Monday, August 17

ವಿದೇಶ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ: ಎನ್‌ಐಎ ತನಿಖೆಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ: ಎನ್‌ಐಎ ತನಿಖೆಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ: ಎನ್‌ಐಎ ತನಿಖೆಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ: ಎನ್‌ಐಎ ತನಿಖೆಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದ್ದಾರೆ.ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಕೊಲೆಯ ಬಗ್ಗೆ ವಿವರಿಸಲಾಗಿದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಮುಸ್ಲಿಂ ಹುಡುಗನ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್‌ 25 ಲಕ್ಷ ರೂ. ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ. ಸ್ಪೀಕರ್‌ ಯು.ಟಿ.ಖಾದರ್‌ ಅವರು ಆ ಕುಟುಂಬದವರು ಒಳ್ಳೆಯವರು ಎಂದು ಹೇಳಿದ್ದಾರೆ. ಆ ಮನೆಯವರೇ ಸುಪಾರಿ ನೀಡಿದ್ದಾರೆ ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ. ಸ್ಪೀಕರ್‌ ಆಗಿ ಕೊಲೆ ಪ್ರಕರಣದ ಬಗ್ಗೆ ಮಾತನಾ...
ಮೇ 11 ರಂದು ಮಂಗಳೂರಿಗೆ ಜೆ.ಪಿ.ನಡ್ಡಾ; ಸುಹಾಸ್ ಶೆಟ್ಟಿ ನಿವಾಸಕ್ಕೂ ಭೇಟಿ

ಮೇ 11 ರಂದು ಮಂಗಳೂರಿಗೆ ಜೆ.ಪಿ.ನಡ್ಡಾ; ಸುಹಾಸ್ ಶೆಟ್ಟಿ ನಿವಾಸಕ್ಕೂ ಭೇಟಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ಇತ್ತೀಚಿಗೆ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಆಗಿರುವ ಜೆ.ಪಿ.ನಡ್ಡಾ ಅವರು ಮೇ 11 ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಸುಹಾಸ್ ಶೆಟ್ಟಿ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.ಮೇ11 ಮತ್ತು 12 ರಂದು ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸ ಕೈಗೊಳ್ಳುವ ಜೆ. ಪಿ. ನಡ್ಡಾ ಅವರು ಮೇ 11 ರಂದು ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೂ ಭೇಟಿ ನೀಡಲಿದ್ದಾರೆ ಎಂದು ನಾಯಕರು ತಿಳಿಸಿದ್ದಾರೆ....
ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅನರ್ಹ: ವಿಧಾನಸಭೆಯ ಕಾರ್ಯದರ್ಶಿ ಆದೇಶ

ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅನರ್ಹ: ವಿಧಾನಸಭೆಯ ಕಾರ್ಯದರ್ಶಿ ಆದೇಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಗಣಿ ಅಕ್ರಮದಲ್ಲಿ ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.ಸಿಬಿಐ ಕೋರ್ಟ್‌ ಶಿಕ್ಷೆ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಮತ್ತೆ ಜೈಲುಪಾಲಾಗಿದ್ದಾರೆ. ಅದೇ ಸಂದರ್ಭದಲ್ಲಿ ಜನಪ್ರತಿನಿಧಿಗಳ ಕಾಯ್ದೆಯಡಿ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾದ ಜನಾರ್ಧನ ರೆಡ್ಡಿ ಅವರ ಶಾಸನ ಸಭೆಯ ಸದಸ್ಯತ್ವ ರದ್ದಾಗಿದೆ. .ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಈ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಅವರ ಶಿಕ್ಷೆಗೆ ಹೈಕೋರ್ಟ್ ತಾನೇ ನೀಡದ ಹೊರತು, ಬಿಡುಗಡೆಯಾದ ನಂತರವೂ 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ....
‘ಆಪರೇಷನ್ ಸಿಂಧೂರ್’: ಸೈನಿಕರಿಗೆ ದೊಡ್ಡ ಸಲಾಮ್ ಎಂದ ಸಿದ್ದರಾಮಯ್ಯ

‘ಆಪರೇಷನ್ ಸಿಂಧೂರ್’: ಸೈನಿಕರಿಗೆ ದೊಡ್ಡ ಸಲಾಮ್ ಎಂದ ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೈನ್ಯವು ನಡೆಸಿದ ಯಶಸ್ವಿ ದಾಳಿಯ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ, ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ ಎಂದರು.ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ ಎಂದ ಅವರು, ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯ...
‘ಆಪರೇಷನ್ ಸಿಂಧೂರ್ ಕೇವಲ ಒಂದು ಧ್ಯೇಯವಲ್ಲ, ಆದರೆ ಪವಿತ್ರ ಪ್ರತಿಜ್ಞೆ’: ಕಿಚ್ಚ ಸುದೀಪ್

‘ಆಪರೇಷನ್ ಸಿಂಧೂರ್ ಕೇವಲ ಒಂದು ಧ್ಯೇಯವಲ್ಲ, ಆದರೆ ಪವಿತ್ರ ಪ್ರತಿಜ್ಞೆ’: ಕಿಚ್ಚ ಸುದೀಪ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಆಪರೇಷನ್ ಸಿಂಧೂರ್: ಕೇವಲ ಒಂದು ಧ್ಯೇಯವಲ್ಲ, ಆದರೆ ಪವಿತ್ರ ಪ್ರತಿಜ್ಞೆ ಎಂದು ನಟ ಕಿಚ್ಚ ಸುದೀಪ್ ಬಣ್ಣಿಸಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, 'ಒಬ್ಬ ಭಾರತೀಯನಾಗಿ, ಈ ಪವಿತ್ರ ಮಣ್ಣಿನ ಮಗನಾಗಿ, ಪಹಲ್ಗಾಮ್‌ನಲ್ಲಿ ನೋವಿನ ನಡುಕವನ್ನು ಅನುಭವಿಸಿದೆ. ಇಂದು, ನಾನು ನ್ಯಾಯದ ಗುಡುಗನ್ನು ಅನುಭವಿಸುತ್ತೇನೆ' ಎಂದು ಹೇಳಿದ್ದಾರೆ.'ಭಾರತದ ಸಿಂಧೂರವು ಕಲೆ ಹಾಕಲ್ಪಟ್ಟಿತು. ನಮ್ಮ ಧೈರ್ಯಶಾಲಿ ಹೃದಯಗಳು ಬೆಂಕಿ ಮತ್ತು ನಿಖರತೆಯಿಂದ ಅದರ ಗೌರವವನ್ನು ಪುನಃಸ್ಥಾಪಿಸಿದವು' ಎಂದು ಸುದೀಪ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.'ನಮ್ಮ ಸಶಸ್ತ್ರ ಪಡೆಗಳಿಗೆ, ನನ್ನ ಅಂತ್ಯವಿಲ್ಲದ ವಂದನೆ. ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ನಾಯಕತ್ವವು ನಿರ್ಭೀತವಾಗಿ ನಿಂತಿದ್ದಕ್ಕಾಗಿ ಧನ್ಯವಾದಗಳು' ಎಂದು ಬರೆದುಕೊಂಡಿದ್ದಾರೆ.ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ತೀಕ್ಷ್ಣವಾದ, ಗೌರವಯುತ ಮಾಹಿತಿ ನೀಡಿದ್ದಾರೆ ಎಂದಿರುವ ಸುದೀಪ್, ಭಾರತ ಮರೆಯುವುದಿಲ್ಲ. ಭಾರತ ಕ್ಷಮಿಸು...
‘ಆಪರೇಷನ್ ಸಿಂಧೂರ’: ಸೇನಾ ಧೈರ್ಯಕ್ಕೆ ಕಾಂಗ್ರೆಸ್ ಶ್ಲಾಘನೆ

‘ಆಪರೇಷನ್ ಸಿಂಧೂರ’: ಸೇನಾ ಧೈರ್ಯಕ್ಕೆ ಕಾಂಗ್ರೆಸ್ ಶ್ಲಾಘನೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ. ಬುಧವಾರ ತಡ ರಾತ್ರಿ ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.'ಆಪರೇಷನ್ ಸಿಂಧೂರ'ವನ್ನು ಸ್ವಾಗತಿಸಿರುವ ಕಾಂಗ್ರೆಸ್, ಸೇನೆಯ ದೃಢನಿಶ್ಚಯ ಮತ್ತು ಧೈರ್ಯವನ್ನು ಶ್ಲಾಘಿಸಿದೆ. 'ಆಪರೇಷನ್ ಸಿಂಧೂರ' ಬಗ್ಗೆ ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 'ಪಾಕಿಸ್ತಾನ ಮತ್ತು ಪಿಒಕೆಯಿಂದ ಹೊರಹೊಮ್ಮುವ ಎಲ್ಲಾ ರೀತಿಯ ಭಯೋತ್ಪಾದನೆಯ ವಿರುದ್ಧ ಭಾರತವು ದೃಢವಾದ ರಾಷ್ಟ್ರೀಯ ನೀತಿಯನ್ನು ಹೊಂದಿದೆ ಎಂದಿದ್ದಾರೆ.ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಮುಚ್ಚಿಹಾಕಿರುವ ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ನಮಗೆ ತುಂಬಾ ಹೆಮ್ಮೆಯಿದೆ. ಅವರ ದೃಢನಿಶ್ಚಯ ಮತ್ತು ಧೈರ್ಯವನ್ನು ನಾವು ಶ್ಲಾಘಿಸುತ್ತೇವೆ ಎಂದು ಖರ್ಗೆ ಅವರು ಸಾಮಾಜಿಕ ಮಾಧ್ಯಮ 'X'ನಲ್ಲಿ...
‘ಆಪರೇಷನ್ ಸಿಂಧೂರ’ಕ್ಕೆ ಜೈಕಾರ: ದೇಶಾದ್ಯಂತ ವಿಜಯೋತ್ಸವ

‘ಆಪರೇಷನ್ ಸಿಂಧೂರ’ಕ್ಕೆ ಜೈಕಾರ: ದೇಶಾದ್ಯಂತ ವಿಜಯೋತ್ಸವ

ದೇಶ, ಪ್ರಮುಖ ಸುದ್ದಿ, ವಿದೇಶ
ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ.ಬುಧವಾರ ತಡ ರಾತ್ರಿ ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕಾರ್ಯಾಚರಣೆಗೆ 'ಆಪರೇಷನ್ ಸಿಂಧೂರ' ಎಂದು ಹೆಸರಿಸಲಾಗಿದ್ದು, ಸೇನಾ ಶಕ್ತಿ ಪ್ರದರ್ಶನಕ್ಕೆ ದೇಶಾದ್ಯಂತ ಅಭಿನಂದನೆ ವ್ಯಕ್ತವಾಗಿದೆ. ಹಲವೆಡೆ ವಿಜಯೋತ್ಸವ ಆಚರಿಸಲಾಗುತ್ತಿದೆ.ಭಾರತವು ಪಾಕಿಸ್ತಾನದ ಮೇಲೆ ಯುದ್ಧ ಸರಿದರೆ ಸ್ವಾಗತಿಸುತ್ತೇವೆ ಎನ್ನುತ್ತಿರುವ ದೇಶದ ಜನ, ಇದೀಗ ನಡೆದಿರುವ 'ಆಪರೇಷನ್ ಸಿಂಧೂರ್' ಬೆಂಬಲಿಸಿ ವಿಜಯೋತ್ಸವ ಆಚರಿಸುತ್ತಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸುತ್ತಿರುವ ಜನತೆ, ಭಾರತ ಮಾತೆಗೆ ಜೈಕಾರ ಹಾಕುತ್ತಿದ್ದಾರೆ....
BMTCಯಲ್ಲಿ ಸಾರಿಗೆ ಆಶಾಕಿರಣ ; 28100 ನೌಕರರ ಕಣ್ಣಿನ ತಪಾಸಣೆ,  ಉಚಿತ ಕನ್ನಡಕ ವಿತರಣೆ.. ಮೃತ ನೌಕರರ ಅವಲಂಬಿತರಿಗೆ ಪರಿಹಾರದ‌ ಚೆಕ್..

BMTCಯಲ್ಲಿ ಸಾರಿಗೆ ಆಶಾಕಿರಣ ; 28100 ನೌಕರರ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ.. ಮೃತ ನೌಕರರ ಅವಲಂಬಿತರಿಗೆ ಪರಿಹಾರದ‌ ಚೆಕ್..

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಿಎಂಟಿಸಿ‌ಯಲ್ಲಿ ಸಾರಿಗೆ ಆಶಾಕಿರಣ ಯೋಜನೆಯಡಿ 28100 ನೌಕರರ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಮೃತ ನೌಕರರ ಅವಲಂಬಿತರಿಗೆ ಪರಿಹಾರದ‌ ಚೆಕ್ ವಿತರಣೆ ಮಾಡಲಾಗಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆದಿದೆ ಎಂದು ಬಿಎಂಟಿಸಿ ತಿಳಿಸಿದೆ.BMTCಯು ಸಿ-ಕ್ಯಾಂಪ್ ಸಹಯೋಗದಲ್ಲಿ ನೌಕರರ ಆರೋಗ್ಯದ ಹಿತದೃಷ್ಟಿಯಿಂದ 50 ಘಟಕಗಳಲ್ಲಿ ಹಾಗೂ 4 ಕಾರ್ಯಾಗಾರಗಳಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಏರ್ಪಡಿಸಿದ್ದು, ರಾಮಲಿಂಗಾರೆಡ್ಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಪಾಸಣೆಗೆ ಒಳಪಡುವ ನೌಕರರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗಿದೆ.ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಅವಲಂಬಿತರಿಗೆ 50 ಲಕ್ಷ ರೂ ಹಾಗೂ ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದಾಗಿ ಅಕಾಲಿಕ ಮರಣ ಹೊಂದಿದ ನೌಕರರ ಅವಲಂಬಿತರಿಗೆ 10 ಲಕ್ಷ ರೂ ನೀಡಲಾಗುತ್ತಿದೆ ಎಂದರು. 2024ರ ಫೆಬ್ರವರಿ–2025ರ ಏಪ್ರಿಲ್ ವರೆಗೆ 107 ನೌಕರರ ಕುಟುಂಬಗಳಿಗೆ ರೂ. 7.3 ಕೋಟಿ ಪರಿಹಾರ ಪಾವತಿ ಮಾಡಲಾಗಿದೆ ಎಂದವರು ವಿವರಿಸ...
ಗಣಿ ಕೇಸಿನಲ್ಲಿ 7 ವರ್ಷ ಶಿಕ್ಷೆಗೊಳಗಾಗಿರುವ ಜನಾರ್ಧನ ರೆಡ್ಡಿ ಶಾಸಕ ಸ್ಥಾನಕ್ಕೂ ಸಂಚಕಾರ

ಗಣಿ ಕೇಸಿನಲ್ಲಿ 7 ವರ್ಷ ಶಿಕ್ಷೆಗೊಳಗಾಗಿರುವ ಜನಾರ್ಧನ ರೆಡ್ಡಿ ಶಾಸಕ ಸ್ಥಾನಕ್ಕೂ ಸಂಚಕಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ಮತ್ತೆ ಜೈಲು ಸೇರಿದ್ದಾರೆ. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅಪರಾಧಿಯಾಗು ಶಿಕ್ಷೆಗೆ ಗುರಿಯಾಗಿರುವ ಶಾಸಕ ಜನಾರ್ಧನ ರೆಡ್ಡಿ ಅವರ ಶಾಸಕ ಸ್ಥಾನಕ್ಕೂ ಕಂಟಕ ಎದುರಾಗಿದೆ.884 ಕೋಟಿ ರೂಪಾಯಿ ಅಕ್ರಮಆರೋಪದಲ್ಲಿ ಸಿಬಿಐ ಕೋರ್ಟ್‌, ಮಾಜಿ ಸಚಿವರೂ ಆದ ಜನಾರ್ಧನ ರೆಡ್ಡಿಯನ್ನುದೋಷಿ ಎಂದು ಮಂಗಳವಾರ ತೀರ್ಪು ನೀಡಿದೆ. 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದ್ದು ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಜನಾರ್ದನ ರೆಡ್ಡಿ ಅವರು ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದಾರೆ. ಈ ಬಗ್ಗೆ ರೆಡ್ಡಿ ಪರ ವಕೀಲರು, ವಯಸ್ಸು ಮತ್ತು ಸೇವೆಯನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ಮನವಿ ಮಾಡಿದ್ದಾರೆ. ಸಿಬಿಐ ಈ ಮನವಿಯನ್ನು ತಿರಸ್ಕರಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.ಈ ನಡುವೆ, ಸಿಬಿಐ ಕೋರ್ಟ್ ನೀಡಿರುವ ತೀರ್ಪಿನಿಂದಾಗಿ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನಕ್ಕೂ ಸಂಚಕಾರ ಎದುರಾಗಿದೆ.ಈ ತೀರ್ಪನ್ನು ಪ್ರಶ್ನಿಸಿ ಅವರು ಮೇಲ್ಮನವಿ ಸಲ್ಲಿಸಬೇಕಿದ್ದು, ಜೈಲು ಶಿಕ್ಷೆಯ ತೀರ್ಪಿಗೆ ಹೈಕೋರ್ಟ್​​ನಿಂದ...

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ; ಯು.ಟಿ.ಖಾದರ್ ವಿರುದ್ಧ ಬಿಜೆಪಿ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ವಿಚಾರದಲ್ಲಿ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ. ಪೊಲೀಸರು ತನಿಖೆ ಆರಂಭಿಸುವ ಮುನ್ನವೆ ಫಾಜಿಲ್ ಕುಟುಂಬದವರಿಗೆ ಕ್ಲೀನ್ ಚಿಟ್ ಕೊಡಲು ಯು.ಟಿ.ಖಾದರ್ ಅವರು ಏನು ಗೃಹ ಸಚಿವರೇ..??ಈ ಹಿಂದೆ ಫಾಜಿಲ್ ಮೃತನಾದ ಸಂದರ್ಭದಲ್ಲಿ ಇದೇ ಯು.ಟಿ.ಖಾದರ್ ಅವರು ಸಿದ್ದರಾಮಯ್ಯ ಅವರಿಂದ ಫಾಜಿಲ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಕೊಡಿಸಿದ್ದರು.ಬಹುಶಃ ಆ ಹಣದಿಂದಲೇ ಫಾಜಿಲ್ ಕುಟುಂಬ ಸುಹಾಸ್ ಶೆಟ್ಟಿ… pic.twitter.com/30McfqCE6t— BJP Karnataka (@BJP4Karnataka) May 4, 2025ಪೊಲೀಸರು ತನಿಖೆ ಆರಂಭಿಸುವ ಮುನ್ನವೆ ಫಾಜಿಲ್ ಕುಟುಂಬದವರಿಗೆ ಕ್ಲೀನ್ ಚಿಟ್ ಕೊಡಲು ಯು.ಟಿ.ಖಾದರ್ ಅವರು ಏನು ಗೃಹ ಸಚಿವರೇ..? ಎಂದು ಬಿಜೆಪಿ ಪ್ರಶ್ನಿಸಿದೆ. ಸಾಮಾಜಿಕ ಮಾಧ್ಯಮ 'X'ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, 'ಈ ಹಿಂದೆ ಫಾಜಿಲ್ ಮೃತನಾದ ಸಂದರ್ಭದಲ್ಲಿ ಇದೇ ಯು.ಟಿ.ಖಾದರ್ ಅವರು ಸಿದ್ದರಾಮಯ್ಯ ಅವರಿಂದ ಫಾಜಿಲ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಕೊಡಿಸಿದ್ದರು' ಎಂದು ನೆನಪಿಸಿದೆ. ಬಹುಶಃ ಆ ಹಣದಿಂದಲೇ ಫಾ...