Monday, August 17

ವಿದೇಶ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ನಿಷೇಧ: ಪ್ರಿಯಾಂಕ್ ಖರ್ಗೆ ಪುನರುಚ್ಚಾರ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ನಿಷೇಧ: ಪ್ರಿಯಾಂಕ್ ಖರ್ಗೆ ಪುನರುಚ್ಚಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕಲಬುರಗಿ: ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಿಷೇಧ ಕುರಿತ ತಮ್ಮ ಹೇಳಿಕೆಯನ್ನು ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾನು ಇದನ್ನೇ ಮೊದಲೇ ಹೇಳಿದ್ದೇನೆ - ನಾವು ಹಿಂದೆ ಆರ್‌ಎಸ್‌ಎಸ್ ಅನ್ನು ನಿಷೇಧಿಸಿದ್ದೇವೆ ಮತ್ತು ಭವಿಷ್ಯದಲ್ಲಿ ಅವಕಾಶ ನೀಡಿದರೆ, ನಾವು ಅದನ್ನು ಮತ್ತೆ ಮಾಡುತ್ತೇವೆ ಎಂದರು.ಸಂವಿಧಾನದ ಪಿತ ಬಿ.ಆರ್. ಅಂಬೇಡ್ಕರ್ ಅವರನ್ನು ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ, “ಯಾರು ರಾಷ್ಟ್ರವಿರೋಧಿ ಎಂದು ಅಂಬೇಡ್ಕರ್ ವ್ಯಾಖ್ಯಾನಿಸಿದ್ದಾರೆ. ತಮ್ಮ ಕೊನೆಯ ಭಾಷಣದಲ್ಲಿ, ನಾವು ಈಗ ಸ್ವಾತಂತ್ರ್ಯ ಪಡೆದಿದ್ದೇವೆ, ನಮ್ಮ ಗಮನ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯನ್ನು ಖಚಿತಪಡಿಸಿಕೊಳ್ಳುವತ್ತ ಇರಬೇಕು ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಭಾರತದಲ್ಲಿ ಜಾತಿ ರಾಷ್ಟ್ರವಿರೋಧಿ, ಜಾತಿ ಮತ್ತು ಧರ್ಮದ ಹೆಸರಿನಲ್ಲಿ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಅಡ್ಡಿಯುಂಟುಮಾಡುವ ಮತ್ತು ಸಮುದಾಯಗಳ ನಡುವೆ ಕಲಹವನ್ನು ಸೃಷ್ಟಿಸುವ ಯಾರೇ ...
ಮಾನನಷ್ಟ ಕೇಸ್ ವಿಚಾರಣೆಗೆ ಹೈಕೋರ್ಟ್ ತಡೆ; ಡಿಕೆಶಿ ನಿರಾಳ

ಮಾನನಷ್ಟ ಕೇಸ್ ವಿಚಾರಣೆಗೆ ಹೈಕೋರ್ಟ್ ತಡೆ; ಡಿಕೆಶಿ ನಿರಾಳ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ನೇತೃತ್ವದ ಪೀಠವು, ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ಕರ್ನಾಟಕ ಘಟಕ ಇಬ್ಬರಿಗೂ ಪರಿಹಾರ ನೀಡಿ ಆದೇಶ ಹೊರಡಿಸಿದೆ. ಮೊದಲು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಗೂ ನ್ಯಾಯಾಲಯ ತಡೆ ನೀಡಿತ್ತು.2023 ರ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಪ್ರಚಾರದ ಭಾಗವಾಗಿ ಬಳಸಲಾಗಿದ್ದ ಪ್ರಾದೇಶಿಕ ಪತ್ರಿಕೆಗಳು ಮತ್ತು ಮಾಧ್ಯಮಗಳಲ್ಲಿ "ಭ್ರಷ್ಟಾಚಾರ ದರ ಕಾರ್ಡ್" ಪ್ರಕಟಣೆಗೆ ಸಂಬಂಧಿಸಿದಂತೆ ಬಿಜೆಪಿ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿತ್ತು.ಬಿಜೆಪಿಯ ಕರ್ನಾಟಕ ಘಟಕವು ಪ್ರಕರಣ ದಾಖಲಿಸಿತ್ತು.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆಯಲ್ಲ...
ಮಾವು ಖರೀದಿ :ಬೆಲೆ ವ್ಯತ್ಯಾಸ ಪಾವತಿಗೆ ರಾಜ್ಯದಿಂದ ರೂ 101 ಕೋಟಿ ಬಿಡುಗಡೆ

ಮಾವು ಖರೀದಿ :ಬೆಲೆ ವ್ಯತ್ಯಾಸ ಪಾವತಿಗೆ ರಾಜ್ಯದಿಂದ ರೂ 101 ಕೋಟಿ ಬಿಡುಗಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು, ಜು.3: ರಾಜ್ಯದಲ್ಲಿ ಮಾವು ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ಆಸರೆಯಾಗಿ ರಾಜ್ಯ ಸರ್ಕಾರ ₹101 ಕೋಟಿ ಮೊತ್ತವನ್ನು ಬಿಡುಗಡೆ ಮಾಡಿದೆ. ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗಾಗಿ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ನಿರ್ದೇಶನದಂತೆ, ಆವರ್ತ ನಿಧಿಯಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹಣ ಬಿಡುಗಡೆ ಮಾಡಲು ರಾಜ್ಯ ಕೃಷಿ ಮಾರುಕಟ್ಟೆ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.ಈ ಕುರಿತು ಜಾರಿಗೊಂಡಿರುವ ಸರ್ಕಾರದ ಆದೇಶದಲ್ಲಿ, ಈ ಮೊತ್ತದ ಶೇ.50 ರಷ್ಟು ಹಣವನ್ನು ಕೇಂದ್ರ ಸರ್ಕಾರದಿಂದ ಮರುಪಾವತಿ ಪಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ರಾಜ್ಯ–ಕೇಂದ್ರಗಳ ಶೇ.50–50 ಪಾಲುದಾರಿಕೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಕೇಂದ್ರ ಹಾಗೂ ರಾಜ್ಯಗಳು ಶೇ.50–50 ಪಾಲು ಹೊಂದಿದ್ದು, ಈ ಬಗ್ಗೆ ಕಳೆದ ವಾರವೇ ಆದೇಶ ಹೊರಡಿಸಲಾಗಿತ್ತು. ರೈತರಿಗೆ ತಕ್ಷಣ ಪಾವತಿ ದೊರೆಯುವಂತೆ ವ್ಯವಸ್ಥೆ ಕಲ್ಪಿಸಲು ರಾಜ್ಯವು ತನ್ನ ...
‘ಸಿಎಸ್ ವಿರುದ್ಧ ಅವಹೇಳನ ಮಾಡಿಲ್ಲ’: ರವಿಕುಮಾರ್ ಸ್ಪಷ್ಟನೆ

‘ಸಿಎಸ್ ವಿರುದ್ಧ ಅವಹೇಳನ ಮಾಡಿಲ್ಲ’: ರವಿಕುಮಾರ್ ಸ್ಪಷ್ಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪರಿಷತ್ ಸಭಾಪತಿಗೆ ದೂರು ಸಲ್ಲಿಸಿದ್ದು, ಈ ಸಂಬಂಧ ಶಾಸಕ ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.“ನಾನು ಯಾವುದೇ ಅವಹೇಳನಕಾರಿ ಭಾಷಣ ಮಾಡಿಲ್ಲ. ಜೂನ್ 30ರಂದು ನಡೆದ ಪ್ರತಿಭಟನೆ ವೇಳೆ ಸಿಎಸ್‌ ಬಗ್ಗೆ ಮಾತನಾಡಿಲ್ಲ. ಅವರು ಬ್ಯುಸಿಯಾಗಿರುವುದರಿಂದ ಭೇಟಿಯಾಗಲಾಗಿಲ್ಲ ಎಂದು ಮಾತ್ರ ಹೇಳಿದ್ದೆ. ಇದರ ಹೊರತಾಗಿ ಅವರಿಗೆ ನೇರವಾಗಿ ಕುರಿತು ಯಾವುದೇ ಅವಮಾನಕಾರಿ ಮಾತುಗಳನ್ನಾಡಿಲ್ಲ” ಎಂದು ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ.ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯೆ ನೀಡಿರುವ ರವಿಕುಮಾರ್, ಈ ಕುರಿತು ಹರಡುತ್ತಿರುವ ಸುದ್ದಿಗಳು ದಾರಿತಪ್ಪಿಸುವ ಹಾಗೂ ದುರುದ್ದೇಶಪೂರಿತವಾಗಿವೆ ಎಂದು ಆರೋಪಿಸಿದ್ದಾರೆ.'ಸಿಎಂ ಭೇಟಿಗೆ ಲಭ್ಯರಾಗುತ್ತಿಲ್ಲ, ಸಿಎಸ್ ಸಿಗುತ್ತಿಲ್ಲ ಎಂದಷ್ಟೆ. ಆದರೆ, ಈ ಮಾತುಗಳನ್ನು ಅವಹೇಳನವೆಂದು ವಿವರಿಸಲಾಗುತ್ತಿದೆ. ನನ್ನ ನಿಖರ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ' ಎಂದು ರವಿಕುಮಾರ್ ಅಸಮಾಧಾನ ಹೊರಹಾಕಿದ್ದಾರೆ...
ಜುಲೈ 10ರವರೆಗೆ ಭಾರೀ ಮಳೆಯ ಮುನ್ಸೂಚನೆ: ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಜುಲೈ 10ರವರೆಗೆ ಭಾರೀ ಮಳೆಯ ಮುನ್ಸೂಚನೆ: ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಜುಲೈ 10ರವರೆಗೆ ಮುನ್ಸೂಚನೆ ನೀಡಿದೆ. ಅದರ ಪ್ರಕಾರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಧಾರವಾಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದ್ದು, ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಇಲಾಖೆ ಎಚ್ಚರಿಕೆ ನೀಡಿದೆ.ರಾಜ್ಯದ ಇತರ ಹಲವು ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದ್ದು, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ತೀವ್ರ ಮಳೆಯಾಗುವ ನಿರೀಕ್ಷೆಯಿದೆ.ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಸಾರ್ವಜನಿಕರು ಪ್ರವಾಹಪೀಡಿತ ಪ್ರದೇಶಗಳಿಗೆ ಹೋಗದ...
ಸಿಎಂ ಬದಲಾವಣೆ ಮುಂದಿನ ದೆಹಲಿ‌ ಪ್ರವಾಸದ ಬಳಿಕ? ಸುನಿಲ್ ಕುಮಾರ್ ಮಾರ್ಮಿಕ ಪ್ರಶ್ನೆ

ಸಿಎಂ ಬದಲಾವಣೆ ಮುಂದಿನ ದೆಹಲಿ‌ ಪ್ರವಾಸದ ಬಳಿಕ? ಸುನಿಲ್ ಕುಮಾರ್ ಮಾರ್ಮಿಕ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜಾತಿ ಜನಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟ ನಿಲುವೇನು ಎಂದು ಬಿಜೆಪಿ ನಾಯಕ ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.ಸಿ.ಎಂ ಸಿದ್ದರಾಮಯ್ಯ ತಾವೇ 5 ವರ್ಷ ಮುಖ್ಯಮಂತ್ರಿಯಾಗಿರುವುದಾಗಿ ಹೇಳಿದ್ದಾರೆ. ಬಹಳ ಸಂತೋಷ ! ಆದರೆ ಎಷ್ಟು ದಿನ ಈ ಸಂತೋಷ ಅನುಭವಿಸಬೇಕೆಂಬ ಪ್ರಶ್ನೆ ಕಾಡುತ್ತಿದೆ ಎಂದು ಸುನಿಲ್ ಕುಮಾರ್ ವ್ಯಾಖ್ಯಾನಿಸಿದ್ದಾರೆ.'ಜಾತಿ ಗಣತಿ ವಿಚಾರದಲ್ಲೂ ನೀವು ಹೀಗೆ ಹೇಳಿದ್ದು ಯಾರೇ ವಿರೋಧಿಸಿದರೂ ನಾನು ಜಾತಿ ಗಣತಿ ವರದಿ ಅನುಷ್ಠಾನ ಮಾಡಿಯೇ ಮಾಡುತ್ತೇನೆ ಎಂದು ಹೂಂಕರಿಸಿದ್ದಿರಿ' ಎಂದು ಕುಟುಕಿರುವ ಶಾಸಕ ಸುನಿಲ್ ಕುಮಾರ್, ಹೈಕಮಾಂಡ್ 'ವರದಿ ಜಾರಿ ಬೇಡ' ಎಂದು ಕುಟುಕುತ್ತಿದ್ದಂತೆ ಬೆಕ್ಕಿನ ಮರಿಯ ಹಾಗೆ ವರದಿಯನ್ನು ತಿಪ್ಪೆಗೆ ಎಸೆದಿರಿ' ಮುಖ್ಯಮಂತ್ರಿ ಸ್ಥಾನದ ವಿಚಾರದಲ್ಲೂ ಹಾಗೆಯೇ? ಎಂದು ಪ್ರಶ್ನಿಸಿದ್ದಾರೆ.ಐದು ವರ್ಷ ತಾನೇ ಸಿಎಂ ಎಂಬ ತಮ್ಮ ಹೇಳಿಕೆಯನ್ನು 'ಮುಂದಿನ ಬದಲಾವಣೆ ದೆಹಲಿ‌ ಪ್ರವಾಸದ ಬಳಿಕ' ಎಂದು ಅರ್ಥೈಸಿಕೊಳ್ಳಬಹುದೇ? ಎಂದು ಪ್ರಶ್ನಿಸಿ ಸುನಿಲ್ ಕುಮಾರ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಆದರೆ ಹ...
‘ನಮ್ಮೊಡನೆ ಇರುವ ಹೆಣ್ಣುಮಕ್ಕಳನ್ನು ಗೌರವಿಸುವುದೇ ಭಾರತ ಮಾತೆಗೆ ಸಲ್ಲಿಸುವ ನಿಜವಾದ ಗೌರವ’; ರಾಮಲಿಂಗ ರೆಡ್ಡಿ

‘ನಮ್ಮೊಡನೆ ಇರುವ ಹೆಣ್ಣುಮಕ್ಕಳನ್ನು ಗೌರವಿಸುವುದೇ ಭಾರತ ಮಾತೆಗೆ ಸಲ್ಲಿಸುವ ನಿಜವಾದ ಗೌರವ’; ರಾಮಲಿಂಗ ರೆಡ್ಡಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಗ್ಗೆ ಬಿಜೆಪಿ ನಾಯಕ ರವಿಕುಮಾರ್ ನೀಡಿದ್ದಾರೆ ಎನ್ನಲಾದ ಹೇಳಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರ ಅಸಂಸ್ಕೃತಿ ಮತ್ತು ಅನಾಚಾರದ ಹೇಳಿಕೆಗಳಿಗೆ ಈ ಪ್ರಕರಣ ಮತ್ತೊಂದು ಸೇರ್ಪಡೆಯಾಗಿದ್ದು, ನಾಚಿಕೆಗೇಡಿನ ವರ್ತನೆ, ಕೊಳಕು ಭಾಷಾ ಬಳಕೆಯ ಪು‌ನರಾವರ್ತನೆಯಾದಂತಿದೆ ಎಂದು ಟೀಕಿಸಿದ್ದಾರೆ.ವಿಧಾನ‌ಪರಿಷತ್ ಸದಸ್ಯರಾದ ರವಿಕುಮಾರ್, ಕಲಬುರಗಿ ಜಿಲ್ಲಾಧಿಕಾರಿಗಳ ಕುರಿತು ಕೆಲವು ತಿಂಗಳುಗಳ ಹಿಂದೆಯಷ್ಟೇ ಅವಹೇಳನಕಾರಿಯಾಗಿ ಮಾತನಾಡಿದ್ದು, ನ್ಯಾಯಾಲಯವು ಛೀಮಾರಿ‌ ಹಾಕಿದ ನಂತರ ಬೇಷರತ್ ಕ್ಷಮೆ‌ ಕೇಳಿದ್ದರು. ಮತ್ತೊಂದು ಪ್ರಕರಣದಲ್ಲಿ ಸಿ.ಟಿ.ರವಿ ಅವರು ಸದನದಲ್ಲಿ ಮಹಿಳಾ‌ ಮಂತ್ರಿ ಕುರಿತು ಆಡಿದ ಮಾತು ಅಸಹನೀಯ, ಸಂವೇದನಾರಹಿತ, ಸಮಾಜಕ್ಕೆ ಆಘಾತಕಾರಿಯಾದ ನಡವಳಿಕೆಯಾಗಿತ್ತು ಎಂದು ರಾಮಲಿಂಗ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ.ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿರುವ ರಾಮಲಿಂಗ ರೆಡ್ಡಿ, ಈಗ ಮತ್ತೊಮ್ಮೆ ರವಿಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಕುರಿತ ಹೇಳಿಕೆ ನೀಡ...
ಬೆಂಗಳೂರು ವಿವಿಗೆ ಮನಮೋಹನ್‌ ಸಿಂಗ್‌ ಹೆಸರು; ಸರ್ಕಾರದ ತೀರ್ಮಾನಕ್ಕೆ ಬಿಜೆಪಿ ಆಕ್ಷೇಪ

ಬೆಂಗಳೂರು ವಿವಿಗೆ ಮನಮೋಹನ್‌ ಸಿಂಗ್‌ ಹೆಸರು; ಸರ್ಕಾರದ ತೀರ್ಮಾನಕ್ಕೆ ಬಿಜೆಪಿ ಆಕ್ಷೇಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್‌ ಸಿಂಗ್‌ ಹೆಸರು ಸೂಕ್ತವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ ಹೆಸರು ಬದಲಿಸುತ್ತಿದ್ದಾರೆ. ಪೂರ್ವಿಕರು ಇಟ್ಟ ಹೆಸರನ್ನು ಹೀಗೆ ಬದಲಿಸಬಾರದು. ಬೆಂಗಳೂರನ್ನು ಈಗಾಗಲೇ ಒಡೆದುಹಾಕಿದ್ದಾರೆ ಎಂದವರು ಹೇಳಿದರು.ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರನ್ನು ಒಂದಾಗಿಸಲಿದೆ. ಬೆಂಗಳೂರು ಅಭಿವೃದ್ಧಿ ಮಾಡುವುದು ಬಿಟ್ಟು, ನಾಮಫಲಕ ಬದಲಿಸುವುದರಿಂದ ಕೋಟ್ಯಂತರ ರೂಪಾಯಿ ವ್ಯರ್ಥವಾಗಲಿದೆ. ದಕ್ಷಿಣ, ಉತ್ತರ ಎಂದು ಹೆಸರು ನೀಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.ಜಾತಿ ಗಣತಿ ವರದಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ಮಾಡುವಾಗ ಇವರು ಮತ್ತೆ ಗಣತಿ ಮಾಡಿದರೆ ಅದಕ್ಕೆ ಕಿಮ್ಮತ್ತಿನ ಬೆಲೆ ಇಲ್ಲ. ಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದರು...
ರಾಜ್ಯದಾದ್ಯಂತ ಮುಂಗಾರು ಮಳೆ ಅಬ್ಬರ; ಕರಾವಳಿ, ಮಲೆನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಾದ್ಯಂತ ಮುಂಗಾರು ಮಳೆ ಅಬ್ಬರ; ಕರಾವಳಿ, ಮಲೆನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ಮುಂಗಾರು ಮಳೆಯ ಅಬ್ಬರ. ಮೂರು ದಿನಗಳಲ್ಲಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬಿರುಗಾಳಿಯೊಡನೆ ಮಳೆ ಸುರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜನತೆಗೆ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ಅಲ್ಲದೆ, ಪ್ರವಾಹಕ್ಕೆ ಸಾದರವಾದ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆ ನಿರೀಕ್ಷೆಯಿದೆ. ಆದರೆ ಕೆಲವು ಸ್ಥಳಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆಯಿರುವುದರಿಂದ ಅಲ್ಲಿ ಸಹ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಹವಾಮಾನ ವೈಪರಿತ್ಯದಿಂದಾಗಿ ಜನಜೀವನಕ್ಕೆ ಅಡ್ಡಿಯುಂಟಾಗುವ ಸಾಧ್ಯತೆ ಇದ್ದು, ರೈತರು ಹಾಗೂ ಪ್ರವಾಸಿಗರಿಗೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ....
ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಡಿಕೆಶಿ ಸ್ಪಷ್ಟನೆ

ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಡಿಕೆಶಿ ಸ್ಪಷ್ಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆಶಿ, ರಣದೀಪ್ ಸಿಂಗ್ ಸುರ್ಜೆವಾಲ ಅವರು ಕಾಂಗ್ರೆಸ್ ಶಾಸಕರ ಜೊತೆ ಮಾಡುತ್ತಿರುವ ಸಭೆ ಬಗ್ಗೆ ಕೇಳಿದಾಗ, ಈ ಸಭೆ ಬಗ್ಗೆ ಯಾರಿಗೂ ಆತಂಕ ಬೇಡ. ರಾಷ್ಟ್ರಾದ್ಯಂತ ನಾವು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದು, ಸಂಘಟನೆ ಹಿನ್ನೆಲೆಯಲ್ಲಿ ಈ ಸಭೆ ಮಾಡಲಾಗುತ್ತಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಸಂಘಟನೆ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಶಕ್ತಿ ತುಂಬಲು ಹೇಳಿದ್ದಾರೆ. ಖರ್ಗೆ ಅವರು, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಕರೆಸಿ ನವದೆಹಲಿಯಲ್ಲಿ ಸಭೆ ಮ...