Tuesday, August 18

ವಿದೇಶ

ರಾಜಧಾನಿ ಸೆರಗಿನಲ್ಲಿ ಮಾರ್ಧನಿಸಿದ ಗುಂಡಿನ ಸದ್ದು; ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಶೂಟೌಟ್

ರಾಜಧಾನಿ ಸೆರಗಿನಲ್ಲಿ ಮಾರ್ಧನಿಸಿದ ಗುಂಡಿನ ಸದ್ದು; ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಶೂಟೌಟ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಸಮೀಪ ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಶೂಟೌಟ್ ನಡೆದ್ದಾರೆ.ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಮಧ್ಯರಾತ್ರಿ ರಿಕ್ಕಿ ರೈ ತೆರಳುತ್ತಿದ್ದ ಕಾರಿನ ಮೇಲೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ ಎನ್ನಲಾಗುತ್ತಿದ್ದು, ಈ ಘಟನೆಯಲ್ಲಿ ರಿಕ್ಕಿ ರೈ ಅವರ ಮೂಗು, ಕೈಗೆ ಗುಂಡು ತಗುಲಿದ್ದು, ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.ವಿದೇಶದಲ್ಲಿದ್ದ ರಿಕ್ಕಿ ರೈ ಕೆಲವು ದಿನಗಳ ಹಿಂದಷ್ಟೇಬೆಂಗಳೂರಿಗೆ ವಾಪಸ್ ಆಗಿದ್ದರು. ಮುತ್ತಪ್ಪ ರೈ ಅವರ ಎದುರಾಳಿಗಳು ಹಳೇಯ ವೈಷಮ್ಯದ ಹಿನ್ನೆಲ...
ತವರಿನಲ್ಲಿ ಮೂರನೇ ಸೋಲುಂಡ RCB.. IPLಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಪಂಜಾಬ್ ಕಿಂಗ್ಸ್

ತವರಿನಲ್ಲಿ ಮೂರನೇ ಸೋಲುಂಡ RCB.. IPLಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಪಂಜಾಬ್ ಕಿಂಗ್ಸ್

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತವರಿನಲ್ಲಿ ಮೂರನೇ ಬಾರಿಗೆ ಸೋಲು ಉಂಟಾಗಿದೆ. ಐಪಿಎಲ್ ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯ ಸೋಲು ಕಂಡಿದೆ.ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯ ಮಳೆಯಿಂದಾಗಿ ವಿಳಂಬವಾಯಿತು. ತಡವಾಗಿ ಆರಂಭವಾದ ಪಂದ್ಯವನ್ನು 14 ಓವರ್ ಗಳಿಗೆ ಇಳಿಸಲಾಯಿತು. ಟಾಸ್ ಗೆದ್ದ ಪಂಜಾಬ್ ತಂಡ ಫೀಲ್ಡಿಂಗ್ ಆಯ್ದು ಕೊಂಡಿತು. ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಓವರುಗಳಲ್ಲಿ 9 ವಿಕೆಟ್‌ಗೆ 95 ರನ್ ಗಳಿಸಿತು. 26 ಎಸೆತಗಳಲ್ಲಿ 50 ರನ್ ಗಳಿಸಿದ ಡೇವಿಡ್ ಅರ್ಧಶತಕ ಬಾರಿಸಿ ಆರ್‌ಸಿಬಿ ತಂಡವನ್ನು 95 ರನ್ ಮೊತ್ತಕ್ಕೆ ಕೊಂಡೊಯ್ದರು.96 ರನ್ ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 13 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯಭೇರಿ ಭಾರಿಸಿತು. ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 5ನೇ ಗೆಲುವು ಪಡೆದು ಪಂಜಾಬ್ ಕಿಂಗ್ಸ್ 2ನೇ ಸ್ಥಾನಕ್ಕೇರಿತು....
ಹಿಂದೂಗಳ ಜನಿವಾರಕ್ಕೆ ‘ಕೈ’ ಹಾಕಿದ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರ ಆಕ್ರೋಶ

ಹಿಂದೂಗಳ ಜನಿವಾರಕ್ಕೆ ‘ಕೈ’ ಹಾಕಿದ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹಿಜಾಬ್‌ ಧರಿಸಿ ಶಾಲೆಗೆ ಹೋಗುವುದು, ಪರೀಕ್ಷೆ ಬರೆಯುವುದು ನಮಗೆ ಸಂವಿಧಾನ ನೀಡಿದ ಧಾರ್ಮಿಕ ಸ್ವಾತಂತ್ರ್ಯ ಎಂದು ಬೊಗಳೆ ಬಿಟ್ಟಿದ್ದ ಕಾಂಗ್ರೆಸ್ಸಿಗರ ಆಡಳಿತದಲ್ಲಿ ಜನಿವಾರ ಧರಿಸಿದ್ದಾನೆ ಎಂಬ ಏಕೈಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬನಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದಿರುವ ಘಟನೆ ಬೀದರ್‌ನಲ್ಲಿ ನಡೆದಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.ಹಿಜಾಬ್‌ ಧರಿಸಿ ಶಾಲೆಗೆ ಹೋಗುವುದು, ಪರೀಕ್ಷೆ ಬರೆಯುವುದು ನಮಗೆ ಸಂವಿಧಾನ ನೀಡಿದ ಧಾರ್ಮಿಕ ಸ್ವಾತಂತ್ರ್ಯ ಎಂದು ಬೊಗಳೆ ಬಿಟ್ಟಿದ್ದ ಕಾಂಗ್ರೆಸ್ಸಿಗರ ಆಡಳಿತದಲ್ಲಿ ಜನಿವಾರ ಧರಿಸಿದ್ದಾನೆ ಎಂಬ ಏಕೈಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬನಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದಿರುವ ಘಟನೆ ಬೀದರ್‌ನಲ್ಲಿ ನಡೆದಿದೆ.ಸಿಎಂ @siddaramaiah ಅವರೆ,… pic.twitter.com/9dliDqSFNm — BJP Karnataka (@BJP4Karnataka) April 18, 2025ಬೀದರ್ ನಲ್ಲಿ ಜನಿವಾರ ...
ರಾಯಚೂರು ಜಿಲ್ಲೆ ಅಮರಪುರ ಬಳಿ ಭೀಕರ ಅಪಘಾತ: ನಾಲ್ವರ ದುರ್ಮರಣ

ರಾಯಚೂರು ಜಿಲ್ಲೆ ಅಮರಪುರ ಬಳಿ ಭೀಕರ ಅಪಘಾತ: ನಾಲ್ವರ ದುರ್ಮರಣ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ರಾಯಚೂರು: ರಾಯಚೂರು ಜಿಲ್ಲೆಯ ಅಮರಪುರ ಬಳಿ ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.ಮೃತರನ್ನು ತೆಲಂಗಾಣದ ಹಿಂದೂಪುರ ನಿವಾಸಿಗಳಾದ 28 ವರ್ಷದ ನಾಗರಾಜ್, 38 ವರ್ಷದ ಸೋಮು, 36 ವರ್ಷದ ನಾಗಭೂಷಣ್ ಮತ್ತು 38 ವರ್ಷದ ಮುರಳಿ ಎಂದು ಗುರುತಿಸಲಾಗಿದೆ.ಈ ಸುದ್ದಿಯನ್ನು ಇಂಗ್ಲಿಷ್'ನಲ್ಲೂ ಓದಿ.. Raichur: Four from Telangana killed in road accidentಪೊಲೀಸರ ಪ್ರಕಾರ, ಮೃತರು ಸರಕು ವಾಹನದಲ್ಲಿ ಕುರಿ ಜಾತ್ರೆಗೆ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಕಡೆಗೆ ಪ್ರಯಾಣಿಸುತ್ತಿದ್ದರು. ಅತಿ ವೇಗದ ಚಾಲನೆಯಿಂದಾಗಿ, ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಪ್ಯಾರಪೆಟ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮವಾಗಿ, ಸರಕು ವಾಹನದ ಮುಂಭಾಗದಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಚಾಲಕ ಆನಂದ್ ಗಂಭೀರ ಗಾಯಗೊಂಡಿದ್ದು, ಅವರನ್ನು ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS) ಗೆ ದಾಖಲಿಸಲಾಗಿದೆ. ಅಪಘಾತ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಗಾಯಾಳು ಶಹಾಪುರ ಪಟ್ಟಣದ ಜಾತ್ರೆಯಿಂದ ಕುರಿಗಳನ...
ಸಿಇಟಿ ವೇಳೆ ವಿದ್ಯಾರ್ಥಿಯ ಜನಿವಾರ ಬಿಚ್ಚಿಸಿದವರ ವಿರುದ್ಧ ಸೂಕ್ತ ಕ್ರಮ; ಮಧು ಬಂಗಾರಪ್ಪ

ಸಿಇಟಿ ವೇಳೆ ವಿದ್ಯಾರ್ಥಿಯ ಜನಿವಾರ ಬಿಚ್ಚಿಸಿದವರ ವಿರುದ್ಧ ಸೂಕ್ತ ಕ್ರಮ; ಮಧು ಬಂಗಾರಪ್ಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಇದೇ ವೇಳೆ, ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಸೂಚಿಸುವುದಾಗಿ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಮಧು ಬಂಗಾರಪ್ಪ, ಮಾಧ್ಯಮಗಳ ಮೂಲಕ ವಿಚಾರ ತಿಳಿದುಕೊಂಡಿದ್ದೇವೆ.ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸುವಂತೆ ನಿರ್ದೇಶನ ಕೊಡುವ ಅಧಿಕಾರ ಯಾರಿಗೂ ಇಲ್ಲ. ಅದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ ಎಂದಿದ್ದಾರೆ. ಈ ಘಟನೆ ತಮ್ಮ ಜಿಲ್ಲೆಯಲ್ಲಿ ನಡೆದಿರುವುದರಿಂದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ....
ತಾಳಿ, ಆಭರಣ ಆಯಿತು ಇದೀಗ ಜನಿವಾರ ಕಿತ್ತೆಸೆದ ಸರ್ಕಾರ; ಸಿಇಟಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಮೇಲೆ ಕ್ರೌರ್ಯ

ತಾಳಿ, ಆಭರಣ ಆಯಿತು ಇದೀಗ ಜನಿವಾರ ಕಿತ್ತೆಸೆದ ಸರ್ಕಾರ; ಸಿಇಟಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಮೇಲೆ ಕ್ರೌರ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಪರೀಕ್ಷಾ ಅಕ್ರಮ ತಡೆಯಲಾಗದ ಸರ್ಕಾರ ಪರೀಕ್ಷಾರ್ಥಿಗಳ ತಾಳಿ, ಸರ, ಆಭರಣಗಳನ್ನೂ ತೆಗೆಸುತ್ತಿತ್ತು. ಇದೀಗ ಜನಿವಾರಕ್ಕೆ ಕೈ ಹಾಕಿದೆ ಎಂಬ ಆಕ್ರೋಶ ವ್ಯಕತವಾಗಿದೆ. ಸಿಸಿ ಕ್ಯಾಮೆರಾ ಅಡಿಯಲ್ಲಿ ಪರೀಕ್ಷೆ ಬರೆಯುವಾಗ ಜನಿವಾರ, ತಾಳಿ ಮೂಲಕ ಅಕ್ರಮ ನಡೆಯಲು ಸಾಧ್ಯವಿಲ್ಲ. ಆದರೂ ಹಿಂದೂ ಸಂಸ್ಕೃತಿ ಮೇಲೆ ಸವಾರಿ ಮಾಡುವ ಉದ್ದೇಶದಿಂದಲೇ ಈ ರೀತಿಯ ಕ್ರಮ ನಡೆಯುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ.Students asked to remove sacred thread before CET exam, K’taka Minister assures actionಈ ನಡುವೆ ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಪ್ರಕರಣ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾ...
ಅಮೆರಿಕದಲ್ಲಿ ವಿಮಾನ ಹೈಜಾಕ್ ಯತ್ನ; ಪ್ರಯಾಣಿಕನ ಗುಂಡಿಗೆ ಆಗಂತುಕ ಬಲಿ

ಅಮೆರಿಕದಲ್ಲಿ ವಿಮಾನ ಹೈಜಾಕ್ ಯತ್ನ; ಪ್ರಯಾಣಿಕನ ಗುಂಡಿಗೆ ಆಗಂತುಕ ಬಲಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಲ್ಮೋಪನ್: ಅಮೆರಿಕದಲ್ಲಿ ವಿಮಾನ ಹೈಜಾಕ್ ಯತ್ನದ ಮತ್ತೊಂದು ಹೈಡ್ರಾಮಾ ನಡೆದಿದೆ. ಅಮೆರಿಕದ ಬೆಲೀಜ್‌ನಲ್ಲಿ ಗುರುವಾರ ಈ ಘಟನೆ ನಡೆದಿದೆ.ಬೆಲೀಜ್‌ನಲ್ಲಿ ಅಮೆರಿಕದ ವ್ಯಕ್ತಿಯೊಬ್ಬ ಚಾಕು ತೋರಿಸಿ, ಕೆಲವರ ಮೇಲೆ ಹಲ್ಲೆ ನಡೆಸಿ ಸಣ್ಣ ಟ್ರಾಫಿಕ್ ಏರ್ ವಿಮಾನವನ್ನು ಅಪಹರಿಸಲು ಯತ್ನಿಸಿದ್ದಾನೆ. ಆ ವೇಳೆ, ವಿಮಾನದಲ್ಲಿದ್ದ ಪ್ರಯಾಣಿಕನೊಬ್ಬ ಆ ಕಿಡಿಗೇಡಿಯ ಮೇಲೆ ಗುಂಡು ಹಾರಿಸಿದ್ದಾನೆ. ಆಗಂತುಕನನ್ನು ಸುಮಾರು 49 ವರ್ಷ ವಯಸ್ಸಿನ ಅಕಿನ್ಯೆಲಾ ಸಾವಾ ಟೇಲರ್ ಎಂದು ಗುರುತಿಸಲಾಗಿದೆ....
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ; ಪೂರಕ ಮಾಹಿತಿ ಒದಗಿಸಲು ಅಧಿಕಾರಿಗಳಿಗೆ ಸೂಚನೆ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ; ಪೂರಕ ಮಾಹಿತಿ ಒದಗಿಸಲು ಅಧಿಕಾರಿಗಳಿಗೆ ಸೂಚನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ .ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಠಿ ನಡೆಸಿ, ಸಚಿವ ಸಂಪುಟದ ಸಭೆಯ ನಿರ್ಣಯಗಳ ಕುರಿತು ಮಾಹಿತಿ ನೀಡಿದರು.ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ಮಾಡಿದ್ದು ಇನ್ನಷ್ಟು ಮಾಹಿತಿ, ತಾಂತ್ರಿಕ ವಿವರಗಳು ಚರ್ಚೆಗೆ ಅಗತ್ಯ ಎನಿಸಿ, ಅವುಗಳನ್ನು ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಚರ್ಚೆ ಅಪೂರ್ಣವಾಗಿದೆ. ಅತ್ಯಂತ ಸೌಹ...
ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು? ಡಿಕೆಶಿ ಪ್ರಶ್ನೆ

ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು? ಡಿಕೆಶಿ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಶಿವಕುಮಾರ್ ಮಾತನಾಡಿದರು.ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿಯನ್ನು ನಾನಿನ್ನು ಬಿಚ್ಚಿಟ್ಟಿಲ್ಲ ಎಂದರು.“ಕುಮಾರಸ್ವಾಮಿ ನನ್ನ ವಿರುದ್ಧ ಟನ್ ಗಟ್ಟಲೆ ಸಾಕ್ಷಾಧಾರಗಳನ್ನು ಇಟ್ಟುಕೊಂಡಿದ್ದಾರೆ. ಇದನ್ನು ಏಕೆ ಇಟ್ಟುಕೊಂಡಿದ್ದಾರೆ, ಲಾರಿಗಳಲ್ಲಿ ರಾಜ್ಯಪಾಲರ ಬಳಿ ಕಳುಹಿಸುತ್ತಿಲ್ಲ ಏಕೆ? ಮಿಸ್ಟರ್ ಕುಮಾರಸ್ವಾಮಿ ಎಂದು ಪ್ರಶ್ನಿಸಿದರು,ಈ ಡಿ.ಕೆ. ಶಿವಕುಮಾರ್ ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರುವ ಮಗ ಅಲ್ಲ. ನಮ್ಮ ಕಷ್ಟ, ನಮ್ಮ ಶ್ರಮ, ನಮ್ಮ ಬದುಕು. ನಾವು ಆಸ್ತಿ ಮಾಡಿಕೊಳ್ಳುತ್ತೇವೆ. ಅದರ ಸತ್ಯಾಸತ್ಯತೆ ಸರ್ಕಾರ ಪರಿಶೀಲನೆ ಮಾಡಲಿ. ನಾನು ನಿನ್ನ ಚರಿತ್ರೆಯನ್ನು ಇನ್ನು ಬಿಚ್ಚಿಲ್ಲ. ನಿಮ್ಮ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು ಎಂಬುದನ್ನು ನಾನಿನ್ನು ಬಿಚ್ಚಿಟ್ಟಿಲ್ಲ” ಎಂದು ವಾಗ್ದಾಳಿ ನಡೆಸಿದರು...
ಜನಾಕ್ರೋಶ ಏನಿದ್ದರೂ ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ: ಡಿಕೆಶಿ

ಜನಾಕ್ರೋಶ ಏನಿದ್ದರೂ ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ: ಡಿಕೆಶಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದೇಶದಲ್ಲಿ ಇಂಧನ, ಅಗತ್ಯ ವಸ್ತುಗಳು, ರಸಗೊಬ್ಬರ, ಚಿನ್ನ, ಸಿಮೆಂಟ್, ಕಬ್ಬಿಣ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಜನರ ಮೇಲೆ ಈ ಬೆಲೆ ಏರಿಕೆ ಹೊರೆ ತಗ್ಗಿಸಲು ನಾವು ಗ್ಯಾರಂಟಿ ಯೋಜನೆ ಕೊಟ್ಟಿದ್ದು, ರೈತರ ಬದುಕು ಕಾಪಾಡಲು ಹಾಲಿನ ಬೆಲೆ ಏರಿಸಿದ್ದೇವೆ. ಹೀಗಾಗಿ ಜನಾಕ್ರೋಶ ಏನಿದ್ದರೂ ಬಿಜೆಪಿ ಸರ್ಕಾರದ ವಿರುದ್ಧ ವ್ಯಕ್ತವಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದರು.ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಶಿವಕುಮಾರ್ ಅವರು ಮಾತನಾಡಿದರು. ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಹೀಗಾಗಿ ಬಿಜೆಪಿ ನಾಯಕರ ಆಕ್ರೋಶ ಏನಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಇರಬೋಕೇ ಹೊರತು, ಬಡವರ ಪರವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವ ಕಾಂಗ್ರೆಸ್ ಸರ್ಕಾರವಲ್ಲ ಎಂದರು.ಬಿಜೆಪಿಯಲ್ಲಿ ಹಾಗೂ...