Monday, August 17

ವಿದೇಶ

ಜನಸಂದಣಿ ನಿರ್ವಹಣೆಗೆ ಹೊಸ ಮಾರ್ಗಸೂಚಿ ಜಾರಿ: ಎಸ್‌ಒಪಿ ಬಿಡುಗಡೆ

ಜನಸಂದಣಿ ನಿರ್ವಹಣೆಗೆ ಹೊಸ ಮಾರ್ಗಸೂಚಿ ಜಾರಿ: ಎಸ್‌ಒಪಿ ಬಿಡುಗಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: RCB ತಂಡದ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ದುರಂತದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಭವಿಷ್ಯದಲ್ಲಿಯೇ ಅಂತಹ ಘಟನೆಗಳು ಮರುಕಳಿಸದಂತೆ ಮಂಗಳವಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ ಅವರು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಭಾನುವಾರಗಳು, ಮೆರವಣಿಗೆಗಳು, ಪ್ರತಿಭಟನೆಗಳು, ಕ್ರೀಡಾ ಕೂಟಗಳು ಮುಂತಾದವುಗಳಲ್ಲಿ ಸಾರ್ವಜನಿಕರ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಒಪಿ) ರೂಪಿಸಲಾಗಿದೆ ಎಂದು ತಿಳಿಸಿದರು.ಸಮಾರಂಭಕ್ಕೂ ಮುನ್ನ ಸ್ಥಳ ಪರಿಶೀಲನೆ, ಆಯೋಜಕರ ಜತೆ ಯೋಜನೆ ರೂಪಿಸುವುದು ಕಡ್ಡಾಯವಾಗಿದ್ದು, ಸ್ಥಳದ ಸಾಮರ್ಥ್ಯ, ತುರ್ತು ನಿರ್ಗಮನ ಮಾರ್ಗ, ತಂತ್ರಜ್ಞಾನ ಬಳಕೆ ಸಾಧ್ಯತೆಗಳ ವಿಶ್ಲೇಷಣೆ ಅಗತ್ಯವಾಗಿದೆ. ಮುಖ್ಯ ಅಂಶಗಳು ಹೀಗಿವೆ:ತರಬೇತಿ ಪಡೆದ ಸಿಬ್ಬಂದಿ ಪ್ರವೇಶ ದ್ವಾರದಲ್ಲಿ ನಿಯೋಜನೆ QR ಕೋಡ್, ಬಯೋಮೆಟ್ರಿಕ್ ತಂತ್ರಜ್ಞಾನ ಬಳಕೆ ಪುರುಷ, ಮಹಿಳೆ, ವೃದ್ಧ, ಅಂಗವಿಕಲರಿಗೆ ಪ್ರತ್ಯ...
ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ? ಸಿ.ಟಿ.ರವಿ ಪ್ರಶ್ನೆ

ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ? ಸಿ.ಟಿ.ರವಿ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಭೀಭತ್ಸ ಕೃತ್ಯ ನಡೆದು ತಣ್ಣಗಾಗಿತ್ತು. ಆಗ ಕೃತ್ಯ ಎಸಗಿದಾತ ಮಾನಸಿಕ ಅಸ್ವಸ್ಥ ಎಂದಿದ್ದರು. ಅದರ ನಂತರ ಭಟ್ಕಳದಲ್ಲಿ ಪ್ರಕರಣ ಆಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು, ಹೊಸನಗರ, ಬೆಳಗಾವಿಯಲ್ಲಿ ಇಂಥ ಘಟನೆಗಳಾಗಿವೆ. ಅಂದರೆ ಹಸುವಿನ ಕೆಚ್ಚಲು ಕತ್ತರಿಸುವ ಇಷ್ಟೊಂದು ಮಾನಸಿಕ ಅಸ್ವಸ್ಥರು ಯಾಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹುಟ್ಟಿಕೊಂಡರು ಎಂದು ಕೇಳಿದರು.ಹುಣ್ಣಿಮೆ ಬಂದಾಗ ಕೆಲವರಿಗೆ ಹುಚ್ಚು ಕೆದರುತ್ತಂತೆ. ಕಾಂಗ್ರೆಸ್ ಬಂದಾಗ ಈ ಹುಚ್ಚು ಹೆಚ್ಚಾಗುತ್ತದೆಯೇ? ಎಂದ ಅವರು, ಇದು ಪ್ರತ್ಯೇಕ ಘಟನೆ ಅಲ್ಲ; ಗೋವನ್ನು ದೇವರೆಂದು ಪೂಜಿಸುವ ಸಂಸ್ಕøತಿಯನ್ನು ವಿರೋಧಿಸುವ ವಿಕೃತಿ ಇರುವವರು ಇಂಥ ಕೆಲಸ ಮಾಡುತ್ತಿದ್ದ...
‘ಬುಲೆಟ್ ಟ್ರೈನ್ ಮಾತಿನಲ್ಲಿ ರೈಲುಗಳು ಮಾಯ’: ಸುರ್ಜೇವಾಲ ಔಕ್ಷೇಪ

‘ಬುಲೆಟ್ ಟ್ರೈನ್ ಮಾತಿನಲ್ಲಿ ರೈಲುಗಳು ಮಾಯ’: ಸುರ್ಜೇವಾಲ ಔಕ್ಷೇಪ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: “ಬುಲೆಟ್ ಟ್ರೈನ್ ನೀಡುತ್ತೇವೆ ಎನ್ನುತ್ತಾ ರೈಲುಗಳನ್ನೇ ಮಾಯ ಮಾಡಿದ್ದಾರೆ. ಜನರ ನಿರೀಕ್ಷೆಗೆ ಮೂಗುತೂಗು ಹಾಕಿದ್ದಾರೆ,” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕೇಂದ್ರ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಕೇಂದ್ರದ ಬೆಲೆ ಏರಿಕೆ ನೀತಿಗಳು ದೇಶದ ಜನಸಾಮಾನ್ಯರನ್ನು ಜರ್ಜರಿತಗೊಳಿಸುತ್ತಿವೆ ಎಂದರು. “ಗ್ಯಾಸ್ ಸಿಲಿಂಡರ್, ದಿನಬಳಕೆಯ ವಸ್ತುಗಳಿಗೆ ಝಡ್ ಪ್ಲಸ್ ಸೆಕ್ಯೂರಿಟಿ ಬೇಕಾಗುವ ಪರಿಸ್ಥಿತಿ ಬಂದಿದೆ. ಮೋದಿ ನೇತೃತ್ವದ ಬಿಜೆಪಿ ಸರಕಾರ ಜನರ ಜೇಬಿಗೆ ಕೈ ಹಾಕುತ್ತಿರುವ ‘ಪಿಕ್ ಪಾಕೆಟ್ ಸರ್ಕಾರ’,” ಎಂದು ವ್ಯಂಗ್ಯವಾಣಿ ಹಾಕಿದರು.ಜುಲೈ 1ರಿಂದ ರೈಲ್ವೆ ದರ ಏರಿಕೆ ಮೂಲಕ ₹700 ಕೋಟಿ ಹೊರೆಯನ್ನು ಜನರ ಮೇಲೆ ಹಾಕಲಾಗಿದೆ. ಇದರ ಹಿಂದೆ "ರೈಲ್ವೆ ಹಳಿಗಳ ದರೋಡೆ" ನಡೆಯುತ್ತಿದೆ ಎಂದು ಅವರು ಕಿಡಿಕಾರಿದರು. ಅಕ್ಟೋಬರ್ 2024ರವರೆಗೆ ಟೋಲ್ ಹಾಗೂ ಪ್ಯಾಸೆಂಜರ್ ದರ ಏರಿಕೆ ನಿರಂತರವಾಗಿ ನಡೆಯುತ್ತಿದೆ. “2024ರಲ್ಲಿ ಮಾತ್ರ ಕರ್ನಾಟಕದ ಜನರು ₹4,860 ಕೋಟಿ ಟೋಲ್‌ ಶುಲ್ಕವಾಗಿ ಕಟ್ಟು...
ಯುವ ಸಮುದಾಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಸೂಕ್ತ ಕ್ರಮಕ್ಕೆ ಸರ್ಕಾರದ ನಿರ್ದೇಶನ

ಯುವ ಸಮುದಾಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಸೂಕ್ತ ಕ್ರಮಕ್ಕೆ ಸರ್ಕಾರದ ನಿರ್ದೇಶನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಯುವ ಸಮುದಾಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಸೂಕ್ತ ತನಿಖಾ ವರದಿ ನಡೆಸಿ, ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ.ಯುವ ಸಮುದಾಯದಲ್ಲಿ ಅದರಲ್ಲೂ ಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ಈ ಬಗ್ಗೆ ಸೂಕ್ತ ಹಾಗೂ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಹಾಸನದಲ್ಲಿ ಒಂದು ತಿಂಗಳಿಂದ ಸುಮಾರು ಜನ ಹೃದಯಾಘಾತದಿಂದ ಮೃತಪಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಪ್ರಕರಣಗಳೂ ಸೇರಿದಂತೆ ಈ ಹಿಂದಿನ ಘಟನೆಗಳ ಬಗ್ಗೆಯೂ ಸೂಕ್ತ ತನಿಖೆ ನಡೆಸಿ, ಅಧ್ಯಯನ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ.ಹಾಸನದಲ್ಲಿ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ವರದಿಗಳು ಬಂದ ಕೂಡಲೇ ಹಾಸನ ವೈದ್ಯಕೀಯ ಸಂಸ್ಥೆ ‌ ವೈದ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಸಂ...
ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪಿದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಯಲಹಂಕ- ಹಿಂದೂಪುರ ಹೆದ್ದಾರಿಯ ಮಾಕಳಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಮೃತರನ್ನು ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ ನಿವಾಸಿಗಳಾದ ಈಶ್ವರಪ್ಪ (75), ಪುರುಷೋತ್ತಮ (75), ಕಾಳಪ್ಪ(68), ನಾರಾಯಣಪ್ಪ(70),ಗೋಪಿನಾಥ್ (45) ಸೇರಿದಂತೆ ಚಾಲಕ ನರಸಿಂಹಮೂರ್ತಿ(50) ಎಂದು ಗುರುತಿಸಲಾಗಿದೆ.ಸುದ್ದಿತಿಳಿದು ಸ್ಥಳಕ್ಕೆ ಧಾವಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ಹುಲಿಗಳ ಸಾವಿನ ಪ್ರತಿಧ್ವನಿ; ಮೂವರು ಅರಣ್ಯ ಅಧಿಕಾರಿಗಳಿಗೆ ಕಡ್ಡಾಯ ರಜೆ

ಹುಲಿಗಳ ಸಾವಿನ ಪ್ರತಿಧ್ವನಿ; ಮೂವರು ಅರಣ್ಯ ಅಧಿಕಾರಿಗಳಿಗೆ ಕಡ್ಡಾಯ ರಜೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಹುಲಿ ಹಾಗೂ ಅದರ ನಾಲ್ಕು ಮರಿಗಳ ಸಾವಿಗೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ಮೂರು ಹಿರಿಯ ಅರಣ್ಯ ಅಧಿಕಾರಿಗಳನ್ನು 'ಕಡ್ಡಾಯ ರಜೆ'ಯ ಮೇಲೆ ಕಳುಹಿಸಿದೆ.ಈ ಸಂಬಂಧ ಸೋಮವಾರ ಅರಣ್ಯ ಇಲಾಖೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧಿಕೃತ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ. ಹುಲಿಗಳ ಸಾವು ಸ್ಥಳೀಯ ಅರಣ್ಯ ಅಧಿಕಾರಿಗಳ ಕಣ್ಣಿಂದ ದೂರವಿದ್ದದ್ದು, ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು.ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ. ಚಕ್ರಪಾಣಿ, ಹನೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಜಾನನ ಹೆಗಡೆ, ಹೂಗ್ಯಂ ವಲಯದ ಉಸ್ತುವಾರಿ ಉಪವಿಭಾಗಾಧಿಕಾರಿ ಮಾದೇಶ ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಹುಲಿಗಳ ಶವಗಳು ಕಾಡು ಶಿಬಿರದಿಂದ ಕೇವಲ 800 ಮೀ. ದೂರದಲ್ಲಿ ಪತ್ತೆಯಾಗಿದ್ದರೂ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಇರದಿರುವುದು, ಮತ್ತು ಬೇಟೆ ವಿರೋಧಿ ಶಿಬಿರದ ಸಿಬ್ಬಂದಿಗೆ ಮೂರು ತಿಂಗಳಿನ...
ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್

ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಜುಲೈ ತಿಂಗಳ ಆರಂಭದಲ್ಲೇ ದೇಶದ ಜನತೆಗೆ ತೈಲ ಮಾರುಕಟ್ಟೆ ಕಂಪನಿಗಳು ಗುಡ್‌ನ್ಯೂಸ್ ನೀಡಿವೆ. 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ರೂ 60ರಷ್ಟು ಇಳಿಕೆ ಘೋಷಿಸಿರುವುದು ಸಾರ್ವಜನಿಕರಲ್ಲಿ ಸಂತಸ ತಂದಿದೆ.ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್‌, ಬಿಪಿಸಿಎಲ್ ಮತ್ತು ಎಚ್ಪಿಸಿಎಲ್ ಗಳು ಮಂಗಳವಾರದಿಂದಲೇ ಈ ಹೊಸ ದರ ಪ್ರಕಟಿಸಿವೆ. ಇಳಿಕೆಯಿಂದಾಗಿ ಹೋಟೆಲ್‌, ರೆಸ್ಟೋರೆಂಟ್‌, ವ್ಯಾಪಾರಿ ಬಳಕೆದಾರರಿಗೆ ತಾತ್ಕಾಲಿಕ ನಿರಾಳತೆ ಸಿಕ್ಕಂತಾಗಿದೆ.ಆದರೆ, ಗೃಹಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ....
ಆರೆಸ್ಸೆಸ್ ಬ್ಯಾನ್ ಬಗ್ಗೆ ಕಾಂಗ್ರೆಸ್ ನಾಯಕನ ಹೇಳಿಕೆಗೆ ಬಿಜೆಪಿ ಆಕ್ರೋಶ

ಆರೆಸ್ಸೆಸ್ ಬ್ಯಾನ್ ಬಗ್ಗೆ ಕಾಂಗ್ರೆಸ್ ನಾಯಕನ ಹೇಳಿಕೆಗೆ ಬಿಜೆಪಿ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 'ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?' ಎಂದು ಆರೆಸ್ಸೆಸ್ ಬ್ಯಾನ್ ಬಗ್ಗೆ ಹೇಳಿಕೆ ನೀಡಿದ್ದಾರೆ ಎನ್ನಲಾದ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದ್ದಾರೆ.ಶತಮಾನ ಪೂರೈಸಿರುವ ಲಕ್ಷಾಂತರ ಸ್ವಯಂಸೇವಕರನ್ನು ಹೊಂದಿರುವ ರಾಷ್ಟ್ರದ ಹಾಗೂ ವಿಶ್ವದ ಏಕೈಕ ಮಹಾನ್ ದೇಶಭಕ್ತರ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಪ್ರಖರ ಸತ್ಯವನ್ನು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಹತಾಶೆಯ ಮನಸ್ಸಿನ ಬಾಗಿಲ ಕಿಂಡಿಯಿಂದ ಇಣುಕಿ ನೋಡಲಿ ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.ರಾಷ್ಟ್ರೀಯ ಸ್ವಯಂಸೇವಕ ಸಂಘವು ಮಹಾನ್ ವೃಕ್ಷ, ಈ ವೃಕ್ಷವನ್ನು ಬೇರು ಸಮೇತ ಕಿತ್ತೊಗೆಯುತ್ತೇವೆಂದು ಶತಮಾನಗಳಿಂದಲೂ ವಿಕೃತ ಮನಸ್ಸಿನ ರಾಜಕೀಯ ಶಕ್ತಿಗಳು ವ್ಯರ್ಥ ಪ್ರಲಾಪ ಮಾಡುತ್ತಲೇ ಇವೆ. RSSನ ರಂಬೆ-ಕೊಂಬೆಗಳನ್ನೂ ಕೊಂಕಿಸಲಾಗದವರ ಸೊಲ್ಲಡಗಿ ದಿಕ್ಕು ಕಾಣದಂತೆ ಧೂಳಿಪಟವಾಗಿವೆ ಎಂದು ವಿಜಯೇಂದ್ರ ಅವರು ಪ್ರಿಯಾಂಕ್ ಖರ್ಗೆಗೆ ನೆನಪಿಸಿದರು.ಈ ಸಾಲಿಗೆ ಕಾಂಗ್ರೆಸ್ ಸೇರ್ಪಡೆಯಾಗಿರುವುದರಿಂದಲೇ ರಾಷ್ಟ್ರದ ರಾಜಕೀಯ ಭೂಪ...
ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಸ್ವ-ಸಹಾಯ ಗುಂಪುಗಳ (SHGs) ಮೂಲಕ ಬದಲಾವಣೆಯನ್ನು ಮುನ್ನಡೆಸುತ್ತಿರುವ, ಪರಂಪರೆಯನ್ನು ಸಂರಕ್ಷಿಸುತ್ತಿರುವ ಮತ್ತು ರಾಷ್ಟ್ರಕ್ಕೆ ಹೊಸ ಭವಿಷ್ಯವನ್ನು ರೂಪಿಸುತ್ತಿರುವ ಭಾರತದಾದ್ಯಂತ ಮಹಿಳೆಯರ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶ್ಲಾಘಿಸಿದ್ದಾರೆ.ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್‌'ನ 123 ನೇ ಸಂಚಿಕೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮಹಿಳೆಯರು ನೇತೃತ್ವದ ಉಪಕ್ರಮಗಳು 'ಮಹಿಳಾ ನೇತೃತ್ವದ ಅಭಿವೃದ್ಧಿ' ಆಂದೋಲನಕ್ಕೆ ಹೇಗೆ ಹೊಸ ಶಕ್ತಿಯನ್ನು ನೀಡುತ್ತಿವೆ ಎಂದರು."ನಮ್ಮ ಭಾರತವು ಪ್ರಾದೇಶಿಕ, ಭಾಷಾ ಮತ್ತು ಸಾಂಸ್ಕೃತಿಕ ವೈವಿಧ್ಯತೆಗೆ ಹೆಸರುವಾಸಿಯಾಗಿರುವಂತೆಯೇ, ಕಲೆ, ಕರಕುಶಲ ವಸ್ತುಗಳು ಮತ್ತು ಕೌಶಲ್ಯಗಳ ವೈವಿಧ್ಯತೆಯು ನಮ್ಮ ದೇಶದ ಉತ್ತಮ ಗುಣವಾಗಿದೆ" ಎಂದು ಮೋದಿ ಹೇಳಿದರು. 'ನೀವು ಯಾವುದೇ ಪ್ರದೇಶಕ್ಕೆ ಭೇಟಿ ನೀಡಿದರೂ, ನೀವು ಕೆಲವು ಸ್ಥಳೀಯ ವಿಶೇಷತೆಗಳ ಬಗ್ಗೆ ತಿಳಿದುಕೊಳ್ಳುತ್ತೀರಿ. ನಾವು ಮನ್ ಕಿ ಬಾತ್‌ನಲ್ಲಿ ದೇಶದ ಅಂತಹ ವಿಶಿಷ್ಟ ಉತ್ಪನ್ನಗಳ ಬಗ್ಗೆ ಆಗಾಗ್ಗೆ ಮಾತನಾಡುತ್ತೇವೆ' ಎಂದರು.ಅಂತಹ ಒಂದು ಉ...
ಕಾವೇರಿ ಆರತಿ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡಲ್ಲ ಎಂದ ಡಿಕೆ.ಶಿ

ಕಾವೇರಿ ಆರತಿ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡಲ್ಲ ಎಂದ ಡಿಕೆ.ಶಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: "ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, "ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ" ಎಂದು ಹೇಳಿದರು.ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, "ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ" ಎಂದು ವ್ಯಂಗ್ಯವಾಡಿದರು....