Monday, August 17

ವಿದೇಶ

ವಿವಾದದ ಬಿರುಗಾಳಿ ಎಬ್ಬಿಸಿದ ಸಿದ್ದರಾಮಯ್ಯ ಹೇಳಿಕೆ: ಭಾರತ ಬಗ್ಗೆ ಪಾಕ್ ಗೇಲಿ

ವಿವಾದದ ಬಿರುಗಾಳಿ ಎಬ್ಬಿಸಿದ ಸಿದ್ದರಾಮಯ್ಯ ಹೇಳಿಕೆ: ಭಾರತ ಬಗ್ಗೆ ಪಾಕ್ ಗೇಲಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಪಹಲ್ಗಾಮ್ ದಾಳಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿವಾದದ ಬಿರುಗಾಳಿ ಎಬ್ಬಿಸಿದೆ. ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಯನ್ನು ಮುಂದಿಟ್ಟು ಪಾಕಿಸ್ತಾನದ ಸುದ್ದಿವಾಹಿನಿಗಳು ಭಾರತ ಬಗ್ಗೆ ಗೇಲಿ ಮಾಡಲಾರಂಭಿಸಿದೆ.ಪಾಕಿಸ್ತಾನದ ವಿರುದ್ಧ ಮೋದಿ ಸರ್ಕಾರ ರಾಜತಾಂತ್ರಿಕ ನಿರ್ಬಂಧಗಳನ್ನು ಹೇರಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಪ್ರಸ್ತುತ ಪಾಕಿಸ್ತಾನದ ಜೊತೆಗೆ ಯುದ್ಧದ ಅನಿವಾರ್ಯತೆ ಎದುರಾಗಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಬಗೆ ಬಗೆಯಲ್ಲಿ ವಿಶ್ಲೇಷಿಸಿರುವ ಪಾಕಿಸ್ತಾನದ ಸುದ್ದಿ ವಾಹಿನಿಗಳು, ಪಾಕಿಸ್ತಾನ ವಿರುದ್ದದ ವಿಚಾರದಲ್ಲಿ ಭಾರತದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ ಎಂದು ಬಣ್ಣಿಸಿವೆ. ಈ ಬೆಳೆವಣಿಗೆ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. Congress rushes to Pakistan’s rescue. Karnataka Chief Minister Siddaramaiah, who owes his position to Muslim votes, is being quoted across Pakistan for suggesting that we focus on security measures in Kashmir instead of...
ಸಿಎಂ ಸಿದ್ದರಾಮಯ್ಯನವರ ಮಾತು ಆಘಾತ ತಂದಿದೆ, ಕೂಡಲೇ ಕ್ಷಮೆ ಯಾಚಿಸಲಿ

ಸಿಎಂ ಸಿದ್ದರಾಮಯ್ಯನವರ ಮಾತು ಆಘಾತ ತಂದಿದೆ, ಕೂಡಲೇ ಕ್ಷಮೆ ಯಾಚಿಸಲಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದೇಶ ಸಂಕಷ್ಟದಲ್ಲಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಆಘಾತ ತಂದಿದೆ. ಮತ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಅವರಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ ಹಾಗೂ ಖಂಡನೀಯ. ಈ ಕುರಿತು ಸಿಎಂ ಸಿದ್ದರಾಮಯ್ಯ ಜನರ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿ ನಾಗರಿಕರು ಸಂಭ್ರಮಿಸುತ್ತಿರುವಾಗ ಅವರನ್ನು ಕೊಂದಂತೆಯೇ, ಜಮ್ಮು ಕಾಶ್ಮೀರದಲ್ಲೂ ಭಯೋತ್ಪಾದಕರು ಹಿಂದೂಗಳ ಹತ್ಯೆ ಮಾಡಿದ್ದಾರೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಕ್ಷಮಿಸಬಹುದು. ದೇಶಕ್ಕೇನಾದರೂ ಆಗಲಿ ಪರವಾಗಿಲ್ಲ, ಮತ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಅವರಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ. ಅವರು ಯಾವುದೇ ಸಿದ್ಧಾಂತ ಇಲ್ಲದ ವ್ಯಕ್ತಿ. ಅವರಿಗೆ ಅಧಿಕಾರದಲ್ಲಿದ್ದರೆ ಸಾಕು ಎಂದರು.ದೇಶಾದ್ಯಂತ ಜನರು ಪ್ರತಿಭಟನೆ ನಡೆಸುತ್ತಿರುವಾಗ, ಹೋದ ಜೀವಗಳನ್ನು ವಾಪಸ್‌ ತರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ಘಟನೆ ಅವರ ಕುಟುಂಬಕ್ಕೆ ಆಗಿದ್ದರೆ ಅವರ ಮಾತು ಹೀಗೆ ಇರುತ್ತಿರಲಿಲ್ಲ. ...
ರೈಲ್ವೆ ಇಲಾಖೆಯು ಮಿಷನ್‌ ಮೋಡ್‌ ನೇಮಕಾತಿ ಅಭಿಯಾನದಡಿ 5.02 ಲಕ್ಷ ಜನರಿಗೆ ಉದ್ಯೋಗಾವಕಾಶ

ರೈಲ್ವೆ ಇಲಾಖೆಯು ಮಿಷನ್‌ ಮೋಡ್‌ ನೇಮಕಾತಿ ಅಭಿಯಾನದಡಿ 5.02 ಲಕ್ಷ ಜನರಿಗೆ ಉದ್ಯೋಗಾವಕಾಶ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಪ್ರಧಾನಮಂತ್ರಿಯವರ ಪ್ಯಾಕೇಜ್‌ ಅಡಿಯಲ್ಲಿ ಉದ್ಯೋಗ, ಕೌಶಲ್ಯಾಭಿವೃದ್ಧಿ ಹಾಗೂ ಇಂಟರ್ನಶಿಪ್‌ ಯೋಜನೆಗಳಿಂದ ಸುಮಾರು 4.10 ಕೋಟಿ ಯುವಜನರಿಗೆ ಪ್ರಯೋಜನವಾಗಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಆಯೋಜಿಸಲಾದ ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದ ಅವರು, ರೈಲ್ವೆ ಇಲಾಖೆಯು ಮಿಷನ್‌ ಮೋಡ್‌ ನೇಮಕಾತಿ ಅಭಿಯಾನದಡಿಯಲ್ಲಿ 2014 ರಿಂದ 2024 ರವರೆಗೆ 5.02 ಲಕ್ಷ ಯುವಜನರಿಗೆ ಉದ್ಯೋಗಾವಕಾಶ ನೀಡಿದೆ ಎಂದು ತಿಳಿಸಿದರು.ಪ್ರಧಾನಮಂತ್ರಿಯವರ ಆಶಯದಂತೆ ಉದ್ಯೋಗ ಸೃಷ್ಟಿಯ ಪ್ರಕ್ರಿಯೆಯನ್ನು ನಿರಂತರವಾಗಿ ನಡೆಸಲು ರೈಲ್ವೆ ಇಲಾಖೆಯು ವಾರ್ಷಿಕ ನೇಮಕಾತಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2024ರ ಜನವರಿಯಿಂದ ಇದುವರೆಗೆ ರೈಲ್ವೆ ಇಲಾಖೆಯಲ್ಲಿ ಸುಮಾರು 71,000 ಹುದ್ದೆಗಳನ್ನು ಸೃಷ್ಟಿಸಿದ್ದು ಇವುಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಅವರು ಹೇಳಿದರು. 2047ರಲ್ಲಿ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಕ್ರಮಗಳನ್ನು ಸರ್ಕಾರ ಕೈಗೊ...
ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ: ಸಿದ್ದರಾಮಯ್ಯ

ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ: ಸಿದ್ದರಾಮಯ್ಯ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದು ತಿಳಿಸಿದರು.ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು.… pic.twitter.com/TDIXMs3m6i — Siddaramaiah (@siddaramaiah) April 26, 2025   ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂ...

40 ವರ್ಷಗಳ ರಾಜಕೀಯ ಅನುಭವಿಗೆ ಕನಿಷ್ಠ ಪರಿಜ್ಞಾನ ಇಲ್ಲದಿರುವುದು ಕರ್ನಾಟಕದ ದೌರ್ಭಾಗ್ಯ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು:  40 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಇರುವ, ಎರಡೆರಡು ಬಾರಿ ಮುಖ್ಯಮಂತ್ರಿ ಆಗಿರುವ ಸಿಎಂ ಸಿದ್ದರಾಮಯ್ಯನವರಿಗೆ ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನ ಇಲ್ಲದಿರುವುದು ಕರ್ನಾಟಕದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಇಸ್ಲಾಮಿಕ್ ಉಗ್ರರ ದಾಳಿ ಆಗಿದೆ. ಗಡಿಯಾಚೆಗಿನ ನುಸುಳುಕೋರರು ನಡೆಸಿರುವ ಈ ಕೃತ್ಯ ಈಗ ಕೇವಲ ರಾಷ್ಟ್ರೀಯ ಭದ್ರತೆಯ ಪ್ರಶ್ನೆಯಾಗಿ ಉಳಿದಿಲ್ಲ. ಇದು ಭಾರತದ ಸಾರ್ವಭೌಮತೆಗೆ, ಘನತೆಗೆ ಎಸೆದಿರುವ ಸವಾಲು. ಇಂತಹ ಸನ್ನಿವೇಶದಲ್ಲಿ ಇಡೀ ದೇಶವೇ ಪಕ್ಷಾತೀತವಾಗಿ ಒಂದು ದನಿಯಾಗಿರಬೇಕು. ಇದಕ್ಕಾಗಿಯೇ ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ನಡೆಸಿ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿದೆ. ನಿಮ್ಮದೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕತ್ವ ಸೇರಿದಂತೆ ಎಲ್ಲ ಪಕ್ಷಗಳೂ ಸರ್ವಾನುಮತದಿಂದ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನ ಬೆಂಬಲಿಸುತ್ತೇವೆ ಎಂದು ಹೇಳಿವೆ ಎಂದು ಅಶೋಕ್ ಅವರು ಸಿಎಂ ಅವರ ಗಮನಸೆಳೆದಿದ್ದಾರೆ...
ಅಂತರಿಕ್ಷ ವಿಜ್ಞಾನಿ ಡಾ. ಕಸ್ತೂರಿರಂಗನ್ ವಿಧಿವಶ; ಆರೆಸ್ಸೆಸ್ ಸಂತಾಪ

ಅಂತರಿಕ್ಷ ವಿಜ್ಞಾನಿ ಡಾ. ಕಸ್ತೂರಿರಂಗನ್ ವಿಧಿವಶ; ಆರೆಸ್ಸೆಸ್ ಸಂತಾಪ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸುಪ್ರಸಿದ್ಧ ಅಂತರಿಕ್ಷ ವಿಜ್ಞಾನಿ ಡಾ. ಕಸ್ತೂರಿರಂಗನ್ ಅವರ ದೇಹಾವಸಾನದಿಂದ ಭಾರತದ ರಾಷ್ಟ್ರಜೀವನದಲ್ಲಿ ಒಂದು ದೇದೀಪ್ಯಮಾನ ನಕ್ಷತ್ರದ ಅಸ್ತಂಗತವಾಗಿದೆ. ಡಾ. ರಂಗನ್ ಅವರು ಈಗ ನೆನಪು ಮಾತ್ರ.ಪದ್ಮವಿಭೂಷಣ ಸಮ್ಮಾನಿತ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇದರ ಮಾಜಿ ಅಧ್ಯಕ್ಷರಾದ ಡಾ.ರಂಗನ್ ಅವರು ವೈಜ್ಞಾನಿಕ ಕ್ಷೇತ್ರದಲ್ಲಿ ವೈಶ್ವಿಕ ಸ್ತರದ ದಿಗ್ಗಜರಾಗಿದ್ದರು.‌ಅದರ ಜೊತೆಗೆ ರಾಜ್ಯಸಭಾ, ಯೋಜನಾ ಆಯೋಗದಂತಹ ವಿವಿಧ ಕ್ಷೇತ್ರಗಳಲ್ಲಿ ಅವರು ರಾಷ್ಟ್ರದ ಸೇವೆಗೈದಿದ್ದಾರೆ. ಅವರು ಬಾಹ್ಯಕಾಶ ಕ್ಷೇತ್ರಕ್ಕೆ ನೀಡಿದ ಸೇವೆಗೆ ಸಮಾನವಾಗಿ ಭಾರತದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ನಿರ್ಮಿಸುವುದರಲ್ಲಿ ಹಾಗೂ ಅನುಷ್ಠಾನಗೊಳಿಸುವುದರಲ್ಲಿ ಕೊಡುಗೆ ನೀಡಿರುವುದು ಒಂದು ಐತಿಹಾಸಿಕ ಸಾಧನೆಯಾಗಿದೆ. ವಿಜ್ಞಾನಿ, ನೀತಿ ನಿರ್ಮಾತೃ, ಶಿಕ್ಷಣತಜ್ಞ, ಪರಿಸರತಜ್ಞ ಹೀಗೆ ಹಲವು ಭೂಮಿಕೆಗಳಲ್ಲಿ ಪ್ರಭಾವಿಯಾಗಿ ಕಾರ್ಯನಿರ್ವಹಿಸಿದ ಡಾ. ಕಸ್ತೂರಿರಂಗನ್ ಅವರು ಉದಾತ್ತ ಮಾನವತಾವಾದಿ ಮತ್ತು ಸಂವೇದನಾಶೀಲ ವ್ಯಕ್ತಿಯಾಗಿದ್ದರು.ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರವಾಗಿ, ಡಾ. ಕಸ್ತೂರಿರಂಗನ್ ಅವ...
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ: ಅಶೋಕ್

ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ: ಅಶೋಕ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು, ಕಾಂಗ್ರೆಸ್‌ ನಾಯಕರು ದೇಶದ ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿದರೆ, ಮತ್ತೆ ಇವರಿಗೆ ಯಾರ ಮೇಲೆ ನಂಬಿಕೆ ಇದೆ ಎಂದು ಕಾಂಗ್ರೆಸ್ ನಾಯಕರ ವಿರುದ್ದ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶ ಒಂದಾಗಿ ಭಯೋತ್ಪಾದಕ ದಾಳಿಯನ್ನು ಖಂಡಿಸಬೇಕು. ಉಗ್ರರು ಹಿಂದೂ ಎಂದು ಹೇಳಿಯೇ ಹುಡುಕಿ ಕೊಂದಿದ್ದಾರೆ. ಬೇಹುಗಾರಿಕೆ ಸರಿಯಲ್ಲ, ಯೋಧರು ಸರಿಯಲ್ಲ ಎಂದು ಟೀಕೆ ಮಾಡುವುದು ಸರಿಯಿಲ್ಲ ಎಂದರು.ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟವಾದಾಗ ಯಾರು ವಿಫಲರಾಗಿದ್ದರು? ಕುಕ್ಕರ್‌ ಬಾಂಬ್‌ ಸ್ಪೋಟಗೊಂಡಾಗ ಯಾರು ವಿಫಲರಾಗಿದ್ದರು? ಸಚಿವರ ವಿರುದ್ಧ ಹನಿಟ್ರ್ಯಾಪ್‌ ನಡೆಯುತ್ತಿರುವಾಗ ಯಾರು ವಿಫಲರಾಗಿದ್ದಾರೆ? ಇಂತಹ ಕಾಂಗ್ರೆಸ್‌ ಪಕ್ಷ ದೇಶದ ಯೋಧರ ಬಗ್ಗೆ ಮಾತಾಡುವುದು ಬೇಡ ಎಂದರು.ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ. ಅವರಿಗೆ ನೆರವು ಕೊಡುವುದು, ಬೇಲ್‌ ಕೊಡಿಸುವುದು, ಕಾನೂನು ಸಹಾಯ ಮಾಡುವುದು ನಡೆಯುತ್ತಿದೆ. ಇಂತಹವರನ್ನು ಕೂಡ ಬಿಡಲ್ಲ ಎಂದು ಪ್ರಧಾನಿ ನರೇಂದ...
ಬೆಲೆ ಏರಿಕೆ ವಿರುದ್ಧ BJPಯಿಂದ ಮೂರು ದಿನ ಹೋರಾಟ

ಬೆಲೆ ಏರಿಕೆ ವಿರುದ್ಧ BJPಯಿಂದ ಮೂರು ದಿನ ಹೋರಾಟ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದ್ದಾರೆ.ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಲಯ ಆಯುಕ್ತರ ಕಚೇರಿಯ ಮುಂದೆ ಏಪ್ರಿಲ್‌ 28 ರಿಂದ ಮೂರು ದಿನಗಳ ಕಾಲ ಹೋರಾಟ ಮಾಡಲಾಗುತ್ತದೆ. ಹಾಲು, ವಿದ್ಯುತ್‌ ಹಾಗೂ ಆಸ್ತಿ ತೆರಿಗೆ ಹಾಗೂ ಪಾರ್ಕಿಂಗ್‌ ಶುಲ್ಕದ ಬಗ್ಗೆ ಹೋರಾಟ ಮಾಡಲಾಗುವುದು. ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್‌ ಭರಪೂರ ತೆರಿಗೆಗಳನ್ನು ಹೇರಿದೆ. ಪ್ರತಿ ಮನೆಗಳಿಗೆ ಹೋಗಿ ಕರಪತ್ರ ಹಂಚಲಾಗುವುದು. ಬಿಬಿಎಂಪಿ ಚುನಾವಣೆಯನ್ನು ಸರ್ಕಾರ ಮುಂದೂಡುತ್ತಿದೆ. ಈ ಬಗ್ಗೆ ಕೂಡ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಸ್ಪೀಕರ್‌ ಜೊತೆ ಚರ್ಚಿಸಲಾಗಿದೆ. ಈ ಅಮಾನತು ಆ ಒಂದು ಅಧಿವೇಶನಕ್ಕೆ ಮಾತ್ರ ಸೀಮಿತವಾಗಬೇಕು. ಅದನ್ನು ಬಿಟ್ಟು ಹೊರಗೆ ಭತ್ಯೆ ಕೊಡುವುದಿಲ್ಲ ಎನ್ನುವುದು ಸರಿಯಲ್ಲ. ಇದು ಅಸಂವಿಧಾನಿಕವಾದ ಕ್ರಮ ಎಂದರು.ಗ್ರೇಟರ್‌ ಬೆಂಗಳೂರು ವಿಧೇಯಕದ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ರ...
ಕರ್ನಾಟಕದಲ್ಲೂ ವಿದೇಶಿಗರ ಬಗ್ಗೆ ನಿಗಾ ವಹಿಸಲು ಸಿಎಂ ಸೂಚನೆ

ಕರ್ನಾಟಕದಲ್ಲೂ ವಿದೇಶಿಗರ ಬಗ್ಗೆ ನಿಗಾ ವಹಿಸಲು ಸಿಎಂ ಸೂಚನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಚಾಮರಾಜನಗರ : ಕಾಶ್ಮೀರದ ಪಹಲ್ಗಮ್ ಬಳಿ ಉಗ್ರರ ಪೈಶಾಚಿಕ ಕೃತ್ಯದ ನಂತರ ಇತ್ತ ಕರ್ನಾಟಕದಲ್ಲೂ ವಿದೇಶಿಗರ ಬಗ್ಗೆ ನಿಗಾ ವಹಿಸಲು ಸಿಎಂ ಸೂಚಿಸಿದ್ದಾರೆ.ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಿರುವುದಾಗಿ ತಿಳಿಸಿರುವ ಸಿಎಂ ಸಿದ್ದರಾಮಯ್ಯ, ಭಾರತದಲ್ಲಿ ನೆಲೆಸಿರುವ ವಿದೇಶದವರ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಇಲಾಖೆ ರಾಜ್ಯಗಳಿಗೆ ಸೂಚನೆ ನೀಡಿದೆ. ಉಗ್ರರು ಯಾವುದೇ ರಾಜ್ಯದಲ್ಲಿರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದಿದ್ದಾರೆ.ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿದ್ದರಾಮಯ್ಯ, ಉಗ್ರರ ಚಟುವಟಿಕೆಗಳಿಗೆ ಅವಕಾಶ ಕೊಡಕೂಡದು. ಪಹಲ್ಗಾಮ್ ಘಟನೆ ಅತ್ಯಂತ ಹೇಯ ಹಾಗೂ ಅಮಾನುಷವಾದುದ್ದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಬಂದೋಬಸ್ತ್ ಸಡಿಲಗೊಳಿಸಬಾರದಿತ್ತು. ಇಲ್ಲಿ ಗುಪ್ತಚರ ವ್ಯವಸ್ಥೆಯ ವೈಫಲ್ಯವಾಗಿದೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ...
ಪ್ರಯಾಣಿಕರ ಬೆಂಗಾವಲಾಗಿ ನಿಂತ ಮಂತ್ರಿ; ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ನಿರ್ವಾಹಕನ ಅಮಾನತು ಸಾಲದು, ವಜಾಕ್ಕೆ ನಿರ್ದೇಶನ

ಪ್ರಯಾಣಿಕರ ಬೆಂಗಾವಲಾಗಿ ನಿಂತ ಮಂತ್ರಿ; ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ನಿರ್ವಾಹಕನ ಅಮಾನತು ಸಾಲದು, ವಜಾಕ್ಕೆ ನಿರ್ದೇಶನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮಹಿಳಾ ಪ್ರಯಾಣಿಕರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ KSRTC ನಿರ್ವಹನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರಯಾಣಿಕರ ಜೊತೆ ಅಸಭ್ಯವಾಗಿ ವರ್ತಿಸಿರುವುದಕ್ಕೆ ಅಮಾನತು ಮಾಡಿದರೆ ಸಾಲದು, ಸೇವೆಯಿಂದಲೇ ವಜಾ ಮಾಡಬೇಕಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಪಾದಿಸಿದ್ದಾರೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು KSRTC ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.ಬಸ್ಸಿನಲ್ಲಿ ನಿರ್ವಾಹಕನೊಬ್ಬ ಮಹಿಳಾ ಪ್ರಯಾಣಿಕರೊಡನೆ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿವೀಡಿಯೋ ಹರಿದಾಡಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ KSRTC ಆಡಳಿತ ಮಂಡಳಿ, ಆರೋಪಕ್ಕೆ ಗುರಿಯಾಗಿರುವ ಮಂಗಳೂರು ವಿಭಾಗದ KSRTC ನಿರ್ವಹನನ್ನು ಸೇವೆಯಿಂದ ಅಮಾನತುಗೊಳಿಸಿದೆ.ಈ ನಡುವೆ, ಆರೋಪ ಬಗ್ಗೆ ಕೆಂಡಾಮಂಡಲವಾಗಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ KSRTC ವ್ಯವಸ್ಥಾಪಕ ನಿರ್ದೇಶಕರಿಗೆ ಟಿಪ್ಪಣಿ ರವಾನಿಸಿದ್ದು, ಪ್ರಸಾರವಾದ ವಿಡಿಯೋಗೆ ಸಂಬಂಧಪಟ್ಟಂತೆ, ಮೇಲ್ನೋಟಕ್ಕೆ ಘಟನೆಗೆ ಸಂಬಂಧಪಟ್ಟಂತೆ ಕ...