Monday, August 17

ವಿದೇಶ

ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ

ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಪಹಲ್ಗಾಮ್'ನ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ಕನ್ನಡಿಗರ ಮೃತದೇಹಗಳನ್ನು ಬೆಂಗಳೂರಿಗೆ ತರಲಾಗಿದೆ.ಕನ್ನಡಿಗರಾದ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಅವರ ಪಾರ್ಥಿವ ಶರೀರಗಳನ್ನು ಭಾರತ ಸರ್ಕಾರದ ಪರವಾಗಿ ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ.ಸೋಮಣ್ಣ ಅವರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಿದರು. ಸಂಸದ ತೇಜಸ್ವಿ ಸೂರ್ಯ ಕೂಡಾ ಉಪಸ್ಥಿತರಿದ್ದರು.ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿದ ಸಚಿವರು ದುಃಖ ತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು....
“ಪಹಲ್ಗಮ್ ಘಟನೆ ಮರುಕಳಿಸಬಾರದು: ನಾವೂ ಕೇಂದ್ರದ ಜೊತೆಗಿರುತ್ತೇವೆ”; ಪದ್ಮರಾಜ್

“ಪಹಲ್ಗಮ್ ಘಟನೆ ಮರುಕಳಿಸಬಾರದು: ನಾವೂ ಕೇಂದ್ರದ ಜೊತೆಗಿರುತ್ತೇವೆ”; ಪದ್ಮರಾಜ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ಕಾಶ್ಮೀರದ ಫಹಲ್ಗಾಮ್‌ನಲ್ಲಿ ಉಗ್ರವಾದಿಗಳಿಂದ ನಡೆದ ಪ್ರವಾಸಿಗರ ಹತ್ಯೆಯ ಹೃದಯ ವಿದ್ರಾವಕ ಘಟನೆ ಇಡೀ ಮಾನವ ಕುಲಕೆ ಮಾರಕ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ. ಫಹಲ್ಗಾಮ್‌ ಕೃತ್ಯವನ್ನು ಖಂಡಿಸಿರುವ ಪದ್ಮರಾಜ್ ಪೂಜಾರಿ, ನ್ಯಾಯ, ನತೆ ಮತ್ತು ಶಾಂತಿ ಬಯಸುವ ಸವಾಜದಲ್ಲಿ ಹಿಂಸೆಗೆ ಸ್ಥಾನ ಇರಬಾರದು ಎಂದು ಪ್ರತಿಪಾದಿಸಿದ್ದಾರೆ.ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಜೀವ ನಷ್ಟವು ನಮ್ಮ ಸಾಮೂಹಿಕ ಆತ್ಮಸಾಕ್ಷಿಗೆ ಆದ ಗಾಯ. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಅವಾಯಕರ ಜೀವಗಳನ್ನು ಬಲಿಯಾಗಿಸಿ, ಅನೇಕ ಕುಟುಂಬಗಳನ್ನೇ ನಾಶ ಮಾಡಿರುವುದು ಹಿಂಸಾಚಾರವಷ್ಟೇ ಅಲ್ಲ. ಸಂಪೂರ್ಣ ಅವಾನವೀಯ ಕೃತ್ಯ. ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ಕೆಟ್ಟ ಬೆಳವಣಿಗೆ ಎಂದಿದ್ದಾರೆ.ಈ ವಿಚಾರದಲ್ಲಿ ನಾವು ಪಕ್ಷ ಭೇದ ಮರೆತು ಕೇಂದ್ರ ಸರ್ಕಾರದ ಪರ ನಿಲ್ಲುತ್ತೇವೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು. ಇಂತಹ ಭಯೋತ್ಪಾದಕ ಸಂಘಟನ...
ಪಹಲ್ಗಮ್ ದಾಳಿ: ಗುಪ್ತಚರ ಮಾಹಿತಿಯ ವೈಫಲ್ಯ ಎಂದ ಸಿದ್ದರಾಮಯ್ಯ

ಪಹಲ್ಗಮ್ ದಾಳಿ: ಗುಪ್ತಚರ ಮಾಹಿತಿಯ ವೈಫಲ್ಯ ಎಂದ ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಎಂಬುವರು ಮೃತಪಟ್ಟಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ… pic.twitter.com/KuRmMStw9X— Siddaramaiah (@siddaramaiah) April 23, 2025ಉಗ್ರರ ದಾಳಿ ಪೂರ್ವಯೋಜಿತ ಸಂಚು. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ, ಇಷ್ಟು ದೊಡ್ಡಮಟ್ಟದ ಕೃತ್ಯ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿತ್ತು, ಈಗಲೂ ಅದೇ ಮಾದರಿಯ ಘಟನೆ ಮರುಕಳಿಸಿದೆ ಎಂದು ಸಿಎಂ ಹೇಳಿದ್ದಾರೆ.ಮೃತರ ಕುಟುಂಬಗಳಿಗೆ ಪರಿಹಾರ ...
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬಿಜೆಪಿ ಕ್ಯಾಂಡಲ್  ಮಾರ್ಚ್

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬಿಜೆಪಿ ಕ್ಯಾಂಡಲ್ ಮಾರ್ಚ್

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ನೇತೃತ್ವದಲ್ಲಿ ಕ್ಯಾಂಡಲ್ ಮಾರ್ಚ್ ನಡೆಯಿತು. ಬಳಿಕ ದಾಳಿಯಲ್ಲಿ ಮೃತರಾದವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಸಿ.ಟಿ.ರವಿ, ಶಾಸಕರಾದ ವೇದವ್ಯಾಸ್ ಕಾಮತ್, ನಾಯಕರಾದ ಎಸ್. ಹರೀಶ್, ಸಪ್ತಗಿರಿ ಗೌಡ, ಜಗದೀಶ್ ಹಿರೇಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರತಿಪಕ್ಷ ನಾಯಕರಾದ ಶ್ರೀ @RAshokaBJP ಅವರ ನೇತೃತ್ವದಲ್ಲಿ ಕ್ಯಾಂಡಲ್ ಮಾರ್ಚ್ ನಡೆಯಿತು. ಬಳಿಕ ದಾಳಿಯಲ್ಲಿ ಮೃತರಾದವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ @CTRavi_BJP… pic.twitter.com/gGB5alNcKI— BJP Karnataka (@BJP4Karnataka) April 23, 2025...
ಪೆಹಲ್ಗಮ್ ದಾಳಿಯ ಪ್ರತಿಧ್ವನಿ: ರಾಜ್ಯದಲ್ಲಿನ ಸ್ಲೀಪರ್‌ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ

ಪೆಹಲ್ಗಮ್ ದಾಳಿಯ ಪ್ರತಿಧ್ವನಿ: ರಾಜ್ಯದಲ್ಲಿನ ಸ್ಲೀಪರ್‌ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿ, ಅಭಿವೃದ್ಧಿಗೆ ದಾರಿ ಮಾಡಿದ್ದರು. ನಾನು ಕೂಡ ಎರಡು ವರ್ಷಗಳ ಹಿಂದೆ ಅಲ್ಲಿಗೆ ಭೇಟಿ ನೀಡಿದ್ದೆ. ವ್ಯಾಪಾರ ವಹಿವಾಟು ಉತ್ತಮವಾಗಿ ನಡೆಯುತ್ತಿತ್ತು. ಬಹುಸಂಖ್ಯಾತ ಮುಸ್ಲಿಮರು ಪ್ರತಿ ದಿನ 10,000 ರೂ. ಸಂಪಾದನೆ ಮಾಡುತ್ತಿದ್ದೇವೆ ಎಂದು ಖುಷಿಯಿಂದ ಹೇಳಿಕೊಂಡಿದ್ದರು. ಆದರೆ ಈಗ ಪಾಕಿಸ್ತಾನ ಪ್ರೇರಿತವಾದ ಭಯೋತ್ಪಾದಕ ಸಂಘಟನೆ ಈ ಕೆಲಸ ಮಾಡಿರುವುದು ಖಂಡನೀಯ ಎಂದರು.ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಿದೆ. ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಮಾಡಬೇಕು. ಜಾಮೀನು ಪಡೆದು ಹೊರಗೆ ಬಂದ ಭಯೋತ್ಪಾದಕರ ಮೇಲೆ ನಿಗಾ ವಹಿಸಬೇಕು. ಅಂಥವರನ್ನು ಪೊಲೀಸರು ಕೂಡ...
ಉಗ್ರರ ಧಮನ ಮಾಡಿ; ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ ಎಂದ ಡಿಕೆಶಿ

ಉಗ್ರರ ಧಮನ ಮಾಡಿ; ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ ಎಂದ ಡಿಕೆಶಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: “ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ ಎಂದು ತಿಳಿಸಿದರು..ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂ...
ಪಹಲ್ಗಾಮ್ ದಾಳಿ ಹಿನ್ನೆಲೆ; ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ

ಪಹಲ್ಗಾಮ್ ದಾಳಿ ಹಿನ್ನೆಲೆ; ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್'ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಭಾರತದ ಪಾಲಿಗೆ ಅತ್ಯಂತ ಕರಾಳ ಘಟನೆಯಾಗಿದೆ. ಪ್ರವಾಸಿಗರನ್ನೇ ಗುರಿಯಾಗಿಸಿ ನಡೆದಿರುವ ಈ ದಾಳಿಯಲ್ಲಿ ಕನ್ನಡಿಗರೂ ಬಲಿಯಾಗಿದ್ದಾರೆ. ಜಮ್ಮುಕಾಶ್ಮೀರಕ್ಕೆ ಪ್ರವಾಸ ತೆರಳಿರುವ ಕನ್ನಡೀರನೇಕರು ಆತಂಕದಲ್ಲಿದ್ದು ರಾಜ್ಯಕ್ಕೆ ಮರಳಲು ಪರದಾಡುತ್ತಿದ್ದಾರೆ.ಈ ನಡುವೆ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಸಹಾಯವಾಣಿಯಯನ್ನು ಆರಂಭಿಸಿದೆ. ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ Tour Operators & Travel Agents ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಸಹಾಯವಾಣಿಗೆ ನೀಡಬೇಕೆಂದು ಸರ್ಕಾರ ತಿಳಿಸಿದೆ. ಪ್ರವಾಸಿಗರ ಸಂಬಂಧಿಕರು ಅಥವಾ ಸಾರ್ವಜನಿಕರು ಪ್ರವಾಸಿಗರ ವಿವರಗಳನ್ನು ಸಹಾಯವಾಣಿ ಸಂಖ್ಯೆಗಳಾದ 080-43344334, 080-43344335, 080-43344336, 080-43344342 ಗೆ ನೀಡಬೇಕೆಂದು ಸರ್ಕಾರ ಮನವಿ ಮಾಡಿದೆ....
ಪರೀಕ್ಷೆ ವೇಳೆ ಜನಿವಾರ, ಮಾಂಗಲ್ಯ ಹಿಜಾಬ್ ತೆಗಿಸುವ ಕ್ರಮ ಖಂಡನೀಯ; ಪರೀಕ್ಷೆ ಮಾರ್ಗಸೂಚಿ ಬದಲಿಸಲು ರಾಮಲಿಂಗ ರೆಡ್ಡಿ ಸಲಹೆ

ಪರೀಕ್ಷೆ ವೇಳೆ ಜನಿವಾರ, ಮಾಂಗಲ್ಯ ಹಿಜಾಬ್ ತೆಗಿಸುವ ಕ್ರಮ ಖಂಡನೀಯ; ಪರೀಕ್ಷೆ ಮಾರ್ಗಸೂಚಿ ಬದಲಿಸಲು ರಾಮಲಿಂಗ ರೆಡ್ಡಿ ಸಲಹೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಜನಿವಾರ ತೆಗೆಸಿರುವ ಘಟನೆ ಬಗ್ಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಕೃತ್ಯವನ್ನು ಖಂಡಿಸಿರುವ ಅವರು ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು, ಪರೀಕ್ಷಾ ಮಾರ್ಗಸೂಚಿಗಳಲ್ಲಿ ಕೆಲವೊಂದನ್ನು ಮಾರ್ಪಾಡು ಮಾಡಿ ಧಾರ್ಮಿಕ ಸ್ವಾತಂತ್ರ್ಯ ಕಾಪಾಡಲು ಅನುವು ಮಾಡಿಕೊಡಬೇಕೆಂದು ಸಲಹೆ ನೀಡಿದ್ದಾರೆ.CET ಪರೀಕ್ಷೆಯ ತಪಾಸಕರು, ವಿಧ್ಯಾರ್ಥಿಯ ಜನಿವಾರ ತೆಗೆಸಿರುವ ಪ್ರಕರಣವು ತೀವ್ರ ಆಘಾತ ಉಂಟು ಮಾಡಿದೆ. ಈ ಘಟನೆ ಆ ವಿದ್ಯಾರ್ಥಿಯ ಮನಸ್ಸನ್ನು ಎಷ್ಟು ಘಾಸಿಗೊಳಿಸಿರಬಹುದು ಎಂಬುದನ್ನು ಊಹಿಸಲಾಧ್ಯ. ಇದನ್ನು ಖಂಡಿಸುತ್ತೇನೆ ಎಂದವರು ಪತ್ರದಲ್ಲಿ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಬಿಜೆಪಿಗರು ವಿನಾಕಾರಣ‌ ರಾಜಕಾರಣ‌ಮಾಡುತ್ತಾ ಸಿದ್ದರಾಮಯ್ಯ ಸರ್ಕಾರದ ಕುರಿತು ಹಿಂದೂ ವಿರೋಧಿ ಎಂದು ಅಪಪ್ರಚಾರ ಮಾಡುತ್ತಿರುವುದು ಮತ್ತಷ್ಟು ಕಳವಳಕಾರಿ ಎಂದೂ ಅವರು ಹೇಳಿದ್ದಾರೆ.ಜನಿವಾರ ತೆಗೆಸುವುದು, ಮಾಂಗಲ್ಯ ತೆಗೆಸುವುದು( ಕಳೆದ ಬಾರಿಯ ಕೆ ಎ‌ ಎಸ್ ಪರೀಕ್ಷೆಯಲ್ಲಿ ನಡೆದ ಘಟನೆ) ಹಿಜಾಬ್ ತೆಗೆಸುವುದು ಒಬ್ಬ...
ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ; ಪತ್ನಿ ಪಲ್ಲವಿ ಬಂಧನ

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ; ಪತ್ನಿ ಪಲ್ಲವಿ ಬಂಧನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿಯನ್ನು ಪೊಲೀಸರು ಬಂಧಿಸಿದ್ದಾರೆ.ಭಾನುವಾರ ಓಂ ಪ್ರಕಾಶ್ ಅವರ ಕೊಲೆ ನಡೆದಿದ್ದು, ಅವರ ಪುತ್ರ ದೂರು ನೀಡಿದ್ದರು. ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬೆಂಗಳೂರಿನ ಹೆಚ್​ಎಸ್​ಆರ್​​ ಲೇಔಟ್​​ ಪೊಲೀಸರು ಪತ್ನಿ ಪಲ್ಲವಿ ಹಾಗೂ ಮಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದ್ದರು. ಬಳಿಕ ಹೇಳಿಕೆ ಪಡೆದು ಓಂ ಪ್ರಕಾಶ್ ಪಲ್ಲವಿ ಪಲ್ಲವಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಈ ನಡುವೆ, ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಲ್ಲವಿ, ಪುತ್ರಿ ಕೃತಿ, ಪುತ್ರ ಕಾರ್ತಿಕೇಶ್​ ಸೇರಿದಂತೆ ಕುಟುಂಬದ ಹಲವರಿಂದ ಪೊಲೀಸರು ಹೇಳಿಕೆ ಪಡೆದಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಹೇಳಿಕೆ ನೀಡಿರುವ ಪತ್ನಿ ಪಲ್ಲವಿ, ತಾನು ಆತ್ಮ ರಕ್ಷಣೆಗಾಗಿ ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ....
ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ

ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹೈಕೋರ್ಟ್'ಗಳ ಏಳು ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಹಿನ್ನಲೆಯಲ್ಲಿ ಸೋಮವಾರ ಈ ವರ್ಗಾವಣೆ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್​​ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಕೃಷ್ಣನ್ ನಟರಾಜ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಎನ್​​. ಶ್ರೀನಿವಾಸ ಸಂಜಯ್ ಗೌಡ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಗುಜರಾತ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ.ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಒಡಿಶಾ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಪೆರುಗು ಶ್ರೀಸುಧ ಅವರನ್ನು ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಕೆ.ಸುರೇಂದರ್ ಅವರನ್ನು ತೆಲಂಗಾಣ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಡಾ.ಕೆ.ಮನ್ಮಧ ರಾವ್ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ ಎಂದು ...