Monday, August 17

ವಿದೇಶ

ಜುಲೈ 3ರಿಂದ ರಾಜ್ಯದಲ್ಲಿ ಭಾರೀ ಮಳೆಯ ನಿರೀಕ್ಷೆ

ಜುಲೈ 3ರಿಂದ ರಾಜ್ಯದಲ್ಲಿ ಭಾರೀ ಮಳೆಯ ನಿರೀಕ್ಷೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜುಲೈ 3ರಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 3ರ ನಂತರ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಮುಂಜಾಗ್ರತೆಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯ ಸಾಧ್ಯತೆ ಇದ್ದು, ಅಲ್ಲಿಯೂ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.ಇನ್ನು ದಕ್ಷಿಣ ಹಾಗೂ ಉತ್ತರ ಒಳನಾಡಿನ ಬೆಂಗಳೂರಿನ ಗ್ರಾಮಾಂತರ ಮತ್ತು ನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ....
ಮೀಸಲಾತಿಗೆ ಬಿಜೆಪಿ ಬಗೆದಿರುವ ದ್ರೋಹವು ಐತಿಹಾಸಿಕ ಸತ್ಯ; ಬಿ.ಕೆ.ಹರಿಪ್ರಸಾದ್

ಮೀಸಲಾತಿಗೆ ಬಿಜೆಪಿ ಬಗೆದಿರುವ ದ್ರೋಹವು ಐತಿಹಾಸಿಕ ಸತ್ಯ; ಬಿ.ಕೆ.ಹರಿಪ್ರಸಾದ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮೀಸಲಾತಿಗೆ ಬಿಜೆಪಿ ಬಗೆದಿರುವ ದ್ರೋಹ ಹಾಗೂ ಹಿಂದುಳಿದವರಿಗೆ ಮಾಡಿರುವ ಅನ್ಯಾಯ ಇತಿಹಾಸದ ಮೀಸಲಾತಿ ಚರ್ಚೆಯ ಪ್ರತಿ ಪುಟಗಳಲ್ಲೂ, ಪ್ರತಿ ಪದಗಳಲ್ಲೂ ಅಚ್ಚಳಿಯದೇ ಉಳಿದಿರುವ ಸತ್ಯ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಈ ವಿಚಾರದಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಹಿಂದುಳಿದ ವರ್ಗಗಳ ಮೀಸಲಾತಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸಿ ತಮ್ಮ ಆತ್ಮಸಾಕ್ಷಿಗೂ ವಿರುದ್ಧ ಮಾತಾಡಿರುವುದು ಹಾಸ್ಯಾಸ್ಪದ ಎಂದವರು ಹೇಳಿದ್ದಾರೆ.ಪರಿಶಿಷ್ಟ ಜಾತಿ/ಪಂಗಡ ಹಾಗೂ ಹಿಂದುಳಿದ ಜಾತಿಗಳಿಗೆ ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಮೀಸಲಾತಿ ನೀಡುವುದಕ್ಕೆ ಕಾಂಗ್ರೆಸ್ ಪಕ್ಷ ಅಚಲವಾದ ನಿಲುವು ಹೊಂದಿದೆ.‌ ಆದರೆ ಮೀಸಲಾತಿಯ ಪರಮ ವಿರೋಧಿ ನಿಲುವು ಹೊಂದಿರುವ ಬಿಜೆಪಿ ಪಕ್ಷ ಇತಿಹಾಸ ತಿರುಚಲು ಹೊರಟಿದೆ ಎಂದವರು ಕಮಲ ನಾಯಕರ ನಿಲುವಿನ ಬಗ್ಗೆ ಕಟು ಟೀಕೆ ಮಾಡಿದ್ದಾರೆ.ಮಂಡಲ್ ಆಯೋಗದ ಶಿಫಾರಸ್ಸು ಜಾರಿಯಾಗಬಾರದೆಂದು ಪ್ರಭಲವಾಗಿ ವಿರೋಧ ಮಾಡಿದ್ದೇ ವಿ.ಪಿಸಿಂಗ್ ಸರ್ಕಾರದ ಭಾಗವೇ ಆಗಿದ್ದ ಬಿಜೆಪಿ ಪಕ್ಷ. ಮಂಡಲ್ ಆಯೋಗದ ವಿರುದ್ಧ ಕಮಂಡಲ ಹೋ...
‘RSS ಬಗ್ಗೆ ಟೀಕಿಸುವ ಮೊದಲು ನಿಮ್ಮನ್ನು ನೀವು ಆತ್ಮ ವಿಮರ್ಶೆ ಮಾಡಿಕೊಳ್ಳಿ’: ವಿಜಯೇಂದ್ರ

‘RSS ಬಗ್ಗೆ ಟೀಕಿಸುವ ಮೊದಲು ನಿಮ್ಮನ್ನು ನೀವು ಆತ್ಮ ವಿಮರ್ಶೆ ಮಾಡಿಕೊಳ್ಳಿ’: ವಿಜಯೇಂದ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುರಿತು ಟೀಕಿಸುವ ಮೊದಲು ನಿಮ್ಮನ್ನು ನೀವು ಆತ್ಮ ವಿಮರ್ಶೆ ಮಾಡಿಕೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.ಅಖಂಡ ಭಾರತ ನಿರ್ಮಾಣದ ಸಂಕಲ್ಪತೊಟ್ಟು ಜಾತಿರಹಿತ ಧರ್ಮ ಕಟ್ಟುವ ಮೌಲ್ಯ ಅಳವಡಿಸಿಕೊಂಡು, ರಾಷ್ಟ್ರೀಯತೆಯ ಸಿದ್ದಾಂತದೊಂದಿಗೆ ಲಕ್ಷಾಂತರ ತಪಸ್ವಿ ಹಾಗೂ ಸಮರ್ಪಣಾ ಕಾರ್ಯಕರ್ತರುಗಳ ಪರಿಶ್ರಮದಿಂದ ಬೃಹತ್ ವೃಕ್ಷದಂತೆ ಬೆಳೆದು ನಿಂತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುರಿತು ಟೀಕಿಸುವ ಮೊದಲು ನಿಮ್ಮನ್ನು ನೀವು ಆತ್ಮ ವಿಮರ್ಶೆ ಮಾಡಿಕೊಳ್ಳಿ ಎಂದವರು ಹೇಳಿದ್ದಾರೆ.ಸಮಾಜವಾದಿ ಮುಖವಾಡ ಧರಿಸಿ, ಜಾತ್ಯಾತೀತತೆಯ ಸೋಗಿನಲ್ಲಿ ಮುಸ್ಲಿಂ ಸಮುದಾಯದ ಓಲೈಕೆಯ ರಾಜಕಾರಣ ಮಾಡುತ್ತಿರುವ ನಿಮಗೆ ಸಂವಿಧಾನದ ಆಶಯ ಹಾಗೂ ಮೌಲ್ಯಗಳನ್ನು ಕುರಿತು ಮಾತನಾಡುವ ಯಾವ ನೈತಿಕ ಹಕ್ಕೂ ಇಲ್ಲ ಎಂದಿರುವ ಅವರು, ‘ಜಯಪ್ರಕಾಶ್ ನಾರಾಯಣರ ಚಳುವಳಿಯಿಂದ ಪ್ರೇರಿತರಾಗಿ ಸಮಾಜವಾದಿ ರಾಜಕಾರಣ ಆರಂಭಿಸಿದೆ’ ಎಂದು ಹೇಳಿಕೊಳ್ಳುವ ನೀವು ಭಾರತದ ಪ್ರಜಾಪ್ರಭುತ್ವದ ಕತ್ತು ಹಿಸುಕಿದ ಇಂದಿರಾ ಕಾಂಗ್ರೆಸ್ ಅನ್ನ...
ಪ್ರಕರಣಗಳಲ್ಲಿ ಸರ್ಕಾರಕ್ಕೆ ಹಿನ್ನಡೆ; ಎಎಜಿಗಳ ಬಗ್ಗೆ ಸಿಎಂ ಬೇಸರ

ಪ್ರಕರಣಗಳಲ್ಲಿ ಸರ್ಕಾರಕ್ಕೆ ಹಿನ್ನಡೆ; ಎಎಜಿಗಳ ಬಗ್ಗೆ ಸಿಎಂ ಬೇಸರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಹೈಕೋರ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ 20 ಸಾವಿರಕ್ಕೂ ಪ್ರಕರಣಗಳು ಹೈಕೋರ್ಟ್ ನಲ್ಲಿ ಬಾಕಿಯಿದ್ದು, 5 ಸಾವಿರಕ್ಕೂ ಹೆಚ್ಚು ಪ್ರಕರಣಗಳಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ,ಇದನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳಿಗೆ ಸಿಎಂ ಸೂಚಿಸಿದ್ದಾರೆ.ಅಡ್ವೊಕೇಟ್ ಜನರಲ್‌, ಕಾನೂನು ಸಚಿವರ ಉಪಸ್ಥಿತಿಯಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಕಾರ್ಯನಿರ್ವಹಣಾ ಸಭೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನ್ಯಾಯಾಲಯಗಳಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸದ ಕಾರಣಕ್ಕೆ ನಾವು ಹಲವು ಪ್ರಕರಣಗಳಲ್ಲಿ ಹಿನ್ನಡೆ ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಸರ್ಕಾರಕ್ಕೆ ಅನುಕೂಲಕರವಾದ ಕೇಸ್‌ಗಳಲ್ಲಿ ಸಹ ಸರ್ಕಾರದ ಪರವಾಗಿ ಆದೇಶಗಳು ಬರುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿರುವ ಸರ್ಕಾರದ ವಿರುದ್ಧದ ತಡೆಯಾಜ್ಞೆ ಪ್ರಕರಣಗಳನ್ನು ಆದಷ್ಟು ಬೇಗನೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು. ಇದೇ ವೇಳೆ ಅವರು ಸರ್ಕಾರೀ ವಕ...
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಮಂತ್ರಿ ಸ್ಥಾನ ತ್ಯಜಿಸಲು ಸಿದ್ಧ’:  ಸಚಿವ ಕೆ.ಎನ್. ರಾಜಣ್ಣ

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಮಂತ್ರಿ ಸ್ಥಾನ ತ್ಯಜಿಸಲು ಸಿದ್ಧ’:  ಸಚಿವ ಕೆ.ಎನ್. ರಾಜಣ್ಣ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: “ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ನಾನು ಸಚಿವ ಸ್ಥಾನ ತ್ಯಜಿಸಲು ಸಿದ್ಧ” ಎಂಬ ಸ್ಫೋಟಕ ಹೇಳಿಕೆಯನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ಗುರುವಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂಬುದು ಸತ್ಯ. ಅಧಿಕಾರವೇ ನನ್ನ ಗುರಿಯಲ್ಲ. however, ಪಕ್ಷ ಕೊಡುವ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿ ಜನರು ನನಗೆ ನೀಡಿದ್ದಾರೆ” ಎಂದು ಹೇಳಿದರು. ಇನ್ನು, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಬಹುಮಟ್ಟದ ಬದಲಾವಣೆ ಸಾಧ್ಯವೆಂದು ಮತ್ತೊಮ್ಮೆ ಪುನರಾವರ್ತಿಸಿದ ಸಚಿವರು, "ಸಿಎಂ ಸ್ಥಾನ ಬದಲಾಯಿಸುವ ಕುರಿತು ನಾನು ಯಾವುದೇ ನಿಖರ ಹೇಳಲಾಗದು. ಆದರೆ ರಾಜಕೀಯ ಎಂದರೆ ನಿಂತ ನೀರಲ್ಲ; ಅದು ಸದಾ ಹರಿಯುವ ನದಿ" ಎಂದು ತತ್ವಬದ್ಧವಾಗಿ ಹೇಳಿದರು. "ಆಗಸ್ಟ್‌ನಲ್ಲಿ ಕ್ರಾಂತಿ ನಡೆಯಲಿದೆ" ಎಂಬ ನಿಮ್ಮ ಹೇಳಿಕೆಯ ತಾತ್ಪರ್ಯ ಏನು? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, "ಹೆಚ್ಚು ಹೇಳಿದರೆ ಆಸಕ್ತಿ ಹೋಗಿಬಿಡುತ್ತದೆ. ಅದು ಪಕ್ಷದ ಅಥವಾ ಸರ್ಕಾರದ ಮಟ್ಟದಲ್ಲಿ ನಡೆಯುವ ಬದಲಾವಣೆ ಆಗಬಹ...
ವೇತನ ತಾರತಮ್ಯ ವಿರೋಧಿಸಿ ಆಶಾ ಕಾರ್ಯಕತೆಯರಿಂದ ಮತ್ತೊಮ್ಮೆ ಹೋರಾಟ

ವೇತನ ತಾರತಮ್ಯ ವಿರೋಧಿಸಿ ಆಶಾ ಕಾರ್ಯಕತೆಯರಿಂದ ಮತ್ತೊಮ್ಮೆ ಹೋರಾಟ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವೇತನ ವಿಚಾರದಲ್ಲಿನ ತಾರತಮ್ಯ ವಿರೋಧಿಸಿ ರಾಜ್ಯದ ಆಶಾ ಕಾರ್ಯಕತೆಯರು ಮತ್ತೊಮ್ಮೆ ಹೋರಾಟದ ಅಖಾಡಕ್ಕೆ ಧುಮುಕಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ (ಜೂನ್ 26) ಆಶಾ ಕಾರ್ತೆಯರು ಪ್ರತಿಭಟನೆ ನಡೆಸಿ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಜಮಾಯಿಸಿದ ನೂರಾರು ಆಶಾ ಕಾರ್ಯಕರ್ತೆಯರು, ವೇತನ ವಿಚಾರದಲ್ಲಿ ತಮ್ಮನ್ನು ಶೋಷಣೆಗೆ ಒಳಪಡಿಸುತ್ತಿರುವ ರಾಜ್ಯ ಸರ್ಕಾರ ಇದೀಗ 'ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ' ಹೆಸರಿನಲ್ಲೂ ಆಶಾ ಕಾರ್ಯಕರ್ತೆಯರಿಗೆ ಅನ್ಯಾಯ ಎಸಗುತ್ತಿದೆ ಎಂಬ ಆರೋಸಿದರು.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ 'ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ 2025' ನಡೆಯುತ್ತಿದ್ದು, ಆಶಾ ಕಾರ್ಯಕರ್ತೆಯರನ್ನು ಈ ಜಾತಿ ಗಣತಿ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲಾಗಿದೆ. ಆದರೆ ಸಮೀಕ್ಷೆಗೆ ನಿಗದಿಯಾಗಿರುವ ಭತ್ಯೆಯನ್ನು ನೀಡದೆ ಆಶಾ ಕಾರ್ಯಕರ್ತೆಯರಿಂದ ಬಿಟ್ಟಿ ಚಾಕರಿ ಮಾಡಿಸಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉಪಾಧ್ಯಕ್ಷೆ ಟಿ.ಸಿ.ರಮ್ಯಾ ಆ...
ಕಲಬುರಗಿ ನಗರದ 31 ಉದ್ಯಾನವನ, 4 ಕೆರೆ ಹಾಗೂ 23 ಸರ್ಕಲ್ ಗಳ ಮರು ನಿರ್ಮಾಣಕ್ಕೆ ಕ್ರಮ

ಕಲಬುರಗಿ ನಗರದ 31 ಉದ್ಯಾನವನ, 4 ಕೆರೆ ಹಾಗೂ 23 ಸರ್ಕಲ್ ಗಳ ಮರು ನಿರ್ಮಾಣಕ್ಕೆ ಕ್ರಮ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕಲಬುರಗಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಸಾಮಾಜಿಕ ಆರ್ಥಿಕ ಹಾಗೂ ಸಮಾಜಿಕ ನ್ಯಾಯವನ್ನು ಸಮಾಜದ‌ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.ಕಲಬುರಗಿ ನಗರದ ಪೂಜ್ಯ ಬಸವರಾಜಪ್ಪ ಅಪ್ಪಾ ಸ್ಮರಣಾರ್ಥ ಭವನದಲ್ಲಿ ನಡೆದ 935 ಪಾಲಿಕೆಯ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಪಾಲಿಕೆಯಿಂದ ನೇರ ವೇತನ ಪಾವತಿ ಆದೇಶ ಪತ್ರ ವಿತರಣೆ, ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಪತ್ರ ಹಾಗೂ ಕ್ರೋಮ್ ಬುಕ್ ವಿತರಣೆ, ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿದ ಅವರು, ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಚಿವರು ಸಾಂಕೇತಿಕ ವಾಗಿ ನೇಮಕಾತಿ ಪತ್ರ ವಿತರಿಸಿದರು. ಜೊತೆಗೆ ಹೊಲಿಗೆ ಯಂತ್ರ ಹಾಗೂ ತ್ರಿಚಕ್ರ ವಾಹನಗಳ ವಿತರಣೆ ಮಾಡಿದರು.ಕಾಂಗ್ರೆಸ್ ಪಕ್ಷದ ಸಿದ್ದಾಂತ ಹಾಗೂ ಸರ್ಕಾರ ಬದ್ಧತೆಯಿಂದಾಗಿ ನಾವು ಇಂದು ನಿಮಗೆಲ್ಲ ನೇಮಕಾತಿ ಆದೇಶ ವಿತರಿಸಿ ಕೊಟ್ಟ ಮಾತಿನಂತೆ ನಡೆದುಕೊ...
ಸರ್ಕಾರದ ವಿರುದ್ಧ ಪಾಲಿಕೆ ನೌಕರರ ಹೋರಾಟ; ಜುಲೈ 7ರಂದು ಪ್ರತಿಭಟನೆ

ಸರ್ಕಾರದ ವಿರುದ್ಧ ಪಾಲಿಕೆ ನೌಕರರ ಹೋರಾಟ; ಜುಲೈ 7ರಂದು ಪ್ರತಿಭಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯದ 10 ಮಹಾನಗರ ಪಾಲಿಕೆಗಳ ಅಧಿಕಾರಿ ಹಾಗೂ ನೌಕರರು ಜುಲೈ 7ರಂದು ಸಾಮೂಹಿಕ ರಜೆ ಪಡೆದು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.ಬೆಂಗಳೂರು ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಸಾವಿರಾರು ನೌಕರರ ಭಾಗವಹಿಸುವ ನಿರೀಕ್ಷೆ ಇದೆ ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು (ರಿ) ಅಧ್ಯಕ್ಷ ಎ. ಅಮೃತ್ ರಾಜ್ ಮಾಹಿತಿ ನೀಡಿದ್ದಾರೆ.ವಿವಿಧ ಬೇಡಿಕೆಗಳ ಬಗ್ಗೆ ನಗರಾಭಿವೃದ್ಧಿ ಸಚಿವರು ಹಾಗೂ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ನೌಕರರ ಪರ ಸಂಘಟನೆಯು ಈ ಬಾರಿ ಪ್ರತಿಭಟನೆ ಮೂಲಕ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಿದ್ದು, ನಗರಾಭಿವೃದ್ಧಿ ಇಲಾಖೆಯಿಂದ ಸ್ಪಷ್ಟ ಭರವಸೆ ಬಾರದ ಹಿನ್ನಲೆಯಲ್ಲಿ ಹೋರಾಟ ನಡೆಸಲಾಗುತ್ತಿದೆ ಎಂದವರು ತಿಳಿಸಿದ್ದಾರೆ. ಪ್ರಮುಖ ಬೇಡಿಕೆಗಳು: ಮಹಾನಗರ ಪಾಲಿಕೆ ನೌಕರರಿಗೆ ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿರುವಂತೆ 7ನೇ ವೇತನ ಆಯೋಗದ ಸೌಲಭ್ಯ ನೀಡಬೇಕು.ಆರ್ಥಿ...
ರಾಜ್ಯದ ಏಳು ಬಿಲ್‌ಗಳಿಗೆ ಅನುಮೋದನೆ ನೀಡುವಂತೆ ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

ರಾಜ್ಯದ ಏಳು ಬಿಲ್‌ಗಳಿಗೆ ಅನುಮೋದನೆ ನೀಡುವಂತೆ ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್‌ಗಳಿಗೆ ಅನುಮೋದನೆ ನೀಡುವಂತೆ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವ್ರು ರಾಷ್ಟ್ರಪತಿಯನ್ನು ಮಂಗಳವಾರ ಭೇಟಿ ಮಾಡಿ ಚರ್ಚಿಸಿದ್ದಾರೆ. ಬಿಲ್‌ಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ.ರಾಷ್ಟ್ರಪತಿಗಳು ಹಾಗೂ ಕೇಂದ್ರ ವಿತ್ತ ಸಚಿವರ ಭೇಟಿಯ ನಂತರ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14ನೇ ಹಣಕಾಸು ಆಯೋಗದಲ್ಲಿ 4.7% ತೆರಿಗೆ ಹಂಚಿಕೆಯಾಗಿತ್ತು. 15ನೇ ಹಣಕಾಸು ಆಯೋಗದಲ್ಲಿ 3.6% ಆಗಿದೆ. ಶೇಕಡಾ 1.1% ಕಡಿಮೆಯಾಗಿದ್ದು, ಇದು ಒಟ್ಟಾರೆ ಅನುದಾನ ಹಂಚಿಕೆಯಲ್ಲಿ ಶೇ. 23% ಗಿಂತಲೂ ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು...