Monday, August 17

ವಿದೇಶ

ಹೆಚ್ಚುತ್ತಿರುವ ಕೊರೋನಾ ಸೋಂಕು; ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸಿದ್ದರಾಮಯ್ಯ ಸಲಹೆ

ಹೆಚ್ಚುತ್ತಿರುವ ಕೊರೋನಾ ಸೋಂಕು; ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸಿದ್ದರಾಮಯ್ಯ ಸಲಹೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದೇಶದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂಗಾಪುರ ಮತ್ತು ಹಾಂಗ್ ಕಾಂಗ್‌ನಂತಹ ದೇಶಗಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವುದನ್ನು ಉಲ್ಲೇಖಿಸಿದ್ದಾರೆ. ವಿದೇಶದಿಂದ ಬರುವ ಪ್ರಯಾಣಿಕರನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ಹೊರಹಾಕಿದರು.'ಇಲ್ಲಿಯೂ ಕೋವಿಡ್ -19 ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ. ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು' ಎಂದು ಅವರು ಹೇಳಿದರು...
ಬೆಂಗಳೂರಿನಲ್ಲಿ 20 ದಿನಗಳಲ್ಲಿ ಕೋವಿಡ್ ಪ್ರಕರಣ ಏರಿಕೆ; ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರಿನಲ್ಲಿ 20 ದಿನಗಳಲ್ಲಿ ಕೋವಿಡ್ ಪ್ರಕರಣ ಏರಿಕೆ; ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಳೆದ 20 ದಿನಗಳಲ್ಲಿ ಬೆಂಗಳೂರಿನಲ್ಲಿ ಕೋವಿಡ್ -19 ಸೋಂಕಿನ ಪ್ರಮಾಣ ಹೆಚ್ಚಳವಾಗಿದ್ದು, ಕರ್ನಾಟಕ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ, 'ಈ ವರ್ಷ ಕರ್ನಾಟಕದಲ್ಲಿ ಇದುವರೆಗೆ 35 ಕೋವಿಡ್ -19 ಪ್ರಕರಣಗಳನ್ನು ನಾವು ನೋಡಿದ್ದೇವೆ, ಅದರಲ್ಲಿ 32 ಬೆಂಗಳೂರಿನಿಂದ ಬಂದಿವೆ' ಎಂದು ಹೇಳಿದ್ದಾರೆ. ಆದಾಗ್ಯೂ, ಕಳೆದ 20 ದಿನಗಳಲ್ಲಿ ಕ್ರಮೇಣ ಹೆಚ್ಚಳ ಕಂಡುಬಂದಿದೆ, ಆದರೂ ಯಾವುದೇ ಗಂಭೀರ ಪರಿಸ್ಥಿತಿ ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.ಸಾರ್ವಜನಿಕರು ಕೋವಿಡ್ -19 ಸೂಕ್ತ ನಡವಳಿಕೆಯನ್ನು ಪೂರ್ವಭಾವಿಯಾಗಿ ಪಾಲಿಸುವುದು ಸೂಕ್ತ ಎಂದಿರುವ ಸಚಿವರು, ಜನದಟ್ಟಣೆಯ ಪ್ರದೇಶಗಳಿಗೆ ಭೇಟಿ ನೀಡುವಾಗ ಗರ್ಭಿಣಿಯರು, ಮಕ್ಕಳು, ರೋಗನಿರೋಧಕ ಶಕ್ತಿ ಕಡಿಮೆ ಇರುವ ವ್ಯಕ್ತಿಗಳು ಮತ್ತು ಸಹವರ್ತಿ ಸ್ಥಿತಿಗಳನ್ನು ಹೊಂದಿರುವವರು ಫೇಸ್ ಮಾಸ್ಕ್ ಧರಿಸಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ಬಳಸುವಂತಹ ಕ್ರಮಗಳನ್ನು ಸಹ ಅನುಸರಿಸಬಹುದು. ತೀವ್ರ ಉಸಿರಾಟದ ಕಾಯಿಲೆ ಇರುವವರು (SARI) ಸಕಾಲ...
ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೈವಿಧ್ಯ
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ 'ಕಾವೇರಿ ಆರತಿ' ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ವಿಶೇಷ ಗೀತೆಯೊಂದನ್ನು ರಚಿಸಲು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಜಲಮಂಡಳಿ ಮತ್ತು ಕಾವೇರಿ ಆರತಿ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಶ್ರೀ ಸಾಧು ಕೋಕಿಲ ಹಾಗೂ ಶ್ರೀ ಅರ್ಜುನ್ ಜನ್ಯ ಅವರಿಗೆ ಪತ್ರ ಬರೆದಿದ್ದಾರೆ.ರಾಜ್ಯ ಸರ್ಕಾರವು ಕಾವೇರಿ ಆರತಿಯನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಾತ್ಮಕವಾಗಿ ಶ್ರೀಮಂತಗೊಳಿಸುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಜಾನಪದ ಸೊಬಗು, ಧಾರ್ಮಿಕತೆಯ ಮೆರಗು ಹಾಗೂ ಭಕ್ತಿ ಭಾವದಿಂದ ಕೂಡಿರುವ ಗೀತೆಯನ್ನು ರಚಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಬದಲಾದ ಕಾಲಘಟ್ಟಕ್ಕೆ ಹೊಂದಿಕೊಳ್ಳುವಂತೆ, ವರ್ಣರಂಜಿತವಾಗಿ ಮೂಡಿಬರಲಿರುವ ಈ ಗೀತೆಯು ಕಾವೇರಿ ಮಾತೆಯ ಸಂಪೂರ್ಣ ಚಿತ್ರಣವನ್ನು ಕಣ್ಣಿಗೆ ಕಟ್ಟುವಂತಿರಬೇಕು. ಕಾವೇರಿ ಮಾತೆಯ ಪರಂಪರೆಯನ್ನು ಉಳಿಸುವುದರ ಜೊತೆಗೆ, ಜಲ ಶ್ರೀಮಂತಿಕೆ ಸಹಿತ ಕಾವೇರಿ ವೈಭವವನ್ನು ದೇಶ ವಿದೇಶಗಳಿಗೆ...
‘ಎಲ್ಲೆ ಮೀರಿ ಭಾಷೆ ಬಳಸಿ ಟೀಕೆ ಮಾಡುವ ಸಂಪ್ರದಾಯ ಕೈಬಿಡಿ’; ಬಿಜೆಪಿ ನಾಯಕರಿಗೆ ರಮೇಶ್ ಬಾಬು ಕಿವಿಮಾತು

‘ಎಲ್ಲೆ ಮೀರಿ ಭಾಷೆ ಬಳಸಿ ಟೀಕೆ ಮಾಡುವ ಸಂಪ್ರದಾಯ ಕೈಬಿಡಿ’; ಬಿಜೆಪಿ ನಾಯಕರಿಗೆ ರಮೇಶ್ ಬಾಬು ಕಿವಿಮಾತು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 'ಎಲ್ಲೆ ಮೀರಿ ಭಾಷೆ ಬಳಸಿ ಟೀಕೆ ಮಾಡುವ ಸಂಪ್ರದಾಯ ಕೈಬಿಡಿ' ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಿವಿಮಾತು ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಬಾಬು, ಯಾವುದೇ ಪಕ್ಷವಾದರೂ ಎಲ್ಲೆಯನ್ನು ಮೀರಿ ಭಾಷೆಯನ್ನು ಬಳಸಿ ಟೀಕೆ ಮಾಡುವ ಸಂಪ್ರದಾಯ ನಮ್ಮ‌ ರಾಜ್ಯದಲ್ಲಿ ಇಲ್ಲ. ಆದರೆ ಕಳೆದ ಐದಾರು ವರ್ಷಗಳಿಂದ ಭಾರತೀಯ ಜನತಾ ಪಕ್ಷದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳವಾಗಿದೆ. ಟೀಕೆ ಮಾಡಿದರೆ ರಾತ್ರೋರಾತ್ರಿ ನಾಯಕರಾಗಬಹುದು ಎಂದು ತರಬೇತಿ ಪಡೆಯುತ್ತಿದ್ದಾರೆ. ಈ ತರಬೇತಿಯನ್ನು ಕೇಶವ ಕೃಪಾ, ಬೈಠಕ್ ಹೀಗೆ ಎಲ್ಲಿ ನೀಡಲಾಗುತ್ತಿದೆ ಎಂದು ಸಂಘ- ಪರಿವಾರದವರೇ ಹೇಳಬೇಕು ಎಂದು ಪ್ರತಿಪಾದಿಸಿದರು.ಸದಾ ವತ್ಸಲೇ ಮಾತೃಭೂಮಿ ಎಂದು ರಾಜಕೀಯ ಮಾಡುತ್ತಿದ್ದವರು ಈಗ ಸದಾ ಬೈಯುವುದೇ ರಾಜಕೀಯ ಎಂದುಕೊಂಡಿದ್ದಾರೆ. ಇದಲ್ಲೆ ಛಲವಾದಿ ನಾರಾಯಣಸ್ವಾಮಿ ಅವರೇ ಉದಾಹರಣೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ದುರ್ಬಲ ವಿರೋಧ ಪಕ್ಷ ಎಂದರೆ ಅದು ಬಿಜೆಪಿ. ಎರಡೂ ಮನೆಗಳಲ್ಲಿ ಅತ್ಯಂತ ಬೌದ್ದಿಕ ಹೀನರಾಗಿ ಕೆ...
ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಕ್ಕೆ ವ್ಯಾಪಕ ಆಕ್ರೋಶ

ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಕ್ಕೆ ವ್ಯಾಪಕ ಆಕ್ರೋಶ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ರಾಜ್ಯದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ತೆಲುಗು ನಟಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಎರಡು ವರ್ಷ 2 ದಿನಕ್ಕೆ ತಮ್ಮನ್ನಾ ಜೊತೆ ಬರೋಬ್ಬರಿ 6.20 ಕೋಟಿ ರೂಪಾಯಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕದ ಉತ್ಪನ್ನಕ್ಕೆ ಕನ್ನಡ ನಟ ನಟಿಯರನ್ನೇ ಆಯ್ಕೆ ಮಾಡಬೇಕೆಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸಿವೆ.ಇದೇ ವೇಳೆ, ತಮ್ಮನ್ನಾ ಆಯ್ಕೆಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡವರನ್ನೇ ಆಯ್ಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಪ್ರಾಥಮಿಕ ಗ್ರಾಹಕರು ಕರ್ನಾಟಕದ ಕನ್ನಡಿಗರಾಗಿದ್ದಾರೆ. ಕನ್ನಡ ನಟಿಯರನ್ನ ಹಾಕೊಂಡ್ರೆ ಲಾಭ ಬರಲ್ವಾ ಎಂದು ಪ್ರಶ್ನಿಸಿರುವ ನಾರಾಯಣ ಗೌಡ, ಮೈಸೂರು ಸ್ಯಾಂಡಲ್ ಸೋಪ್ ಕಂಪನಿ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂ. ತೆತ...
ಕೊರೋನಾ ತಲ್ಲಣ: ರಾಜ್ಯದಲ್ಲಿ ಮತ್ತೆ 33 ಸೋಂಕಿನ ಪ್ರಕರಣಗಳು ಪತ್ತೆ

ಕೊರೋನಾ ತಲ್ಲಣ: ರಾಜ್ಯದಲ್ಲಿ ಮತ್ತೆ 33 ಸೋಂಕಿನ ಪ್ರಕರಣಗಳು ಪತ್ತೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೆಲವು ವರ್ಷಗಳ ಹಿಂದೆ ತಲ್ಲಣ ಸೃಷ್ಟಿಸಿದ್ದ ಕೊರೋನಾ ವೈರಸ್ ಹಾವಳಿ ಮತ್ತೆ ಕಾಣಿಸಿಕೊಂಡಿದೆ. ಕೊರೊನಾ ವೈರಸ್​​ನ ಹೊಸ ತಳಿ JN.1 ಆತಂಕ ಹುಟ್ಟಿಸುತ್ತಿದೆ. ಸಿಂಗಾಪುರ, ಹಾಂಕಾಂಗ್‌ನಲ್ಲಿ ತಲ್ಲಣ ಎಬ್ಬಿಸಿರುವ ಕೊರೊನಾ ಹೊಸ ತಳಿ ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿದೆ.ಕರ್ನಾಟಕದಲ್ಲಿ ಜನವರಿಯಲ್ಲಿ ಮೂರು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಇದೀಗ ಈ ತಿಂಗಳಲ್ಲಿ 33 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ ಎನ್ನಲಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ 16 ಸಕ್ರಿಯ ಪ್ರಕರಣಗಳಿವೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ, ಭಾರತದಲ್ಲಿ ಸದ್ಯ ಸಕ್ರಿಯ ಕೊವಿಡ್ ಕೇಸ್‌ಗಳ ಸಂಖ್ಯೆ 257 ಇದೆ ಎನ್ನಲಾಗಿದ್ದು, ಆಸ್ಪತ್ರೆಗಳಲ್ಲಿ ಇನ್‌ಫ್ಲುಯೆಂಜಾ ಮಾದರಿ ಅನಾರೋಗ್ಯ ಮತ್ತು ತೀವ್ರವಾದ ಉಸಿರಾಟದ ಸೋಂಕುಗಳ ಪ್ರಕರಣಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ....
ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಕಳಪೆ ಕಾಮಗಾರಿ ಮೂಲಕ ರಾಜ್ಯದ ಜನತೆಗೆ ವಂಚಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಲೇ ಇದ್ದಾರೆ. ಇದೇ ಸಂದರ್ಭದಲ್ಲಿ, ವೀಡಿಯೋವೊಂದನ್ನು ಹಂಚಿಕೊಂಡಿರುವ ಬಿಜೆಪಿ ರಾಜ್ಯದಲ್ಲಿನ ಕಳಪೆ ಕಾಮಗಾರಿಯನ್ನು ಅನಾವರಣ ಮಾಡಿದೆ. ಕರ್ನಾಟಕದ ಭ್ರಷ್ಟ @INCKarnataka ಸರ್ಕಾರ 80 ಪರ್ಸೆಂಟ್‌ ಕಮಿಷನ್‌ ಸರ್ಕಾರ ಅನ್ನೊದಕ್ಕೆ ಇಲ್ಲಿದೆ ಪುರಾವೆ!! ಇದು ಮಡಿಕೇರಿಯಲ್ಲಿ ನಡೆದಿರುವ ರಸ್ತೆ ಕಾಮಗಾರಿ ಅಂತೆ, ಮಲಗಿ ಎದ್ದ ಮೇಲೆ ಹಾಸಿಗೆಯನ್ನು ಮಡಚಿಟ್ಟ ರೀತಿ, ಡಾಂಬರ್‌ ರಸ್ತೆಯನ್ನು ಸಾರ್ವಜನಿಕರು ಮಡಚುತ್ತಿದ್ದಾರೆ.ಸಿದ್ದರಾಮಯ್ಯ ಅವರೆ, ನಿಮ್ಮ ಸರ್ಕಾರ 80 ಪರ್ಸೆಂಟ್‌ ಕಮಿಷನ್… pic.twitter.com/wLj9TJFuWB— BJP Karnataka (@BJP4Karnataka) May 21, 2025ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರ್ಕಾರ 80 ಪರ್ಸೆಂಟ್‌ ಕಮಿಷನ್‌ ಸರ್ಕಾರ ಅನ್ನೊದಕ್ಕೆ ಇಲ್ಲಿದೆ ಪುರಾವೆ ಎಂದು ಸಾಮಾಜಿಕ ಮಾಧ್ಯಮ 'X'ನಲ್ಲಿ ಬರೆದುಕೊಂಡಿರುವ ಬಿಜೆಪಿ, 'ಇದು ಮಡಿಕೇರಿಯಲ್ಲಿ ನಡೆದಿರುವ ರಸ್ತೆ ಕಾಮಗಾರಿ ಅಂತೆ, ಮಲಗಿ ಎದ್ದ ಮೇಲೆ ಹಾಸಿಗೆಯನ್ನು ಮಡಚಿಟ್ಟ ರೀತಿ,...
ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ದಿಗ್ಬಂಧನ: ಬಿಜೆಪಿ ಖಂಡನೆ

ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ದಿಗ್ಬಂಧನ: ಬಿಜೆಪಿ ಖಂಡನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಾಂವಿಧಾನಿಕ ಹುದ್ದೆ ವಿಪಕ್ಷದ ನಾಯಕ ಸ್ಥಾನದಲ್ಲಿರುವ ಶೋಷಿತ ಸಮುದಾಯಗಳ ನಾಯಕರೂ ಆದ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಚಿತ್ತಾಪುರದ ಅತಿಥಿ ಗೃಹದಲ್ಲಿ ದಿಗ್ಬಂಧನದಲ್ಲಿರಿಸಿದ್ದ ಘಟನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ನಾರಾಯಣಸ್ವಾಮಿಯವರು ಕಾಂಗ್ರೆಸ್ ಗೂಂಡಾ ಬೆಂಬಲಿಗರ ದಿಗ್ಭಂದನ ಅನುಭವಿಸಿದ್ದು ಕರ್ನಾಟಕದಲ್ಲಿ ಪಾಳೆಗಾರಿಕೆ ಸಂಸ್ಕೃತಿಯ ಜೀವಂತಿಕೆಯನ್ನು ಪ್ರತಿಬಿಂಬಿಸಿದೆ ಎಂದವರು ಪ್ರತಿಕ್ರಿಯಿಸಿದ್ದಾರೆ.ಪೊಲೀಸರು ವಿಪಕ್ಷದ ನಾಯಕರೊಬ್ಬರಿಗೆ ರಕ್ಷಣೆ ನೀಡಲಾರದ ಪರಿಸ್ಥಿತಿ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಟೀಕೆ- ಟಿಪ್ಪಣಿಗಳನ್ನು ಆರೋಗ್ಯಕರ ಮನಸ್ಸಿನಿಂದ ಸ್ವೀಕರಿಸಬೇಕು, ಅದಕ್ಕೆ ಸಮರ್ಥವಾಗಿ ಪ್ರತ್ಯುತ್ತರ ನೀಡಬೇಕು ಇದು ಪ್ರಜಾಪ್ರಭುತ್ವದ ಸುಂದರತೆ ಹಾಗೂ ರಾಜಕಾರಣ ಸಂಸ್ಕೃತಿಯ ಧ್ಯೋತಕವಾಗುತ್ತದೆ ಎಂದು ವಿಜಯೇಂದ್ರ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. ಕಲಬುರ್ಗಿ ಜಿಲ್ಲೆ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯ ಸರ್ವಾಧಿಕಾರಿ ನೆರಳಿನಲ್ಲಿ ಬಂದವರ ಕಪಿಮುಷ್ಠಿಯಲ್ಲಿದೆ. ಇಲ್ಲಿ ಪ್ರಜಾಪ್...
‘ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ’; ಪ್ರಿಯಾಂಕ್ ಆರೋಪ

‘ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ’; ಪ್ರಿಯಾಂಕ್ ಆರೋಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 'ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ ಅಸಹಾಯಕ ಸ್ಥಿತಿಯಲ್ಲಿರುವ ಬಿಜೆಪಿಯವರು ನನ್ನ ವಿರುದ್ಧದ ವೈಯಕ್ತಿಕ ದಾಳಿಯಲ್ಲಿ ತೃಪ್ತಿ ಕಾಣುತ್ತಿದ್ದಾರೆ' ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.'ಬಿಜೆಪಿಯವರ ದ್ವೇಷದ ಹೇಳಿಕೆಗಳು ನನಗೆ ಹೊಸದಲ್ಲ, ನಾನು ಇವರ ಹಗರಣಗಳನ್ನು ಬಯಲಿಗಿಟ್ಟಿದ್ದೇ ಈ ವೈಯಕ್ತಿಕ ನಿಂದನೆಗಳಿಗೆ ಕಾರಣ ಎನ್ನುವುದೂ ನನಗೆ ತಿಳಿದಿದೆ ಎಂದವರು ಬಿಜೆಪಿ ನಾಯಕರ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಗಂಗಾ ಕಲ್ಯಾಣ ಹಗರಣ, ಬಿಟ್ ಕಾಯಿನ್ ಹಗರಣ, KKRDB ಹಗರಣ, ಕೋವಿಡ್ ಹಗರಣ, PSI ಹಗರಣಗಳನ್ನು ಜನರ ಮುಂದಿಟ್ಟಿದ್ದನ್ನು ಬಿಜೆಪಿಗರಿಗೆ ಸಹಿಸಲಾಗುತ್ತಿಲ್ಲ. RSS ನವರನ್ನು ಸೈದ್ದಂತಿಕ ನೆಲೆಗಟ್ಟಿನಲ್ಲಿ ಬೆತ್ತಲುಗೊಳಿಸುತ್ತಿರುವುದೂ ಸಹ ಬಿಜೆಪಿಗರ ಈ ಅಸಹನೆಗೆ ಪ್ರಮುಖ ಕಾರಣ ಎಂದು ಪ್ರಿಯಾಂಕ್ ಖರ್ಗೆ ದೂರಿದ್ದಾರೆ.ಸಾಮಾಜಿಕ ಮಾಧ್ಯಮ 'X'ನಲ್ಲಿ ಪೋಸ್ಟ್ ಹಾಕಿರುವ ಪ್ರಿಯಾಂಕ್ ಖರ್ಗೆ, 'ಈ ಹಿಂದೆ ಕಾನ್ವೆಂಟ್ ದಲಿತ ಎಂದಿದ್ದಾರೆ. ಪ್ರಿಯಾಂಕ್ ಎನ್ನುವ ಹೆಸರು ಹೆಣ್ಣೋ ಗಂಡೋ ಗೊತ್ತಿಲ್ಲ ಎಂದಿದ್ದಾರೆ. ದೇಹ ಬೆಳದಿ...
ರಾಜೀವ್ ಗಾಂಧಿ ಪುಣ್ಯಸ್ಮರಣೆ; ದಿವಂಗತ ಮಾಜಿ ಪ್ರಧಾನಿಗೆ ನಾಯಕರಿಂದ ನಮನ

ರಾಜೀವ್ ಗಾಂಧಿ ಪುಣ್ಯಸ್ಮರಣೆ; ದಿವಂಗತ ಮಾಜಿ ಪ್ರಧಾನಿಗೆ ನಾಯಕರಿಂದ ನಮನ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು.ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವ ಕೆ ಎಚ್ ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಹರಿಯಾಣ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬಿ ಕೆ ಹರಿಪ್ರಸಾದ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್ ಸಿಂಗ್, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು....