
ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡಲು ಚಿಂತನೆ
ಬೆಂಗಳೂರು: ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಪಕ್ಷದಲ್ಲಿ ನೀವು ಎಲ್ಲರಿಗಿಂತ ಕೊನೆ ಎಂಬ ಭಾವನೆ ಬೇಡ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡುವ ಆಲೋಚನೆ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಭಾನುವಾರ ನಡೆದ ಭಾರತೀಯ ಸೇವಾದಳದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. ಸಮಾಜ ಸೇವೆ ಮಾಡುವವರನ್ನು ಹೆಚ್ಚು ಗುರುತಿಸುತ್ತದೆ. ಹೀಗಾಗಿ ನಮ್ಮ ಸಮಾಜದಲ್ಲಿ ರಾಮನ ತಂದೆ ದಶರಥ ಮಹಾರಾಜನಿಂಗಿಂತ, ರಾಮನ ಭಂಟ ಹನುಮಂತನ ದೇವಾಲಯಗಳು ಹೆಚ್ಚಾಗಿವೆ. ಅದೇ ರೀತಿ ನೀವು ಕಾಂಗ್ರೆಸ್ ಪಕ್ಷಕ್ಕೆ ಆಧಾರಸ್ತಂಭ. ಇದನ್ನು ಸೇವಾದಳದ ಎಲ್ಲಾ ಕಾರ್ಯಕರ್ತರು ತಲೆಯಲ್ಲಿಟ್ಟುಕೊಳ್ಳಬೇಕು ಎಂದು ಅವರು ಹೇಳಿದರು."ದೇಶದ ಭದ್ರತೆ ಉದ್ದೇಶದಿಂದ ಸ್ಥಾಪನೆಯಾದ ವಿಭಾಗ ಸೇವಾದಳ. ನೆಹರೂ ಅವರ ಅವಧಿಯಲ್ಲಿ ಪ್ರಾರಂಭವಾಗಿ ಈಗ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿವರೆಗೆ ನಡೆದುಕೊಂಡು ಬಂದಿದೆ. ಸೇವಾದಳ ಕಾಂಗ್ರೆಸ್ ಪಕ್ಷದ ಕಡೆಯ ಅಂಗ, ನಮ್ಮನ್ನು ಗುರುತಿಸ...









