Monday, August 17

ವಿದೇಶ

ಜನಿವಾರ ಕತ್ತರಿಸಿ ಬಿಸಾಡಲಾಗಿದೆ, ಲಿಂಗಾಯತರ ಶಿವದಾರವನ್ನೂ ಕತ್ತರಿಸಿದ್ದಾರೆ; ಅಶೋಕ್ ಆಕ್ರೋಶ

ಜನಿವಾರ ಕತ್ತರಿಸಿ ಬಿಸಾಡಲಾಗಿದೆ, ಲಿಂಗಾಯತರ ಶಿವದಾರವನ್ನೂ ಕತ್ತರಿಸಿದ್ದಾರೆ; ಅಶೋಕ್ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಒಬ್ಬ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಡಲಾಗಿದೆ. ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.‌ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಡಲಾಗಿದೆ. ಲಿಂಗಾಯತರ ಶಿವದಾರವನ್ನೂ ಕತ್ತರಿಸಿದ್ದಾರೆ. ಹಿಜಾಬ್‌ ಬಗ್ಗೆ ಪ್ರಶ್ನೆ ಮಾಡಿದ್ದಾಗ ಅದನ್ನು ಕಾಂಗ್ರೆಸ್‌ ನಾಯಕರು ಸಮರ್ಥಿಸಿಕೊಂಡಿದ್ದರು. ಬಟ್ಟೆಯೊಳಗೆ ಏನು ಬೇಕಾದರೂ ಬಚ್ಚಿಟ್ಟುಕೊಳ್ಳಬಹುದು. ಆದರೆ ಜನಿವಾರದಲ್ಲಿ ಏನೂ ಅಡಗಿಸಿಕೊಳ್ಳಲಾಗುವುದಿಲ್ಲ. ಇದರ ಜೊತೆಗೆ ತಾಳಿ, ಓಲೆಗೂ ಕೈ ಹಾಕಿದ್ದಾರೆ ಎಂದು ದೂರಿದರು.ಹಿಂದೂಗಳು ಕುಂಕುಮ ಇಟ್ಟುಕೊಳ್ಳಲು, ಜನಿವಾರ ಹಾಕಿಕೊಳ್ಳಲು ಅವಕಾಶವಿಲ್ಲ. ಹಿಜಾಬ್‌ ಹಾಕಿಕೊಂಡವರನ್ನು ತಪಾಸಣೆ ಮಾಡುವುದಿಲ್ಲ. ಹಿಂದೂಗಳ ಮೇಲೆ ಸಿಎಂ ಸಿದ್ದರಾಮಯ್ಯನವರಿಗೆ ಕೋಪ ಇದೆ. ಈ ಸರ್ಕಾರ ಹಿಂದೂಗಳನ್ನು ದಮನ ಮಾಡುತ್ತಿದೆ. ಈ ಮೂಲಕ ವಿಕೃತ ಸಂತೋಷ ಕಂಡುಕೊಳ್ಳುತ್ತಿದೆ. ಇದನ್ನು ಜನರು ಅರ್ಥ ಮಾಡಿಕೊಳ್ಳಲಿ ಎಂದರು....
IPL: ಪಂಜಾಬ್ ವಿರುದ್ದ ಸೇಡು ತೀರಿಸಿಕೊಂಡ RCB; ದ್ವಿತಿಯಾರ್ಧದಲ್ಲಿ ಗೆಲುವಿನ ಅಭಿಯಾನ ಆರಂಭ

IPL: ಪಂಜಾಬ್ ವಿರುದ್ದ ಸೇಡು ತೀರಿಸಿಕೊಂಡ RCB; ದ್ವಿತಿಯಾರ್ಧದಲ್ಲಿ ಗೆಲುವಿನ ಅಭಿಯಾನ ಆರಂಭ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಚಂಡೀಗಢ: ಐಪಿಎಲ್ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜಯಭೇರಿ ಭಾರಿಸಿದೆ.ಚಂಡೀಗಡದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ RCB 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ.Jitesh Sharma dials 6⃣ to seal it in style 🙌Virat Kohli remains unbeaten on 73*(54) in yet another chase 👏@RCBTweets secure round 2⃣ of the battle of reds ❤Scorecard ▶ https://t.co/6htVhCbltp#TATAIPL | #PBKSvRCB pic.twitter.com/6dqDTEPoEA — IndianPremierLeague (@IPL) April 20, 2025ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರದ ಪಂದ್ಯ ರೋಚಕತೆಯಿಂದ ಕೂಡಿತ್ತು. ಪಂಜಾಬ್ ಕಿಂಗ್ಸ್ ನೀಡಿದ್ದ 158 ರನ್ ಗುರಿಯನ್ನು ಬೆನ್ನತ್ತಿದ ಆರ್ ಸಿಬಿ ತಂಡ 18.5 ಓವರ್ ನಲ್ಲೇ ಗುರಿ ಸಾಧಿಸಿತು. ಕೇವಲ 3 ವಿಕೆಟ್ ಕಳೆದುಕೊಂಡ RCB ಆರ್ ಸಿಬಿ ಪರ ದೇವದತ್ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಅವರ ಶತಕದಾಟದ ನೆರವಿನೊಂದಿಗೆ 159 ರನ್ ಗಳಿಸಿ ಜಯಭೇರಿ...
ಜಾತಿ ಗಣತಿ: ಈಗ ಇರುವುದು ಮೂಲ ವರದಿ ಅಲ್ಲ, ಅಸಲಿ ವರದಿ ಸಿಎಂ ಸಿದ್ದರಾಮಯ್ಯನವರ ಮನೆಯಲ್ಲಿದೆ 

ಜಾತಿ ಗಣತಿ: ಈಗ ಇರುವುದು ಮೂಲ ವರದಿ ಅಲ್ಲ, ಅಸಲಿ ವರದಿ ಸಿಎಂ ಸಿದ್ದರಾಮಯ್ಯನವರ ಮನೆಯಲ್ಲಿದೆ 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚಿಸದೆ ಜಾತಿ ಗಣತಿ ವರದಿ ಬಿಡುಗಡೆ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಒಂದು ರಸ್ತೆ ಕೂಡ ನಿರ್ಮಾಣವಾಗಿಲ್ಲ. ಪರಿಸ್ಥಿತಿ ಹೀಗಿರುವಾಗ ಜಾತಿ ಗಣತಿ ವರದಿ ಬಗ್ಗೆ ಸರ್ಕಾರ ಚಿಂತಿಸುತ್ತಿದೆ. ಕಾಂಗ್ರೆಸ್‌ನ ಸಚಿವರು ಇದನ್ನು ವೈಜ್ಞಾನಿಕ ಹಾಗೂ ಅಸಲಿ ಎಂದು ಹೇಳುತ್ತಿದ್ದಾರೆ. ಜಯಪ್ರಕಾಶ್‌ ಹೆಗ್ಡೆ ವರದಿ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 26-08-2021 ರಂದು ಸೀಲ್‌ ಮಾಡಿದ ಬಾಕ್ಸ್‌ ತೆರೆದಾಗ ವರದಿಯಲ್ಲಿ ಆಯೋಗದ ಹಿಂದಿನ ಅಧ್ಯಕ್ಷರ ಸಹಿ ಇಲ್ಲ ಎಂಬುದನ್ನು ಗಮನಿಸಲಾಗಿದೆ. ಹಸ್ತಪ್ರತಿ ಅಥವಾ ಮೂಲ ವರದಿ ಲಭ್ಯವಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದರು.ಹಿಂದಿನ ಅಧ್ಯಕ್ಷ ಕಾಂತರ...
ಶಾಲೆಗಳಲ್ಲಿ ಹೆಣ್ಮಕ್ಕಳಿಗೆ ಶೇ. 50ರಷ್ಟು ಸೀಟು ಮೀಸಲು ಕಡ್ಡಾಯ.

ಶಾಲೆಗಳಲ್ಲಿ ಹೆಣ್ಮಕ್ಕಳಿಗೆ ಶೇ. 50ರಷ್ಟು ಸೀಟು ಮೀಸಲು ಕಡ್ಡಾಯ.

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳು ಪೂರ್ವ ಪ್ರಾಥಮಿಕ ಹಂತದಿಂದ ಪ್ರೌಢಶಾಲಾ ಹಂತದವರೆಗೂ ನಡೆಸುವ ಶಾಲಾ ಪ್ರವೇಶ ಪ್ರಕ್ರಿಯೆಯಲ್ಲಿ ಶೇ. 50ರಷ್ಟು ಸೀಟುಗಳನ್ನು ಹೆಣ್ಣುಮಕ್ಕಳಿಗೆ ಮೀಸಲಿಡುವುದು ಇನ್ನು ಮುಂದೆ ಕಡ್ಡಾಯ.ರಾಜ್ಯ ಪಠ್ಯಕ್ರಮ ಹಾಗೂ ಸಿಬಿಎಸ್‌ಇ, ಐಸಿಎಸ್‌ಇ ಸೇರಿದಂತೆ ಕೇಂದ್ರ ಪಠ್ಯಕ್ರಮ ಅನುಸರಿಸುವ, ಸಹ ಶಿಕ್ಷಣ ಹೊಂದಿರುವ ಎಲ್ಲ ಖಾಸಗಿ ಶಾಲೆಗಳು ಎಲ್‌‌ಕೆಜಿ, ಯುಕೆಜಿ, ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ಪ್ರವೇಶ ನೀಡುವಾಗ ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ಆದೇಶಿಸಿದೆ.ಪ್ರತಿ ತರಗತಿಯಲ್ಲೂ ಲಭ್ಯವಿರುವ ಸೀಟುಗಳಲ್ಲಿ ಶೇ 50ರಷ್ಟು ಹೆಣ್ಣು ಮಕ್ಕಳಿಗೆ ಮೀಸಲಿಡಬೇಕು. ಒಂದು ವೇಳೆ ನಿರೀಕ್ಷಿತ ಅರ್ಜಿಗಳು ಲಭ್ಯವಿಲ್ಲದೇ ಇದ್ದಾಗ ಉಳಿಕೆ ಸೀಟುಗಳನ್ನು ಬಾಲಕರಿಗೆ ನೀಡಬಹುದು. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದು ಆಡಳಿತ ಪಕ್ಷ ಕಾಂಗ್ರೆಸ್ ತನ್ನ 'X' ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳು ಪೂರ್ವ ಪ್ರಾಥಮಿಕ ಹಂತದಿಂದ ಪ್ರೌಢಶಾಲಾ ಹಂತದವರೆಗೂ ನಡ...
ಕಾಂಗ್ರೆಸ್‌ ಪಕ್ಷ ಮತ್ತು ಭ್ರಷ್ಟಾಚಾರ ಒಂದೇ ನಾಣ್ಯದ ಎರಡು ಮುಖ’ ಎಂದ ಬಿಜೆಪಿ

ಕಾಂಗ್ರೆಸ್‌ ಪಕ್ಷ ಮತ್ತು ಭ್ರಷ್ಟಾಚಾರ ಒಂದೇ ನಾಣ್ಯದ ಎರಡು ಮುಖ’ ಎಂದ ಬಿಜೆಪಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೇನಾಮಿ ಕಂಪನಿಗಳನ್ನು ಸೃಷ್ಟಿಸಿ ಅದರೊಂದಿಗೆ ವ್ಯವಹರಿಸಿ ಕೊನೆಗೆ ಸುಳ್ಳು ದಾಖಲೆ ಒದಗಿಸಿ ದೇಶದ ಸಂಪತ್ತನ್ನು ಲೂಟಿ ಹೊಡೆಯುವ ಸರಣಿ ಕೃತ್ಯಗಳನ್ನು ಕಾಂಗ್ರೆಸ್ ನಾಯಕರು ಮಾಡುತ್ತಲೇ ಬಂದಿದ್ದಾರೆ. ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಸೋನಿಯಾ ಗಾಂಧಿ ಪರಿವಾರ ₹2 ಸಾವಿರ ಕೋಟಿ ಲೂಟಿ ಹೊಡೆಯಲು ಸಂಚು ರೂಪಿಸಿತ್ತು ಎಂದು ಬಿಜೆಪಿ ಆರೋಪಿಸಿದೆ.ಕಾಂಗ್ರೆಸ್‌ ಪಕ್ಷ ಮತ್ತು ಭ್ರಷ್ಟಾಚಾರ ಒಂದೇ ನಾಣ್ಯದ ಎರಡು ಮುಖವಾಗಿದೆ ಎಂದು ಬಣ್ಣಿಸಿರಿವ ಬಿಜೆಪಿ ಸಾಮಾಜಿಕ ಮಾಧ್ಯಮ'X'ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಕಾಂಗ್ರೆಸ್‌ ಪಕ್ಷವು ಭ್ರಷ್ಟಾಚಾರವನ್ನು ಬಿಡುವುದಿಲ್ಲ, ಭ್ರಷ್ಟಾಚಾರವು ಕಾಂಗ್ರೆಸ್‌ ಪಕ್ಷವನ್ನು ಬಿಡುತ್ತಿಲ್ಲ. ಅಧಿಕಾರ ದುರುಪಯೋಗದ ಕಾರಣದಿಂದಾಗಿ ಸೋನಿಯಾ ಕುಟುಂಬದ ಭ್ರಷ್ಟಾಚಾರಗಳು ಹೊರಬರುತ್ತಿರಲಿಲ್ಲ. ಕಾಂಗ್ರೆಸ್ಸಿನ ಸೋನಿಯಾ ಮೇನಿಯಾದ ವ್ಯಾಲಿಡಿಟಿ ಮುಗಿದ ಕಾರಣ ಈಗ ಎಲ್ಲವೂ ಬಯಲಾಗುತ್ತಿದೆ ಎಂದು ಬಿಜೆಪಿ ಟೀಕಿಸಿದೆ.ತನಿಖಾ ಸಂಸ್ಥೆಗಳು ದಾಖಲೆಗಳ ಆಧಾರದಲ್ಲಿ ತನಿಖೆ ನಡೆಸಿ, ಚಾರ್ಜ್‌ ಶೀಟ್‌ ಸಲ್ಲಿದರೆ ಅದಕ್ಕೂ ಕಾಂಗ್ರೆಸ್‌ ಪಕ್ಷ ರಾಜಕೀಯದ ಲೇಪ ಮೆತ್ತು...
‘ಜಾತಿ ಜನಗಣತಿ ವಿಚಾರದಲ್ಲಿ ಎಲ್ಲಾ ಲಿಂಗಾಯತ ಮಂತ್ರಿಗಳು ಒಗ್ಗಟ್ಟಾಗಿದ್ದೇವೆ’: ಎಂ.ಬಿ. ಪಾಟೀಲ್

‘ಜಾತಿ ಜನಗಣತಿ ವಿಚಾರದಲ್ಲಿ ಎಲ್ಲಾ ಲಿಂಗಾಯತ ಮಂತ್ರಿಗಳು ಒಗ್ಗಟ್ಟಾಗಿದ್ದೇವೆ’: ಎಂ.ಬಿ. ಪಾಟೀಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ವಿಜಯಪುರ: ಜಾತಿ ಜನಗಣತಿ ವರದಿಯ ವಿಷಯದಲ್ಲಿ ಲಿಂಗಾಯತ ಸಮುದಾಯದ ಎಲ್ಲಾ ಏಳು ಮಂತ್ರಿಗಳು ಒಗ್ಗಟ್ಟಿನಿಂದ ಇದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.ವಿಜಯಪುರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪಾಟೀಲ್, 'ಲಿಂಗಾಯತ ಸಮುದಾಯದ ಎಲ್ಲಾ ಏಳು ಮಂತ್ರಿಗಳು - ಈಶ್ವರ್ ಖಂಡ್ರೆ, ಶರಣ್ ಪ್ರಕಾಶ್ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಶರಣಬಸಪ್ಪ ದರ್ಶನಾಪುರ, ಶಿವಾನಂದ್ ಪಾಟೀಲ್, ಎಚ್.ಕೆ. ಪಾಟೀಲ್ ಮತ್ತು ನಾನು - ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದೇವೆ. ನಂತರ ಏಪ್ರಿಲ್ 17 ರಂದು ಜಾತಿ ಜನಗಣತಿ ವರದಿಯ ಕುರಿತು ಚರ್ಚಿಸಲು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದೆವು' ಎಂದು ತಿಳಿಸಿದರು.'ನಾವು ಮತ್ತೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಜಾತಿ ಜನಗಣತಿಗೆ ಸಂಬಂಧಿಸಿದಂತೆ ನಮ್ಮ ಬೇಡಿಕೆಗಳನ್ನು ಅವರ ಮುಂದೆ ಇಡುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವು ಒಗ್ಗಟ್ಟಾಗಿದ್ದೇವೆ' ಎಂದು ಅವರು ಪುನರುಚ್ಚರಿಸಿದರು.ತಮ್ಮ ಮತ್ತು ಸಚಿವರಾದ ಶಿವಾನಂದ್ ಪಾಟೀಲ್ ಮತ್ತು ಈಶ್ವರ್ ಖಂಡ್ರೆ...
PMFBY ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

PMFBY ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 2023-24 ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ, ನೂತನ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನ ಪಡೆದಿದೆ.ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ಅಗ್ರ 3 ಸ್ಥಾನದಲ್ಲಿರುವ ದೇಶದ ಮೂರು ಜಿಲ್ಲೆಗಳ ಪೈಕಿ ರಾಜ್ಯದ ಹಾವೇರಿ ಮತ್ತು ಕೊಪ್ಪಳ ಜಿಲ್ಲೆ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಕೃಷಿ ಇಲಾಖೆಯ ಹಿರಿಮೆ ಹೆಚ್ಚಿಸಿದೆ.ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದು ರೈತರನ್ನು ಅನಿಶ್ಚಿತ ನಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ನಮ್ಮ ಕೃಷಿ ಇಲಾಖೆ ಹಾಗೂ ಸ್ಥಳೀಯ ಕೃಷಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ.ಇದೇ ವೇಳೆ ಪ್ರಥಮ ಸ್ಥಾನ ಪಡೆದ ರಾಜ್ಯ ಕೃಷಿ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ರಾಜ್ಯದ ಅನ್ನದಾತರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.....
ನಿಂದನೆ, ಅಪಮಾನ ಸಹಿಸುವುದಿಲ್ಲ; ಬ್ರಾಹ್ಮಣ ಮಹಾಸಭಾ ರಣಕಹಳೆ

ನಿಂದನೆ, ಅಪಮಾನ ಸಹಿಸುವುದಿಲ್ಲ; ಬ್ರಾಹ್ಮಣ ಮಹಾಸಭಾ ರಣಕಹಳೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗೆ ಹೇಳಿರುವ ಘಟನೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಖಂಡಿಸಿದೆ. ಬೆಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಹಾಸಭಾ ಮುಖ್ಯಸ್ಥರು, ಇಂತಹ ಕಹಿ ಘಟನೆಗಳು ವಿಪ್ರ ಸಮುದಾಯಕ್ಕೆ ಮಾಡಿರುವ ಅಪಮಾನ ಎಂದು ಆಕ್ರೋಶ ಹೊರಹಾಕಿದರು.ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಎಸ್.ರಘುನಾಥ್, ಹಿರಿಯ ಉಪಾಧ್ಯಕ್ಷರಾದ ಆರ್.ಲಕ್ಷ್ಮಿಕಾಂತ್, ವಿಪ್ರ ಮುಖಂಡರಾದ ರವಿಶಂಕರ, ಶಂಕರನಾರಾಯಣ್ ಶಾಸ್ತ್ರಿ, ಶ್ರೀನಿವಾಸಮೂರ್ತಿ ಜೋಯಿಸ್ ಮೊದಲಾದವರು ಸುದ್ದಿಗೋಷ್ಠಿ ನಡೆಸಿದರು. ಎಸ್.ರಘುನಾಥ್ ಮಾತನಾಡಿ ಬ್ರಾಹ್ಮಣ ಸಮಾಜವನ್ನು ಹೀಯಾಳಿಸುವುದು, ನಿಂದಿಸುವುದು, ಅಪಹಾಸ್ಯಕ್ಕೆ ಒಳಪಡಿಸುವುದು ಮತ್ತು ಬ್ರಾಹ್ಮಣರ ಮೇಲೆ ದೌರ್ಜನ್ಯ ವೆಸುಗುವುದು ಸಾಮಾನ್ಯವಾಗಿದೆ. ಬ್ರಾಹ್ಮಣರು ಅಲ್ಪಸಂಖ್ಯಾತರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಇಂತಹ ಕಹಿ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರಿಗೆ ಮನವಿ ಮಾಡಲಾಗಿದೆ. ಶಿಕ್ಷಣ ಸಚಿವರು ವಿದ್ಯ...
2 ದಿನಗಳಲ್ಲೇ ಅಂತ್ಯಗೊಂಡ ಲಾರಿ ಮುಷ್ಕರ; ಚಾಣಕ್ಯನೆನಿಸಿದ ರಾಮಲಿಂಗಾರೆಡ್ಡಿ

2 ದಿನಗಳಲ್ಲೇ ಅಂತ್ಯಗೊಂಡ ಲಾರಿ ಮುಷ್ಕರ; ಚಾಣಕ್ಯನೆನಿಸಿದ ರಾಮಲಿಂಗಾರೆಡ್ಡಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರವನ್ನು ರಾಜ್ಯ ಲಾರಿ ಮಾಲೀಕರ ಹಾಗೂ ಏಜೆಂಟರ ಸಂಘ ಗುರುವಾರ ವಾಪಸ್‌ ಪಡೆದಿದೆ. ಮೊದಲನೇ ದಿನ ಸುಮಾರು ಸ್ವಲ್ಪಮಟ್ಟಿಗೆ ಯಶಸ್ಸು ಕಂಡಿದ್ದ ಮುಷ್ಕರಕ್ಕೆ ಚೆನ್ನಾರೆಡ್ಡಿ ನೇತೃತ್ವದ ಲಾರಿ ಮಾಲೀಕರ ಮತ್ತೊಂದು ಬಣ ಮುಷ್ಕರಕ್ಕೆ ಬೆಂಬಲ ನೀಡಲಿಲ್ಲ. ಹಾಗಾಗಿ ಎರಡನೇ ದಿನಕ್ಕೆ ಮುಷ್ಕರವು ತನ್ನ ವೇಗವನ್ನು ಕಳೆದುಕೊಂಡಿತು.ಈ ನಡುವೆ, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್ ಷಣ್ಮುಖಪ್ಪರವರು ಸಾರಿಗೆ ಸಚಿವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಿದರು. ಹೇಗಿದ್ದರೂ ಮಾರನೆ ದಿನ ಮತ್ತಷ್ಟು ಸಹಜ ಸ್ಥಿತಿಗೆ ಬರುತ್ತಿದ್ದ ಮುಷ್ಕರವು ತಮ್ಮ ಕೈತಪ್ಪಲಿದೆ ಎಂಬುದನ್ನು ಅರಿತ ಬಹುತೇಕ ಸಂಘಟಕರು ಮಾತುಕತೆಗೆ ಮುಂದಾದರು.ಸಂಘದ ಪದಾಧಿಕಾರಿಗಳೊಂದಿಗೆ ಸಂಧಾನ ಸಭೆ ನಡೆಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅದಾಗಲೇ ಎರಡು ಬಾರಿ ಮುಖಂಡರೊಂದಿಗೆ ಚರ್ಚಿಸಿದ್ದರು. ಮುಖ್ಯಮಂತ್ರಿಗಳು ಸಹ ಒಂದು ಬಾರಿ ಸಂಧಾನ ಸಭೆ ನಡೆಸಿದ್ದರು. ಮೊದಲೆರಡು ಸಂಧಾನದಲ್ಲಿಯೇ ಅವರ ಪ್ರಮುಖ ಬೇಡಿಕೆಗಳಾದ ಡೀಸೆಲ್ ಬೆಲೆ ಇಳಿಸುವ, ಟೋಲ್ ರದ್ದು ಮಾಡುವ ಬೇಡ...
IPL  ದ್ವಿತೀಯಾರ್ಧ ಹಂತ.. RCBಗೆ ಮುಂದಿನ 4 ಗೆಲುವು ಅನಿವಾರ್ಯ

IPL ದ್ವಿತೀಯಾರ್ಧ ಹಂತ.. RCBಗೆ ಮುಂದಿನ 4 ಗೆಲುವು ಅನಿವಾರ್ಯ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು : ತೀವ್ರ ಜಿದ್ದಾಜಿದ್ದಿನ ಐಪಿಎಲ್ ಅಖಾಡಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೂಡಾ ಕ್ರಿಕೆಟ್ ಅಭಿಮಾನಿಗಳ ಫೆವರೇಟ್ ತಂಡವಾಗಿದೆ. ಆದರೆ ತವರು ನೆಲದಲ್ಲೇ ಸತತ ಸೋಲುಂಡಿರುವ RCB ಇದೀಗ ನಾಲ್ಕು ಪಂದ್ಯಗಲ್ಲಷ್ಟೇ ಗೆಲುವು ಸಾಧಿಸಿದ್ದು ಪ್ಲೇಆಫ್​ಗೇರುವ ಸಾಧ್ಯತೆಗಳಿವೆಯೇ ಎಂಬ ಚಿಂತೆ ಅಭಿಮಾನಿಗಳನ್ನು ಕಾಡತೊಡಗಿದೆ.ಈ ಬಾರಿಯ ಐಪಿಎಲ್ ಸೆಣಸಾಟದ ಮೊದಲಾರ್ಧ ಪೂರ್ಣಗೊಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇನ್ನು ಮುಂದೆ ದ್ವಿತೀಯಾರ್ಧವನ್ನು ಕ್ರಮಿಸಲಿದೆ. ಶುಕ್ರವಾರ ತನ್ನ ವಿರುದ್ಧ ಗೆದ್ದು ಬೀಗಿದ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ತಿಂಗಳ 20 ರಂದು ದ್ವಿತೀಯಾರ್ಧವನ್ನು ಆರಂಭಿಸಲಿದೆ.ಆರ್​ಸಿಬಿ ತಂಡಕ್ಕೆ ದ್ವಿತೀಯಾರ್ಧದಲ್ಲಿ 7 ಪಂದ್ಯಗಳ ಸವಾಲು ಇದ್ದು ಪ್ಲೇಆಫ್​ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲು 16 ಅಂಕಗಳ ಅವಶ್ಯಕತೆಯಿದೆ. ಸದ್ಯ 8 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡ ಈ ದ್ವಿತೀಯಾರ್ಧದಲ್ಲಿ 4 ಪಂದ್ಯಗಳನ್ನು ಗೆಲ್ಲಲೇಬೇಕಿದೆ. ಈ 7 ಪಂದ್ಯಗಳಲ್ಲಿ 4 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್...