
ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ; ಜನ ಆತಂಕ ಪಡುವ ಅಗತ್ಯವಿಲ್ಲ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ಬೆಂಗಳೂರಿನ ವಿಕಾಸಸೌಧದಲ್ಲಿ ಕೋವಿಡ್ ಮುನ್ನೆಚ್ಚರಿಕಾ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗೋಷ್ಠಿ ನಡೆಸಿದರು. ಕೋವಿಡ್ ಪ್ರಕರಣಗಳು ದಿನದಿಂದ ಹೆಚ್ಚಾಗುತ್ತಿದೆ. ಆದರೆ ಇದರ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ. ಗರ್ಭಿಣಿ ಹೆಣ್ಣು ಮಕ್ಕಳು ಮಾಸ್ಕ್ ಬಳಕೆ ಮಾಡಬೇಕು. ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದೆ. ಜನರು ಕೂಡ ನಮ್ಮೊಂದಿಗೆ ಕೈ ಜೋಡಿಸಬೇಕು ಎಂದು ಸಚಿವರು ತಿಳಿಸಿದರು.ಶಾಲೆಗಳು ಬೇಸಿಗೆ ರಜೆ ಬಳಿಕ ಪ್ರಾರಂಭವಾಗುತ್ತದೆ. ವಿದ್ಯಾರ್ಥಿಗಳಿಗೆ ಜ್ವರ, ಶೀತ, ಕೆಮ್ಮು ಇದ್ದರೆ ಶಾಲೆಗಳಿಗೆ ಕಳುಹಿಸಿಕೊಡಬಾರದು. ಒಂದು ವೇಳೆ ಶಾಲೆಯಲ್ಲಿ ಮಕ್ಕಳಿಗೆ ...








