Monday, August 17

ವಿದೇಶ

ಜಾತಿ ಗಣತಿ: ಕೇಂದ್ರದ ನಿರ್ಧಾರಕ್ಕೆ ‘ರಾಹುಲ್ ಸ್ಫೂರ್ತಿ’ ಎಂದ ಕೆಪಿಸಿಸಿ ನಾಯಕರು

ಜಾತಿ ಗಣತಿ: ಕೇಂದ್ರದ ನಿರ್ಧಾರಕ್ಕೆ ‘ರಾಹುಲ್ ಸ್ಫೂರ್ತಿ’ ಎಂದ ಕೆಪಿಸಿಸಿ ನಾಯಕರು

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯ ತೀರ್ಮಾನ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಬಿಜೆಪಿ, ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ 'X'ನಲ್ಲಿ ಬರೆದುಕೊಂಡಿದ್ದಾರೆ. ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ @BJP4India ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡ...
KSRTCಗೆ ಫೈನಾನ್ಸಿಯಲ್ ಎಕ್ಸ್’ಪ್ರೆಸ್ ಮೊಬಿಲಿಟಿ 2025 ರ ರಾಷ್ಟ್ರೀಯ ಪ್ರಶಸ್ತಿ

KSRTCಗೆ ಫೈನಾನ್ಸಿಯಲ್ ಎಕ್ಸ್’ಪ್ರೆಸ್ ಮೊಬಿಲಿಟಿ 2025 ರ ರಾಷ್ಟ್ರೀಯ ಪ್ರಶಸ್ತಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ 2025 ರ ರಾಷ್ಟ್ರೀಯ ಪ್ರಶಸ್ತಿಯನ್ನು ಅತ್ಯುತ್ತಮ ಸಾರ್ವಜನಿಕ ಸಾರಿಗೆ ಉಪಕ್ರಮದಡಿ ಪಡೆದಿದೆ.ನವದೆಹಲಿಯಲ್ಲಿ ಬುಧವಾರ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ನಿಗಮದ ಮುಖ್ಯ ತಾಂತ್ರಿಕ ಶಿಲ್ಪಿ ಕೆ.ಎಚ್.ಶ್ರೀನಿವಾಸ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.ಅತ್ಯುತ್ತಮ ಸಂಪರ್ಕ, ಸಾರ್ವಜನಿಕ ಲಭ್ಯತೆ ಹಾಗೂ ಉತ್ತಮ ಸಾರ್ವಜನಿಕ ಸಾರಿಗೆ ಸೇವೆಗಾಗಿ KSRTCಗೆ ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ ಪ್ರಶಸ್ತಿ ನೀಡಲಾಗಿದೆ...
ಚಿತ್ರದುರ್ಗ ಸಮೀಪ ಕಾರು ಅಪಘಾತದಲ್ಲಿ ಮೂವರು ದುರ್ಮರಣ

ಚಿತ್ರದುರ್ಗ ಸಮೀಪ ಕಾರು ಅಪಘಾತದಲ್ಲಿ ಮೂವರು ದುರ್ಮರಣ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಸಮೀಪ ಕಾತ್ರಾಳ ಗ್ರಾಮದ ಬಳಿ ಗುರುವಾರ ಸಂಭವಿಸಿದ ಕಾರು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.ಇನ್ನೋವಾ ಕಾರು ಕಾತ್ರಾಳ ಗ್ರಾಮದ ಕೆರೆ ಬಳಿ ಡಿವೈಡರ್​ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಕಾರಿನಲ್ಲಿದ್ದ ತಮಿಳುನಾಡು ಮೂಲದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು 31 ವರ್ಷದ ಶರವಣ, 29 ವರ್ಷದ ಸೇಂದಿಲ್ ಮತ್ತು 28 ವರ್ಷದ ಅರ್ಜುನ್ ಎಂದು ಗುರುತಿಸಲಾಗಿದೆ.ಅಪಘಾತದ ಸುದ್ದಿ ತಿಳಿದು ಸ್ಥಲಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
KSRTCಯಲ್ಲಿ ಎಲ್ಲಾ ಧರ್ಮೀಯರಿಗೂ ಸಮಾನ ರೂಲ್ಸ್ ಎಂದ ಸಚಿವರು

KSRTCಯಲ್ಲಿ ಎಲ್ಲಾ ಧರ್ಮೀಯರಿಗೂ ಸಮಾನ ರೂಲ್ಸ್ ಎಂದ ಸಚಿವರು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ನಿಯಮ ಬಾಹಿರವಾಗಿ ನಮಾಜ್ ಮಾಡಿರುವ ಚಾಲಕ-ಕಂ-ನಿರ್ವಾಹಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ ನೀಡಿದ್ದಾರೆ.ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಸಚಿವರು, 29-04-2025 ರ ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಕಾರ್ಯಾಚರಣೆ ಯಾಗುತ್ತಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ-ಕಂ-ನಿರ್ವಾಹಕ, ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿರುವ ಬಗ್ಗೆ ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಬಗ್ಗೆ ಉಲ್ಲೇಖ ಮಾಡಿದ್ದಾರೆ. .ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿದೆ. ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ್ಯದ‌ ಹಕ್ಕಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ‌ ತಮ್ಮ ಧರ್ಮವನ್ನು ಪಾಲಿಸಬಹುದಾಗಿದೆ. ಆದರೆ, ...
ಯುವ PROಗಳಿಗೂ ಡಾ.ಲತಾ ಮಾದರಿ, ದೇಶದ ಪ್ರತಿಷ್ಠಿತ ಸಂಸ್ಥೆಯಲ್ಲೂ ಜವಾಬ್ಧಾರಿ,

ಯುವ PROಗಳಿಗೂ ಡಾ.ಲತಾ ಮಾದರಿ, ದೇಶದ ಪ್ರತಿಷ್ಠಿತ ಸಂಸ್ಥೆಯಲ್ಲೂ ಜವಾಬ್ಧಾರಿ,

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದೇಶದಲ್ಲೇ ಅತ್ಯುತ್ತಮ ಸಾರ್ವಜನಿಕ ಸಂಪರ್ಕಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಡಾ.ಲತಾ ಟಿ.ಎಸ್ ಅವರು ಭಾರತೀಯ ಸಾರ್ವಜನಿಕ‌ ಸಂಪರ್ಕ ಮಂಡಳಿಗೆ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ರಾಜ್ಯ ಸರ್ಕಾರೀ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ನಿಗಮ (KSRTC) ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿರುವ ಡಾ.ಲತಾ ಟಿ.ಎಸ್. ಅವರು ರಾಜ್ಯ ಸರ್ಕಾರದ ಅಧೀನದ ನಿಗಮಗಳ ಸಾರ್ವಜನಿಕ ಸಂಪರ್ಕ ವ್ಯವಸ್ಥೆಯಲ್ಲಿ ಮಾದರಿ ಸೇವೆ ಸಲ್ಲಿಸಿದ್ದಾರೆ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. KSRTC ನಿಗಮ ಮತ್ತು ಸಾರ್ವಜನಿಕರ ಮಧ್ಯೆ ರಾಯಬಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಲತಾ ಟಿ.ಎಸ್. ಅವರು ಭಾರತೀಯ ಸಾರ್ವಜನಿಕ‌ ಸಂಪರ್ಕ ಮಂಡಳಿಯಲ್ಲೂ ಸುದೀರ್ಘ ಕಾಲದಿಂದ ಸೇವೆ ಸಲ್ಲಿಸುತ್ತಿದ್ದಾರೆ.ಯುವ ಸಾರ್ವಜನಿಕ ಸಂಪರ್ಕಾಧಿಕಾರಿಗಳಿಗೆ ಮಾದರಿಯಾಗಿರುವ ಡಾ.ಲತಾ ಅವರನ್ನು ಇದೀಗ ಭಾರತೀಯ ಸಾರ್ವಜನಿಕ‌ ಸಂಪರ್ಕ ಮಂಡಳಿಗೆ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಮಂಡಳಿಯ ಮುಖ್ಯಸ್ಥ ಎಂ.ಬಿ.ಜಯರಾಂ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಅಧ್ಯಕ್ಷರಾದ ಗೀ...
ಪೊಲೀಸ್ ಅಧಿಕಾರಿ ಕೈ ಮಾಡಲು ಯತ್ನ? ಸಿಎಂ ಕ್ಷಮಯಾಚನೆಗೆ ವಿಜಯೇಂದ್ರ ಆಗ್ರಹ

ಪೊಲೀಸ್ ಅಧಿಕಾರಿ ಕೈ ಮಾಡಲು ಯತ್ನ? ಸಿಎಂ ಕ್ಷಮಯಾಚನೆಗೆ ವಿಜಯೇಂದ್ರ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಪೊಲೀಸ್ ಅಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ @siddaramaiah ನವರ ವಿರುದ್ಧ ಇಂದು ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಇದರಿಂದ ವಿಚಲಿತಗೊಂಡ ಮುಖ್ಯಮಂತ್ರಿಗಳು… pic.twitter.com/8xiwMbHjqV — Vijayendra Yediyurappa (@BYVijayendra) April 28, 2025ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತ...
ಕಾಂಗ್ರೆಸ್‌ ನಾಯಕರಿಗೆ ಓಟು ಮುಖ್ಯವೇ ಹೊರತು ರಾಷ್ಟ್ರ ಮುಖ್ಯವಲ್ಲ!?

ಕಾಂಗ್ರೆಸ್‌ ನಾಯಕರಿಗೆ ಓಟು ಮುಖ್ಯವೇ ಹೊರತು ರಾಷ್ಟ್ರ ಮುಖ್ಯವಲ್ಲ!?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಶಾಸಕರ ಅಮಾನತು, ರಾಜ್ಯಪಾಲರೊಂದಿಗೆ ಚರ್ಚೆ, ಇದು ಪ್ರಜಾಪ್ರಭುತ್ವ ವಿರೋಧಿ ನಡೆ.. ಕಾಂಗ್ರೆಸ್‌ ನಾಯಕರಿಗೆ ಓಟು ಮುಖ್ಯವೇ ಹೊರತು ರಾಷ್ಟ್ರ ಮುಖ್ಯವಲ್ಲ.. ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ..ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಚರ್ಚಿಸಲಾಗಿದೆ. ರಾಜ್ಯಪಾಲರು ಈ ಕುರಿತು ಸರ್ಕಾರ ಹಾಗೂ ಸ್ಪೀಕರ್‌ ಜೊತೆ ಚರ್ಚಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದ್ದಾರೆ.ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಲಾಗಿದೆ. ಕಳೆದ ಅಧಿವೇಶನದಲ್ಲಿ ಸಚಿವ ರಾಜಣ್ಣ ಅವರ ಹನಿಟ್ರ್ಯಾಪ್‌ ಕುರಿತು ಹಾಗೂ ಮುಸ್ಲಿಂ ಮೀಸಲಾತಿ ವಿರುದ್ಧ ಬಿಜೆಪಿಯಿಂದ ಪ್ರತಿಭಟಿಸಲಾಗಿತ್ತು. ಈ ವೇಳೆ ಸ್ಪೀಕರ್‌ ಯು.ಟಿ.ಖಾದರ್‌ ಬಿಜೆಪಿಯ ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ. ದೇಶದಲ್ಲಿ ಕಾಂಗ್ರೆಸ್‌ ತುರ್ತು ಪರಿಸ್ಥಿತಿಯನ್ನು ತಂದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಅಧಿವೇಶನದಲ್ಲಿ ಮಾತಾಡಿ ಎಂದೇ...
ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳು.. ನಗರ ತುಂಬೆಲ್ಲಾ ಧೂಳು.. ಸರ್ಕಾರದ ಕಾಲೆಳೆದ ತೇಜಸ್ವಿ ಸೂರ್ಯ

ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳು.. ನಗರ ತುಂಬೆಲ್ಲಾ ಧೂಳು.. ಸರ್ಕಾರದ ಕಾಲೆಳೆದ ತೇಜಸ್ವಿ ಸೂರ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಎಲ್ಲೆಲ್ಲೂ ಗುಂಡಿಗಳು.. ನಗರ ತುಂಬೆಲ್ಲಾ ಧೂಳು.. ಜನ ಬದುಕುವುದೇ ಕಷ್ಟ.. ಈ ದುಸ್ಥಿತಿ ಬಗ್ಗೆ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಅವರು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಬಹಿರಂಗ ಪತ್ರ ಬರೆದಿರುವ ತೇಜಸ್ವಿ ಸೂರ್ಯ, ಸಾರ್ವಜನಿಕರ ದೂರುಗಳನ್ನಾಧರಿಸಿ ಬೆಂಗಳೂರು ನಗರದ ಅವ್ಯವಸ್ಥೆ ಬಗ್ಗೆ ಗಮನಸೆಳೆದಿದ್ದಾರೆ.'ಭಾನುವಾರ ಬೆಳಿಗ್ಗೆ ಟಿಸಿಎಸ್ ವರ್ಲ್ಡ್ 10K ಕಾರ್ಯಕ್ರಮದಲ್ಲಿ ನೀವಿಬ್ಬರೂ ಭಾಗವಹಿಸಿರುವುದು ನೋಡಿ ಸಂತಸವಾಯಿತು. ಈ ತರಹದ ಕಾರ್ಯಕ್ರಮಗಳು ನಮ್ಮ ಬೆಂಗಳೂರಿನ ಬ್ರ್ಯಾಂಡ್ ಮೌಲ್ಯ ಹೆಚ್ಚಿಸುವುದಕ್ಕೆ ಮತ್ತು ಸಾರ್ವಜನಿಕ ಸಹಭಾಗಿತ್ವವನ್ನು ಉತ್ತೇಜಿಸಲು ತೊಡಗಿಸಿಕೊಂಡಿರುವುದು ಗಮನಾರ್ಹ' ಎಂದು ಹೊಗಳುತ್ತಲೇ, 'ನಾನು ಬೆಂಗಳೂರು ಸಂಸದನಾಗಿ ಮಾತ್ರವಲ್ಲ, ಒಬ್ಬ ಓಟಗಾರನಾಗಿ, ನಾಗರಿಕನಾಗಿ, ಅತ್ಯಂತ ನೋವಿನಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ' ಎಂದು ಅಸಮಾಧಾನವನ್ನೂ ಹೊರಹಾಕಿದ್ದಾರೆ. My op...
ವಿವಾದದ ಬಿರುಗಾಳಿ ಎಬ್ಬಿಸಿದ ಸಿಎಂ ಹೇಳಿಕೆ: ಸಿದ್ದರಾಮಯ್ಯರಿಗೆ ‘ಪಾಕಿಸ್ತಾನ ರತ್ನ’ ಗ್ಯಾರೆಂಟಿ ಎಂದ ಸಾಮ್ರಾಟ್

ವಿವಾದದ ಬಿರುಗಾಳಿ ಎಬ್ಬಿಸಿದ ಸಿಎಂ ಹೇಳಿಕೆ: ಸಿದ್ದರಾಮಯ್ಯರಿಗೆ ‘ಪಾಕಿಸ್ತಾನ ರತ್ನ’ ಗ್ಯಾರೆಂಟಿ ಎಂದ ಸಾಮ್ರಾಟ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಪಹಲ್ಗಾಮ್ ದಾಳಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿವಾದದ ಬಿರುಗಾಳಿ ಎಬ್ಬಿಸಿದೆ. ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಯನ್ನು ಮುಂದಿಟ್ಟು ಪಾಕಿಸ್ತಾನದ ಸುದ್ದಿವಾಹಿನಿಗಳು ಭಾರತ ಬಗ್ಗೆ ಗೇಲಿ ಮಾಡಲಾರಂಭಿಸಿದೆ.Pak media highlights CM Siddaramaiah’s ‘no war’ remarks, K’taka BJP says ‘puppet of enemy nation’ಪಾಕಿಸ್ತಾನದ ವಿರುದ್ಧ ಮೋದಿ ಸರ್ಕಾರ ರಾಜತಾಂತ್ರಿಕ ನಿರ್ಬಂಧಗಳನ್ನು ಹೇರಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಪ್ರಸ್ತುತ ಪಾಕಿಸ್ತಾನದ ಜೊತೆಗೆ ಯುದ್ಧದ ಅನಿವಾರ್ಯತೆ ಎದುರಾಗಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಮುಂದಿಟ್ಟು ಸುದ್ದಿ ಬಿತ್ತರಿಸಿರುವ ಪಾಕಿಸ್ತಾನದ ಸುದ್ದಿ ವಾಹಿನಿಗಳು, ಪಾಕಿಸ್ತಾನ ವಿಚಾರದಲ್ಲಿ ಭಾರತದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ ಎಂದು ಬಣ್ಣಿಸಿವೆ.Congress rushes to Pakistan’s rescue. Karnataka Chief Minister Siddaramaiah, who owes his position to Muslim votes, is being quoted across Pakistan for suggesting that we focus on...
ಮುಂಗಾರು ಪೂರ್ವ ಮಳೆ ಹಿನ್ನೆಲೆ; ಬೆಂಗಳೂರಿಗೆ ಡೆಂಗ್ಯೂ ಸವಾಲು

ಮುಂಗಾರು ಪೂರ್ವ ಮಳೆ ಹಿನ್ನೆಲೆ; ಬೆಂಗಳೂರಿಗೆ ಡೆಂಗ್ಯೂ ಸವಾಲು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಡೆಂಗ್ಯೂ ಹಾವಳಿ ಮತ್ತೆ ಭೀತಿಯ ಏಲ್ ಎಬ್ಬಿಡಿದೆ. ಅಕಾಲಿಕ ಮಳೆಮಳೆಯಿಂದಾಗಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು ಡೆಂಗ್ಯೂ ಸೋಂಕಿನ ಪ್ರಮಾಣವೂ ಹೆಚ್ಚಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಈ ನಡುವೆ ಈ ವರ್ಷಾರಂಭದ ಕೆಲವು ತಿಂಗಳಲ್ಲೇ 435 ಮಂದಿಯಲ್ಲಿ ಡೆಂಗ್ಯೂ ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಬೇಸಿಗೆ ಹಾಗೂ ಮುಂಗಾರು ಪೂರ್ವ ಮಳೆ ಹಿನ್ನೆಲೆಯಲ್ಲಿ ಜ್ವರ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುಮಾರು 2,300ಕ್ಕೂ ಹೆಚ್ಚು ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 435 ಮಂದಿಯಲ್ಲಿ ಡೆಂಗ್ಯೂ ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ....