಲ್ಲಿತ್ತು? ವಿಜಯೇಂದ್ರ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಶಾಸಕ ರವಿಕುಮಾರ್ ವಿರುದ್ಧ ದೂರು ನೀಡಿದ IAS ಅಧಿಕಾರಿಗಳ ಸಂಘ ಹಿಂದೆ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ಅಪಮಾನಿಸಿದಾಗ ಎಲ್ಲಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಖಾರವಾಗಿ ಪ್ರಶ್ನಿಸಿದ್ದಾರೆ.ಬೇಂಗಳೂರಿನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಅವರು, ಬಿಜೆಪಿ ಎಂಎಲ್‌ಸಿ ಎನ್. ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಿಎಂ ಅವರನ್ನು ಭೇಟಿ ಮಾಡಿದ್ದಕ್ಕಾಗಿ ಐಎಎಸ್ ಅಧಿಕಾರಿಗಳ ಸಂಘದ ನಡೆಯನ್ನು ಟೀಕಿಸಿದರು. ಮುಖ್ಯಮಂತ್ರಿ ಐಎಎಸ್ ಅಧಿಕಾರಿಗಳನ್ನು ಅವಮಾನಿಸುವ ರೀತಿಯಲ್ಲಿ ವರ್ತಿಸಿದಾಗ, ಐಎಎಸ್ ಅಧಿಕಾರಿಗಳ ಸಂಘ ಎಲ್ಲಿತ್ತು? ಆ ಸಮಯದಲ್ಲಿ ಅವರು ಮುಖ್ಯಮಂತ್ರಿ ವಿರುದ್ಧ ಏಕೆ ದೂರು ನೀಡಲಿಲ್ಲ?" ಎಂದು ಪ್ರಶ್ನಿಸಿದರು."ಎಂಎಲ್‌ಸಿ ರವಿಕುಮಾರ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮ ವರದಿಗಳನ್ನು ನಾನು ಗಮನಿಸಿದ್ದೇನೆ. ಅವರು ಈ ಸಂಬಂಧ ಸ್ಪಷ್ಟೀಕರಣವನ್ನೂ ನೀಡಿದ್ದಾರೆ. ನಂತರ, ಐಎಎಸ್ ಅಧಿಕಾರಿಗಳ ಸಂಘವು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ದೂರು ಸಲ್ಲಿಸಿದೆ ಎಂದು ವರದಿಯಾಗಿದೆ" ಎ...