Monday, August 17

ವಿದೇಶ

ಆಪರೇಷನ್ ಸಿಂಧೂರ್: ಸೇನೆ ಬೆಂಬಲಿಸಿ ಕಾಂಗ್ರೆಸ್ ಪಕ್ಷದಿಂದ ಮೇ 20-30 ದೇಶಾದ್ಯಂತ ‘ಜೈ ಹಿಂದ್ ಸಭೆ’

ಆಪರೇಷನ್ ಸಿಂಧೂರ್: ಸೇನೆ ಬೆಂಬಲಿಸಿ ಕಾಂಗ್ರೆಸ್ ಪಕ್ಷದಿಂದ ಮೇ 20-30 ದೇಶಾದ್ಯಂತ ‘ಜೈ ಹಿಂದ್ ಸಭೆ’

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಸಶಸ್ತ್ರ ಪಡೆಗಳ ಅತ್ಯುನ್ನತ ಶೌರ್ಯ ಮತ್ತು ಯಶಸ್ಸಿಗೆ ನಮನ ಸಲ್ಲಿಸಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾರತದಾದ್ಯಂತ 'ಜೈ ಹಿಂದ್ ಸಭೆ'ಗಳನ್ನು ನಡೆಸಲಿದೆ.ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಎಐಸಿಸಿ ನಾಯಕ ಕೆ.ಸಿ.ವೇಣುಗೋಪಾಲ್, ಭದ್ರತಾ ವೈಫಲ್ಯಗಳು, ರಾಷ್ಟ್ರೀಯ ಭದ್ರತೆಯನ್ನು ಸರ್ಕಾರ ನಿರ್ವಹಿಸುತ್ತಿರುವ ರೀತಿ ಮತ್ತು ನಮ್ಮ ರಾಷ್ಟ್ರೀಯ ಭದ್ರತಾ ವಿಷಯಗಳಲ್ಲಿ ಅಮೆರಿಕದ ಪಾಲ್ಗೊಳ್ಳುವಿಕೆಯ ಬಗ್ಗೆ ಅದರ ಮೌನದ ಬಗ್ಗೆಯೂ ನಾವು ಗಂಭೀರ ಪ್ರಶ್ನೆಗಳನ್ನು ಎತ್ತಬೇಕು ಎಂದಿದ್ದಾರೆ.ಮೇ 20-30 ರವರೆಗೆ, ದೆಹಲಿ, ಬಾರ್ಮರ್, ಶಿಮ್ಲಾ, ಹಲ್ದ್ವಾನಿ, ಪಾಟ್ನಾ, ಜಬಲ್ಪುರ್, ಪುಣೆ, ಗೋವಾ, ಬೆಂಗಳೂರು, ಕೊಚ್ಚಿ, ಗುವಾಹಟಿ, ಕೋಲ್ಕತ್ತಾ, ಹೈದರಾಬಾದ್, ಭುವನೇಶ್ವರ ಮತ್ತು ಪಠಾಣ್‌ಕೋಟ್‌ಗಳಲ್ಲಿ ಜೈ ಹಿಂದ್ ಸಭೆಗಳು ನಡೆಯಲಿದ್ದು, ಇದರಲ್ಲಿ ಸೇನಾ ನಿವೃತ್ತರು, ಪಕ್ಷದ ನಾಯಕರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದವರು ತಿಳಿಸಿದ್ದಾರೆ....
ರಾಜ್ಯದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ತಲಾ ₹2,000 ಗಳಷ್ಟು ಹೆಚ್ಚಳ!

ರಾಜ್ಯದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ತಲಾ ₹2,000 ಗಳಷ್ಟು ಹೆಚ್ಚಳ!

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ.ಅವರ ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ ₹2,000 ಗಳಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹10,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹10,500 ಗೌರವ ಸಂಭಾವನೆಯನ್ನು ನಿಗದಿಪಡಿಸಿತ್ತು. ಇದೀಗ, ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹2,000 ಗಳನ್ನು ಸೇರಿಸಲಾಗಿದ್ದು, ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹12,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹12,500 ಆಗಲಿದೆ.ಅಂತೆಯೇ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ ₹2,000 ಗಳಷ್ಟು ಗೌರವಧನ ಹೆಚ್ಚಳವಾಗಲಿ...
‘ಯುದ್ಧ ಅಥವಾ ಶಾಂತಿ ಬಗ್ಗೆ ಕಾಂಗ್ರೆಸ್‌ ಸರಿಯಾದ ನಿಲುವು ಪ್ರಕಟಿಸಲಿ’

‘ಯುದ್ಧ ಅಥವಾ ಶಾಂತಿ ಬಗ್ಗೆ ಕಾಂಗ್ರೆಸ್‌ ಸರಿಯಾದ ನಿಲುವು ಪ್ರಕಟಿಸಲಿ’

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಒಬ್ಬರು ಯುದ್ಧ ಬೇಕು ಎಂದರೆ, ಮತ್ತೊಬ್ಬರು ಶಾಂತಿ ಬೇಕು ಎನ್ನುತ್ತಾರೆ. ಎಐಸಿಸಿಯಲ್ಲಿ ಈ ಬಗ್ಗೆ ಸರಿಯಾದ ನಿಲುವು ಪ್ರಕಟಿಸಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಆಡಳಿತದಲ್ಲಿದ್ದಾಗ ಅಮೆರಿಕದ ಬಳಿ ಹೋಗಿ ಭಿಕ್ಷೆ ಬೇಡಿದ್ದನ್ನು ನೋಡಿದ್ದೇವೆ. ಮುಂಬೈಯಲ್ಲಿನ ಉಗ್ರ ದಾಳಿಯಲ್ಲಿ 175 ಜನರು ಸತ್ತಿದ್ದರು. ಆಗ ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಸರ್ಕಾರ ಪ್ರತಿಕ್ರಿಯೆ ನೀಡಲೇ ಇಲ್ಲ. ಆದರೆ ಈಗ ಪ್ರಧಾನಿ ಮೋದಿ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಸಿಂಧೂ ನದಿ ಒಪ್ಪಂದಕ್ಕೆ ನಾವು ಸಹಿ ಹಾಕಿಲ್ಲ. ಅದನ್ನು ಪ್ರಧಾನಿ ಮೋದಿ ರದ್ದು ಮಾಡಿದ್ದಾರೆ. ಭಯೋತ್ಪಾದಕ ದಾಳಿಗಳಾದಾಗಲೇ ಕಾಂಗ್ರೆಸ್‌ ಅದನ್ನು ಮಾಡಬೇಕಿತ್ತು. ಇದನ್ನು ಸಚಿವ ಸಂತೋಷ್‌ ಲಾಡ್‌ ಅರಿಯಬೇಕು ಎಂದರು.ಇಡೀ ಜಮ್ಮು ಕಾಶ್ಮೀರ ಪ್ರಧಾನಿ ಮೋದಿಯವರ ಪರವಾಗಿ ನಿಂತಿದೆ. ಅಲ್ಲಿನ ಮುಖ್ಯಮಂತ್ರಿ ಕೂಡ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಅಲ್ಲಿನ ಅಭಿವೃದ್ಧಿಯನ್ನು ಜನರು ನೋಡಿದ್ದಾರೆ. ಪಾಕ್‌ ಆಕ್ರಮಿತ ಕಾಶ್ಮೀರ ನಮ್ಮದು, ...
ವಿಜಯ್ ದೇವರಕೊಂಡ ಅವರ ‘ಕಿಂಗ್ಡಮ್’ ಜುಲೈ 4ರಂದು ಬಿಡುಗಡೆ

ವಿಜಯ್ ದೇವರಕೊಂಡ ಅವರ ‘ಕಿಂಗ್ಡಮ್’ ಜುಲೈ 4ರಂದು ಬಿಡುಗಡೆ

ದೇಶ, ಪ್ರಮುಖ ಸುದ್ದಿ, ವಿದೇಶ, ವೀಡಿಯೊ, ಸಿನಿಮಾ
ಗೌತಮ್ ತಿನ್ನನುರಿ ನಿರ್ದೇಶನದ, ನಟ ವಿಜಯ್ ದೇವರಕೊಂಡ ನಾಯಕನಾಗಿ ನಟಿಸಿರುವ ಸ್ಫೋಟಕ ಆಕ್ಷನ್ ಎಂಟರ್‌ಟೈನರ್ 'ಕಿಂಗ್ಡಮ್' ಚಿತ್ರದ ಬಿಡುಗಡೆಯನ್ನು ಜುಲೈ 4 ಕ್ಕೆ ಮುಂಡೂಡಲಾಗಿದೆ.ಈ ಚಿತ್ರವು ಮೂಲತಃ ಈ ವರ್ಷ ಮೇ 30 ರಂದು ಬಿಡುಗಡೆಯಾಗಬೇಕಿತ್ತು. ಚಿತ್ರವನ್ನು ನಿರ್ಮಿಸುವ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾದ ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ಹೇಳಿಕೆಯಲ್ಲಿ, 'ನಮ್ಮ ಪ್ರೀತಿಯ ಪ್ರೇಕ್ಷಕರಿಗೆ, ಮೂಲತಃ ಮೇ 30 ರಂದು ಬಿಡುಗಡೆಯಾಗಬೇಕಿದ್ದ ನಮ್ಮ 'ಕಿಂಗ್ಡಮ್' ಚಿತ್ರದ ಬಿಡುಗಡೆಯನ್ನು ಜುಲೈ 4 ಕ್ಕೆ ಮರು ನಿಗದಿಪಡಿಸಲಾಗಿದೆ ಎಂದು ತಿಳಿಸಲು ನಾವು ಬಯಸುತ್ತೇವೆ. ಮೂಲ ದಿನಾಂಕಕ್ಕೆ ಅಂಟಿಕೊಳ್ಳುವ ಪ್ರತಿಯೊಂದು ಸಾಧ್ಯತೆಯನ್ನು ನಾವು ಅನ್ವೇಷಿಸಿದ್ದೇವೆ, ಆದರೆ ದೇಶದಲ್ಲಿ ಇತ್ತೀಚಿನ ಅನಿರೀಕ್ಷಿತ ಘಟನೆಗಳು ಮತ್ತು ಪ್ರಸ್ತುತ ವಾತಾವರಣವು ಪ್ರಚಾರಗಳು ಅಥವಾ ಆಚರಣೆಗಳೊಂದಿಗೆ ಮುಂದುವರಿಯಲು ನಮಗೆ ಕಷ್ಟಕರವಾಗಿಸಿದೆ' ಎಂದು ಮಾಹಿತಿ ಹಂಚಿಕೊಂಡಿದೆ.https://www.youtube.com/watch?v=McPGQ-Nb9Uk&ab_channel=SitharaEntertainments"ಈ ನಿರ್ಧಾರವು ಕಿಂಗ್‌ಡಮ್ ಅನ್ನು ಅತ್ಯುತ...
ರಾಜ್ಯದ ವಿವಿಧೆಡೆ ಭಾರೀ ಮಳೆ; ಸಿಡಿಲು ಬಡಿದು ಹಲವಾರು ಬಲಿ

ರಾಜ್ಯದ ವಿವಿಧೆಡೆ ಭಾರೀ ಮಳೆ; ಸಿಡಿಲು ಬಡಿದು ಹಲವಾರು ಬಲಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ವಿವಿಧೆಡೆ ಮಂಗಳವಾರ ಭಾರೀ ಮಳೆಯಾಗಿದೆ. ಬೆಂಗಳೂರು, ಧಾರವಾಡ, ಬೆಳಗಾವಿ, ಗದಗ್, ಬೀದರ್ ಸಹಿತ ಹಲವೆಡೆ ಭಾರೀ ಮಳೆಯಾಗಿದ್ದು, ಸರಣಿ ಘಟನೆಗಳಲ್ಲಿ 8 ಮಂದಿ ಬಲಿಯಾಗಿದ್ದಾರೆ.ಕೊಪ್ಪಳದಲ್ಲಿ ಸಿಡಿಲಿನ ಹೊಡೆತಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಸಿಡಿಲಿಗೆ ಬಲಿಯಾಗಿದ್ದರೆ, ವಿಜಯಪುರ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಒಬ್ಬೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಬೆಳಗಾವಿ ಜಿಲ್ಲೆಯಲ್ಲೂ ವರುಣ ಅಬ್ಬರಿಸಿದ್ದು, ಗೋಕಾಕ್​ನಲ್ಲಿ ವ್ಯಕ್ತಿಯೊಬ್ಬರು ಚರಂಡಿಯಲ್ಲಿ ಕೊಚ್ಚಿ ಹೋಗಿದ್ದಾರೆ.  ಗದಗ ಸಮೀಪ ಬೆನಕೊಪ್ಪ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಬೈಕ್ ಸವಾರ ಕೊಚ್ಚಿಕೊಂಡು ಹೋಗಿದ್ದಾನೆ. ಗದಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಹಾರವಾಡ ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಮನೆಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬೆಂಗಳೂರಿನಲ್ಲೂ ಮಳೆ ಅವಾಂತರ ಸೃಷ್ಟಿಸಿದೆ. ಮೆಜೆಸ್ಟಿಕ್, ಮಲ್ಲೇಶ್ವರ...
ಹೈಕೋರ್ಟ್ ಮೆಟ್ಟಿಲೇರಿದ ಗಾಯಕ ಸೋನು ನಿಗಮ್

ಹೈಕೋರ್ಟ್ ಮೆಟ್ಟಿಲೇರಿದ ಗಾಯಕ ಸೋನು ನಿಗಮ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಕನ್ನಡ ಭಾಷೆ ಬಗ್ಗೆ ಅವಹೇಳನ ಮಡಿದ ಆರೋಪ ಎದುರಿಸುತ್ತಿರುವ ಗಾಯಕ ಸೋನು ನಿಗಮ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.ಏಪ್ರಿಲ್ 25 ರಂದು ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ನೇರ ಸಂಗೀತ ಕಾರ್ಯಕ್ರಮದಲ್ಲಿ ಸೋನು ನಿಗಮ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹೇಳಿಕೆ ವಿರುದ್ಧ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು.‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ನಡೆಯಿತು’ ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಸಲ್ಲಿಸಿರುವ ದೂರಿನ ಆಧಾರದಲ್ಲಿ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಈ ಬೆಳವಣಿಗೆ ಹಿನ್ನೆಲೆ ಕಾನೂನು ಸುಳಿಯಲ್ಲಿ ಸಿಲುಕಿರುವ ಸೋನು ನಿಗಮ್, ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಪರಿಶೀಲಿಸಿರುವ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರಿದ್ದ ರಜಾ ಪೀಠದ ವಿಚಾರಣೆಯನ್ನು ಮುಂದೂಡಿದೆ....
‘ಆಪರೇಷನ್ ಸಿಂಧೂರ್‌’ ಬಗ್ಗೆ ಪೋಸ್ಟ್; ಹಲವರ ಬಂಧನ

‘ಆಪರೇಷನ್ ಸಿಂಧೂರ್‌’ ಬಗ್ಗೆ ಪೋಸ್ಟ್; ಹಲವರ ಬಂಧನ

ದೇಶ, ರಾಜ್ಯ, ವಿದೇಶ
ನವದೆಹಲಿ: ಆಪರೇಷನ್ ಸಿಂಧೂರ್‌ಗೆ ಸಂಬಂಧಿಸಿದಂತೆ ದೇಶವಿರೋಧಿ ಪೋಸ್ಟ್ ಹಾಕಿರುವ ಆರೋಪದಲ್ಲಿ ಹಲವಾರು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಉತ್ತರ ಪ್ರದೇಶವೊಂದರಲ್ಲೇ 40 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಷ್ಟೇ ಅಲ್ಲ 25 ಜನರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.ಹೇಳಿಕೆ ಮತ್ತು ಜನರನ್ನು ತಪ್ಪುದಾರಿಗೆಳೆಯುವ ಪೋಸ್ಟ್‌ಗಳನ್ನು ಮಾಡಿದ್ದ ಆರೋಪದಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೇಲೆ ದಿನದ 24 ಗಂಟೆಯೂ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಕೌಶಲ್ಯ ತರಬೇತಿಯಲ್ಲಿ ಭಾರತ-ಆಫ್ರಿಕಾ ಪಾಲುದಾರಿಕೆ: ನಮೀಬಿಯಾದಲ್ಲಿ ಅತಿ ಶೀಘ್ರವಾಗಿ ಜಿಟಿಸಿಸಿ ಸ್ಥಾಪನೆ

ಕೌಶಲ್ಯ ತರಬೇತಿಯಲ್ಲಿ ಭಾರತ-ಆಫ್ರಿಕಾ ಪಾಲುದಾರಿಕೆ: ನಮೀಬಿಯಾದಲ್ಲಿ ಅತಿ ಶೀಘ್ರವಾಗಿ ಜಿಟಿಸಿಸಿ ಸ್ಥಾಪನೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕದ ಅತ್ಯಂತ ಹೆಮ್ಮೆಯ ಸಂಸ್ಥೆಗಳಲ್ಲಿ ಒಂದಾಗಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ವಿದೇಶದಲ್ಲೂ ತನ್ನ ವ್ಯಾಪ್ತಿ ಮತ್ತು ಕೀರ್ತಿಯನ್ನು ವಿಸ್ತರಿಸುತ್ತಿದೆ.ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು (ಜಿಟಿಟಿಸಿ) ಆಫ್ರಿಕಾದ ನಮೀಬಿಯಾದಲ್ಲಿ ಸ್ಥಾಪಿಸುವ ಕುರಿತು ಉನ್ನತ ಮಟ್ಟದ ಮಾತುಕತೆ ನಡೆದಿದೆ. ವೃತ್ತಿಪರ ತರಬೇತಿಯಲ್ಲಿ ಭಾರತ-ಆಫ್ರಿಕಾ ಸಹಕಾರವನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ, ಆಫ್ರಿಕಾ ಇಂಡಿಯಾ ಎಕನಾಮಿಕ್ ಫೌಂಡೇಶನ್ (ಎಐಇಎಫ್) ನಮ್ಮ ಕರ್ನಾಟಕದ ಜಿಟಿಟಿಸಿಯನ್ನು ಪ್ರಮುಖ ಜ್ಞಾನ ಮತ್ತು ತಂತ್ರಜ್ಞಾನ ಪಾಲುದಾರ ಸಂಸ್ಥೆಯಾಗಿ ಮಾಡಿಕೊಳ್ಳಲು ಮುಂದೆ ಬಂದಿದೆ.ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರೊಂದಿಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗಿದೆ. ಈ ಪ್ರಸ್ತಾವನೆ ಅತ್ಯಂತ ಸ್ವಾಗತಾರ್ಹವಾಗಿದೆ. ಈ ಚರ್ಚೆಗಳನ್ನು ಸಕ್ರಿಯವಾಗಿ ಮುಂದುವರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಉಪಕ್ರಮವು ಕರ...
BMTC: ನೇಮಕಾತಿ‌‌ ಆದೇಶ ಪಡೆದ ಹೊಸ ನಿರ್ವಾಹಕರಿಗೆ ಸಚಿವರ ಕ್ಲಾಸ್..  ಬಸ್ ಅಪಘಾತಕ್ಕೀಡಾದರೆ ಹಿರಿಯ ಅಧಿಕಾರಿಗಳಿಗೆ ಗೆಟ್ ಪಾಸ್ ಎಂದು ಎಚ್ಚರಿಕೆ

BMTC: ನೇಮಕಾತಿ‌‌ ಆದೇಶ ಪಡೆದ ಹೊಸ ನಿರ್ವಾಹಕರಿಗೆ ಸಚಿವರ ಕ್ಲಾಸ್.. ಬಸ್ ಅಪಘಾತಕ್ಕೀಡಾದರೆ ಹಿರಿಯ ಅಧಿಕಾರಿಗಳಿಗೆ ಗೆಟ್ ಪಾಸ್ ಎಂದು ಎಚ್ಚರಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಜನರ ಜನಪ್ರೀಯ ಸಂಚಾರ ಸಾರಥಿ 'ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) 2286 ನಿರ್ವಾಹಕರಿಗೆ ನೇಮಕಾತಿ‌‌ ಆದೇಶವನ್ನು ನೀಡಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿಅವರು ನೂತನವಾಗಿ ನೇಮಕಾತಿಗೊಂಡವರಿಗೆ ಆದೇಶ ಪಾತ್ರವನ್ನು ನೀಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ, ಬಸ್ ಅಪಘಾತಗಳ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. ಅಪಘಾತಗಳಿಗೆ ಕಾರಣರಾದಹಿರಿಯ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದ ಸಚಿವರು, ಅಂಥವರಿಗೆ ಯಾವುದೇ ಪರಿಹಾರವನ್ನು ನೀಡಲಾಗುವುದಿಲ್ಲ ಎಂದರು.2018 ರಿಂದ ಇಲ್ಲಿಯವರೆಗೂ ಬಿ.ಎಂ.ಟಿ.ಸಿಯಲ್ಲಿ ಯಾವುದೇ ನೇಮಕಾತಿ ಆಗಿರಲಿಲ್ಲ ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕವಾಗಿ ನೇಮಕಾತಿ ಪೂರ್ಣಗೊಳಿಸುವುದು ಒಂದು ಸವಾಲಿನ ಕೆಲಸವೇ ಸರಿ ಎಂದು ಭಾವಿಸಿದ್ದೇನೆ ಎಂದ ಅವರು, ಈಗಾಗಲೇ ನಮ್ಮ ಸರ್ಕಾರ ಬಂದ‌ ಕೂಡಲೇ ನಾಲ್ಕು ಸಾರಿಗೆ ನಿಗಮಗಳಲ್ಲಿ 9000 ಹುದ್ದೆಗಳ ನೇಮಕಾತಿಗೆ ಚಾಲನೆ‌ ನೀಡಲಾಗಿದೆ. ಕಳೆದ ಎರಡು ವರ್ಷದಲ್ಲಿ ಅತ್ಯಂತ ಪಾರದರ್ಶಕವಾಗಿ 4700 ಹೊಸ ನೇಮಕಾತಿ ಮತ್ತು 10...
ರಾಜ್ಯ ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕ: ಬಿಜೆಪಿ ಆರೋಪ

ರಾಜ್ಯ ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕ: ಬಿಜೆಪಿ ಆರೋಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದ್ದಾರೆ.ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಕೊಲೆಯ ಬಗ್ಗೆ ವಿವರಿಸಲಾಗಿದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಮುಸ್ಲಿಂ ಹುಡುಗನ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್‌ 25 ಲಕ್ಷ ರೂ. ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ. ಸ್ಪೀಕರ್‌ ಯು.ಟಿ.ಖಾದರ್‌ ಅವರು ಆ ಕುಟುಂಬದವರು ಒಳ್ಳೆಯವರು ಎಂದು ಹೇಳಿದ್ದಾರೆ. ಆ ಮನೆಯವರೇ ಸುಪಾರಿ ನೀಡಿದ್ದಾರೆ ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ. ಸ್ಪೀಕರ್‌ ಆಗಿ ಕೊಲೆ ಪ್ರಕರಣದ ಬಗ್ಗೆ ಮಾತನಾ...