
ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ.They can’t clear waterlogged roads or fallen trees after a single downpour, but they want to dig tunnels costing ₹48,000 crore to “solve” Bengaluru’s traffic? Maybe the tunnel’s real purpose is to serve as a water reservoir. pic.twitter.com/yNQRHgWeF6
— P C Mohan (@PCMohanMP) May 19, 2025ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ "ಬ್ರಾಂಡ್ ಬೆಂಗಳೂರು"ನ ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಸಿಎಂ, ಡಿಸಿಎಂ ಮತ್ತು ಸಚಿವರು ಸಾಧನಾ ಸಮಾವೇಶದಲ್ಲಿ ಮೆರೆದಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಮಟ್ಟದಲ್ಲಿ ಅಪಮಾನ
ಹಿಂದಿನ ವರ್ಷದ ಲೋಪಗಳಿಂ...









