
ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ
ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಲೇಔಟ್‌ನ ಜ್ಞಾನಭಾರತಿ ಸಮೀಪದ ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಶನಿವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಶಾಲೆಯ ಐದನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಯಿತು.ಬೇಸಿಗೆ ರಜೆ ಹಿನ್ನೆಲೆಯಲ್ಲಿ ಶಾಲೆ ಮುಚ್ಚಿದ್ದರಿಂದ ಯಾವುದೇ ವಿದ್ಯಾರ್ಥಿಗಳು ಅಥವಾ ಸಿಬ್ಬಂದಿ ಒಳಗಿಲ್ಲದೆ ದೊಡ್ಡ ದುರಂತ ತಪ್ಪಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಮಾಹಿತಿ ತಿಳಿಯುತ್ತಿದ್ದಂತೆ ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳು ಸಂಭವಿಸಿಲ್ಲ.ಬೆಂಕಿಯಿಂದ ಶಾಲೆಯ ಐದನೇ ಮಹಡಿಗೆ ಹಾನಿಯಾಗಿದ್ದು, ನಷ್ಟದ ಪ್ರಮಾಣ ಹಾಗೂ ಅಗ್ನಿ ಅವಘಡದ ನಿಖರ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.A fire has broken out at Chitrakala School Ring Road #Bengal...









